Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಡಾ: ಸಿದ್ದರಾಮಯ್ಯ ಕುಟುಂಬ ಹಸ್ತಕ್ಷೇಪ ಇಲ್ಲ

by admin November 16, 2024
written by admin November 16, 2024 0 comments 2 minutes read
0FacebookTwitterPinterestEmail
289

ಸ್ಟೇಟಸ್ ರಿಪೋರ್ಟ್ ಲೋಕಾಯುಕ್ತ ಐಜಿಗೆ ಸಲ್ಲಿಕೆ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬಕ್ಕೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳ ಬಿಡಿ ಹಂಚಿಕೆಯಲ್ಲಿ ಅಧಿಕಾರಿಗಳು ಭಾರೀ ಲೋಪ ಎಸಗಿದ್ದಾರೆ ಎಂದು ಲೋಕಾಯುಕ್ತ ’ಸದ್ಯದಸ್ಥಿತಿ’ (ಸ್ಟೇಟಸ್ ರಿಪೋರ್ಟ್) ವರದಿಯಲ್ಲಿ ತಿಳಿಸಿದೆ.

ನ್ಯಾಯಾಲಯದ ಆದೇಶದಂತೆ ಬಿಡಿ ನಿವೇಶನಗಳ ಹಂಚಿಕೆ ಕುರಿತು ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್, ಸದ್ಯದ ತನಿಖಾ ಹಂತದ ವರದಿಯನ್ನು ಕೇಂದ್ರ ಕಚೇರಿಗೆ ತಲುಪಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ಲೋಕಾಯುಕ್ತ ಐಜಿ ಸುಬ್ರಹ್ಮಣ್ಯೇಶ್ವರ ರಾವ್ ಅವರನ್ನು ಭೇಟಿ ಮಾಡಿದ ಎಸ್‌ಪಿ ಅವರು, ತನಿಖೆ ಆರಂಭದಿಂದ ಇದುವರೆಗೂ ನಡೆದಿರುವ ಎಲ್ಲಾ ಹಂತದ ತನಿಖಾ ವರದಿಯ ಮಾಹಿತಿ ಮತ್ತು ದಾಖಲೆಗಳನ್ನು ಸಲ್ಲಿಸಿದ್ದಾರೆ.

ಪ್ರಾಥಮಿಕ ತನಿಖೆ

ಆದರೆ, ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡಿರುವುದಕ್ಕೆ ಎಲ್ಲಿಯೂ ದಾಖಲೆಗಳಿಲ್ಲ, ಅವರ ಪಾತ್ರ ಇದೆ ಎಂಬುದು ಎಲ್ಲಿಯೂ ಪ್ರಾಥಮಿಕ ತನಿಖೆಯಿಂದ ಕಂಡುಬಂದಿಲ್ಲ ಎಂಬ ಸದ್ಯದಸ್ಥಿತಿ ವರದಿ ನೀಡಿದ್ದಾರೆ.

ನಿವೇಶನ ಹಂಚಿಕೆ ಪ್ರಕರಣವನ್ನು ಮೂರು ಭಾಗಗಳಾಗಿ ವಿಂಗಡಿಸಿ ತನಿಖೆ ನಡೆಸಿದ್ದು, ಈಗಾಗಲೇ ಎರಡು ಭಾಗ ಪೂರ್ಣಗೊಂಡಿದೆ, ಮೂರನೇ ಭಾಗದ ತನಿಖೆ ಯಾವ ರೀತಿ ನಡೆಸಬೇಕು ಎಂಬ ಬಗ್ಗೆ ಹಿರಿಯ ಅಧಿಕಾರಿಗಳಿಂದ ಉದೇಶ್, ಸಲಹೆ ಮತ್ತು ಮಾರ್ಗದರ್ಶನ ಪಡೆದಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ನಿವೇಶನಗಳ ಹಂಚಿಕೆ ಸಂದರ್ಭದಲ್ಲಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದ ನಟೇಶ್ ಮತ್ತು ದಿನೇಶ್ ಅವರುಗಳ ವಿಚಾರಣೆ ಬಾಕಿ ಇದೆ, ಉಳಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರ ಮತ್ತು ಅಧಿಕಾರೇತರರಿಂದ ದಾಖಲೆ ಮತ್ತು ಮಾಹಿತಿ ಸಂಗ್ರಹಿಸಿರುವ ಬಗ್ಗೆ ವರದಿಯಲ್ಲಿ ತಿಳಿಸಲಾಗಿದೆ.

ಮಹಾರಾಷ್ಟ್ರದಲ್ಲೂ ಕರ್ನಾಟಕವೇ ರಾಜಕೀಯ ಅಸ್ತ್ರ
ಅನುಮತಿ ದೊರೆತಿಲ್ಲ

ಹಿರಿಯ ಅಧಿಕಾರಿಗಳ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಮುಖ್ಯಕಾರ್ಯದರ್ಶಿ ಅವರಿಗೆ ಮೂರು ವಾರಗಳ ಹಿಂದೆಯೇ ಪತ್ರ ಬರೆದಿದ್ದರೂ, ಇದುವರೆಗೂ ಅವರಿಂದ ನಮಗೆ ಅನುಮತಿ ದೊರೆತಿಲ್ಲ.

ಅನುಮತಿ ದೊರೆತ ತಕ್ಷಣವೇ ತಾವು ಹಿರಿಯ ಅಧಿಕಾರಿಗಳನ್ನು ಕರೆಸಿ ಅವರಿಂದ ತನಿಖೆಗೆ ಅಗತ್ಯ ಇರುವ ಮಾಹಿತಿ ಪಡೆದುಕೊಳ್ಳುವುದಾಗಿಯೂ ತಿಳಿಸಿದ್ದಾರೆ.

ಸ್ಟೇಟಸ್ ರಿಪೋರ್ಟ್ ವಿವರ

ವಿವಾದಿತ ಜಮೀನು ಡಿನೋಟಿಫೈಗೆ ಮೊದಲು ದೇವರಾಜು ತಂದೆಯಿಂದ ದೇವರಾಜು ಸಹೋದರನಿಗೆ ನಂತರ ದೇವರಾಜುಗೆ ಬಂದಿತ್ತು, ಆದರೆ, ಜಮೀನುಗಳನ್ನು ಕುಟುಂಬಸ್ಥರೇ ವರ್ಗಾವಣೆ ಮಾಡಿಕೊಂಡಿದ್ದರು, ಜಮೀನು ಮಾಲೀಕತ್ವ ವರ್ಗಾವಣೆ ಬಗ್ಗೆ ಸರ್ಕಾರಿ ದಾಖಲೆಯಲ್ಲಿ ನಮೂದಿಸದೇ ಇರುವುದು ಅವರ ಕುಟುಂಬಸ್ಥರು ಮಾಡಿದ್ದ ನಿರ್ಲಕ್ಷ್ಯ ಎಂಬ ಮಾಹಿತಿ ನೀಡಿದ್ದಾರೆ.

ದೇವರಾಜು ತನಗೆ ಬಂದ ಕೃಷಿ ಭೂಮಿಯನ್ನು ಮಲ್ಲಿಕಾರ್ಜುನಸ್ವಾಮಿ ಎಂಬುವರಿಗೆ ಮಾರಾಟ ಮಾಡಿದ್ದರು, ಅವರು ಜಮೀನನ್ನು ಭೂಪರಿವರ್ತನೆ ಮಾಡಿಸಿಕೊಂಡಿರುತ್ತಾರೆ.

ಮುಡಾ ಹಾಗೂ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಭೂಪರಿವರ್ತನೆ ಬಗ್ಗೆ ಸರಿಯಾದ ಪರಿಶೀಲನೆ ಮಾಡಿಲ್ಲ, ಪರಿಶೀಲನೆ ನಡೆಸದೇ ಭೂಪರಿವರ್ತನೆ ಮಾಡಿದ್ದಾರೆ.

ಭೂಪರಿವರ್ತನೆಯಲ್ಲಿ ಮುಖ್ಯಮಂತ್ರಿ ಕುಟುಂಬ ಹಸ್ತಕ್ಷೇಪವಿಲ್ಲ ಅನ್ನೋದು ಸ್ಪಷ್ಟವಾಗಿದೆ, ಮಲ್ಲಿಕಾರ್ಜುನಸ್ವಾಮಿ ಮಾರಾಟ ಮಾಡಿದ ಮೇಲೆ ಅವರ ಕುಟುಂಬಕ್ಕೆ ಭೂಮಿ ಬಂತು.

50:50ರ ಅನುಪಾತ

ಮೈಸೂರು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ50:50ರ ಅನುಪಾತದಲ್ಲಿ 14 ಬಿಡಿ ನಿವೇಶನಗಳನ್ನು ಮುಖ್ಯಮಂತ್ರಿ ಅವರ ಕುಟುಂಬಕ್ಕೆ ನೀಡಿ ಮುಡಾ ಅಧಿಕಾರಿಗಳು ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಈ ನಿವೇಶನ ಪಡೆಯುವ ವೇಳೆ ಮುಖ್ಯಮಂತ್ರಿ ಅವರ ಕುಟುಂಬ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆಯೇ ಎಂಬ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮತ್ತಷ್ಟು ಮಾಹಿತಿ ಸಂಗ್ರಹಿಸಬೇಕಿದೆ, ಆದರೆ, ಇದುವರೆಗಿನ ತನಿಖೆಯಲ್ಲಿ ಅವರ ಕುಟುಂಬ ಹಸ್ತಕ್ಷೇಪ ಮಾಡಿರುವ ಮಾಹಿತಿ ಇಲ್ಲ.

ನಿವೇಶನಗಳ ಹಂಚಿಕೆ ಸಂದರ್ಭದಲ್ಲಿ ಮುಡಾ ಆಯುಕ್ತರಾಗಿದ್ದ ನಟೇಶ್ ಮತ್ತು ದಿನೇಶ್ ವಿಚಾರಣೆಗೆ ಸಿದ್ಧತೆ ಮಾಡಿಕೊಂಡಿದ್ದೇವೆ, ಮುಖ್ಯಕಾರ್ಯದರ್ಶಿಯವರು ಅನುಮತಿ ನೀಡುತ್ತಿದ್ದಂತೆ ಇಬ್ಬರು ಅಧಿಕಾರಿಗಳ ವಿಚಾರಣೆ ನಡೆಸಿ ನ್ಯಾಯಾಲಯ ನೀಡಿರುವ ಗಡುವಿನೊಳಗೆ ಪೂರ್ಣ ವರದಿ ನೀಡುವುದಾಗಿ ಮೈಸೂರು ಎಸ್‌ಪಿ ಅವರು, ಎಸ್‌ಪಿ ಅವರಿಗೆ ಮಾಹಿತಿ ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahlokayukta status reportmuda scammysuru lokayuktano interference of cm family
0 FacebookTwitterPinterestEmail
admin

previous post
ಮಹಾರಾಷ್ಟ್ರದಲ್ಲೂ ಕರ್ನಾಟಕವೇ ರಾಜಕೀಯ ಅಸ್ತ್ರ
next post
ಮುಡಾದ ಮಾಜಿ ಆಯುಕ್ತರ ಪ್ರಾಸಿಕ್ಯೂಷನ್

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ