65
ಚನ್ನಪಟ್ಟಣ:ವರ್ಗಾವಣೆ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಸಚಿವರೊಬ್ಬರ ಜೊತೆ ಕೆಲವರು ಹೊಡೆದಾಡಿಕೊಂಡಿರುವ ಮಾಹಿತಿ ಇದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣಾ ಪ್ರಚಾರ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ದಂಧೆ ಹಣ ಹಂಚಿಕೆ ವಿಚಾರದಲ್ಲಿ ಈ ಕಿತ್ತಾಟ ನಡೆದಿದೆ ಎಂಬ ಮಾಹಿತಿ ಇದೆ.
ಒಬ್ಬ ಮಂತ್ರಿಯನ್ನು ಹಣ ಹಂಚಿಕೆ ವಿಚಾರದಲ್ಲಿ ಬಹಿರಂಗವಾಗಿ ತರಾಟೆಗೆ ತಗೆದುಕೊಳ್ಳುತ್ತಾರೆ ಎಂದರೆ, ರಾಜ್ಯ ಯಾವ ಹಂತಕ್ಕೆ ತಲುಪಿದೆ ಎಂಬುದನ್ನು ಜನತೆ ಗಮನಿಸಬೇಕು ಎಂದರು.