ಬೆಂಗಳೂರು:ದೇಶ ಮತ್ತು ರಾಜ್ಯದಲ್ಲಿರುವುದು ಅಸಲಿ ಅಲ್ಲ, ನಕಲಿ ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧಿ ಮತ್ತು ಡಾ.ಅಂಬೇಡ್ಕರ್ ತತ್ವಗಳನ್ನು ಗಾಳಿಗೆ ತೂರಿದ ಕಾಂಗ್ರೆಸ್‌ಗೆ, ಅವರುಗಳ ಹೆಸರು ಹೇಳುವ ನೈತಿಕತೆ, ಯೋಗ್ಯತೆ ಇಲ್ಲ ಎಂದರು.
ದೇಶ ಒಡೆಯುವ ಕೆಲಸ
ಕಾಂಗ್ರೆಸ್‌ಗೆ ದೇಶದ ಅಖಂಡತೆ, ಸಮಗ್ರತೆ ಬಗ್ಗೆ ಬದ್ಧತೆ ಇಲ್ಲ, ದೇಶ ಒಡೆಯುವ ಕೆಲಸ ಮಾಡಿದ್ದಾರೆ, ಡಾ.ಬಾಬಾ ಸಾಹೇಬರಿಗೆ ಸಂಬಂಧಿಸಿದ 5 ಪ್ರಮುಖ ಸ್ಥಳಗಳನ್ನು ಪ್ರಧಾನಿ ನರೇಂದ್ರ ಮೋದಿ ಪಂಚತೀರ್ಥಗಳಾಗಿ ಅಭಿವೃದ್ಧಿ ಪಡಿಸಿದ್ದಾರೆ.
ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣ ಬಳಸಿಕೊಂಡು ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನ ಮಾಡುತ್ತಿರುವುದು ಸರಿಯಲ್ಲ, ನಕಲಿ ಕಾಂಗ್ರೆಸ್‌ನ ಈ ನೀತಿ ವಿರೋಧಿಸಿ ನಾಳೆ ಬೆಳಗ್ಗೆ 10-30ಕ್ಕೆ ಬೆಂಗಳೂರಿನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಧರಣಿ ನಡೆಸಲಿದ್ದಾರೆ ಎಂದರು.