Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ ಸಂಘಟನೆಗೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ

by KM Shivaraju November 27, 2024
written by KM Shivaraju November 27, 2024 0 comments 2 minutes read
0FacebookTwitterPinterestEmail
235

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ ನಿರ್ಧಾರ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಂಡದವರು ಬಿಜೆಪಿ ವಿರುದ್ಧವೇ ಹೋರಾಟ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಣ ಇಂದಿಲ್ಲಿ ಟೀಕಾ ಪ್ರಹಾರ ಮಾಡಿದೆ.

ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಇಂದು ಸಭೆ ಸೇರಿದ್ದ ಬಣ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ನ ದುರಾಡಳಿತ ವಿರುದ್ಧ ಹಾಗೂ ಬಿಜೆಪಿ ಸಂಘಟನೆಗೆ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದೆ.

ಸಭೆ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ವಿಷಯ ತಿಳಿಸಿದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿ.ಸಿ ಪಾಟೀಲ್, ಎಂ.ಪಿ. ರೇಣುಕಾಚಾರ್ಯ ಮತ್ತಿತರರು, ನವೆಂಬರ್ ೨೯ರಂದು ಪಕ್ಷದ ಉಳಿವಿಗಾಗಿ ಕೋಲಾರದ ಕುರುಡುಮಲೆ ಗಣೀಶನಿಗೆ ಪೂಜೆ ಸಲ್ಲಿಸಿ ನಂತರ ಮೈಸೂರು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದರು.

ಸರ್ಕಾರದ ಭ್ರಷ್ಟಾಚಾರವನ್ನು ಜನರಿಗೆ ತಿಳಿಸಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೈಬಲ ಪಡಿಸಲು, ಪಕ್ಷದ ನಿಷ್ಠರಾದ ನಾವು ರಾಜ್ಯಾದ್ಯಂತ ಸಭೆ ಮತ್ತು ಸಮಾವೇಶಗಳನ್ನು ನಡೆಸುತ್ತೇವೆ. ಯತ್ನಾಳ್ ಸೇರಿದಂತೆ ಮೂರು-ನಾಲ್ಕು ಜನರ ಗುಂಪು, ಸರ್ಕಾರದಿಂದ ತಮ್ಮ ಕೆಲಸ ಮಾಡಿಸಿಕೊಳ್ಳಲು ಸಿದ್ದರಾಮಯ್ಯ ಅವರ ತುತ್ತೂರಿಯಂತೆ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷದ ರಾಷ್ಟ್ರೀಯ ನಾಯಕರನ್ನು ಹಂಗಿಸುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಮ್ಮ ರಾಜ್ಯಾಧ್ಯಕ್ಷರ ವಿರುದ್ಧ ಹೇಳಿಕೆಗಳನ್ನು ನೀಡುತ್ತಾ ಪ್ರವಾಸ ಕೈಗೊಂಡಿದ್ದಾರೆ. ಇವರಿಗೆ ಯಾವುದೇ ಜಿಲ್ಲೆಯಲ್ಲೂ ಪಕ್ಷದ ನಾಯಕರು ಹಾಗೂ ಪಕ್ಷದ ಜಿಲ್ಲಾಧ್ಯಕ್ಷರ ಬೆಂಬಲ ಸಿಗುತ್ತಿಲ್ಲ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ವರಿಷ್ಠರನ್ನು ಒತ್ತಾಯಿಸುತ್ತೇವೆ, ನಿಷ್ಠರಾದ ನಾವೂ ರಾಜ್ಯಾಧ್ಯಕ್ಷರ ಪರವಾಗಿ ಯಾತ್ರೆ ಕೈಗೊಳ್ಳಲಿದ್ದೇವೆ ಎಂದರು.

ಬಸನಗೌಡ ಪಾಟೀಲ್ ಯತ್ನಾಳ್, ಮಾಜಿ ಸಚಿವರಾದ ಕುಮಾರಬಂಗಾರಪ್ಪ, ರಮೇಶ್ ಜಾರಕಿಹೊಳಿ ಮತ್ತಿತರರು ಪಕ್ಷದ ಅಧ್ಯಕ್ಷರ ಅನುಮತಿ ಪಡೆಯದೆ ಚಿಹ್ನೆಯನ್ನೂ ಬಳಸದೆ ಜನಜಾಗೃತಿ ಅಭಿಯಾನ ನಡೆಸುತ್ತಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ತಕ್ಷಣವೇ ವರಿಷ್ಠರು ಮಧ್ಯಪ್ರವೇಶಿಸಿ ಅಭಿಯಾನ ನಡೆಸದಂತೆ ಸ್ಪಷ್ಟ ಸೂಚನೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಿದ್ದು ಈಗ ಪಾದಯಾತ್ರೆ ನಡೆಸುತ್ತಿರುವವರಲ್ಲ. ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್. ಯತ್ನಾಳ್ ಬಣ ಯಡಿಯೂರಪ್ಪ, ವಿಜಯೇಂದ್ರ ಅವರನ್ನು ಟೀಕಿಸಿದರೆ ಮೋದಿ ಮತ್ತು ಅಮಿತ್ ಷಾ ಅವರನ್ನು ಟೀಕಿಸಿದಂತೆ.

ಯಡಿಯೂರಪ್ಪ ರಾಜಕೀಯಕ್ಕೆ ಬಂದಾಗ ಕೆಲವರು ಇನ್ನು ಕಣ್ಣೇ ಬಿಟ್ಟಿರಲಿಲ್ಲ, ಅಂಥವರು ಕೂಡ ನಾಲ್ಕು ಮಂದಿಯನ್ನು ಕಟ್ಟಿಕೊಂಡು ಪ್ರಚಾರಕ್ಕಾಗಿ ಅಭಿಯಾನ ಮಾಡುತ್ತಿದ್ದಾರೆ, ಇದಕ್ಕೆ ಕವಡೆಕಾಸಿನ ಕಿಮ್ಮತ್ತಿಲ್ಲ ಎಂದರು. ಯತ್ನಾಳ್, ನಿಮ್ಮ ಹೋರಾಟ ಯಾರ ವಿರುದ್ಧ, ಕಾಂಗ್ರೆಸ್ ವಿರುದ್ಧ ಇರಬೇಕು, ಮುಹಮ್ಮದ್ ಬಿನ್ ತುಘಲಕ್ ತರಹ ಪ್ರವಾಸ ಹೊರಟಿದ್ದು, ಸಿದ್ದರಾಮಯ್ಯ ಅಡಿಯಾಳಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಆರೋಪಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Big conventionBJP organizationDavangerefactional decisionFormer Chief Minister BSyyeddyurappa
0 FacebookTwitterPinterestEmail
KM Shivaraju

previous post
ಸಂಪುಟ ಪುನರ್ ರಚನೆ ಪಕ್ಷದ ವೇದಿಕೆಯಲ್ಲಿ ಚರ್ಚೆ
next post
ಕರ್ನಾಟಕ ಬಿಜೆಪಿ ಬೀದಿ ಜಗಳ ಶಮನಕ್ಕೆ ವರಿಷ್ಠರು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ