Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರಶಿಕ್ಷಣ

ರಾಜ್ಯದಲ್ಲಿ ಮಾರಕ ಎಚ್‌ಎಂಪಿ ವೈರಸ್ ಪತ್ತೆ

by admin January 6, 2025
written by admin January 6, 2025 0 comments 2 minutes read
0FacebookTwitterPinterestEmail
195

ಆತಂಕ ಪಡುವ ಅಗತ್ಯವಿಲ್ಲ: ರಾಜ್ಯ ಸರ್ಕಾರದ ಪಷ್ಟನೆ

ಬೆಂಗಳೂರು:ಮಹಾಮಾರಿ ಕೋವಿಡ್-19 ಕೊನೆಗೊಂಡಿತೆಂದು ನೆಮ್ಮದಿಯ ಉಸಿರು ಬಿಡುವ ಬೆನ್ನಲ್ಲೇ ರಾಜ್ಯದಲ್ಲಿ ಚೀನಾದ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್‌ಎಂಪಿವಿ) ಪತ್ತೆಯಾಗಿ ಜನತೆಯನ್ನು ಬೆಚ್ಚಿಬೀಳಿಸಿದೆ.

ಎಚ್‌ಎಂಪಿ ವೈರಸ್ ರಾಜ್ಯದಲ್ಲಿ ಎರಡು ಶಿಶುಗಳಲ್ಲಿ ದೃಢಪಟ್ಟಿದೆ, ಆದರೆ, ಸರ್ಕಾರ, ಈ ವೈರಸ್ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.

ರಾಜ್ಯದಲ್ಲಿ ಕಂಡುಬಂದಿರುವ ಈ ವೈರಸ್‌ಗೂ ಚೀನಾದ ಲ್ಲಿ ಕಾಣಿಸಿಕೊಂಡಿರುವ ವೈರಸ್‌ಗೂ ಹೋಲಿಕೆ ಇದೆಯೇ ಎಂಬ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತ ಹೇಳಿದ್ದಾರೆ.

ಎರಡು ಶಿಶುಗಳಲ್ಲಿ ಪತ್ತೆ

ಎರಡು ವರ್ಷದೊಳಗಿನ ಶಿಶುಗಳಲ್ಲಿ ಶೀಘ್ರವಾಗಿ ಹರಡುವ ಈ ವೈರಸ್ ನಗರದಲ್ಲಿ 8 ಹಾಗೂ 3 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.

ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್‌ಎಂಪಿವಿ) ಎಂದು ಗುರುತಿಸಲಾದ ಈ ವೈರಸ್ ರೋಗ ಲಕ್ಷಣಗಳು ಕೋವಿಡ್-19ರಂತೆಯೇ ಇವೆ.

ನಗರದಲ್ಲಿ ಕಾಣಿಸಿಕೊಂಡ ಮೊದಲ ಪ್ರಕರಣದ ಪ್ರಕಾರ, 8 ತಿಂಗಳ ಮಗುವಿಗೆ ಕೆಲವು ದಿನಗಳ ಹಿಂದೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ರಕ್ತ ಪರೀಕ್ಷೆ ಮಾಡಿದಾಗ ಶಿಶುವಿನಲ್ಲಿ ಎಚ್‌ಎಂಪಿ ವೈರಸ್ ಇರುವುದು ಪತ್ತೆಯಾಗಿದೆ.

ಮತ್ತೊಂದು ಪ್ರಕರಣದಲ್ಲಿ, ನಗರದ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ಎಚ್‌ಎಂಪಿ ವೈರಸ್ ಇರುವುದು ದೃಢಪಟ್ಟಿದೆ, ಆದರೆ, ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಖಾಸಗಿ ಆಸ್ಪತ್ರೆಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ
ಮ್ಯೂಟೆಷನ್ ಆದ ಮಾಹಿತಿ ಇಲ್ಲ

ಎಚ್‌ಎಂಪಿ ವೈರಸ್ ಪತ್ತೆಯಿಂದ ಯಾರೂ ಆತಂಕ, ಗಾಬರಿ ಪಡುವ ಅಗತ್ಯವಿಲ್ಲ, ಎಚ್‌ಎಂಪಿ ವೈರಸ್ ಭಾರತದಲ್ಲೂ ಇದೆ, ಆದರೆ, ಅದು ಮ್ಯೂಟೆಷನ್ ಆಗಿರುವ ಕುರಿತು ಯಾವುದೇ ಮಾಹಿತಿ ಇಲ್ಲ.

ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂಬ ಬಗ್ಗೆಯೂ ಸ್ಪಷ್ಟ ಮಾಹಿತಿ ಇಲ್ಲ, ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್‌ಎಂಪಿ ವೈರಸ್ಸಾ ಅಥವಾ ಚೀನಾ ತಳಿಯೇ ಎಂಬ ಗೊಂದಲ ಇದೆ.

ಭಾರತದಲ್ಲೂ ಸಾಮಾನ್ಯ ಎಚ್‌ಎಂಪಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ, ಸದ್ಯ ಸೋಂಕು ಪತ್ತೆಯಾಗಿರುವ ಮಗು ಮತ್ತು ಅದರ ಕುಟುಂಬದವರು ಪ್ರವಾಸ ಮಾಡಿದ (ಟ್ರಾವೆಲ್ ಹಿಸ್ಟರಿ) ಮಾಹಿತಿ ಇಲ್ಲ, ಈ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಸೂಕ್ತ ಮುನ್ನೆಚ್ಚರಿಕೆ

ರಾಜ್ಯದಲ್ಲಿ ಪತ್ತೆಯಾಗಿರುವ ವೈರಸ್ ಬಗ್ಗೆ ಕೇಂದ್ರಕ್ಕೆ ಮಾಹಿತಿ ನೀಡಲಾಗಿದೆ, ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇವೆ, ಸೂಕ್ತ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ತಿಳಿಸಿದೆ.

ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾದ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ (ಎಚ್‌ಎಂಪಿವಿ) ಹೊಸದೇನಲ್ಲ, 2001ರಲ್ಲಿ ಈ ವೈರಸ್ ಕಂಡುಹಿಡಿಯಲಾಗಿತ್ತು ಎಂಬುದಾಗಿ ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ತಿಳಿಸದೆ.

ಕೊರೊನಾ ವೈರಸ್ ಒಂದು ಸಾಂಕ್ರಾಮಿಕ ಕಾಯಿಲೆ, ಇದು ಎಸ್ ಆರ್ ಎಸ್-ಸಿಒವಿ-2 ವೈರಸ್‌ನಿಂದ ಉಂಟಾಗುತ್ತದೆ, ಎಚ್‌ಎಂಪಿವಿ ಮತ್ತು ಕೊರೊನಾ ವೈರಸ್ ನಡುವೆ ಕೆಲವು ಹೋಲಿಕೆ ಇವೆಯಾದರೂ ಸದ್ಯದ ಪರಿಸ್ಥಿತಿಯಲ್ಲಿ ಎಚ್‌ಎಂಪಿ ವೈರಸ್‌ನಿಂದ ಭೀತಿ ಪಡುವ ಅಗತ್ಯವಿಲ್ಲ.

ಅಪಾಯಕ್ಕೆ ಒಳಗಾಗುವ ಸಾಧ್ಯತೆ

ಎರಡೂ ವೈರಸ್‌ಗಳು ಎಲ್ಲಾ ವಯೋಮಾನದವರಲ್ಲಿ ಉಸಿರಾಟದ ತೊಂದರೆಗೆ ಕಾರಣವಾಗುತ್ತದೆ, ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ರೋಗನಿರೋಧಕ ಶಕ್ತಿ ಕಡಿಮೆ ಇರುವವರು ಹೆಚ್ಚು ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇದೆ.

ಸದ್ಯದ ಪರಿಸ್ಥಿತಿಯಲ್ಲಿ ಎಚ್‌ಎಂಪಿ ವೈರಸ್ ಹರಡುವಿಕೆ ತಡೆಗಟ್ಟಲು ಯಾವುದೇ ಲಸಿಕೆ ಲಭ್ಯವಿಲ್ಲ, ಭಾರತದಲ್ಲಿ ಯಾವುದೇ ರೀತಿಯ ಆತಂಕ ಪಡಬೇಕಾದ ಅಗತ್ಯವೂ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
hmp virus found in bengaluruno need to panicstate govt. tells people
0 FacebookTwitterPinterestEmail
admin

previous post
ಬಸ್ ಪ್ರಯಾಣ ದರ ಹೆಚ್ಚಳ : ಗಂಡಸರ ತೀವ್ರ ಆಕ್ರೋಶ
next post
ಖಾಸಗಿ ಆಸ್ಪತ್ರೆಗಳಿಗೆ ಸಿದ್ದರಾಮಯ್ಯ ಎಚ್ಚರಿಕೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ