Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Wednesday, June 10, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪ ಚುನಾವಣೆ ನಂತರ ಗೃಹಲಕ್ಷ್ಮಿ ಬಂದ್ : ದೇವೇಗೌಡರು

by KM Shivaraju November 10, 2024
written by KM Shivaraju November 10, 2024 0 comments 2 minutes read
0FacebookTwitterPinterestEmail
179

ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಖಜಾನೆಯನ್ನು ದಿವಾಳಿ ಎಬ್ಬಿಸಿದೆ. ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಗೃಹಲಕ್ಷ್ಮಿ ಹಣವಿಲ್ಲ. ಆದರೆ ಉಪ ಚುನಾವಣೆ ದೃಷ್ಟಿಯಿಂದ ಚನ್ನಪಟ್ಟಣ ಕ್ಷೇತ್ರದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಮಾತ್ರ ಹಣ ಜಮೆ ಮಾಡಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ಆರೋಪಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಪ್ರಚಾರ ನಡೆಸಿದ ಅವರು, ಕಾಂಗ್ರೆಸ್ ಸರ್ಕಾರ ಅಪರಿಮಿತವಾಗಿ ಚುನಾವಣಾ ಅಕ್ರಮಗಳನ್ನು ಎಸಗುತ್ತಿದೆ. ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಕೂಡ ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.

ಈ ಸರ್ಕಾರ ದಿವಾಳಿಯಾಗಿದೆ. ಚುನಾವಣೆ ಮುಗಿದ ಮೇಲೆ‌ ಹಣ ಜಮೆ ಮಾಡುವುದನ್ನು ಮತ್ತೆ ನಿಲ್ಲಿಸುತ್ತಾರೆ. ಐದು ಗ್ಯಾರಂಟಿಗಳಲ್ಲಿ ಒಂದು ಗ್ಯಾರಂಟಿ ಕಸಿದುಕೊಂಡು ಹೋಗಿದ್ದಾರೆ. ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚೋಕೆ ಕಾಸಿಲ್ಲ, ಜನ ಉಗಿಯುತ್ತಿದ್ದಾರೆ ಎಂದು ಮಾಜಿ ಪ್ರಧಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣಕ್ಕೆ ಯಾರು ಭಗೀರಥ?

ನಿಖಿಲ್ ಅವರನ್ನು ವಿಧಾನಸೌಧಕ್ಕೆ ಕಳಿಸಿ. ಆ ಹುಡುಗ ನಿಮ್ಮ ಪರವಾಗಿ ದನಿ ಎತ್ತುತ್ತಾನೆ. ಇದರಲ್ಲಿ ನಿಮಗೆ ಯಾವುದೇ ಸಂಶಯ ಬೇಡ. ನಾನು ಒಬ್ಬ ರೈತನ ಮಗ, ನೀವು ರೈತನ ಮಕ್ಕಳು. ಇಗ್ಗಲೂರು ಅಣೆಕಟ್ಟು ಕಟ್ಟಿಸಿದ ಈ ದೇವೇಗೌಡ, ಬದುಕಿದ್ದಾನೆ. ಹದಿನೇಳು ಕೆರಗಳಿಗೆ ನೀರು ಹರಿಸಿದ್ದ ವ್ಯಕ್ತಿಯನ್ನು ಭಗೀರಥ ಅಂತಾರೆ. ಈ ಅಣೆಕಟ್ಟು ಕಟ್ಟಿಲ್ಲ ಅಂದರೆ ನೀರು ಹರಿಸೋಕೆ ಸಾಧ್ಯ ಆಗುತ್ತಿತ್ತಾ? ಎಂದು ಅವರು ಪ್ರಶ್ನಿಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು 1600 ಕೋಟಿ ರೂ.ನಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಈಗಿರುವ ಸರ್ಕಾರ ಸಣ್ಣ-ಪುಟ್ಟ ಕೆಲಸ ಮಾಡುತ್ತಿದೆ. ಪ್ರತಿ ಗ್ರಾಮಕ್ಕೆ ನೀರಾವರಿ ಸೌಲಭ್ಯ ಕೋಡಬೇಕಾದ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಅವರು ಇಷ್ಟು ಹಣವನ್ನು ಕ್ಷೇತ್ರಕ್ಕೆ ಕೊಟ್ಟರು. ರಾಷ್ಟ್ರದ ಹಿತದೃಷ್ಟಿಯಿಂದ, ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಾಸೆಯಿಂದ ಕುಮಾರಸ್ವಾಮಿ ಅವರು ದೆಹಲಿಗೆ ಹೋಗಿ ಸಚಿವರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿದ್ದಾರೆ

ಕುಮಾರಸ್ವಾಮಿ ಅವರು ಚನ್ನಪಟ್ಟಣ ಕ್ಷೇತ್ರಕ್ಕೆ ರಾಜೀನಾಮೆ ಕೊಟ್ಟ ಮೇಲೆ ಯಾರು ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಚರ್ಚೆ ನಡೆಯಿತು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು ಓಡಾಡಿದರು. ಹಾಗಂತ ಎಲ್ಲರನ್ನೂ ನಂಬಿಸಿದರು. ನಾಮಪತ್ರ ಸಲ್ಲಿಸುವ ಒಂದು ದಿನಕ್ಕೆ ಮೊದಲು ಇದ್ದಕ್ಕಿದ್ದ ಹಾಗೆ ತಮ್ಮ ತೀರ್ಮಾನ ಬದಲಾಯಿಸಿ ಮತ್ತೊಬ್ಬ ಸ್ನೇಹಿತರನ್ನು ನಿಲ್ಲಿಸಿದ್ದಾರೆ. ಬಿಜೆಪಿಯಿಂದ ಅಭ್ಯರ್ಥಿಯನ್ನು ಹೈಜಾಕ್ ಮಾಡಿಕೊಂಡು ಹೋಗಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು 2028ಕ್ಕೆ ಸ್ಪರ್ಧೆ ಮಾಡುತ್ತೇನೆ, ನಾನು ಪಕ್ಷ ಕಟ್ಟುತ್ತೇನೆ ಎಂದರು. ನಾಮಪತ್ರ ಸಲ್ಲಿಸುವ ಹಿಂದಿನ ದಿನ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ನಾಯಕರಾದ ನಡ್ಡಾ, ಅಮಿಶ್ ಶಾ ಅವರೆಲ್ಲರೂ ಸೇರಿ ನಿಖಿಲ್ ಕುಮಾರಸ್ವಾಮಿ ಅವರನ್ನು ನಿಲ್ಲಿಸಲು ತೀರ್ಮಾನ ಮಾಡಿದರು. ಈ ಯುವಕ ನಿಮ್ಮ ಮೊಮ್ಮಗನಿದ್ದ ಹಾಗೆ, ವಿಧಾನಸಭೆಗೆ ಆಯ್ಕೆ ಮಾಡಿ ಆಶೀರ್ವಾದ ಮಾಡಿ. ಕೈಮುಗಿದು ಪ್ರಾರ್ಥನೆ ಮಾಡುತ್ತೇನೆ. ನಮ್ಮ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ನಿಖಿಲ್ ಕುಮಾರಸ್ವಾಮಿ ವಿಧಾನಸೌಧಕ್ಕೆ ಹೋಗುವುದು 100ಕ್ಕೆ 100ರಷ್ಟು ಸತ್ಯ ಎಂದು ಅವರು ತಿಳಿಸಿದ್ದಾರೆ.

ಚನ್ನಪಟ್ಟಣದಲ್ಲಿ ಎರಡು ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತದೆ. ಮಾಸಿಕ 80 ಲಕ್ಷ ರೂ. ತಾಲೂಕಿಗೆ ಬರುತ್ತದೆ. ಕರ್ನಾಟಕಕ್ಕೆ ಹಾಲಿನ ಡೈರಿ ತಂದಿದ್ದು ಯಾರು? ಅದನ್ನು ತಂದ ಈ ದೇವೇಗೌಡ ಇನ್ನೂ ಬದುಕಿದ್ದೇನೆ. ಇಗ್ಗಲೂರು ಡ್ಯಾಂನಿಂದ ಎಲ್ಲರಿಗೂ ನೀರು ಸಿಗಲ್ಲ. ಅದಕ್ಕಾಗಿ ಹೈನುಗಾರಿಕೆ ಮಾಡಿ ಕೆಲವರು ಜೀವನ ಮಾಡುತ್ತಿದ್ದಾರೆ. ನಮ್ಮ ಹುಟ್ಟುಗುಣ ಬೇರೆಯವರಿಂದ ಕಿತ್ತುಕೊಳ್ಳುವುದಲ್ಲ. ನಮ್ಮದು ಕೊಡುವ ಕೈ. ಈ ಹಣ ಶಾಶ್ವತವಾಗಿ ಚನ್ನಪಟ್ಟಣಕ್ಕೆ ಬರುತ್ತಿದೆ ಎಂದು ದೇವೇಗೌಡರು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
by-electionCampaigningchannapatnaDeve GowdaFormer Prime Ministergovernment bankruptGruha Lakshmi schemeHdstopped
0 FacebookTwitterPinterestEmail
KM Shivaraju

previous post
ಕೋವಿಡ್: ಬಿಎಸ್‌ವೈ, ಶ್ರೀರಾಮುಲು ವಿರುದ್ಧ ತನಿಖೆ !
next post
ಪ್ರಜ್ವಲ್ ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಜಾ

You may also like

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (485)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,979)
  • ರಾಜ್ಯ (2,293)
  • ರಾಷ್ಟ್ರ (2,261)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026

KMS Special

  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ