Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬಸ್ ಪ್ರಯಾಣ ದರ ಹೆಚ್ಚಳ : ಗಂಡಸರ ತೀವ್ರ ಆಕ್ರೋಶ

by admin January 4, 2025
written by admin January 4, 2025 0 comments 2 minutes read
0FacebookTwitterPinterestEmail
204

ಬೆಂಗಳೂರು:ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಪ್ರಯಾಣ ದರ ಹೆಚ್ಚಳ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದ್ದು ಗಂಡಸರ ಜೇಬಿಗೆ ಕತ್ತರಿ ಬಿಳಲಿದೆ.

ನಾಲ್ಕು ವರ್ಷಗಳ ನಂತರ ದರ ಹೆಚ್ಚಳ ಮಾಡಲು ಸರ್ಕಾರ ಅನುಮತಿ ನೀಡಿದ ಬೆನ್ನಲ್ಲೇ ಸಾರಿಗೆ ಸಂಸ್ಥೆ ನಿಗಮಗಳು ಶೇಕಡ 15ರಷ್ಟು ಪ್ರಯಾಣ ದರ ಹೆಚ್ಚಿಸಿ ಜಾರಿ ಮಾಡಿವೆ.

ಹೆಚ್ಚಳದಿಂದ ವಾರ್ಷಿಕ 1,800 ಕೋಟಿ ರೂ. ಸಂಗ್ರಹ ಗುರಿ ಇಟ್ಟುಕೊಂಡಿದ್ದು, ಮಹಿಳೆಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಎಂದಿನಂತೆ ಉಚಿತ ಪ್ರಯಾಣ ಸೇವೆ ಮುಂದುವರೆಯಲಿದೆ.

ಮಹಿಳೆಯರ ಉಚಿತ ಹೊರೆ

ಮಹಿಳೆಯರಿಗೆ ಉಚಿತ ಕೊಟ್ಟು ಅದರ ಹೊರೆಯನ್ನು ನಮ್ಮ ಮೇಲೆ ಹೇರುತ್ತಿದ್ದಾರೆಂದು ಪುರುಷರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಸರ್ಕಾರ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಮಾಡಿಕೊಂಡಿಲ್ಲ.

ದೂರದ ಊರುಗಳಿಗೆ ಸಂಚರಿಸುವ ಐಷಾರಾಮಿ ಮತ್ತು ವೇಗದೂತ ಬಸ್‌ಗಳ ದರ ಹೆಚ್ಚಳ ಶೇಕಡ 15ಕ್ಕಿಂತ ಹೆಚ್ಚಾಗಿದೆ.

ಈ ದರಗಳು ಖಾಸಗಿ ಬಸ್ ದರಗಳಿಗೆ ಹೋಲಿಸಿದರೆ, 300 ರೂ.ನಿಂದ 500 ರೂ.ಗಳವರೆಗೆ ಹೆಚ್ಚಿದೆ.

2,000 ಹೊಸ ಬಸ್

ಮುಂದಿನ ಆರು ತಿಂಗಳಲ್ಲಿ 2,000 ಹೊಸ ಬಸ್‌ಗಳು ನಿಗಮಗಳಿಗೆ ಸೇರ್ಪಡೆಗೊಳ್ಳುತ್ತಿದ್ದು, ಅವುಗಳಲ್ಲಿ ಹೆಚ್ಚಿನವು ಐಷಾರಾಮಿ ಮತ್ತು ಸ್ಲೀಪರ್ ಬಸ್‌ಗಳಾಗಿವೆ.

ಐಷಾರಾಮಿ ಮತ್ತು ವೇಗದೂತ ಬಸ್‌ಗಳಿಂದ ನಿಗಮಕ್ಕೆ ಹೆಚ್ಚು ಆದಾಯ ಬರುತ್ತಿರುವ ಹಿನ್ನೆಲೆಯಲ್ಲಿ ಅವುಗಳ ಸೇವೆ ಮತ್ತಷ್ಟು ಹೆಚ್ಚಿಸಲು ಹೊಸ ಬಸ್‌ಗಳನ್ನು ಖರೀದಿಸಲಾಗುತ್ತಿದೆ.

ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರದಲ್ಲಿನ ಸಾರಿಗೆ ದರ ಪ್ರತಿ ಕಿಲೋ ಮೀಟರ್‌ಗೆ ಹೋಲಿಸಿದರೆ ಕರ್ನಾಟಕದ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ತೀರಾ ಕಡಿಮೆಯಾಗಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

ಶೇಕಡ 15ರಷ್ಟು ದರ ಏರಿಕೆ

ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡ 33ರಷ್ಟು ಹಾಗೂ ಬಿಎಂಟಿಸಿ ಬಸ್ ಪ್ರಯಾಣ ದರವನ್ನು ಶೇಕಡ 42ರಷ್ಟು ಪರಿಷ್ಕರಿಸುವಂತೆ ಸರ್ಕಾರವನ್ನು ಕೋರಲಾಗಿತ್ತಾದರೂ, ಕೂಲಂಕಷ ಚರ್ಚೆ ನಂತರ ಸರ್ಕಾರ ಒಟ್ಟಾರೆಯಾಗಿ ಎಲ್ಲಾ ನಿಗಮಗಳು ಶೇಕಡ 15ರಷ್ಟು ದರ ಏರಿಕೆ ಮಾಡಲು ಅನುಮೋದನೆ ನೀಡಲಾಯಿತು ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮುಖ್ಯಕಾರ್ಯದರ್ಶಿ ನೇತೃತ್ವದ ಉನ್ನತ ಮಟ್ಟದ ಸಮಿತಿ ನೀಡಿದ ವರದಿಯ ಶಿಫಾರಸಿನ ಆಧಾರದ ಮೇಲೆ ದರ ಹೆಚ್ಚಳ ಜೊತೆಗೆ ಸಂಪನ್ಮೂಲ ಕ್ರೋಡೀಕರಣಕ್ಕೂ ಕೆಲವು ಕಾರ್ಯಕ್ರಮಗಳನ್ನು ಅಳವಡಿಸಿಕೊಳ್ಳಲು ಕಳೆದ ಗುರುವಾರ ಸೇರಿದ್ದ ಸಚಿವ ಸಂಪುಟ ಅನುಮೋದನೆ ನೀಡಿದೆ.

ನಿಗಮಗಳನ್ನು ಉಳಿಸುವ ಮತ್ತು ಕಾರ್ಮಿಕರ ವೇತನ ಮತ್ತು ಇತರೆ ಭತ್ಯೆ ಭರಿಸಲು ಹಣಕಾಸು ಸಂಸ್ಥೆಗಳಿಂದ 2,000 ಕೋಟಿ ರೂ. ಸಾಲ ಪಡೆಯಲೂ ಅನುಮತಿ ನೀಡಲಾಗಿದೆ.

ವೇತನ ಹೆಚ್ಚಳ, ಭತ್ಯೆ

ಸಾರಿಗೆ ನೌಕರರು ತಮ್ಮ ವೇತನ ಹೆಚ್ಚಳ ಮತ್ತು ಭತ್ಯೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಎಚ್ಚೆತ್ತುಕೊಂಡ ಸರ್ಕಾರ ಪ್ರಯಾಣ ದರ ಏರಿಕೆ ನಿರ್ಧಾರ ಕೈಗೊಂಡಿದೆ.

ಸಾರಿಗೆ ನಿಗಮದ ಬಸ್ ಪ್ರಯಾಣ ದರ ಹೆಚ್ಚಳದಿಂದ ಬೆಂಗಳೂರಿನಿಂದ ರಾಜ್ಯದ ಪ್ರಮುಖ ಊರುಗಳಿಗೆ ಸಂಚರಿಸುವ ಬಸ್‌ಗಳ ಟಿಕೆಟ್ ಎಷ್ಟಾಗಲಿದೆ ಎಂಬ ವಿವರ ಇಲ್ಲಿದೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಸದ್ಯ 501 ರೂ. ಇದ್ದು, ಹೆಚ್ಚಳದ ನಂತರ 576 ರೂ. ಆಗಲಿದೆ, ಬೆಂಗಳೂರಿನಿಂದ ಬೆಳಗಾವಿಗೆ ಸದ್ಯ 631 ರೂ. ಇದ್ದು, ಏರಿಕೆ ಬಳಿಕ 725 ರೂ. ಆಗಲಿದೆ, ಹಾಗೆಯೇ, ಕಲಬುರಗಿಗೆ 706 ರೂ.ನಿಂದ 811 ರೂ., ಮೈಸೂರಿಗೆ 185 ರೂ.ನಿಂದ 213 ರೂ. ಮಡಿಕೇರಿಗೆ 358 ರೂ.ನಿಂದ 411 ರೂ., ಚಿಕ್ಕಮಗಳೂರಿಗೆ 285 ರೂ.ನಿಂದ 328 ರೂ.

ಬೆಂಗಳೂರಿನಿಂದ ಹಾಸನಕ್ಕೆ ಸದ್ಯದ ಪ್ರಯಾಣ ದರ 246 ರೂ. ಇದ್ದು, ಏರಿಕೆ ನಂತರ 282 ರೂ. ಆಗಲಿದೆ, ಹಾಗೆಯೇ, ಮಂಗಳೂರಿಗೆ 424 ರೂ.ನಿಂದ 477 ರೂ., ರಾಯಚೂರಿಗೆ 556 ರೂ.ನಿಂದ 639 ರೂ., ಬಳ್ಳಾರಿಗೆ 326 ರೂ.ನಿಂದ 432 ರೂ. ಆಗಲಿದೆ.

ಬಿಎಂಟಿಸಿ ಬಸ್ ದರ

ಬೆಂಗಳೂರು ಮಹಾನಗರ ಸಾರಿಗೆ ನಿಗಮ (ಬಿಎಂಟಿಸಿ) ಸಹಾ ತನ್ನ ಬಸ್‌ಗಳ ಪುರುಷ ಪ್ರಯಾಣಿಕರಿಗೆ ದರ ಹೆಚ್ಚಳದ ಬಿಸಿ ಮುಟ್ಟಿಸಿದ್ದು, ರಾಜಧಾನಿಯ ಪ್ರಮುಖ ಬಸ್ ನಿಲ್ದಾಣವಾದ ಕೆಂಪೇಗೌಡ ಬಸ್ ನಿಲ್ದಾಣದಿಂದ ಜಯನಗರಕ್ಕೆ ಸದ್ಯದ ದರ 20 ರೂ. ಇದ್ದು, ಏರಿಕೆ ನಂತರ 23 ರೂ. ಆಗಲಿದೆ.

ಅಂತೆಯೇ, ಕೆಂಪೇಗೌಡ ಬಸ್ ನಿಲ್ದಾಣದಿಂದ ಸರ್ಜಾಪುರಕ್ಕೆ 25 ರೂ.ನಿಂದ 28 ರೂ., ಅತ್ತಿಬೆಲೆಗೆ 25 ರೂ.ನಿಂದ 28 ರೂ., ಹಾರೋಹಳ್ಳಿಗೆ 25 ರೂ.ನಿಂದ 28.75 ರೂ., ಬನಶಂಕರಿಗೆ 20 ರೂ.ನಿಂದ 23 ರೂ., ವಿಮಾನ ನಿಲ್ದಾಣಕ್ಕೆ 235 ರೂ.ನಿಂದ 270 ರೂ. ಆಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
15% hikebus fare hikeksrtc and bmtc
0 FacebookTwitterPinterestEmail
admin

previous post
ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ !
next post
ರಾಜ್ಯದಲ್ಲಿ ಮಾರಕ ಎಚ್‌ಎಂಪಿ ವೈರಸ್ ಪತ್ತೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ