Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವಕ್ಫ್ ಹೆಸರಲ್ಲಿ ಆಸ್ತಿ ಕಬಳಿಕೆ: ಅಧಿಕಾರಿಗಳು ಶಾಮೀಲು ?

by admin November 7, 2024
written by admin November 7, 2024 0 comments 1 minutes read
0FacebookTwitterPinterestEmail
187

ಆಸ್ತಿ ಹೆಸರು ಬದಲಿಸಲು ಹೇಗೆ ಸಾಧ್ಯ – ಜೆಪಿಸಿ ಅಧ್ಯಕ್ಷ ಪಾಲ್ ಪ್ರಶ್ನೆ

ಹುಬ್ಬಳ್ಳಿ:ರೈತರ, ಮಠ, ಮಂದಿರಗಳ ಜಮೀನುಗಳ ಪಹಣಿಯನ್ನು ಅಧಿಕಾರಿಗಳ ಸಹಕಾರವಿಲ್ಲದೆ ವಕ್ಫ್ ಬೋರ್ಡ್ ಆಸ್ತಿಯಾಗಿ ಬದಲಿಸಲು ಹೇಗೆ ಸಾಧ್ಯ ಎಂದು ವಕ್ಫ್ (ತಿದ್ದುಪಡಿ) ವಿಧೇಯಕ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಇಂದಿಲ್ಲಿ ಪ್ರಶ್ನಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದ ಹುಬ್ಬಳ್ಳಿಯಲ್ಲಿ ರೈತರ ಜಮೀನು, ದೇವಾಲಯಗಳ ಆಸ್ತಿ, 500 ರಿಂದ ಒಂದು ಸಾವಿರ ವರ್ಷಗಳಷ್ಟು ಹಳೆಯ ದಾಖಲೆ ಇರುವ ಮಠಗಳ ಜಮೀನನ್ನು ವಕ್ಫ್ ಆಸ್ತಿ ಎಂದು ಘೋಷಿಸುತ್ತಿದ್ದಾರೆ, ಅಲ್ಲದೆ, ಪಹಣಿ, ಆಸ್ತಿ ಹಕ್ಕಿನಲ್ಲೂ ಬದಲಾವಣೆ ಮಾಡಲಾಗುತ್ತಿದೆ, ಇದು ಹೇಗೆ ಸಾಧ್ಯ ಎಂದರು.

ಕಂದಾಯ ದಾಖಲೆಗಳಿದ್ದರೂ ಅಚಾತುರ್ಯ

ಎಲ್ಲ ಕಂದಾಯ ದಾಖಲೆಗಳಿದ್ದರೂ ಈ ರೀತಿ ಅಚಾತುರ್ಯ ಆಗುತ್ತಿದೆ, ಇಲ್ಲಿನ ರಾಜ್ಯ ಸರ್ಕಾರ ನೋಟಿಸ್ ವಾಪಸ್ ಪಡೆಯುವುದಾಗಿ ತಿಳಿಸಿದೆ, ಸದ್ಯಕ್ಕೆ ರೈತರನ್ನು ಒಕ್ಕಲೆಬ್ಬಿಸದೆ ಇರಲು ಸರ್ಕಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿರಬಹುದು, ಇದರಿಂದ ಸಮಸ್ಯೆ ಪರಿಹಾರವಾಗಲಿದೆಯೇ ಎಂದರು.

ಹುಬ್ಬಳ್ಳಿ, ಬೀದರ್, ಕಲಬುರಗಿ, ಶಿವಮೊಗ್ಗ ಮೊದಲಾದ ಜಿಲ್ಲೆಗಳಲ್ಲಿ ಇಂಥ ಸಮಸ್ಯೆಗಳಿವೆ, ಪುರಾತನ ಮಠ, ದೇವಾಲಯಗಳ 15 ಸಾವಿರ ಎಕರೆ, ಒಂದು ಸಾವಿರ ಎಕರೆಯನ್ನು ವಕ್ಫ್ ಆಸ್ತಿ ಎಂದು ತಿಳಿಸಲಾಗುತ್ತಿದೆ, 1920, 1930 ರಿಂದ ವ್ಯವಸಾಯ ಮಾಡುತ್ತಿರುವ ರೈತರ ಜಮೀನು ವಕ್ಫ್ ಆಸ್ತಿ ಆಗಲು ಹೇಗೆ ಸಾಧ್ಯ.

ವಕ್ಫ್ ಆಸ್ತಿ ವಿವಾದ: ರೈತರ ರಕ್ಷಿಸಲು ಸರ್ಕಾರ ಬದ್ಧ
ರೈತರು ತೊಂದರೆಗೆ ಒಳಗಾಗಲಿದ್ದಾರೆ

ಇದೊಂದು ಗಂಭೀರ, ದೊಡ್ಡ ಸಮಸ್ಯೆಯಾಗಿದೆ, 70ಕ್ಕೂ ಹೆಚ್ಚು ಮನವಿಗಳನ್ನು ಈಗಾಗಲೇ ಸ್ವೀಕರಿಸಿದ್ದೇವೆ, ಶಾಸಕರೂ ಮನವಿ ಕೊಟ್ಟಿದ್ದಾರೆ, ಸಾವಿರಾರು ರೈತರು ಇದರಿಂದ ತೊಂದರೆಗೆ ಒಳಗಾಗಲಿದ್ದಾರೆ, ಕರ್ನಾಟಕದಲ್ಲಿ ಆಗಿರುವ ಸಮಸ್ಯೆಗಳ ಕುರಿತು ಜೆಪಿಸಿ ಸದಸ್ಯ ಹಾಗೂ ಸಂಸದ ತೇಜಸ್ವಿ ಸೂರ್ಯ ಅವರೂ ಮಾಹಿತಿ ನೀಡಿದ್ದಾರೆ.

ಯಾವುದೇ ದಾಖಲಾತಿ ಇಲ್ಲದೆ ವಕ್ಫ್ ಆಸ್ತಿ ಎಂದು ತಿಳಿಸುತ್ತಿದ್ದು, ಟ್ರಿಬ್ಯೂನಲ್ ನಿರ್ಧಾರದ ಬಳಿಕ ಸಂತ್ರಸ್ತರು ಆಸ್ತಿ ಕಳೆದುಕೊಳ್ಳುತ್ತಾರೆ, ಇದೊಂದು ಗಂಭೀರ ಸಮಸ್ಯೆ, ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ, ಈ ಸಂಬಂಧ ದೇಶದ ವಿವಿಧ ಕಡೆಗಳಿಗೆ ಸಮಿತಿ ಭೇಟಿ ಕೊಟ್ಟಿದೆ.

ಸಂತ್ರಸ್ತರ ಭೇಟಿ

ಬಿಜೆಪಿಯವರಷ್ಟೇ ಅಲ್ಲದೆ, ರೈತರು, ಜನಸಾಮಾನ್ಯರು, ಮಹಿಳೆಯರು, ಮುಸ್ಲಿಂ ಸಮುದಾಯದವರೂ ಸೇರಿದಂತೆ ಎಲ್ಲರೂ ಮನವಿ ಸಲ್ಲಿಸಿದ್ದಾರೆ, ಸಂತ್ರಸ್ತರನ್ನು ಭೇಟಿ ಮಾಡುತ್ತಿದ್ದೇವೆ.

ಸಮಗ್ರ ಮಾಹಿತಿ ಪಡೆಯಲು ಮತ್ತು ವಿವರ ತಿಳಿಯಲು ಎಲ್ಲರನ್ನೂ ಭೇಟಿ ಮಾಡುತ್ತಿದ್ದೇವೆ, ಕಳೆದೊಂದು ತಿಂಗಳಿನಲ್ಲಿ ಕರ್ನಾಟಕದಲ್ಲಿ ಈ ಗಂಭೀರ ಸಮಸ್ಯೆ ಉದ್ಭವಿಸಿದೆ, ವರದಿಯಲ್ಲಿ ಇದೆಲ್ಲ ವಿವರಗಳನ್ನು ಸೇರಿಸುತ್ತೇವೆ ಎಂದರು.

ಜೆಪಿಸಿಯಲ್ಲಿ ವಿವಿಧ ಪಕ್ಷಗಳು

ವಕ್ಫ್ (ತಿದ್ದುಪಡಿ) ವಿಧೇಯಕ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯನ್ನು ಲೋಕಸಭಾ ಸ್ಪೀಕರ್ ರಚಿಸಿದ್ದಾರೆ, ಬಿಜೆಪಿ ಮಾತ್ರವಲ್ಲದೆ, ಸಮಾಜವಾದಿ ಪಕ್ಷ, ಡಿಎಂಕೆ, ಕಾಂಗ್ರೆಸ್, ಎಐಎಂಐಎಂ ಸೇರಿದಂತೆ ವಿವಿಧ ಪಕ್ಷಗಳ ಸದಸ್ಯರು ಇದರಲ್ಲಿದ್ದಾರೆ.

ನಾಳೆ ಭುವನೇಶ್ವರ, ಕೊಲ್ಕತಾ ಸೇರಿದಂತೆ ದೇಶದ ಅನೇಕ ಪ್ರದೇಶಗಳಿಗೆ ಭೇಟಿ ಕೊಡಲಿದ್ದೇವೆ, ಸರ್ಕಾರಕ್ಕೆ ಸಮಿತಿ ತನ್ನ ವರದಿ ಸಲ್ಲಿಸಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complaitns from farmers and publicin hubballijagadambika paljpc presidentvisit other states also
0 FacebookTwitterPinterestEmail
admin

previous post
ವೀಲ್ ಚೇರ್, ಆಂಬ್ಯುಲೆನ್ಸ್ ನಲ್ಲಿ ಬಂದಿದ್ದೇನೆಯೇ? ಹೆಚ್.ಡಿ.ದೇವೇಗೌಡರ ಕಿಡಿ
next post
ವಕ್ಫ್ ಆಸ್ತಿ ವಿವಾದ: ರೈತರ ರಕ್ಷಿಸಲು ಸರ್ಕಾರ ಬದ್ಧ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ