Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯವಿಶ್ಲೇಷಣೆಶಿಕ್ಷಣ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಉತ್ತರಾಧಿಕಾರಿ

by KM Shivaraju December 15, 2024
written by KM Shivaraju December 15, 2024 0 comments 2 minutes read
0FacebookTwitterPinterestEmail
530
ನೂರಾರು ಮಠಾಧೀಶರ ಸಮ್ಮುಖದಲ್ಲಿ ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ಮಹೋತ್ಸವ

ಬೆಂಗಳೂರು : ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ನೂತನ ಪೀಠಾಧಿಪತಿಯಾಗಿ ಶ್ರೀ ನಿಶ್ಚಲಾನಂದನಾಥ ಮಹಾಸ್ವಾಮೀಜಿ ಅವರು ನೂರಾರು ಸ್ವಾಮೀಜಿಗಳ ಸಮ್ಮುಖದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಜವಾಬ್ದಾರಿ ವಹಿಸಿಕೊಂಡರು.

ಮೈಸೂರು ರಸ್ತೆಯ ಕೆಂಗೇರಿಯಲ್ಲಿರುವ ಮಠದ ಆವರಣದಲ್ಲಿ ಪೋಷಕರೊಂದಿಗಿನ ಸಂಬಂಧ ತ್ಯಾಗ, ಸನ್ಯಾಸತ್ವ ದೀಕ್ಷೆ ಸೇರಿದಂತೆ ಸಕಲ ವಿಧಿ ವಿಧಾನಗಳು ಶನಿವಾರ ರಾತ್ರಿಯಿಂದ ಭಾನುವಾರ ಬೆಳಗ್ಗೆವರೆಗೆ ನಡೆದವು. ಭಾನುವಾರ ಬೆಳಗ್ಗೆ ನಾಡಿನ ಗಣ್ಯ ಮಠಾಧೀಶರು, ಸಾವಿರಾರು ಜನರ ಸಮ್ಮುಖದಲ್ಲಿ ಡಾ.ಎಚ್.ಎಲ್.ನಾಗರಾಜ್ ಅವರು ನಿಶ್ಚಲಾನಂದನಾಥ ಮಹಾಸ್ವಾಮೀಜಿ ಆಗಿ ಪೀಠವನ್ನು ಅಲಂಕರಿಸಿದರು.

ಉತ್ತರಾಧಿಕಾರ ಮಹೋತ್ಸವದಲ್ಲಿ ಮಾತನಾಡಿದ ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಾಲನಂದನಾಥ ಸ್ವಾಮೀಜಿ, ನಾಗರಾಜ್ ಅವರು ನಿಶ್ಚಲಾನಂದನಾಥರಾಗಿ ಬದಲಾಗುವ ಸಂದರ್ಭದಲ್ಲಿ ಇಷ್ಟು ಜನ ಸೇರಿರುವುದು ಖುಷಿಯ ವಿಚಾರ. ನಾವೆಲ್ಲಾ ಒಂದೇ ಗುರು ಪರಂಪರೆಯವರು. ಕಾಲದ ಸಂದರ್ಭ ಇಂದು ನಿಶ್ಚಲಾನಂದನಾಥ ಸ್ವಾಮಿಗಳು ಕಂಕಣ ತೊಟ್ಟು ಸಮಾಜದ ಅಭಿವೃದ್ಧಿಗೆ ಪಟ್ಟ ತೊಟ್ಟಿದ್ದಾರೆ. ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರದ್ದು ನಾಲ್ಕು ದಶಕಗಳ ಪರಿಶ್ರಮವಿದೆ. ಒಕ್ಕಲಿಗರ ಮಹಾ ಸಂಸ್ಥಾನ ನಿನ್ನೆ ಮೊನ್ನೆ ಹುಟ್ಟಿದ್ದಲ್ಲ. ಚಂದ್ರಶೇಖರ ಶ್ರೀಗಳು ಸಮಾಜದಲ್ಲಿ ಸಾಕಷ್ಟು ಬದಲಾವಣೆ ತಂದು ಎತ್ತರಕ್ಕೆ ಕೊಂಡೊಯ್ದಿದ್ದಾರೆ. ಇನ್ನಷ್ಟು ಎತ್ತರಕ್ಕೆ ಈ ಮಠ ಮತ್ತು ಸಮಾಜವನ್ನು ಕೊಂಡೊಯ್ಯಲು ನಾಗರಾಜ್ ಅವರು ಸನ್ಯಾಸತ್ವ ಸ್ವೀಕರಿಸಿದ್ದಾರೆ ಎಂದರು.

ಹಾಲು ಜೇನಿನ‌ ರೀತಿಯಲ್ಲಿ ಬೆರೆತು ಸಂಸ್ಥಾನಗಳನ್ನು ನಡೆಸಿಕೊಂಡು ಹೋಗೋಣಾ. ಎರಡು ಮಠಗಳ ನಡುವೆ ಯಾವುದೇ ಸಮಸ್ಯೆ ಇಲ್ಲ. ಪೂಜ್ಯರು ಹೇಳಿದಂತೆ ಒಂದೇ ಗುರು, ಒಂದೇ ಸುಮುದಾಯ, ಒಂದೇ ತಾಯಿಯ ಮಕ್ಕಳಂತೆ ಮುಂದೆಯೂ ಕೂಡ ಯಾವುದೇ ರೀತಿ ಸಮಸ್ಯೆಗಳು ಬಾರದಂತೆ ನಡೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಶ್ರೀಮಠದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿ, ನನಗೆ 80 ವರ್ಷ ಆಗಿರುವುದರಿಂದ ಆರೋಗ್ಯ ಕ್ಷೀಣಿಸುತ್ತಾ ಇದೆ. ಹೀಗಾಗಿ, ಮುಂದಿನ ಉತ್ತರಾಧಿಕಾರಿ ಮಾಡಬೇಕು ಎನ್ನುವ ತೀರ್ಮಾನ ತೆಗೆದುಕೊಂಡೆವು. ಅದರಂತೆ ನಾವು ಎಚ್.ಎಂ ನಾಗರಾಜ್ ಅವರಿಗೆ ಇಂದು ಪಟ್ಟಾಭಿಷೇಕ ಮಾಡಿದ್ದೇವೆ. ನಾಡಿನ ಎಲ್ಲಾ ಶ್ರೀಗಳು ಬಂದಿದ್ದಾರೆ. ಬಹಳ ಸಂತೋಷವಾಗಿದೆ. ನಾಗಾರಾಜು ಅವರು ಇಡೀ ಕರ್ನಾಟಕಕ್ಕೆ ಪರಿಚಯವಾಗಬೇಕು ಅಂತ ಎಲ್ಲರನ್ನು ಕೇಳಿಕೊಂಡೆವು. ಹಾಗೇ ಎಲ್ಲರೂ ಬಂದು ಶುಭಕೋರಿದ್ದು ಬಹಳ ಸಂತೋಷವಾಗಿದೆ. ಬಡ ಜನರು ಎಂಜಿನಿಯರಿಂಗ್, ಮೆಡಿಕಲ್ ವಿದ್ಯಾಭ್ಯಾಸ ಮಾಡಲು ಕಾಲೇಜು ನಿರ್ಮಾಣದ ಸಂಕಲ್ಪ ಮಾಡಬೇಕಾಗಿದೆ. ನಿಮ್ಮೆಲ್ಲರ ಸಹಕಾರ ಬೇಕು ಎಂದರು.

ಮನುಷ್ಯನಾದವನು ಇಷ್ಟದೇವರನ್ನು ಪ್ರಾರ್ಥಿಸಬೇಕು. ತಂದೆ-ತಾಯಿ, ಮಕ್ಕಳನ್ನು ಹತೋಟಿಯಲ್ಲಿ ಬೆಳೆಸಬೇಕು. ದ್ವೇಷ ಅಸೂಯೆ ಬಿಡಬೇಕು. ದುಶ್ಚಟ ಬಿಡಬೇಕು. ಇವು ಮನುಷ್ಯನ ಮೂಲಮಂತ್ರವಾಗಬೇಕು. ಹೊಸ ಶ್ರೀಗಳು ಸ್ವಾರ್ಥಿಯಾಗಬಾರದು, ಪಕ್ಷಪಾತಿಯಾಗಬಾರದು, ಸುಳ್ಳು ಹೇಳಬಾರದು. ಜನರ ಅನೂಕೂಲಕ್ಕೆ ಶ್ರಮಿಸಬೇಕು ಎಂದು ಸ್ವಾಮೀಜಿ ಕರೆ ನೀಡಿದರು.

ನೂತನ ಪೀಠಾಧಿಪತಿ ನಿಶ್ಚಲಾನಂದನಾಥ ಸ್ವಾಮೀಜಿ ಮಾತನಾಡಿ, ನಾನು ಇಂದು ಸಮಾಜಕ್ಕೆ ಅರ್ಪಣೆಯಾಗಲು ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳು ಹಾಗೂ ಆದಿಚುಂಚನಗಿರಿ ಶ್ರೀಗಳು ಕಾರಣ ಎಂದರು.

ನಾನು ವೈಯಕ್ತಿಕವಾಗಿ ಬುದ್ದ, ಬಸವೇಶ್ವರ, ಗಾಂಧೀಜಿ, ಸ್ವಾಮಿ ವಿವೇಕಾನಂದರ ತತ್ವವನ್ನ ಅನುಸರಿಸಿದ್ದೇನೆ. ಸಮಾಜ ಸೇವೆಯೇ ವೃತ್ತಿ, ಪ್ರವೃತ್ತಿ, ಉಸಿರಾಗಿಸಿಕೊಂಡಿದ್ದೇನೆ. ನಿಷ್ಠೆಯ ಅಧಿಕಾರಿಗೆ ಮುಕ್ತ ಅವಕಾಶ ಇದೆ ಎನ್ನುವುದಕ್ಕೆ ಇದೇ ಉದಾಹರಣೆ. ಮಠದ ಅಭಿವೃದ್ಧಿಗೆ ಎಲ್ಲರ ಸಹಕಾರ ಬೇಕು ಎಂದು ಹೇಳಿದರು.

ನಾಡು ಕಂಡ ಮುತ್ಸದಿ ರಾಜಕಾರಣಿ, ಮಣ್ಣಿನ ಮಗ ಮಾಜಿ ಪ್ರಧಾನಮಂತ್ರಿ ನಮ್ಮೆಲ್ಲರ ಕಣ್ಮಣಿ ಹೆಚ್.ಡಿ.ದೇವೆಗೌಡರ ಆಶೀರ್ವಾದವು ನಮಗೆ ಸಿಕ್ಕಿತು. ಪರಮಪೂಜ್ಯ ಚಂದ್ರಶೇಖರನಾಥ ಶ್ರೀಗಳು ಉತ್ತಮ ಕಾರ್ಯಗಳೊಂದಿಗೆ ಉನ್ನತ ಸ್ಥಾನಕ್ಕೆ ಏರಲು ದೇವೇಗೌಡರೇ ಕಾರಣ. ಅವರ ಆಶೀರ್ವಾದ ಮಠದ ಮೇಲೆ ಸದಾ ಇರಲಿ. ನಾನು ಅಧಿಕಾರದಲ್ಲಿದ್ದಾಗ ಕೇಂದ್ರ ಸಚಿವ ಹೆಚ.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದೆ. ಅವರು ಕೂಡ ನಮಗೆ ಹಾರೈಸಿದ್ದರು. ಅವರನ್ನು ಕೂಡ ಇಂದು ನಾನು ಸ್ಮರೀಸುತ್ತೇನೆ ಎಂದು ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ಸಂಸ್ಥಾನ ಮಠಕ್ಕೆ ಹಲವರ ತ್ಯಾಗ ಕೊಡುಗೆ ಇದೆ. ನಾನು ಎಲ್ಲವನ್ನು ತ್ಯಾಗ ಮಾಡಿ ಬಂದಿದ್ದೇನೆ. ಅನೇಕರು, ಹಲವು ರೀತಿಯಾಗಿ ಹೇಳಿದರು. ಆದರೆ, ಭಾರತೀಯ ಧರ್ಮವನ್ನು, ಸಮಾಜದ ಕಾರ್ಯಕ್ಕೆ ನನ್ನನ್ನು ನಾನು ಸಮರ್ಪಣೆ ಮಾಡಿಕೊಳ್ಳುತ್ತಿದ್ದೇನೆ. ನಿರ್ಮಲಾನಂದನಾಥ ಶ್ರೀಗಳು ಕೂಡ ನನಗೆ ಸಲಹೆ ನೀಡಿದ್ದಾರೆ. ಹಿಂಜರಿಕೆ ಇಲ್ಲದೆ ನಾವಿಬ್ಬರೂ ಸಮಾಜವನ್ನು ಮುನ್ನಡೆಸೋಣಾ ಎಂದಿದ್ದಾರೆ ಎಂದು ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.

ಪಟ್ಟಾಧಿಕಾರ ಕಾರ್ಯಕ್ರಮಕ್ಕೆ ಆದಿಚುಂಚನಗಿರಿ ಶ್ರೀಗಳು ಬರುವುದಿಲ್ಲ ಎಂದು ಹಲವರು ಹೇಳಿದ್ದರು. ಆದರೆ, ಇವತ್ತು ನನ್ನ ಪಕ್ಕ ಕುಳಿತು ನನ್ನ ಶಕ್ತಿಯಾಗಿ ನಿಂತಿದ್ದಾರೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಹಾಲಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಕೆಲಸ ಮಾಡಿದ್ದೇನೆ. ನಾನು ಸರ್ಕಾರಕ್ಕೆ ಸದಾ ಋಣಿ ಆಗಿದ್ದೇನೆ ಎಂದು ಸ್ವಾಮೀಜಿ ಹೇಳಿದರು.

ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಮಾತನಾಡಿ, ನೂತನ ಪೀಠಾಧಿಪತಿಯವರು ಸಮುದಾಯ, ಸಮಾಜದ ಸೇವೆಯ ಉದ್ದೇಶದೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗಲಿ ಎಂದು ಶುಭ ಹಾರೈಸಿದರು.

ಪಟ್ಟಾಧಿಕಾರ ಮಹೋತ್ಸವದಲ್ಲಿ ನಿಡುಮಾಮಿಡಿ ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶಿಕೇಂದ್ರ ಮಹಾಸ್ವಾಮೀಜಿ, ಬೇಲಿಮಠದ ಶ್ರೀ ಶಿವಾನುಭವ ಚರಮೂರ್ತಿ ಮಹಾಸ್ವಾಮೀಜಿ, ಪಟ್ಟನಾಯಕನಹಳ್ಳಿ ಮಠದ ಶ್ರೀ ನಂಜಾವಧೂತ ಮಹಾಸ್ವಾಮೀಜಿ, ಶ್ರೀ ವಿನಯ್ ಗುರೂಜಿ ಸೇರಿದಂತೆ ನಾಡಿನ ವಿವಿಧ ಮಠಗಳ ಪೂಜ್ಯ ಸ್ವಾಮೀಜಿಗಳು ಉಪಸ್ಥಿತರಿದ್ದು, ನೂತನ ಪೀಠಾಧಿಪತಿಗಳಿಗೆ ಶುಭಾಶೀರ್ವಾದ ಮಾಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
festivalhundreds of pontiffsPresenceSri Nishchalanandanath MahaswamijiVishwa Okkaligara Mahasansthan Math
0 FacebookTwitterPinterestEmail
KM Shivaraju

previous post
ಬಿಜೆಪಿ ಹೋರಾಟಕ್ಕೆ ಪ್ರತಿಯಾಗಿ ಕಾಂಗ್ರೆಸ್ ಅಸ್ತ್ರ
next post
150 ಕೋಟಿ ರೂ. ಆಮಿಷ ಆರೋಪ ಸಿಬಿಐಗೆ ವಹಿಸಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ