Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಚಿನ್ ಪಾಂಚಾಳ್ ಆತ್ಮಹತ್ಯೆ ಘಟನೆಗೆ ಹೊಸ ಟ್ವಿಸ್ಟ್ !

by admin December 30, 2024
written by admin December 30, 2024 0 comments 1 minutes read
0FacebookTwitterPinterestEmail
218

ಬೆಂಗಳೂರು:ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆಗೂ ನನಗೂ ಸಂಬಂಧವಿಲ್ಲ, ಪ್ರಕರಣದಲ್ಲಿ ಸರ್ಕಾರಕ್ಕೆ ಮುಜುಗರ ಆಗುವುದಾದರೆ ತಾವು ಸಚಿವ ಸ್ಥಾನ ತೊರೆಯುವುದಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ಪಷ್ಟಪಡಿಸಿದ್ದಾರೆ.

ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ, ಘಟನೆಗೆ ಸಂಬಂಧಿಸಿದಂತೆ ಸಿಐಡಿ ಇಲ್ಲವೇ ಎಸ್‌ಐಟಿಯಿಂದ ತನಿಖೆ ನಡೆಸಿ ಎಂದು ಕೋರಿದ್ದಾರೆ.

ಡಾ. ಪರಮೇಶ್ವರ್ ಜೊತೆ ಚರ್ಚೆ

ಪ್ರಿಯಾಂಕ್ ಅವರ ಮನವಿ ಮೇರೆಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ ಅವರು, ಪ್ರಕರಣವನ್ನು ಸಿಐಡಿಗೆ ವಹಿಸುವಂತೆ ಸ್ಥಳದಲ್ಲೇ ಆದೇಶಿಸಿದರು.

ತನಿಖೆ ವರದಿ ಬರುವವರೆಗೂ ನಾನು ಸರ್ಕಾರದಿಂದ ಹೊರಗಿರುತ್ತೇನೆ, ಈ ಬಗ್ಗೆ ನೀವೇ ನಿರ್ಧಾರ ಕೈಗೊಳ್ಳಿ ಎಂದಿದ್ದಾರೆ.

ಗುತ್ತಿಗೆದಾರ ಯಾವ ಕಾರಣಕ್ಕೆ ಆತ್ನಹತ್ಯೆಗೆ ಶರಣಾಗಿದ್ದಾರೋ ನನಗೆ ತಿಳಿಯದು, ಆದರೆ, ಅವರ ಡೆತ್‌ನೋಟ್ ಬಗ್ಗೆ ನನಗೆ ಸಂಶಯ ಇದ್ದು, ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ಮಾಡಿಸಿ ಎಂದು ಮನವಿ ಮಾಡಿದ್ದಾರೆ.

ಡೆತ್‌ನೋಟ್‌ನಲ್ಲಿ ಖರ್ಗೆ ಆಪ್ತ ರಾಜು ಕಪನೂರ್ ಹೆಸರು
ರಾಜು ಕಪನೂರ್ ಮೇಲೆ ಆರೋಪ

ಕಲಬುರಗಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್‌ನ ಸ್ಥಳೀಯ ಮುಖಂಡ ರಾಜು ಕಪನೂರ್ ಅವರ ಮೇಲೆ ಆತ್ಮಹತ್ಯೆಗೂ ಮುನ್ನ ಗುತ್ತಿಗೆದಾರರು ಆರೋಪ ಮಾಡಿದ್ದಾರೆ.

ಪಕ್ಷದ ಕಾರ್ಯಕರ್ತರ ಜೊತೆ ನಮ್ಮ ಕುಟುಂಬ ಉತ್ತಮ ಬಾಂಧವ್ಯ ಹೊಂದಿದೆ, ಎಲ್ಲರನ್ನೂ ನಾವು ಗೌರವದಿಂದ ನೋಡುತ್ತೇವೆ.

ಸಭೆ, ಸಮಾರಂಭಗಳಲ್ಲಿ, ಪಕ್ಷದ ಕಾರ್ಯಕ್ರಮಗಳಲ್ಲಿ ನಾನು ಮುಖಂಡರ ಜೊತೆ ಭಾಗಿಯಾಗುತ್ತೇನೆ, ಕಪನೂರ್ ಜೊತೆ ಇರುವ ಕೆಲವು ಭಾವಚಿತ್ರಗಳನ್ನು ಬಿಜೆಪಿ ಮುಂದಿಟ್ಟುಕೊಂಡು ರಾಜಕೀಯ ಮಾಡುತ್ತಿದೆ.

ಸಂಬಂಧ ಕಲ್ಪಿಸುವ ಪಿತೂರಿ

ಬಿಜೆಪಿ ನಡವಳಿಕೆ ಬಗ್ಗೆ ನಾವು ಹಿಂದಿನಿಂದಲೂ ವಿರೋಧಿಸುತ್ತಿರುವುದಕ್ಕೂ, ಈ ಆತ್ಮಹತ್ಯೆ ಪ್ರಕರಣಕ್ಕೂ ನನಗೂ ಸಂಬಂಧ ಕಲ್ಪಿಸುವ ಪಿತೂರಿ ಪ್ರತಿಪಕ್ಷದಿಂದ ನಡೆದಿದೆ.

ಸಚಿವನಾಗಿ ಇಲಾಖೆ ಮತ್ತು ಕ್ಷೇತ್ರದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶ ನೀಡದಿರುವುದು ಕೆಲವರಿಗೆ ಮೂಗು ಮುರಿಯುವಂತೆ ಮಾಡಿದೆ.

ಪ್ರಕರಣದಲ್ಲಿ ನನ್ನದಾಗಲಿ, ನನ್ನ ಕುಟುಂಬದ್ದಾಗಲಿ ಯಾವುದೇ ಪಾತ್ರವಿಲ್ಲ, ಈ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ನಿಮಗೆ ಮುಕ್ತ ಅವಕಾಶವಿದೆ ಎಂದು ತಿಳಿಸಿದ್ದಾರೆ.

ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ
ಬಿಜೆಪಿ ಆರ್ಭಟ

ಪೂರ್ಣ ಮಾಹಿತಿ ಪಡೆದ ಮುಖ್ಯಮಂತ್ರಿ ಅವರು, ಯಾರೇ ಆತ್ಮಹತ್ಯೆ ಮಾಡಿಕೊಂಡರೂ, ಆಸ್ಪತ್ರೆಗಳಲ್ಲಿ ಸತ್ತರೂ ಸರ್ಕಾರವೇ ಹೊಣೆ ಎಂದು ಬಿಜೆಪಿ ಆರ್ಭಟಿಸುತ್ತದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವರ ಜೊತೆ ಸಮಾಲೋಚಿಸಿ ತನಿಖೆಗೆ ಆದೇಶ ಮಾಡುತ್ತೇನೆ, ಸದಸ್ಯಕ್ಕೆ ನೀವು ರಾಜೀನಾಮೆ ನೀಡುವು ಅಗತ್ಯವಿಲ್ಲ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcm siddaramaiahhome minister dr.g.parameshwarPriyank Khargesachin panchal suicide
0 FacebookTwitterPinterestEmail
admin

previous post
ಡೆತ್‌ನೋಟ್‌ನಲ್ಲಿ ಖರ್ಗೆ ಆಪ್ತ ರಾಜು ಕಪನೂರ್ ಹೆಸರು
next post
ಸಚಿನ್ ಆತ್ಮಹತ್ಯೆ: ಬಿಜೆಪಿ-ಕಾಂಗ್ರೆಸ್ ಪೋಸ್ಟರ್ ವಾರ್

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ