Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣ

ಕಾಂಗ್ರೆಸ್ ಹಡಗಿಗೆ ಕೃಷ್ಣ ಹತ್ತಿದ ಕತೆ

by admin December 10, 2024
written by admin December 10, 2024 0 comments 2 minutes read
0FacebookTwitterPinterestEmail
222

ಅವತ್ತು ದಿಲ್ಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು, ಸಭೆಯೇನೋ ಆರಂಭವಾಯಿತು, ಆದರೆ, ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧಿ ಒಮ್ಮೆ ಗಂಟಲು ಸವರಿಕೊಂಡರು, ಅದೇಕೋ ಗಂಟಲು ಕೈ ಕೊಟ್ಟಿತ್ತು.

ಹೀಗಾಗಿ ತಮ್ಮೆದುರಿಗಿದ್ದ ಕಾರ್ಯಸೂಚಿಯನ್ನು ಓದಲಾಗದ ಇಂದಿರಾಗಾಂಧಿ ಮೌನವಾಗಿ ಸಭೆಯ ಸುತ್ತ ಕಣ್ಣಾಡಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಗಣ್ಯ ಅತಿಥಿಗಳು ತಮ್ಮತ್ತಲೇ ನೋಡುತ್ತಿದ್ದಾರೆ, ಹೀಗಾಗಿ ಮುಂದೇನು ಮಾಡಬೇಕು ಅಂತ ಇಂದಿರಾ ಯೋಚಿಸುತ್ತಿದ್ದಂತೆಯೇ ಸಭೆಯ ಕೊನೆಯಲ್ಲಿ ನಿಂತಿದ್ದ ಯುವ ಸಂಸದರೊಬ್ಬರು ಅವರ ಕಣ್ಣಿಗೆ ಕಾಣಿಸಿದ್ದಾರೆ, ಆ ಯುವ ಸಂಸದರ ಕತೆಯಾದರೂ ಅಷ್ಟೇ, ಅವರಿಗೆ ಸಭೆಯಲ್ಲಿ ಕೂರಲು ಖುರ್ಚಿ ಸಿಕ್ಕಿಲ್ಲ.

ಹೀಗಾಗಿ ಖುರ್ಚಿ ಹುಡುಕುತ್ತಿದ್ದ ಅವರಿಗೆ ಒಂದು ಖುರ್ಚಿ ಕಾಣಿಸಿದೆ, ಆದರೆ, ಖಾಲಿ ಇದ್ದ ಖುರ್ಚಿ ಸ್ವತಃ ಪ್ರಧಾನಿ ಇಂದಿರಾಗಾಂಧಿ ಅವರ ಪಕ್ಕದ್ದು.

ಹಾಗಂತಲೇ ಮುಂದೇನು ಮಾಡಬೇಕು ಎನ್ನುವಂತೆ ಅವರು ಇಂದಿರಾ ಕಡೆ ನೋಡಿದ್ದಾರೆ, ಆ ಕ್ಷಣದಲ್ಲಿ ಪ್ರಧಾನಿ ಇಂದಿರಾ ಮತ್ತು ಆ ಯುವ ಸಂಸದರ ಕಣ್ಣು ಪರಸ್ಪರ ಸಂಧಿಸಿದೆ.

ಹೀಗೆ ಪರಸ್ಪರ ಒಬ್ಬರನ್ನೊಬ್ಬರು ನೋಡುತ್ತಿದ್ದಂತೆಯೇ ಒಂದು ವಿಸ್ಮಯ ಸಂಭವಿಸಿದೆ.

ಅದೆಂದರೆ, ಇಂದಿರಾ ತಕ್ಷಣವೇ ಆ ಯುವ ಸಂಸದರನ್ನು ತಮ್ಮ ಬಳಿ ಬರುವಂತೆ ಸೂಚಿಸಿದ್ದಾರೆ, ಸ್ವತಃ ಪ್ರಧಾನಿಯೇ ತಮ್ಮ ಬಳಿ ಬರುವಂತೆ ಸೂಚಿಸಿದಾಗ ಸಂಸದ ಬೆರಗಾಗಿದ್ದಾರಾದರೂ ಅದೇ ಕಾಲಕ್ಕೆ ಪುಳಕಿತರಾಗಿದ್ದಾರೆ.

ಹೀಗಾಗಿ ಅದೇ ಭಾವದಲ್ಲಿ ಇಂದಿರಾ ಹತ್ತಿರ ಹೋದಾಗ ಅವರು ತಮ್ಮ ಪಕ್ಕದ ಖುರ್ಚಿಯಲ್ಲಿ ಕೂರುವಂತೆ ಸೂಚಿಸಿದ್ದಾರೆ.

ಹೀಗೆ ತಮ್ಮ ಪಕ್ಕ ಕುಳಿತ ಸಂಸದರ ಮುಂದೆ, ತಮ್ಮ ಮುಂದಿದ್ದ ಕಾರ್ಯಸೂಚಿಯನ್ನು ತಳ್ಳಿದ ಇಂದಿರಾ, ಸಭೆಯಲ್ಲಿ ಅದನ್ನು ಓದುವಂತೆ, ಸಭೆಯ ನಡಾವಳಿಗಳನ್ನು ನೋಡಿಕೊಳ್ಳಲು ಸೂಚಿಸಿದ್ದಾರೆ.

ದೇಶದ ಪ್ರಧಾನಿ ತಮಗೆ ನೀಡಿದ ಈ ಜವಾಬ್ದಾರಿಯನ್ನು ಆ ಸಂಸದರು ಎಷ್ಟು ಚೆನ್ನಾಗಿ ನಿರ್ವಹಿಸಿದ್ದಾರೆಂದರೆ ಅವರ ಅಸ್ಖಲಿತ ಭಾಷೆ ಇಂದಿರಾ ಸೇರಿದಂತೆ ಇಡೀ ಸಭೆಯನ್ನು ಮಂತ್ರಮುಗ್ಧಗೊಳಿಸಿದೆ.

ಹಾಗಂತಲೇ, ಸಭೆ ಮುಗಿದ ನಂತರ ಆ ಯುವ ಸಂಸದರನ್ನು ಮೆಚ್ಚುಗೆಯ ಕಣ್ಣುಗಳಿಂದ ನೋಡಿದ ಇಂದಿರಾ ತಮ್ಮ ಕೈಲಿದ್ದ ಒಂದು ಚೀಟಿಯನ್ನು ಕೊಟ್ಟಿದ್ದಾರೆ, ನೋಡಿದರೆ ಅದರಲ್ಲಿ ಕಮ್ ಅಂಡ್ ಮೀಟ್ ಮೀ ಅಂತ ಆಹ್ವಾನ.

ಹೀಗೆ ತಮ್ಮನ್ನು ಭೇಟಿ ಮಾಡಲು ಖುದ್ದು ಪ್ರಧಾನಿಯೇ ಆಹ್ವಾನ ನೀಡಿದ್ದಾರೆಂದರೆ ಸುಮ್ಮನಿರಲು ಸಾಧ್ಯವೇ, ಹೀಗಾಗಿ ಆ ಸಂಸದರು ನಿಗದಿತ ಸಮಯಕ್ಕೆ ಇಂದಿರಾ ಅವರ ಚೇಂಬರಿಗೆ ಹೋಗಿ ಭೇಟಿ ಮಾಡಿದ್ದಾರೆ, ಅಷ್ಟೊತ್ತಿಗಾಗಲೇ ಗಂಟಲು ಬೇನೆಯಿಂದ ಸ್ವಲ್ಪ ರಿಲೀಫ್ ಆಗಿದ್ದ ಇಂದಿರಾ ಯುವ ಸಂಸದರ ಪೂರ್ವಾಪರವನ್ನು ವಿಚಾರಿಸಿದ್ದಾರೆ.

ಆಗ ಆ ಸಂಸದರು, ಮೇಡಂ, ನನ್ನ ಹೆಸರು ಎಸ್.ಎಂ.ಕೃಷ್ಣ, ಕರ್ನಾಟಕದ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಪ್ರತಿನಿಧಿಯಾಗಿ ಸಂಸತ್ತಿಗೆ ಆಯ್ಕೆಯಾಗಿದ್ದೇನೆ ಅಂತ ವಿವರಿಸಿದ್ದಾರೆ.

ಆಗೆಲ್ಲ, ತುಂಬಾ ವಿಶ್ವಾಸದಿಂದ ಮಾತನಾಡಿದ ಇಂದಿರಾ ಅವರು, ನೀವು ಪ್ರಜಾ ಸೋಷಲಿಸ್ಟ್ ಪಾರ್ಟಿಯವರು ಏಕೆ ಹೋರಾಡುತ್ತಿದ್ದೀರೋ, ಅದನ್ನು ಜಾರಿಗೊಳಿಸಲೆಂದೇ ನಮ್ಮ ಪಕ್ಷ, ಸರ್ಕಾರ ಹೋರಾಡುತ್ತಿದೆ, ಹೀಗಾಗಿ ನೀವೆಲ್ಲ ಪ್ರತ್ಯೇಕವಾಗಿರುವ ಬದಲು ಕಾಂಗ್ರೆಸ್ ಪಕ್ಷಕ್ಕೇ ಬನ್ನಿ ಅಂತ ಆಹ್ವಾನ ನೀಡಿದ್ದಾರೆ.

ಹೀಗೆ ಪ್ರಧಾನಿ ನೀಡಿದ ಆಹ್ವಾನದ ಬಗ್ಗೆ ಪ್ರಜಾ ಸೋಷಲಿಸ್ಟ್ ಪಾರ್ಟಿಯ ಸಭೆಯಲ್ಲಿ ವಿವರಿಸಿದ್ದಾರಾದರೂ ಸಭೆ ಅದನ್ನು ಒಪ್ಪಿಲ್ಲ.

ಹೀಗಾಗಿ, ತಮ್ಮ ಪಕ್ಷದ ನಿಲುವನ್ನು ಕೃಷ್ಣ ಅವರು ಇಂದಿರಾಗೆ ಹೇಳಿದರೆ, ಯಾರೂ ಬರದಿದ್ದರೆ ನೀವಾದರೂ ಬನ್ನಿ, ನೀವು ಬೆಳೆಯುವ ದಾರಿ ದೊಡ್ಡದಿದೆ ಎಂದರಂತೆ.

ಇಂದಿರಾಗಾಂಧಿ ಅವರ ಈ ವಿಶ್ವಾಸಪೂರ್ವಕ ಆಹ್ವಾನವನ್ನು ತಿರಸ್ಕರಿಸಲು ಕೃಷ್ಣ ಅವರಿಗೆ ಸಾಧ್ಯವಾಗಲೇ ಇಲ್ಲ, ಹೀಗಾಗಿ ಒಂದು ದಿನ ಅವರು ಕಾಂಗ್ರೆಸ್ ಹಡಗು ಹತ್ತಿದರು, ಇಂದಿರಾ ಹೇಳಿದಂತೆ ತಮ್ಮ ಬದುಕಿನಲ್ಲಿ ಬಹುದೊಡ್ಡ ಹಾದಿಯನ್ನು ಕ್ರಮಿಸಿದರು.

ಆರ್.ಟಿ.ವಿಠ್ಠಲಮೂರ್ತಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresmeeting of congres mens m krishna and indira gandhi
0 FacebookTwitterPinterestEmail
admin

previous post
ವಿಶ್ವಭೂಪಟದಲ್ಲಿ ಬೆಂಗಳೂರು ಮೂಡಿಸಿದ ಧೀಮಂತ
next post
ಸಂಕಷ್ಟಗಳಲ್ಲೂ ಸಾಧನೆ ಶಿಖರ ಏರಿದ ಮೇರು ವ್ಯಕ್ತಿ

You may also like

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಅರಸು, ಕೃಷ್ಣ, ಯಡಿಯೂರಪ್ಪ ಅವರಿಗೆ ನಸೀಬು ಇತ್ತು

September 15, 2025

ಇತಿಹಾಸದ ಪುಟಗಳಲ್ಲಿ ರಾಚಯ್ಯ ನೆಲೆಸಿದ ಕತೆ

September 13, 2025

ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು

September 8, 2025

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

August 25, 2025

ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

June 4, 2025

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

May 19, 2025

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025

ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

February 17, 2025

ಅಮಿತ್ ಷಾ ಆಟ ಬಲ್ಲವರಾರು?

February 3, 2025

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ