Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಚಿವ ಸಂಪುಟ ವಿಸ್ತರಣೆ ಸಮಯ ಬಂದಿಲ್ಲ

by admin November 29, 2024
written by admin November 29, 2024 0 comments 1 minutes read
0FacebookTwitterPinterestEmail
157

ಖಾಲಿ ಸಚಿವ ಸ್ಥಾನ ತುಂಬುವ ಚರ್ಚೆ ನಡೆದಿಲ್ಲ

ನವದೆಹಲಿ:ಸಂಪುಟ ವಿಸ್ತರಣೆಯ ಸಂದರ್ಭ ಬಂದಾಗ ಆಗುತ್ತದೆ, ಈಗ ಆ ಸಮಯ ಬಂದಿಲ್ಲ, ಒಂದು ಸಚಿವ ಸ್ಥಾನ ಖಾಲಿ ಇದ್ದು ಅದನ್ನು ತುಂಬುವ ಬಗ್ಗೆ ಚರ್ಚೆ ನಡೆದಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಗಾದಿ ಆಕಾಂಕ್ಷಿ ಎನ್ನುವ ಸಚಿವ ಕೆ.ಎನ್.ರಾಜಣ್ಣ ಹಾಗೂ ಸತೀಶ್ ಜಾರಕಿಹೊಳಿ ಮಾಧ್ಯಮಗಳ ಮುಂದೆ ರಾಜಕೀಯ ಚರ್ಚೆ ಮಾಡುವುದು ಯಾವ ಪಕ್ಷದವರಿಗಾಗಲೀ, ಯಾರಿಗೇ ಅಗಲಿ ಸೂಕ್ತವಾದುದಲ್ಲ, ಮಾಧ್ಯಮಗಳ ಮುಂದೆ ಮಾಡುವ ಚರ್ಚೆಯಿಂದ ರಾಜಕಾರಣ ನಡೆಯುವುದಿಲ್ಲ ಎಂದರು.

ಕೇಂದ್ರ ಸಚಿವರ ಸ್ಪಂದನೆ

ರಾಜ್ಯದ ವಿಚಾರಗಳು, ಅದರಲ್ಲೂ ಮುಖ್ಯವಾಗಿ ನೀರಾವರಿ ವಿಷಯವಾಗಿ ಮನವಿ ಸಲ್ಲಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುತ್ತಿದೆ, ಗುರುವಾರ ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಹಾಗೂ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಕಳಸಾ-ಬಂಡೂರಿ ಯೋಜನೆಯಲ್ಲಿ ಪರಿಸರ ಇಲಾಖೆಯಿಂದ ಬಾಕಿ ಇರುವ ಅನುಮತಿ ಹಾಗೂ ಅಡೆತಡೆಗಳ ನಿವಾರಣೆ ಕೋರಿ ಮನವಿ ಸಲ್ಲಿಸಿದ್ದೆವು, ಇಬ್ಬರೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ವನ್ಯಜೀವಿ ಮಂಡಳಿಗೆ ಪ್ರಧಾನಿ ಅವರೇ ಅಧ್ಯಕ್ಷರಾಗಿರುವ ಕಾರಣಕ್ಕೆ ಅವರಿಗೂ ಮನವಿ ಸಲ್ಲಿಸಲಾಗುವುದು ಎಂದರು.

ಕಾಂಗ್ರೆಸ್‌ನ ಸಾಧನಾ ಸಮಾವೇಶ ಸಿದ್ದರಾಮಯ್ಯ ಅವರ ಸಮಾರಂಭವಾಗಿ ಬದಲಾಗಿದೆ ಎಂಬ ಕುರಿತ ಅಸಮಾಧಾನ ಪತ್ರವು ಪಕ್ಷದ ದೆಹಲಿ ಎಐಸಿಸಿ ವರಿಷ್ಠರಿಗೆ ತಲುಪಿರುವ ಬಗ್ಗೆ ನನಗೆ ಮಾಹಿತಿಯಿಲ್ಲ, ಸಮಾವೇಶ ಯಾವ ಕಾರಣಕ್ಕೆ ನಡೆಸಲಾಗುತ್ತಿದೆ ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ನನಗೆ ಈಗಾಗಲೇ ಮೊದಲೇ ತಿಳಿಸಿದ್ದಾರೆ.

ಮಿಕ್ಕ ವಿಚಾರಗಳು ನನಗೆ ಗೊತ್ತಿಲ್ಲ, ಮುಖ್ಯಮಂತ್ರಿ ಹಾಗೂ ತಾವು ಭೇಟಿ ಆಗಿ ಮೂರ‍್ನಾಲ್ಕು ದಿನಗಳಾಗಿವೆ, ಸಮಾವೇಶದಲ್ಲಿ ಪಕ್ಷದ ಭಾಗವಹಿಸುವಿಕೆ ಖಂಡಿತ ಇದ್ದೆ ಇರುತ್ತದೆ.

ರಾಹುಲ್, ಪ್ರಿಯಾಂಕಾಗೆ ಸಿದ್ದರಾಮಯ್ಯ ಅಭಿನಂದನೆ
ಬೆಳಗಾವಿ ಕಾಂಗ್ರೆಸ್ ಅಧಿವೇಶನ

ಸ್ವಾತಂತ್ರ್ಯಾ ಪೂರ್ವದಲ್ಲಿ ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಮಹಾತ್ಮ ಗಾಂಧಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ರೂಪುರೇಷೆ ಕುರಿತು ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದೆ.

ಡಿಸೆಂಬರ್ 28ರಂದೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಇರುವ ಕಾರಣ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಬಳಿ ಕಾರ್ಯಕ್ರಮ ಕುರಿತು ನಡೆಸಿದ ಚರ್ಚೆ ಹಾಗೂ ಸಲಹೆ, ಸೂಚನೆಗಳಿಗೆ ಸಂಬಂಧಿಸಿದಂತೆ ಖರ್ಗೆ ಅವರೊಂದಿಗೆ ಚರ್ಚಿಸಲಾಯಿತು.

ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ನಾಯಕರು ಭಾಗವಹಿಸುವ ನಿರೀಕ್ಷೆ ಇದೆ, ಕಾರ್ಯಕ್ರಮ ಕರ್ನಾಟಕದಲ್ಲಿ ನಡೆಯಬೇಕು ಎಂಬ ಅಭಿಲಾಷೆ ಹೊಂದಿದ್ದು, ಪಕ್ಷದ ಕಾರ್ಯಕಾರಿ ಸಭೆಯಲ್ಲಿ ಚರ್ಚಿಸಿ ತಿಳಿಸುವುದಾಗಿ ಖರ್ಗೆ ತಿಳಿಸಿದ್ದಾರೆ, ನಾನು ಮತ್ತು ಮುಖ್ಯಮಂತ್ರಿ ಇಬ್ಬರು ಈ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದರು.

ರಾಂಚಿಯಲ್ಲಿ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೋರೆನ್ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಕ್ಷದ ಪರವಾಗಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಾನು ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿ, ಹೇಮಂತ್ ಅವರಿಗೆ ಶುಭ ಕೋರಿದೆವು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dcm d k shivakumarno cabinet expansionno filling of vacant minister post
0 FacebookTwitterPinterestEmail
admin

previous post
ರಾಹುಲ್, ಪ್ರಿಯಾಂಕಾಗೆ ಸಿದ್ದರಾಮಯ್ಯ ಅಭಿನಂದನೆ
next post
ಯತ್ನಾಳ್ ವಿರುದ್ಧ ಕ್ರಮಕ್ಕೆ ವಿಜಯೇಂದ್ರ ಬಣ ಆಗ್ರಹ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ