Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು

by admin November 22, 2024
written by admin November 22, 2024 0 comments 2 minutes read
0FacebookTwitterPinterestEmail
207

ನವದೆಹಲಿ:ಗ್ಯಾರಂಟಿ ಯೋಜನೆಗಳ ಈಡೇರಿಕೆ ಸಾಧ್ಯವಾಗದೆ ಬಡವರ ಮೇಲೆ ಪ್ರಹಾರ ಮಾಡುವುದನ್ನು ಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.

ಬಿಪಿಎಲ್ ಕಾರ್ಡ್ ವಿಷಯದಲ್ಲಿ ಒಂದೇ ಕಲ್ಲಿಗೆ ಎರಡು ಹಕ್ಕಿ ಹೊಡೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ, ಅನರ್ಹರ ಕಾರ್ಡ್ ಬದಲಿಸಲು ಆಕ್ಷೇಪವಿಲ್ಲ, ಆದರೆ, ಸಮರ್ಪಕ ಮಾನದಂಡವೇ ಇಲ್ಲದೆ ಪ್ಯಾನ್‌ಕಾರ್ಡ್, ಆದಾಯ ತೆರಿಗೆ ವಿಚಾರಗಳನ್ನು ಮುಂದಿಟ್ಟುಕೊಂಡು 10ರಿಂದ 20 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ವಜಾ ಮಾಡಿದೆ.

ಹಣ ಉಳಿತಾಯ ಕುತಂತ್ರ

ಬಿಪಿಎಲ್ ಕಾರ್ಡ್‌ಗೆ ಕತ್ತರಿ ಹಾಕಿದರೆ, ಗೃಹಲಕ್ಷ್ಮಿ ಹಣ ಉಳಿತಾಯ ಉಳಿತಾಯ ಆಗುತ್ತದೆ, 5 ಕೆಜಿ ಅಕ್ಕಿಗೆ ಕೊಡುವ ಹಣವೂ ಉಳಿಯಲಿದೆ, ಸಾವಿರಾರು ಕೋಟಿ ರೂ. ಉಳಿತಾಯಕ್ಕಾಗಿ ಈ ಕುತಂತ್ರಕ್ಕೆ ಮುಂದಾಗಿದ್ದಾರೆ.

ಬಿಪಿಎಲ್ ಕಾರ್ಡ್ ರದ್ದು ಮಾಡಿ ವಂಚನೆ ಮಾಡುವ ಸರ್ಕಾರ ಇದು, ಮನುಷ್ಯತ್ವ ಇದ್ದಿದ್ದರೆ ಬಡವರಿಗೆ ಬರೆ ಎಳೆಯಲು ಮುಂದಾಗುತ್ತಿರಲಿಲ್ಲ.

ಭರವಸೆ ಈಡೇರಿಸಲು ಸಾಧ್ಯವಾಗದೆ, ಹಣ ಕ್ರೋಡೀಕರಣ ಮಾಡಲಾಗದೆ ಮುಖ್ಯಮಂತ್ರಿ ಅಸಹಾಯಕರಾಗಿ ಭಾಗ್ಯಲಕ್ಷ್ಮಿ ಯೋಜನೆಗೆ ಕತ್ತರಿ ಹಾಕಿದ್ದಾರೆ, ಹಾಲಿನ ಪ್ರೋತ್ಸಾಹಧನ ಸುಮಾರು ಒಂದು ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಬಾಕಿ ಇದೆ, ಯಡಿಯೂರಪ್ಪ ಆಡಳಿತದಲ್ಲಿ ರೈತರಿಗೆ ನೀಡುತ್ತಿದ್ದ ಕಿಸಾನ್ ಸಮ್ಮಾನ್ ಯೋಜನೆಯ 4 ಸಾವಿರ ರೂ. ನಿಲ್ಲಿಸಿದ್ದಾರೆ.

ಕೇಂದ್ರದ ವಿರುದ್ಧ ದೂರು

ಸಿದ್ದರಾಮಯ್ಯ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ, ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ, ತಮ್ಮ ಹುಳುಕು ಮುಚ್ಚಿ ಹಾಕಲು ಎಲ್ಲ ವಿಚಾರದಲ್ಲೂ ಕೇಂದ್ರ ಸರ್ಕಾರವನ್ನು ದೂರುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಸಚಿವರು ಭ್ರಷ್ಟಾಚಾರ ವಿರುದ್ಧ ಮಾತನಾಡುತ್ತಾರೆ, ಕಾಂಗ್ರೆಸ್ ಆಡಳಿತದಲ್ಲಿ ವಾಲ್ಮೀಕಿ ನಿಗಮದ ಹಗರಣ ನಡೆದಿದೆ, ನೂರಾರು ಕೋಟಿ ರೂ. ಕೊಳ್ಳೆ ಹೊಡೆದು ಚುನಾವಣೆ ನಡೆಸಿ, ತನಿಖೆ ಎದುರಿಸುತ್ತಿದ್ದಾರೆ.

ಹಗರಣದ ಹಿನ್ನೆಲೆಯಲ್ಲಿ ಸಚಿವರು ರಾಜೀನಾಮೆ ಕೊಟ್ಟು ಜೈಲಿಗೆ ಹೋಗಿ ಬಂದಿದ್ದಾರೆ, 600 ಕೋಟಿ ರೂ. ಲಿಕ್ಕರ್ ಹಗರಣ ಬೆಳಕಿಗೆ ಬರುತ್ತಿದೆ, ಸ್ವತಃ ಮುಖ್ಯಮಂತ್ರಿಯೇ ತೇಪೆ ಹಚ್ಚುವ ಕೆಲಸ ಮಾಡಿದ್ದಾರೆ.

ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ
ಪ್ರಾಮಾಣಿಕ ತನಿಖೆ ನಡೆದಿಲ್ಲ

ಮೈಸೂರಿನ ಮುಡಾ ಹಗರಣದಲ್ಲಿ ಕಾಂಗ್ರೆಸ್‌ಗೆ ಅನುಕೂಲವಾಗುವಂತೆ ತನಿಖಾ ಸಮಿತಿ, ಆಯೋಗ ನೇಮಿಸಲಾಗುತ್ತಿದೆ, ಲೋಕಾಯುಕ್ತ ದುರುಪಯೋಗ ಮಾಡುತ್ತಿದ್ದಾರೆ, ಸಚಿವ ಬೈರತಿ ಸುರೇಶ್ ಹೆಲಿಕಾಪ್ಟರ್‌ನಲ್ಲಿ ಮೈಸೂರಿಗೆ ಹೋದದ್ದು, ಅಮಾನತು ಆಗಬೇಕಾದ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ವೆಂಕಟಾಚಲಪತಿ ಆಯೋಗದಿಂದ ತನಿಖೆ, ದಾಖಲಾತಿ ಭಸ್ಮ ಮಾಡಲಾಗಿದೆ, ಪ್ರಾಮಾಣಿಕ ತನಿಖೆ ನಡೆದಿಲ್ಲ ಎಂದರು.

ಮುಖ್ಯಮಂತ್ರಿ ಅವರ ಬಾಮೈದ, ಲೋಕಾಯುಕ್ತ ಅಧಿಕಾರಿಗಳನ್ನು ರಾತ್ರೋರಾತ್ರಿ ಭೇಟಿ ಮಾಡಿದ್ದಾರೆ, ಆರೋಪಿ ನಂ.1 ಸ್ಥಾನದಲ್ಲಿರುವ ಸಿದ್ದರಾಮಯ್ಯ ನಿಜವಾಗಿ ಪ್ರಾಮಾಣಿಕರಾಗಿದ್ದರೆ, ಮುಖ್ಯಮಂತ್ರಿ ಸ್ಥಾನದ ಘನತೆ, ಗೌರವ ಉಳಿಸುವ ಕಾಳಜಿ ಕಿಂಚಿತ್ತಾದರೂ ಇದ್ದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಿತ್ತು.

ಅಧಿಕಾರ ದುರುಪಯೋಗ ಪಡಿಸಿಕೊಂಡು ತನಿಖಾ ಸಂಸ್ಥೆಗಳ ಮೇಲೆ ಒತ್ತಡ ಹೇರಿ, ಅವರಿಗೆ ಬೇಕಾದಂತ ವರದಿ, ಕ್ಲೀನ್‌ಚಿಟ್ ಪಡೆಯುವ ಪ್ರಯತ್ನವನ್ನು ಸ್ವತಃ ಮುಖ್ಯಮಂತ್ರಿ ಮಾಡುತ್ತಿದ್ದಾರೆ, ಶೀಘ್ರದಲ್ಲೇ ಕ್ಲೀನ್ ಚಿಟ್ ಸಿಗಲಿದೆ ಎಂದರು.

ನಬಾರ್ಡ್ ವಿಷಯದಲ್ಲಿ ಕಪಟ ನಾಟಕ

ನಬಾರ್ಡ್ ವಿಷಯದಲ್ಲಿ ಸಿದ್ದರಾಮಯ್ಯನವರು ಕಪಟ ನಾಟಕ ಮಾಡುತ್ತಿದ್ದಾರೆ, ಹಣಕಾಸಿನ ಖಾತೆಯನ್ನೂ ಹೊಂದಿರುವ ಅವರು, ಕೇಂದ್ರ ಸರ್ಕಾರದಿಂದ ಬರುವ ಹಣದ ಕುರಿತು ಜನರಿಗೆ ತಪ್ಪು ಮಾಹಿತಿ ಕೊಡುತ್ತಿದ್ದಾರೆ.

ಬ್ಯಾಂಕ್‌ಗಳು ಶೇ. 40ರಷ್ಟು ಮೊತ್ತವನ್ನು ಆದ್ಯತಾ ವಲಯವಾದ ಕೃಷಿ ಕ್ಷೇತ್ರಕ್ಕೆ ಕೊಡುತ್ತಿರುವುದು ಸಿದ್ದರಾಮಯ್ಯನವರಿಗೆ ತಿಳಿದಿಲ್ಲವೇ, ಹಿಂದೆಂದೂ ಈ ಪ್ರಮಾಣದಲ್ಲಿ ನೀಡುತ್ತಿರಲಿಲ್ಲ, ಶೇ.58 ಕಡಿತ ಆಗಿದೆ ಎನ್ನುತ್ತಾರೆ, ಗುಜರಾತ್ ಸೇರಿ ಅನೇಕ ರಾಜ್ಯಗಳಿಗೂ ಇದೇ ರೀತಿ ಕಡಿತ ಮಾಡಲಾಗಿದೆ, ಎಲ್ಲ ಸತ್ಯ ಗೊತ್ತಿದ್ದರೂ ನಬಾರ್ಡ್‌ನಿಂದ ಅನ್ಯಾಯ ಆಗುತ್ತಿದೆ ಎಂಬುದಾಗಿ ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದು, ಇಂತಹ ಹೇಳಿಕೆಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಗೌರವ ಬರುವುದಿಲ್ಲ ಎಂದರು.

ಕಾಂಗ್ರೆಸ್ ಸರರ್ಕಾರ ಉರುಳಿಸುವಲ್ಲಿ ಬಿಜೆಪಿ, ಆಸಕ್ತಿ ಹೊಂದಿಲ್ಲ, ನಿಮ್ಮ ನಡವಳಿಕೆಯಿಂದ ಕಾಂಗ್ರೆಸ್ ಶಾಸಕರೇ ನಿಮ್ಮ ಸರ್ಕಾರದ ವಿರುದ್ಧ ದಂಗೆ ಏಳುವ ಪರಿಸ್ಥಿತಿ ನಿರ್ಮಾಣವಾಗಿದೆ, ಅಭಿವೃದ್ಧಿ ಇಲ್ಲದ ಆಡಳಿತ ವೈಖರಿಯೇ ಇದಕ್ಕೆ ಕಾರಣ.

ಆಡಳಿತ ಪಕ್ಷದ ಸಚಿವರು, ಶಾಸಕರಲ್ಲಿ ಮುಖ್ಯಮಂತ್ರಿಗಳ ಮೇಲಿನ ಭರವಸೆ ಕುಸಿದಿದೆ, ಶಾಸಕರ ಅಸಮಾಧಾನ ಭುಗಿಲೆದ್ದಿದ್ದು, ಈ ಸರಕಾರ ಬಹಳ ದಿನ ಉಳಿಯುವುದಿಲ್ಲ ಎಂಬುದು ಗೃಹ ಸಚಿವ ಪರಮೇಶ್ವರ್ ಅವರಿಗೂ ಅನಿಸಿದೆ, ಅದನ್ನೇ ಅವರು ಮೈಸೂರಿನಲ್ಲಿ ವ್ಯಕ್ತಪಡಿಸಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp state president b y vijayendracm siddaramaiah should resignnabarad loan
0 FacebookTwitterPinterestEmail
admin

previous post
ಚನ್ನಪಟ್ಟಣ ಸಮೀಕ್ಷೆ ತಲೆಕೆಳಗಾಗಿ ಕಾಂಗ್ರೆಸ್ ಗೆಲ್ಲುತ್ತೆ
next post
ಉಪಚುನಾವಣೆ ವಿಜಯಮಾಲೆ ಯಾರ ಕೊರಳಿಗೆ !

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ