Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬಿಪಿಎಲ್ ರದ್ದು ನಿಲ್ಲದಿದ್ದರೆ ತಹಸೀಲ್ ಕಚೇರಿಗೆ ಬೀಗ

by admin November 20, 2024
written by admin November 20, 2024 0 comments 2 minutes read
0FacebookTwitterPinterestEmail
150

ಬೆಂಗಳೂರು:ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ನೀಡಿರುವ ಬಿಪಿಎಲ್ ಪಡಿತರ ಚೀಟಿ ರದ್ದು ಪ್ರಕ್ರಿಯ ನಿಲ್ಲಿಸಬೇಕು, ಇಲ್ಲದಿದ್ದರೆ ತಹಸೀಲ್ದಾರ್ ಕಚೇರಿಗಳಿಗೆ ಬೀಗ ಹಾಕುವುದಾಗಿ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಇಂದಿಲ್ಲಿ ಎಚ್ಚರಿಸಿದ್ದಾರೆ.

ಬಿಜೆಪಿ ಹಿರಿಯ ನಾಯಕರಾದ ಡಾ.ಅಶ್ವತ್ಥನಾರಾಯಣ ಮತ್ತು ಕೆ.ಗೋಪಾಲಯ್ಯ ಅವರೊಂದಿಗೆ ನಗರದ ಕೆಲವು ಭಾಗಗಳಿಗೆ ಭೇಟಿ ನೀಡಿ, ರದ್ದುಗೊಂಡ ಬಿಪಿಎಲ್ ಪಡಿತರ ಚೀಟಿದಾರರ ಮನೆಗಳಿಗೆ ತೆರಳಿ ಅಹವಾಲು ಆಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ ಅನ್ನ ಕೊಡಬೇಕಾದ ಸರ್ಕಾರ ಖನ್ನ ಹಾಕುವ ಕೆಲಸ ಮಾಡುತ್ತಿದೆ, ಹಸಿವಿನಿಂದ ಸಾಯಬಾರದು ಎಂಬ ಪ್ರಜ್ಞೆ ಸರ್ಕಾರಕ್ಕೆ ಇಲ್ಲವೇ ಎಂದರು.

ಬಿಪಿಎಲ್ ಯಾರೂ ಶ್ರೀಮಂತರಲ್ಲ

ಬಿಪಿಎಲ್ ಕಾರ್ಡ್ ಕಳೆದುಕೊಂಡವರು ಯಾರೂ ಶ್ರೀಮಂತರಲ್ಲ, ಕಾರಿನಲ್ಲಿ ಓಡಾಡುವುದಿಲ್ಲ, 2 ವರ್ಷದ ಮಗು ಇರುವ ಮಹಿಳೆ ಗಾರ್ಮೆಂಟ್ ಕೆಲಸಕ್ಕೆ ಹೋಗಲು ಆಗುತ್ತಿಲ್ಲ, ವಿಕಲಚೇತನ ವ್ಯಕ್ತಿಯೊಬ್ಬರು ರಸ್ತೆ ಬದಿಯಲ್ಲಿ ಬಜ್ಜಿ ಮಾರಾಟ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಕೆಲಸಕ್ಕೆ ಹೋಗುತ್ತಿಲ್ಲ, ಇಂತಹ ಬಡ ಕುಟುಂಬದ ಜನರ ಮನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕನ್ನ ಹಾಕಿದ್ದಾರೆ ಎಂದರು.

ರಾಜ್ಯಕ್ಕೆ 14 ಬಜೆಟ್ ನೀಡಿದ ಸಿದ್ದರಾಮಯ್ಯ ಅವರಿಗೆ ಸಾಮಾನ್ಯ ಪ್ರಜ್ಞೆ ಇಲ್ಲ, ಬ್ಯಾಂಕ್‌ನಲ್ಲಿ ಸಾಲ ಪಡೆಯಲೂ ಆದಾಯ ತೆರಿಗೆ ವಿವರ ಸಲ್ಲಿಸಬೇಕಾಗುತ್ತದೆ, ಎಲ್ಲರೂ ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಎಂಬುದಾಗಿ ಕಣ್ಣಿಲ್ಲದ ಸರ್ಕಾರ ಹೇಳುತ್ತಿದೆ.

ಪ್ರಸ್ತುತ 11 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಿದ್ದು, ಇನ್ನೂ 14 ಲಕ್ಷ ಕಾರ್ಡ್‌ಗಳನ್ನು ರದ್ದುಪಡಿಸಲಾಗುತ್ತಿದೆ, ಇದಕ್ಕೂ ಮುನ್ನ ನೋಟಿಸ್ ನೀಡಿ, ಮಾಹಿತಿ ಪಡೆಯಬಹುದಿತ್ತು, ಅಧಿಕಾರಿಗಳು ಅಥವಾ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸದೆ ಕಚೇರಿಯಲ್ಲಿ ಕುಳಿತು ಬಿಪಿಎಲ್ ಕಾರ್ಡುಗಳನ್ನು ರದ್ದುಪಡಿಸುತ್ತಿದ್ದಾರೆ.

ನಕ್ಸಲ್ ಚಟುವಟಿಕೆ ನಿಗ್ರಹಕ್ಕೆ ವಿಕ್ರಂಗೌಡ ಎನ್‌ಕೌಂಟರ್
22 ಲಕ್ಷ ಕಾರ್ಡ್ ರದ್ದು ಗುರಿ

22 ಲಕ್ಷ ಕಾರ್ಡುಗಳನ್ನು ರದ್ದುಗೊಳಿಸಲು ಇಲಾಖೆಗೆ ಗುರಿ ನೀಡಲಾಗಿದೆ ಎಂಬ ಮಾಹಿತಿಯಿದೆ, ಒಮ್ಮೆ ಕೊಟ್ಟು ಮತ್ತೆ ಕಿತ್ತುಕೊಳ್ಳುತ್ತಿರುವ ಸರ್ಕಾರಕ್ಕೆ ಬಡವರ ಕಣ್ಣೀರು ಕಾಣಿಸುತ್ತಿಲ್ಲ.

ಕಾಂಗ್ರೆಸ್ ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿಲ್ಲ, ಅನುದಾನ ನೀಡದ್ದಕ್ಕೆ ಕಾಂಗ್ರೆಸ್ ಶಾಸಕರೇ ಸರ್ಕಾರದ ಕತ್ತುಪಟ್ಟಿ ಹಿಡಿದಿದ್ದಾರೆ, ದೂರು ಹೇಳುತ್ತಿದ್ದಾರೆ, ಶಾಸಕರು ಅನುದಾನವಿಲ್ಲದೆ ದಂಗೆ ಏಳುವ ಸ್ಥಿತಿಗೆ ತಲುಪಿದ್ದಾರೆ.

25 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಿದರೆ, ಮತ್ತೆ ಕಾರ್ಡ್ ನೀಡುವ ಪ್ರಕ್ರಿಯೆಯಿಂದ 20,000 ಕೋಟಿ ರೂ. ಸಂಗ್ರಹಿಸಬಹುದು, ಈ ಹಣವನ್ನು ಶಾಸಕರಿಗೆ ಕೊಟ್ಟು ಸಮಾಧಾನ ಮಾಡಬಹುದು ಎಂಬುದೇ ಬಿಪಿಎಲ್ ಕಾರ್ಡ್ ರದ್ದು ಮಾಡುವುದರ ಹಿಂದಿನ ಉದ್ದೇಶ, ಬಡವರ ಅನ್ನ ಕೀಳುತ್ತಿರುವ ಕಾಂಗ್ರೆಸ್ ನರಕಕ್ಕೆ ಹೋಗುವುದು ಗ್ಯಾರಂಟಿ ಎಂದರು.

ಸಹಾಯಧನ ಸಿಗುವುದಿಲ್ಲ

ಸರ್ಕಾರದ ಇಂತಹ ಕ್ರಮದಿಂದಾಗಿ ಬಡವರಿಗೆ ಯಾವುದೇ ಯೋಜನೆಗಳ ಲಾಭ ಸಿಗುವುದಿಲ್ಲ, ಸಹಾಯಧನ ಸಿಗುವುದಿಲ್ಲ, ಆದ್ದರಿಂದ, ಯಾವುದೇ ಕಾರಣಕ್ಕೂ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡಬಾರದು ಎಂದು ಬಿಜೆಪಿ ಆಗ್ರಹಿಸುತ್ತದೆ.

ಸರ್ಕಾರದ ಈ ಕ್ರಮದ ವಿರುದ್ಧ ಬಿಜೆಪಿ ತೀವ್ರ ಹೋರಾಟ ನಡೆಸಲಿದೆ, ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಲಾಗುವುದು, ರೇಷನ್ ಕಾರ್ಡ್ ನೀಡದಿದ್ದರೆ ಅಧಿಕಾರಿಗಳನ್ನು ಕೊಠಡಿಯಲ್ಲಿ ಹಾಕಿ ಕಚೇರಿಗೆ ಬೀಗ ಹಾಕುತ್ತೇವೆ, ಸರ್ಕಾರಕ್ಕೆ ನಿಜವಾಗಲೂ ತಾಕತ್ತಿದ್ದರೆ ಬೋಗಸ್ ಕಾರ್ಡ್ ಮಂಜೂರು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.

ಮಹಿಳೆಯರಿಗೆ ಶಕ್ತಿ ಯೋಜನೆಯಡಿ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣ ಯೋಜನೆ ರದ್ದು ಮಾಡುವ ಸುಳಿವನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೀಡಿದ್ದಾರೆ, ಮುಂದೆ ಉಚಿತ ವಿದ್ಯುತ್ ಯೋಜನೆಯೂ ರದ್ದಾಗಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bpl cardgovt. looting peopler.ashok
0 FacebookTwitterPinterestEmail
admin

previous post
ನಕ್ಸಲ್ ಚಟುವಟಿಕೆ ನಿಗ್ರಹಕ್ಕೆ ವಿಕ್ರಂಗೌಡ ಎನ್‌ಕೌಂಟರ್
next post
ಸಟ್ಟಾ ಬಜಾರ್‌ನಲ್ಲಿ ನಿಖಿಲ್ ಫಲಿತಾಂಶಕ್ಕೆ ಬೆಟ್ಟಿಂಗ್ !

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ