Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪೋಲಿಸ್ ಬಳಸಿ ರಾಜಕೀಯ ವಿರೋಧಿಗಳ ಧಮನ

by admin December 23, 2024
written by admin December 23, 2024 0 comments 1 minutes read
0FacebookTwitterPinterestEmail
189

ಹಾಸನ:ಬೆರಳೆಣಿಕೆಯಷ್ಟು ಪೋಲಿಸ್ ಅಧಿಕಾರಿಗಳನ್ನು ಇಟ್ಟುಕೊಂಡು ರಾಜಕೀಯ ವಿರೋಧಿಗಳನ್ನು ಧಮನ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಹೊರಟಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಡಾ.ಜಿ.ಪರಮೇಶ್ವರ್ ಅವರನ್ನು ಗೃಹ ಸಚಿವರೆಂದು ಬಿಂಬಿಸಿಕೊಂಡು ಅವರ ಅರಿವಿಗೆ ಬಾರದಂತೆ ಕೆಲವು ಸಚಿವರು ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿರೋಧಿಗಳ ಧಮನಕ್ಕೆ ಹೊರಟಿದ್ದಾರೆ.

ಗೃಹ ಸಚಿವರು ಇದ್ದಾರಾ

ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವರು ಇದ್ದಾರಾ ಎಂದು ಪ್ರಶ್ನಿಸಿದ ಅವರು, ಕಳೆದ ಆರೇಳು ತಿಂಗಳಿಂದ ಹಲವಾರು ಪ್ರಕರಣಗಳು ನಡೆಯುತ್ತಿವೆ, ಕರ್ನಾಟಕಕ್ಕೆ ಭವಿಷ್ಯದಲ್ಲಿ ಅತ್ಯಂತ ಕೆಟ್ಟ ದಿಗಳು ಕಾದಿವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ವೈಷಮ್ಯ, ದ್ವೇಷ ಬೆಳೆಯಲು ಸಿದ್ದರಾಮಯ್ಯ ಸರ್ಕಾರ ಬೀಜ ಬಿತ್ತನೆ ಮಾಡಿದೆ, ಮುಂದೆಯೂ ಸಹಾ ಇಂತದ್ದೇ ಕೆಟ್ಟ ಪರಿಸ್ಥಿತಿ ಮುಂದುವರೆಯಲಿದೆ ಎಂಬುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದರು.

ರಾಜ್ಯದಲ್ಲಿ ಪೋಲಿಸ್ ವ್ಯವಸ್ಥೆ ಇಡೀ ದೇಶಕ್ಕೆ ಮಾದರಿಯಾಗಿತ್ತು, ನಮ್ಮ ಪೂರ್ವಿಕರು ಉತ್ತಮ ವಾತಾವರಣ ರೂಪಿಸಿದ್ದರು, ನಮ್ಮ ಪೋಲಿಸ್ ಎಂದರೆ, ರಾಷ್ಟ್ರದಲ್ಲಿ ಗೌರವ ಇತ್ತು, ದುರದೃಷ್ಟವೆಂದರೆ, ಅದೆಲ್ಲವನ್ನೂ ಸರ್ವ ನಾಶ ಮಾಡಲು ಈ ಸರ್ಕಾರ ಹೊರಟಿದೆ, ಪೋಲಿಸ್ ಗೌರವ ಮಣ್ಣುಪಾಲು ಮಾಡುವಲ್ಲಿ ಮುಂದಾಗಿದೆ.

ಘಟನೆ ಕುರಿತು ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುವೆ
ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಸಿ.ಟಿ.ರವಿ ಪ್ರಕರಣದಲ್ಲಿ ಬೆಳಗಾವಿ ಪೊಲೀಸರು ನಡೆದುಕೊಂಡ ರೀತಿಯ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ ಅವರು, ಬಿಜೆಪಿ ಸ್ನೇಹಿತರು ಸರಿಯಾದ ರೀತಿಯಲ್ಲಿ ಕಾನೂನು ಹೋರಾಟ ಮಾಡಿದರೆ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳು ಸಸ್ಪೆಂಡ್ ಆಗಲಿದ್ದಾರೆ.

ರಾಜ್ಯಸಭೆಯಲ್ಲಿನ ಅಮಿತ್ ಷಾ ಹೇಳಿಕೆ ಬಗ್ಗೆ ರಾಜ್ಯ ವಿಧಾನಸಭೆಯಲ್ಲಿ ಚರ್ಚೆ ಮಾಡಿದ್ದಾರೆ, ರಾಜ್ಯಸಭೆಯಲ್ಲಿ ಪ್ರಾರಂಭವಾದ ವಿಷಯ ಆ ಸದನಕ್ಕೆ ಸಂಬಂಧಪಟ್ಟಿದ್ದು, ಅಮಿತ್ ಷಾ ಅವರು ವಿಧಾನ ಪರಿಷತ್ ಸದಸ್ಯರೆ ಎಂದು ಖಾರವಾಗಿ ಪ್ರಶ್ನಿಸಿದರು.

ಸಿ.ಟಿ.ರವಿ ಅವರನ್ನು ರಾತ್ರಿಯೆಲ್ಲಾ ಸುತ್ತಿಸಬೇಕಿತ್ತಾ, ಅವರು ಒಬ್ಬ ಜನಪ್ರತಿನಿಧಿ, ಬಂಧಿಸುವುದಿದ್ದರೆ ನೇರವಾಗಿ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ಕರೆದುಕೊಂಡು ಬರಬಹುದಿತ್ತು, ರಾತ್ರಿಯೆಲ್ಲಾ ಸುತ್ತಿಸಬೇಕಾದ ಅವಶ್ಯಕತೆ ಏನಿತ್ತು, ಇದಕ್ಕೆಲ್ಲ ಯಾರು ಡೈರೆಕ್ಷನ್ ಕೊಟ್ಟವರು.

ಪ್ರತಿಫಲ ಎದುರಿಸಬೇಕಾಗುತ್ತದೆ

ಮಂತ್ರಿಯೊಬ್ಬರ ಚಿತಾವಣೆಯಿಂದ ಯಾವ ಅಧಿಕಾರಿಗಳು ಸಿ.ಟಿ.ರವಿಗೆ ಮಾನಸಿಕವಾಗಿ ಹಿಂಸೆ ಕೊಟ್ಟಿದ್ದಾರೋ ಅವರು ಅದರ ಪ್ರತಿಫಲ ಎದುರಿಸಬೇಕಾಗುತ್ತದೆ ಎಂದರು.

ಮಾಜಿ ಸಚಿವ ವಿನಯ್ ಕುಲಕರ್ಣಿ ಪ್ರಕರಣವನ್ನು ಏನು ಮಾಡಿದಿರಿ, ಕಾಂಗ್ರೆಸ್ ನಾಯಕ ಗುರಪ್ಪ ನಾಯ್ಡ ಮೇಲೆ ಶಿಕ್ಷಕರೊಬ್ಬರು ದೂರು ಕೊಟ್ಟರಲ್ಲ, ಆ ದೂರು ಏನಾಯಿತು, ರಾಜ್ಯದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಗಮನಿಸುತ್ತಿದ್ದೇನೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಾಜಕೀಯ ವಿರೋಧಿಗಳಿಗೆ ಹೇಗೆಲ್ಲಾ ಕಿರುಕುಳ ನೀಡಲಾಗುತ್ತಿದೆ ಎಂಬುದನ್ನು ನಾನು ಬಲ್ಲೆ, ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗಬಹುದು ಎನ್ನುವುದಕ್ಕೆ ಕಾಂಗ್ರೆಸ್‌ನವರು ವೇದಿಕೆ ಸಿದ್ಧ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahcongrs govt.h d kumara swamy
0 FacebookTwitterPinterestEmail
admin

previous post
ಘಟನೆ ಕುರಿತು ಪ್ರಧಾನಿ, ರಾಷ್ಟ್ರಪತಿಗೂ ಪತ್ರ ಬರೆಯುವೆ
next post
ಅನಾಗರಿಕತೆ ಪ್ರದರ್ಶಿಸಿದ ರಾಜ್ಯ ಕಾಂಗ್ರೆಸ್ ಸರ್ಕಾರ !

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ