Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಭ್ರಷ್ಟಾಚಾರ ನಡೆದಿರುವುದು ಬಿಜೆಪಿ ಆಡಳಿತದಲ್ಲಿ

by admin November 13, 2024
written by admin November 13, 2024 0 comments 1 minutes read
0FacebookTwitterPinterestEmail
252

ಮೈಸೂರು:ಕೊರೊನಾ ಕಾಲದಲ್ಲಿ ಬಿಜೆಪಿ ಸರ್ಕಾರದ ಅವ್ಯವಹಾರಗಳ ಬಗ್ಗೆ ನ್ಯಾಯಮೂರ್ತಿ ಮೈಕೆಲ್ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂ.ಗೆ ಲಭ್ಯವಿದ್ದ ಪಿಪಿಇ ಕಿಟ್ ಅನ್ನು 2,140 ರೂ.ಗೆ ಖರೀದಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಹಗಲು ದರೋಡೆ ಮಾಡುತ್ತಿದೆ, ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದೆ ಎನ್ನುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಪಿಪಿಇ ಕಿಟ್ ಖರೀದಿ ಬಗ್ಗೆ ಏನು ಹೇಳುತ್ತಾರೆ, ಭ್ರಷ್ಟಾಚಾರ ಮಾಡಿರುವುದು ಬಿಜೆಪಿ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರ ನಡೆದಿಲ್ಲ, ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದರು.

ಸುಳ್ಳು ಹೇಳಲು ಇತಿಮಿತಿ ಇರಬೇಕು

ಅಬಕಾರಿ ಇಲಾಖೆಯಲ್ಲಿ 700 ಕೋಟಿ ರೂ. ವಸೂಲಿ ಮಾಡಿದ್ದಾರೆ ಎನ್ನುತ್ತಿದ್ದಾರೆ, ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ, ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ, ಅವರು ಪ್ರಧಾನಮಂತ್ರಿ ಸ್ಥಾನ ಬಿಡಲು ಸಿದ್ಧರಿದ್ದಾರೆಯೇ, ಸುಳ್ಳು ಹೇಳಲು ಇತಿಮಿತಿ ಇರಬೇಕು.

ಕರ್ನಾಟಕ ದೊಡ್ಡ ರಾಜ್ಯ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 136 ಸ್ಥಾನಗಳನ್ನು ಪಡೆದಿರುವುದರಿಂದ ನನ್ನ ಹಾಗೂ ಕಾಂಗ್ರೆಸ್ ಸರ್ಕಾರವನ್ನು ಪ್ರಧಾನಿ ಗುರಿಯಾಗಿಸಿ ಟೀಕೆ ಮಾಡುತ್ತಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ‘ಸಿದ್ದರಾಮಯ್ಯನ ಸೊಕ್ಕು ಮುರಿಯುತ್ತೇವೆ’ ಎಂದಿರುವುದು ಎಷ್ಟರ ಮಟ್ಟಿಗೆ ಸರಿ, ಒಬ್ಬ ಮುಖ್ಯಮಂತ್ರಿಗೆ ಈ ರೀತಿ ಹೇಳುವುದು ಸರಿಯೇ, ಜಮೀರ್ ಅಹ್ಮದ್ ಹಾಗೂ ಕುಮಾರಸ್ವಾಮಿ ಒಂದು ಕಾಲದಲ್ಲಿ ಆಪ್ತರು, ಈಗ ಇಬ್ಬರ ಸಂಬಂಧ ಹೇಗಿದೆ ಎಂಬ ಬಗ್ಗೆ ತಿಳಿದಿಲ್ಲ.

ಬೆಂಕಿ ಹಚ್ಚುವ ಕೆಲಸ

ಬಿಜೆಪಿಗೆ ಕೋಮುವಾದ ಸೃಷ್ಟಿಸುವುದೇ ಕಾಯಕ, ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ನಿರತರಾಗಿದ್ದಾರೆ, ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸುವುದಿಲ್ಲ.

ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡಿ ಎಂಬ ಬೇಡಿಕೆ ಬಗ್ಗೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಕಾನೂನು ಪ್ರಕಾರ ತನಿಖೆ ನಡೆಸಲಿ, ಅದಕ್ಕೆ ಯಾವುದೇ ಪ್ರತಿರೋಧ ಇಲ್ಲ, ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆಯೇ, ಇಲ್ಲವೇ ಎಂಬ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ, ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂದಷ್ಟೇ ಹೇಳಬಲ್ಲೆ.

ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ
ಉಪಚುನಾವಣೆ ನಂತರ ಪರಿಶೀಲನೆ

ಮಹರ್ಷಿ ವಾಲ್ಮೀಕಿ ನಿಮಗದ ಹಗರಣ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಪುನಃ ಸಂಪುಟಕ್ಕೆ ಸೇರ್ಪಡೆಗೊಳಿಸುವ ಕುರಿತು ಉಪಚುನಾವಣೆ ಮುಗಿದ ಮೇಲೆ ಪರಿಶೀಲನೆ ಮಾಡೋಣ ಎಂದರು.

ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಪುನಃ ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ, ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ.

ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ, ನನಗೆ ತಿಳಿದ ಮಟ್ಟಿಗೆ ಸರ್ಕಾರದ ಮುಂದೆ ಪ್ರಸ್ತಾವನೆ ಇಲ್ಲ ಎಂದರು.

ರಾಜ್ಯದ ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿನ ಜನಸ್ಪಂದನೆ ಗಮನಿಸಿದರೆ ಕಾಂಗ್ರೆಸ್ ನೂರಕ್ಕೆ ನೂರರಷ್ಟು ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.


Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp rulingcm siddaramaiahcorruptionkorona-ppe kitmysurupm narendra modi
0 FacebookTwitterPinterestEmail
admin

previous post
ಸಂಪುಟದಿಂದ ಜಮೀರ್ ಖಾನ್ ವಜಾ ಮಾಡಿ
next post
ಹಣದ ಚೀಲ ತಂದು ಕಾಂಗ್ರೆಸ್ ಚುನಾವಣೆ ನಡೆಸಿದೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ