Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಉಪಚುನಾವಣೆ: ಕುಟುಂಬಗಳ ಪ್ರತಿಷ್ಠೆ ಇವಿಎಂನಲ್ಲಿ

by admin November 13, 2024
written by admin November 13, 2024 0 comments 2 minutes read
0FacebookTwitterPinterestEmail
192

ನವೆಂಬರ್ 23ರಂದು ಮತ ಎಣಿಕೆ, ಫಲಿತಾಂಶ

ಬೆಂಗಳೂರು:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದೆ ಬಿರುಸಿನ ಶಾಂತಿಯುತ ಮತದಾನವಾಗಿದೆ.

ಚನ್ನಪಟ್ಟಣ ( ಶೇ. 88.80) ಶಿಗ್ಗಾಂವಿ (ಶೇ.80.48 ) ಹಾಗೂ ಸಂಡೂರು (ಶೇ.76.24 ) ವಿಧಾನಸಭಾ ಕ್ಷೇತ್ರಗಳಲ್ಲಿ ಶೇಕಡ .., ಮತದಾನವಾಗಿದೆ.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಎರಡು ಕ್ಷೇತ್ರಗಳಲ್ಲಿ, ಜೆಡಿಎಸ್ ಒಂದರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು.

45 ಅಭ್ಯರ್ಥಿಗಳು ಕಣದಲ್ಲಿ

ಒಟ್ಟಾರೆ ಮೂರೂ ಕ್ಷೇತ್ರಗಳಿಂದ 45 ಅಭ್ಯರ್ಥಿಗಳು ಕಣದಲ್ಲಿದ್ದು, ಫಲಿತಾಂಶಕ್ಕಾಗಿ 10 ದಿನ ಕಾಯಬೇಕಾಗಿದೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳಿಗೆ ನವೆಂಬರ್ 20ಕ್ಕೆ ಮತದಾನ ಪೂರ್ಣಗೊಳ್ಳಲಿದ್ದು, 23ರಂದು ಮತ ಎಣಿಕೆ ನಡೆಯಲಿದ್ದು, ಅಂದೇ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆಯೂ ನಿಗದಿಯಾಗಿದೆ.

ಕೇಂದ್ರ ಚುನಾವಣಾ ಆಯೋಗ ಅತ್ಯಂತ ಬಿಗಿ ಬಂದೋಬಸ್ತ್‌ನಲ್ಲಿ ಚುನಾವಣೆ ನಡೆಸಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ, ಅದರಲ್ಲೂ ಚನ್ನಪಟ್ಟಣ ತುಂಬಾ ಸೂಕ್ಷ್ಮ ಕ್ಷೇತ್ರವಾಗಿದ್ದರಿಂದ ರಾಜ್ಯ ಪೋಲಿಸ್ ಸಿಬ್ಬಂದಿ ಜೊತೆ ಕೇಂದ್ರ ಮೀಸಲು ಪಡೆಯನ್ನೂ ನಿಯೋಜಿಸಲಾಗಿತ್ತು.

ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ
ಬೆಳಗ್ಗೆಯಿಂದಲೇ ಸಾಲು

ಬೆಳಗ್ಗೆಯಿಂದಲೇ ಮತದಾರರು ಮತಗಟ್ಟೆಗಳ ಮುಂದೆ ಸಾಲು ಸಾಲಾಗಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

ಮೂರೂ ಕ್ಷೇತ್ರಗಳಲ್ಲೂ ರಾಜಕೀಯ ಮುಖಂಡರುಗಳ ಕುಟುಂಬ ವರ್ಗದವರೇ ಕಣದಲ್ಲಿ ಇದ್ದಿದ್ದರಿಂದ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿತ್ತು.

ಚನ್ನಪಟ್ಟಣದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದರೆ, ಶಿಗ್ಗಾಂವಿಯಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಸಂಸದ ಇ.ತುಕಾರಾಂ ಪತ್ನಿ ಅನ್ನಪೂರ್ಣ ಕಣದಲ್ಲಿದ್ದರು.

ಮತಗಟ್ಟೆಗಳಿಗೆ ವಿಶೇಷಚೇತನರು

93 ವರ್ಷದ ವಯೋವೃದ್ಧರೂ ಸೇರಿದಂತೆ ಅನೇಕ ವಿಶೇಷಚೇತನರು ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿದರು.

ಆಡಳಿತ ಮತ್ತು ಪ್ರತಿಪಕ್ಷಗಳಿಗೆ ಪ್ರತಿಷ್ಠೆಯ ಕಣವಾಗಿರುವ ಮೂರೂ ಕ್ಷೇತ್ರಗಳಲ್ಲಿ ಉತ್ಸಾಹದ ಮತದಾನ ಕಂಡುಬಂದಿತು.

ಶಿಗ್ಗಾವಿ ಕ್ಷೇತ್ರದ ಸವಣೂರಿನ ದಂಡಿನಪೇಟೆಯಲ್ಲಿ ಮತದಾನ ಬಹಿಷ್ಕಾರದ ಒಂದೆರಡು ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ, ಕ್ಷೇತ್ರದ ಮತದಾನ ಬಹುತೇಕ ಶಾಂತಿಯುತವಾಗಿತ್ತು, ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

ಭ್ರಷ್ಟಾಚಾರ ನಡೆದಿರುವುದು ಬಿಜೆಪಿ ಆಡಳಿತದಲ್ಲಿ
ರಾಜ್ಯದ ಮಿನಿ ಮಹಾಸಮರ

ರಾಜ್ಯದ ಮಿನಿ ಮಹಾಸಮರ ಎಂದೇ ಪರಿಗಣಿಸಲಾಗಿರುವ ಈ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ಪ್ರತಿಷ್ಠೆಯ ಕಣಗಳಾಗಿವೆ.

ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಹಿಳೆಯರೇ ನಿರ್ವಹಿಸುವ 5 ಸಖಿ ಮತಗಟ್ಟೆ, ಒಂದು ಯುವ ಮತಗಟ್ಟೆ, 1 ದಿವ್ಯಾಂಗರು ನಿರ್ವಹಿಸುವ ಮತದಾನ ಕೇಂದ್ರ, ಒಂದು ವಿಷಯಾಧರಿತ ಮತದಾನ ಕೇಂದ್ರ ಸ್ಥಾಪಿಸಲಾಗಿತ್ತು.

ನವೆಂಬರ್ 23ರಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ರಾಮನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಶಿಗ್ಗಾವಿ ಕ್ಷೇತ್ರದ ಮತ ಎಣಿಕೆ ಹಾವೇರಿ ಜಿಲ್ಲೆ ದೇವಗಿರಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ, ಸಂಡೂರು ಕ್ಷೇತ್ರದ ಮತ ಎಣಿಕೆ ಬಳ್ಳಾರಿ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpchannapattanacongresjdskarnataka by-electionnovember 23rd countingsanduruShiggavithree assembly constituency
0 FacebookTwitterPinterestEmail
admin

previous post
ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ
next post
ಶಾಸಕರ ಖರೀದಿ: ಸಿದ್ದರಾಮಯ್ಯ ಹತಾಶ ಹೇಳಿಕೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ