Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ: ಕುಟುಂಬ ರಾಜಕಾರಣವೇ ಪ್ರತಿಷ್ಠೆ

by admin November 11, 2024
written by admin November 11, 2024 0 comments 2 minutes read
0FacebookTwitterPinterestEmail
219

ಬೆಂಗಳೂರು:ಕುಟುಂಬ ರಾಜಕಾರಣವೇ ಪ್ರತಿಷ್ಠೆಯಾಗಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ.

ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದ್ದಂತೆ ಮತದಾರರಲ್ಲದವರು ಕ್ಷೇತ್ರ ತೆರವುಗೊಳಿಸುವಂತೆ ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶ ಮಾಡಿದ್ದಾರೆ.

ಈ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಮತ ಯಾಚಿಸಬಹುದಾಗಿದೆ.

ಅವಿರತ ಹೋರಾಟ

ಉಪಚುನಾವಣೆಯನ್ನು ಸರ್ಕಾರ ಎಷ್ಟು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ, ಅಷ್ಟೇ ಪ್ರತಿಷ್ಠೆಯಾಗಿ ಪ್ರತಿಪಕ್ಷ ಎನ್‌ಡಿಎ ಮೈತ್ರಿಕೂಟ ತೆಗೆದುಕೊಂಡಿದ್ದು, ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಪೆಟ್ಟು ನೀಡಲು ಅವಿರತ ಹೋರಾಟ ನಡೆಸಿದೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ಕುಡಿ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣದಿಂದ ತಮ್ಮ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದಿದ್ದಾರೆ.

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಎನ್‌ಡಿಎ ಅಭ್ಯರ್ಥಿ ನಿಖಿಲ್‌ಗೆ ಪ್ರತಿಸ್ಪರ್ಧಿ, ಕ್ಷೇತ್ರದಲ್ಲಿ ಯೋಗೇಶ್ವರ್‌ಗಿಂತ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ, ಪಕ್ಷದ ಅಭ್ಯರ್ಥಿ ಗೆಲುವು ಹೆಚ್ಚು ಪ್ರತಿಷ್ಠೆಯಾಗಿದ್ದು, ಗೌಡರ ಕುಟುಂಬದ ವಿರುದ್ಧ ಟೊಂಕ ಕಟ್ಟಿ ಹೋರಾಟ ನಡೆಸಿದ್ದಾರೆ.

ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ
ಬಿಜೆಪಿ ಅಭ್ಯರ್ಥಿ

ಇನ್ನು ಶಿಗ್ಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ ಬೊಮ್ಮಾಯಿ ಬಿಜೆಪಿ ಅಭ್ಯರ್ಥಿಯಾಗಿ ಕಣದಲ್ಲಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಸಂಸದ ಇ.ತುಕಾರಾಂ ಪತ್ನಿ ಅನ್ನಪೂರ್ಣ ಕಾಂಗ್ರೆಸ್‌ನ ಅಭ್ಯರ್ಥಿಯಾಗಿದ್ದಾರೆ.

ಇಲ್ಲಿ ಸಚಿವ ಸಂತೋಷ್ ಲಾಡ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಡೂರು ಉಳಿಸಿಕೊಳ್ಳುವುದು ಪ್ರತಿಷ್ಠೆಯಾಗಿದೆ.

ಐದು ದಿನ ಬಿಡಾರ

ಇದೇ ಕಾರಣಕ್ಕಾಗಿ ಮುಖ್ಯಮಂತ್ರಿ ಅವರು ಕ್ಷೇತ್ರದಲ್ಲಿ ಐದು ದಿನ ಬಿಡಾರ ಹೂಡಿ ಪ್ರಚಾರ ಕೈಗೊಂಡಿದ್ದಾರೆ.

ಅಷ್ಟೇ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ, ಕಾಂಗ್ರೆಸ್‌ನಿಂದ ಕ್ಷೇತ್ರ ಕಸಿದುಕೊಳ್ಳಲು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ದಿಗ್ಗಜ ನಾಯಕರುಗಳನ್ನು ಪ್ರಚಾರಕ್ಕಿಳಿಸಿದೆ.

ಮೂರು ಕ್ಷೇತ್ರಗಳಲ್ಲಿ ಎಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಲೋಕಸಭೆಗೆ ಆಯ್ಕೆಗೊಂಡಿದ್ದರಿಂದ ಈ ಸ್ಥಾನಗಳು ತೆರವಾಗಿದ್ದು ಉಪಚುನಾವಣೆ ಎದುರಾಗಿದೆ.

ಒಕ್ಕಲಿಗ ನಾಯಕರು ಬೆಳೆಯಲು ದೇವೇಗೌಡರು ಬಿಡಲ್ಲ
ಬೃಹತ್ ಸಮಾವೇಶ

ಪ್ರಚಾರಕ್ಕೆ ಕೊನೆಯ ದಿನದಂದು ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಬೃಹತ್ ಸಮಾವೇಶ ನಡೆಸಿ ಮತದಾರರ ಓಲೈಕೆಗೆ ಪ್ರಯತ್ನಿಸಿದವು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಂಪುಟ ಸಚಿವರು ಹಾಗೂ ಕಾಂಗ್ರೆಸ್‌ನ ಘಟಾನುಘಟಿಗಳೂ ಸೇರಿದಂತೆ ಇಡೀ ಸರ್ಕಾರ ಚನ್ನಪಟ್ಟಣದಲ್ಲೇ ಬಿಡಾರ ಹೂಡಿ ಮತದಾರರ ಒಲವಿಗೆ ಪ್ರಯತ್ನ ನಡೆಸಿದರು.

ಸರ್ಕಾರದ ವಿರುದ್ಧ ಬಹಿರಂಗ ಕದನಕ್ಕೆ ಇಳಿದಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಈ ಕ್ಷೇತ್ರದಲ್ಲೇ ಬೃಹತ್ ಬಹಿರಂಗ ಸಭೆ ಮತ್ತು ಪಾದಯಾತ್ರೆ ನಡೆಸಿದರು.

ಹಲವು ಮುಖಂಡರು

ಪ್ರಚಾರ ಕಾರ್ಯದಲ್ಲಿ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಆರ್.ಅಶೋಕ್, ಡಾ.ಅಶ್ವತ್ಥನಾರಾಯಣ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು.

ಉಪಚುನಾವಣೆಯ ದಿನದಂದು ಮತದಾನಕ್ಕೆ ಅನುಕೂಲವಾಗುವಂತೆ ಮೂರೂ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸರ್ಕಾರಿ ಹಾಗೂ ಸಾರ್ವಜನಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಪ್ರಜ್ವಲ್ ಜಾಮೀನು ಅರ್ಜಿ ಸುಪ್ರೀಂಕೋರ್ಟ್‌ನಲ್ಲಿ ವಜಾ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpby-electioncongresjdsnovember 13th votingnovember 23 countingthree constituency
0 FacebookTwitterPinterestEmail
admin

previous post
ಭ್ರಷ್ಟಾಚಾರದಿಂದ ರಾಜ್ಯ ಸರ್ಕಾರ ದಿವಾಳಿಯಾಗಿದೆ
next post
ಗುತ್ತಿಗೆ ಕಾಮಗಾರಿ: ಅಲ್ಪಸಂಖ್ಯಾತರಿಗೆ ಶೇ.4 ಮೀಸಲಾತಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ