Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, September 5, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಲಂಚಮಯ ರಾಜ್ಯ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ

by admin January 7, 2025
written by admin January 7, 2025 0 comments 2 minutes read
0FacebookTwitterPinterestEmail
150

ಬೆಂಗಳೂರು:ರಾಜ್ಯ ಕಾಂಗ್ರೆಸ್ ಸರ್ಕಾರ ಲಂಚಮಯವಾಗಿದ್ದು, ಹಿಮಾಚಲಪ್ರದೇಶ, ಕೇರಳದಂತೆ ದಿವಾಳಿಯತ್ತ ಸಾಗುತ್ತಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ 60 ಪರ್ಸೆಂಟ್ ಕಮಿಷನ್ ಸರ್ಕಾರ ಎಂದಿದ್ದಾರೆ, ಮೊದಲು 40 ಪರ್ಸೆಂಟ್ ಇದ್ದ ಕಮಿಷನ್ ಈಗ 60 ಪರ್ಸೆಂಟ್ ಆಗಿದೆ, ಮುಂದೆ 65 ಪರ್ಸೆಂಟ್‌ಗೆ ಏರಿಸಲು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದರು.

40×60 ನಿವೇಶನದಲ್ಲಿ ಮನೆ ಕಟ್ಟಲು 20 ಲಕ್ಷ ರೂ. ಲಂಚ ಕೊಡಬೇಕು, ಕಳೆದ 6 ತಿಂಗಳಿನಿಂದ ಕಾಂಗ್ರೆಸ್ ಸರ್ಕಾರದಲ್ಲಿ 60 ಪರ್ಸೆಂಟ್ ಕಮಿಷನ್ ಇದೆ, ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಎಂಬುದಾಗಿ ಆರೋಪಿಸಿದ್ದ ಗುತ್ತಿಗೆದಾರರಿಂದಲೇ 40 ಪರ್ಸೆಂಟ್‌ಗಿಂತ ಹೆಚ್ಚು ಕಮಿಷನ್ ಕೀಳುತ್ತಿದ್ದಾರೆ.

ಕಮಿಷನ್ ಸರ್ಕಾರ

ಕಮಿಷನ್‌ಗಾಗಿ ಕಾಂಗ್ರೆಸ್ ಸರ್ಕಾರ ಇಡೀ ರಾಜ್ಯವನ್ನು ಕತ್ತಲೆಗೆ ದೂಡುತ್ತಿದೆ, ಹಿಟ್ನಾಳ್ ಸ್ವಲ್ಪ ಅಡ್ಜಸ್ಟ್ ಮಾಡ್ಕೊಳ್ಳಿ ಎಂದಿದ್ದರು, ಓಟ್ ಹಾಕುವಾಗಲೂ ಅಡ್ಜಸ್ಟ್ ಮಾಡ್ಕೊಳ್ಳಿ ಅಂತ ಹೇಳಬೇಕಿತ್ತು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಪಾಪರ್ ಮಾಡಿ ಬಿಡ್ತೀರಿ ನೀವು’ ಎಂದು ಕಾಂಗ್ರೆಸ್‌ನವರಿಗೆ ಹೇಳಿದ್ದಾರೆ, ಅಭಿವೃದ್ಧಿ ಕುಂಠಿತ ಆಗಿದೆ ಎಂಬುದಾಗಿ ರಾಜು ಕಾಗೆ ಸೇರಿದಂತೆ ಕಾಂಗ್ರೆಸ್ ಶಾಸಕರೇ ದಿನನಿತ್ಯ ಕೂಗಾಡುತ್ತಿದ್ದಾರೆ, ಕಾಂಗ್ರೆಸ್‌ನವರು ಮಾತ್ರ ಅಭಿವೃದ್ಧಿ ಆಗುತ್ತಿದ್ದಾರೆ ಎಂದರು.

ಕಮಿಷನ್ ಪ್ರಮಾಣವನ್ನು ಮುಂದಿನ ದಿನಗಳಲ್ಲಿ ಶೇ.5ರಷ್ಟು ಹೆಚ್ಚಿಸಲು ಕಾಂಗ್ರೆಸ್ ಮುಂದಾಗಿದೆ, ಗುತ್ತಿಗೆದಾರರು ಆತ್ಮಹತ್ಯೆಗೆ ಅರ್ಜಿ ಹಾಕಿಕೊಳ್ಳುವ ಕಾಲ ಬಂದಿದೆ.

ದಾಖಲೆ ಇದೆಯಾ

ರಾಜ್ಯಪಾಲರಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ, ಕಮಿಷನ್ ಕೇಳಿರುವುದಕ್ಕೆ ದಾಖಲೆ ಇದೆಯಾ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಳುತ್ತಾರೆ, ಈ ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಆರೋಪ ಮಾಡಿದ್ದಾಗ ದಾಖಲೆ ಕೊಟ್ಟಿದ್ದಿರಾ, ಇದ್ಯಾವ ನ್ಯಾಯ, ಇದು 60 ಪರ್ಸೆಂಟ್ ಲೂಟಿ ಸರ್ಕಾರ ಎಂಬ ಕುಮಾರಸ್ವಾಮಿ ಹೇಳಿಕೆ ಸಮರ್ಥಿಸುತ್ತೇನೆ ಎಂದರು.

ಬಜೆಟ್‌ನಲ್ಲಿ ಸಿದ್ದರಾಮಯ್ಯ ಮೋಸ ಮಾಡಿದ್ದಾರೆ, ಬಿಜೆಪಿಗಿಂತ ಹೆಚ್ಚು ಅಭಿವೃದ್ಧಿ ಮಾಡಿದ್ದೇವೆ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಹೆಚ್ಚು ಅನುದಾನ ಕೊಟ್ಟಿರುವುದಾಗಿ ಹೇಳಿಕೊಂಡಿದ್ದಾರೆ, ಆದರೆ, ಗಂಗಾ ಕಲ್ಯಾಣ ಯೋಜನೆಗೆ ಬಿಜೆಪಿ 60 ಕೋಟಿ ರೂ. ಕೊಟ್ಟಿತ್ತು, ಈಗ ಮೀಸಲಿಟ್ಟಿರುವುದು ಕೇವಲ 40 ಕೋಟಿ ರೂ. ಮಾತ್ರ.

ಡಾ.ಬಿ.ಆರ್.ಅಂಬೇಡ್ಕರ್ ಸ್ವಯಂ ಉದ್ಯೋಗ ಯೋಜನೆಗೆ ಬಿಜೆಪಿ ಸರ್ಕಾರ 100 ಕೋಟಿ ರೂ. ಮೀಸಲಿಟ್ಟಿತ್ತು, ಕಾಂಗ್ರೆಸ್ 45 ಕೋಟಿ ರೂ.ಗೆ ಇಳಿಸಿದೆ, ಆದಿಜಾಂಬವ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 100 ಕೋಟಿ ರೂ. ಕೊಟ್ಟರೆ, ಸಿದ್ದರಾಮಯ್ಯ 40 ಕೋಟಿ ರೂ. ನೀಡಿರುವುದು ದಲಿತರ ಮೇಲಿನ ಪ್ರೀತಿಯೇ, ಕಾಳಜಿಯೇ ಎಂದು ಪ್ರಶ್ನಿಸಿದರು.

ವಿಶ್ವಕರ್ಮ ಸಮುದಾಯಕ್ಕೆ ಕೇವಲ 13 ಕೋಟಿ ರೂ.

ದೇವರಾಜು ಅರಸು ಅಭಿವೃದ್ಧಿ ನಿಗಮಕ್ಕೆ ಬಿಜೆಪಿ ಸರ್ಕಾರ 190 ಕೋಟಿ ರೂ. ಕೊಟ್ಟರೆ, ಕಾಂಗ್ರೆಸ್ ಸರ್ಕಾರ ಕೊಟ್ಟಿರುವುದು 100 ಕೋಟಿ ರೂ. ಮಾತ್ರ, ವಿಶ್ವಕರ್ಮ ಸಮುದಾಯಕ್ಕೆ ಕೇವಲ 13 ಕೋಟಿ ರೂ. ನೀಡಿದ್ದು, ಸಂಗೊಳ್ಳಿರಾಯಣ್ಣ ಕ್ಷೇತ್ರ ಅಭಿವೃದ್ಧಿಗೆ 50 ಕೋಟಿ ರೂ. ಕೊಟ್ಟಿದ್ದಾರೆ.

ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಬಿಜೆಪಿ 15 ಕೋಟಿ ರೂ. ನೀಡಿದರೆ, ಕಾಂಗ್ರೆಸ್ ಸರ್ಕಾರ 5 ಕೋಟಿ ರೂ. ನೀಡಿದೆ, ವೀರಶೈವ ನಿಗಮಕ್ಕೆ 100 ಕೋಟಿ ರೂ. ಕೊಟ್ಟಿದ್ದೆವು, ಇವರು 50 ಕೋಟಿ ರೂ. ಕೊಟ್ಟಿದ್ದಾರೆ, ದೇವಾಲಯ ಹಾಗೂ ಇತರೆ ಧಾರ್ಮಿಕ ಸಂಸ್ಥೆಗಳಿಗೆ 274.68 ಕೋಟಿ ರೂ. ಕೊಟ್ಟಿದ್ದೆವು, ಕಾಂಗ್ರೆಸ್‌ನವರು 90 ಪರ್ಸೆಂಟ್ ಡಿಸ್ಕೌಂಟ್ ಮಾಡಿ, 17 ಕೋಟಿ ರೂ. ಕೊಟ್ಟಿದ್ದಾರೆ.

ಮಠ, ದೇವಾಲಯಗಳಿಗೆ, ಮುಖ್ಯಮಂತ್ರಿಗಳ ಸಹಾಯಧನಕ್ಕೆ ಬಿಜೆಪಿ ಅವಧಿಯಲ್ಲಿ 154.85 ಕೋಟಿ ರೂ. ನೀಡಿದ್ದರೆ, ಕಾಂಗ್ರೆಸ್ ಸರ್ಕಾರ 30 ಕೋಟಿ ರೂ. ಕೊಟ್ಟಿದೆ.

ಭೂಮಿಗೆಲ್ಲ ಕನ್ನ

ಕಬರ್‌ಸ್ತಾನ್ ಅಂತ ಇರೋಬರೋ ಭೂಮಿಗೆಲ್ಲ ಕನ್ನ ಹಾಕಿದ್ದಾರೆ, ಸಿದ್ದರಾಮಯ್ಯ ಹಿಂದೂಗಳಿಗೆ ಎಷ್ಟು ಕೊಟ್ಟಿದ್ದಾರೆ ಎಂಬುದನ್ನು ಗಮನಿಸಿದರೆ, ಹಿಂದೂ ರುದ್ರಭೂಮಿಗೆ 10 ಕೋಟಿ ರೂ. ಕೊಟ್ಟಿದ್ದಾರೆ, ಬಿಜೆಪಿ 15 ಕೋಟಿ ರೂ. ಕೊಟ್ಟಿತ್ತು.

ರೋಟಿ, ಕಪಡಾ, ಮಕಾನ್ ನೇಕಾರ್ ಯೋಜನೆಗೆ 125.77 ಕೋಟಿ ರೂ. ಬಿಜೆಪಿ ಕೊಟ್ಟಿದೆ, ಕಾಂಗ್ರೆಸ್ ಕೇವಲ 10 ಕೋಟಿ ರೂ. ಮಾತ್ರ ಕೊಟ್ಟಿದೆ ಎಂದು ಅಂಕಿ-ಅಂಶ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcm siddaramaiah budgetcongresr.ashok
0 FacebookTwitterPinterestEmail
admin

previous post
ಕೊತ ಕೊತ ಕುದಿಯುತ್ತಿದ್ದಾರೆ ಜಾರ್ಕಿಹೊಳಿ
next post
ಎಚ್‌ಎಂಪಿ ವೈರಾಣು: ನಿಗಾ ವಹಿಸಲು ಕೇಂದ್ರ ಸೂಚನೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ