Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

‘ಕುಳ್ಳ’ ಎಂದು ಕರೆಯುವ ವಾತಾವರಣದಿಂದ ಬಂದಿಲ್ಲ

by admin November 15, 2024
written by admin November 15, 2024 0 comments 2 minutes read
0FacebookTwitterPinterestEmail
222

ಜಮೀರ್ ಜೊತೆ ರಾಜಕೀಯ ಬಿಟ್ಟು ಯಾವ ಸಲಿಗೆಯೂ ಇರಲಿಲ್ಲ

ಮೈಸೂರು:ಸರ್ಕಾರ ಉರುಳಿಸಲು ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ ರೂ. ನೀಡುವ ಆಮಿಷ ಒಡ್ಡಿದ್ದಾರೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ರಚಿಸಿ ತನಿಖೆ ನಡೆಸುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಮ್ಮನ್ನು ’ಕರಿಯಾ’ ಎಂದು ಹೀಯಾಳಿಸಿದ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಮೊಕದ್ದಮೆ ಹೂಡಿ ಜೈಲಿಗೆ ಏಕೆ ಹಾಕಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ನಾನು ಎಂದೂ ’ಕುಳ್ಳ’ ಎಂಬುದಾಗಿ ಜಮೀರ್ ಅವರನ್ನು ಕರೆದಿಲ್ಲ, ನಾನು ಅಂತಹ ವಾತಾವರಣದಿಂದಲೂ ಬಂದಿಲ್ಲ, ನಮ್ಮಿಬ್ಬರ ನಡುವೆ ರಾಜಕೀಯ ಸ್ನೇಹವಷ್ಟೇ ಇತ್ತು, ಬೇರೆ ಯಾವ ಸಲಿಗೆಯೂ ಇರಲಿಲ್ಲ.

ವರ್ಣಭೇದ, ಜನಾಂಗೀಯ ನಿಂದನೆ

ತಮ್ಮ ಬಗ್ಗೆ ಸಚಿವ ಜಮೀರ್ ಅಹಮದ್ ವರ್ಣಭೇದ ಹಾಗೂ ಜನಾಂಗೀಯ ನಿಂದನೆ ಮಾಡಿರುವ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಸಣ್ಣ ಸಣ್ಣ ವಿಷಯಕ್ಕೂ ಕೇಸು ಹಾಕಿ ಜೈಲಿಗೆ ಹಾಕುವ ಸಿದ್ದರಾಮಯ್ಯ ಸರ್ಕಾರ ಈಗೇಕೆ ಸುಮ್ಮನಿದೆ ಎಂದು ಪ್ರಶ್ನಿಸಿದ್ದಾರೆ.

ಪ್ರತಿ ವಿಷಯಕ್ಕೂ ಪ್ರತಿಪಕ್ಷ ನಾಯಕರ ಕಾರ್ಯಕರ್ತರ ವಿರುದ್ಧ ವಿನಾಕಾರಣ ಕೇಸುಗಳನ್ನು ಹಾಕಲಾಗುತ್ತಿದೆ, ರಾಜ್ಯಪಾಲರ ಕಚೇರಿಯನ್ನೇ ಶೋಧ ಮಾಡುತ್ತೇನೆ ಎಂದು ಹೊರಟಿದ್ದ ಪೊಲೀಸ್ ಅಧಿಕಾರಿಯನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ.

ಅದರ ಬಗ್ಗೆ ಹೇಳಿಕೆ ನೀಡಿದ ನಿಖಿಲ್ ಕುಮಾರಸ್ವಾಮಿ ಮೇಲೆ ಹಾಗೂ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ವಿರುದ್ಧವೂ ಎಫ್‌ಐಆರ್ ಹಾಕಲಾಗಿದೆ, ನಮ್ಮ ಕಾರ್ಯಕರ್ತರು ಜಾಲತಾಣಗಳಲ್ಲಿ ಯಾರೋ ಹೇಳಿದ್ದನ್ನು ಫಾರ್ವರ್ಡ್ ಮಾಡಿದರೆಂಬ ಕಾರಣಕ್ಕೆ ಕೇಸ್ ಹಾಕಿದ್ದಾರೆ.

ಕಾಂಗ್ರೆಸ್‌ನಲ್ಲೇ ಶಾಸಕರ ಖರೀದಿ, ಬಿಜೆಪಿಯಿಂದಲ್ಲ
ಕಾಂಗ್ರೆಸ್ ಪಕ್ಷದವರಿಗೆ ಒಂದು ಕಾನೂನು

ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸಿರುವ ಸಚಿವರೊಬ್ಬರು ನನ್ನ ಬಗ್ಗೆ ಅತ್ಯಂತ ಕೀಳಾಗಿ ವರ್ಣಭೇದ ಮಾಡಿ, ಜನಾಂಗೀಯ ನಿಂದನೆ ಮಾಡಿ, ದೇವೇಗೌಡರ ಖಾನ್ ದಾನ್ ಖರೀದಿ ಮಾಡುತ್ತೇನೆ ಎಂದರೂ ಸರ್ಕಾರ ಸುಮ್ಮನಿದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದವರಿಗೆ ಒಂದು ಕಾನೂನು, ಜೆಡಿಎಸ್‌ನವರಿಗೆ ಇನ್ನೊಂದು ಕಾನೂನು ಜಾರಿಯಲ್ಲಿದೆಯೇ.

ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಕೆಟ್ಟ ಹೇಳಿಕೆ ಕೊಟ್ಟ ಸಚಿವರ ಮಾತುಗಳನ್ನು ಸಮರ್ಥನೆ ಮಾಡಿಕೊಂಡಿದ್ದಾರೆ, ಇದು ನಾಚಿಕೆಗೇಡು, ಇದನ್ನು ನಾಗರಿಕ ಸರ್ಕಾರ ಎಂದು ಕರೆಯಲು ಸಾಧ್ಯವೇ, ಸರ್ಕಾರ ಏಕೆ ಸುಮ್ಮನಿದೆ.

ಚಾಮುಂಡಿ ತಾಯಿ ಮುಂದೆ ನಿಂತು ಹೇಳುತ್ತಿದ್ದೇನೆ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದೊಮ್ಮೆ ನನ್ನನ್ನು ಕೇವಲ ’ಕುಮಾರ’ ಎಂದು ಕರೆದಿದ್ದಕ್ಕೆ ಅವರನ್ನು ಹೊಡೆಯಲು ಹೋದ ಗಿರಾಕಿ ಇವರು, ಹೊರಟ್ಟಿ ಅವರು ಈಗಲೂ ಇದ್ದಾರೆ, ಅವರನ್ನೇ ಕೇಳಿ ಬೇಕಾದರೆ, ಅವತ್ತು ಅವರನ್ನು ಹೊಡೆಯಲು ಇವರು ಹೋಗಿರಲಿಲ್ಲವೇ .

ಮುಖ್ಯಮಂತ್ರಿಗೆ ದೇವೇಗೌಡರು ಗರ್ವಭಂಗ ಮಾಡುತ್ತೇನೆ, ಸೊಕ್ಕು ಮುರಿಯುತ್ತೇನೆ ಎನ್ನುವುದು ಮಾನಹಾನಿ ಪ್ರಕರಣವೇ ಎಂದರು.

ಎಲ್ಲಾ ವಿಚಾರ ತಿಳಿದಿರಬಹುದು

ಶಾಸಕರ ಖರೀದಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೇಳಿಕೆಯನ್ನು ಖಂಡಿಸಿ, ಅವರು 50 ಶಾಸಕರು, 50 ಕೋಟಿ ರೂ. ಎಂದು ನಿಖರವಾಗಿ ಹೇಳುತ್ತಿರುವುದರಿಂದ ಎಲ್ಲಾ ವಿಚಾರ ತಿಳಿದಿರಬಹುದು.

ಅವರ ಸರ್ಕಾರ ಬಂದ ದಿನದಿಂದಲೂ ಎಸ್‌ಐಟಿಗಳನ್ನು ರಚನೆ ಮಾಡಿ ತನಿಖೆ ಮಾಡಿಸುತ್ತಲೇ ಇದ್ದಾರೆ, ಇಡೀ ರಾಷ್ಟ್ರದಲ್ಲಿ ಇಷ್ಟೊಂದು ಎಸ್‌ಐಟಿಗಳು ರಚಿನೆಯಾಗಿಲ್ಲ, ಇದಕ್ಕೂ ಒಂದು ಎಸ್‌ಐಟಿ ರಚಿಸಿ ತನಿಖೆ ಮಾಡಿಸಲಿ ಎಂದು ಆಗ್ರಹಿಸಿದರು.

ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವರು, ಜಮೀರ್ ಹೇಳಿಕೆಯಿಂದ ಮತದಾರರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ.

ಮಾತಿನ ಸುರಿಮಳೆ

ಮತದಾನ ಮುಗಿದ ನಂತರ ಅಭ್ಯರ್ಥಿ ಸೇರಿದಂತೆ ಈಗ ಕೆಲವು ಕಾಂಗ್ರೆಸ್ ನಾಯಕರು ಜಮೀರ್ ಅವರನ್ನು ಮುಂದಿಟ್ಟುಕೊಂಡು ಮಾತಿನ ಸುರಿಮಳೆ ಮಾಡುತ್ತಿದ್ದಾರೆ.

ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಈ ಬಾರಿ ಕ್ಷೇತ್ರದ ಮತದಾರರ ಆಶೀರ್ವಾದ ದೊರೆತಿದೆ.
ನಿಖಿಲ್ ಭಾರೀ ಅಂತರದಲ್ಲಿ ಗೆಲ್ಲಲಿದ್ದಾರೆ, ಏನೇನೋ ರಾಜಕೀಯ ನಡೆದಿದೆ ಎಂಬುದಾಗಿ ಯೋಗೇಶ್ವರ್ ವಿಮರ್ಶೆ ಮಾಡಿಕೊಳ್ಳುತ್ತಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congreshd kumara swamyjamir ahamadjdsSiddaramaiah
0 FacebookTwitterPinterestEmail
admin

previous post
ನವೆಂಬರ್ 20 ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್
next post
ಕಾಂಗ್ರೆಸ್‌ನಲ್ಲೇ ಶಾಸಕರ ಖರೀದಿ, ಬಿಜೆಪಿಯಿಂದಲ್ಲ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ