Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಭೆಗೆ ಶಿವಕುಮಾರ್ ಆತಂಕ: ಮಾಧ್ಯಮಗಳ ಸೃಷ್ಟಿ

by admin January 9, 2025
written by admin January 9, 2025 0 comments 2 minutes read
0FacebookTwitterPinterestEmail
316

ಬೆಂಗಳೂರು:ಎಸ್‌ಸಿ, ಎಸ್‌ಟಿ ಸಭೆ ನಡೆಸಿದ ಬಗ್ಗೆ ಆತಂಕವಿದೆ ಎಂಬುದಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲಿಯೂ ಹೇಳಿಲ್ಲ, ಎಲ್ಲಾ ಮಾಧ್ಯಮ ಸೃಷ್ಠಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಅನೇಕ ವಿಶ್ಲೇಷಣೆಗಳಿಗೆ ಉತ್ತರಿಸಲು ಆಗುವುದಿಲ್ಲ, ಒಬ್ಬೊಬ್ಬರು ಒಂದೊಂದು ರೀತಿ ವಿಶ್ಲೇಷಣೆ ಮಾತನಾಡುತ್ತಾರೆ, ಡಿ.ಕೆ.ಶಿವಕುಮಾರ್ ತಮಗೆ ಆತಂಕವಿದೆ ಎಂಬುದಾಗಿ ಎಲ್ಲಿಯಾದರೂ ಹೇಳಿದ್ದಾರೆಯೇ, ಸುಮ್ಮನೆ ಹೇಳಬೇಡಿ, ನಿನ್ನೆ ಇಡೀ ದಿನ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ, ಪತ್ರಿಕಾಗೋಷ್ಠಿಯನ್ನೂ ನಡೆಸಿದ್ದೇವೆ, ನನಗೆ ನಿಮ್ಮ ಆತಂಕ ಇದೆ ಅಂತ ಅವರು ಹೇಳೇ ಇಲ್ಲ.

ನಂಬಿಕೆ ಪ್ರಶ್ನೆ ಬರುವುದಿಲ್ಲ

ನಮ್ಮ ಮೇಲೆ ಎಐಸಿಸಿಗೆ ನಂಬಿಕೆ ಇಲ್ಲವೆಂಬ ಪ್ರಶ್ನೆ ಬರುವುದಿಲ್ಲ, ಮಾಧ್ಯಮಗಳೇ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆ ಪ್ರಶ್ನೆ ಹುಟ್ಟು ಹಾಕುತ್ತಿವೆ.

ಸಭೆ ಬಗ್ಗೆ ಯಾರು ಆತಂಕಕ್ಕೆ ಒಳಗಾಗಿದ್ದಾರೆ, ನನಗೆ ಗೊತ್ತಿರುವ ಹಾಗೇ ಯಾವ ಆತಂಕನೂ ಇಲ್ಲ, ಯಾರೂ ಆತಂಕ ಪಡುವ ಅಗತ್ಯತೆಯೂ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದೇನೆ, ಪಕ್ಷದಿಂದ ಹೊರತಾಗಿ ಸಮಾವೇಶ ಮಾಡುತ್ತೇವೆ ಎಂಬುದಾಗಿ ನಾನು ಎಲ್ಲೂ ಹೇಳಿಲ್ಲ.

ಎಸ್‌ಸಿ, ಎಸ್‌ಟಿ ಸಮಾವೇಶ ಕುರಿತು ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ, ಎಐಸಿಸಿ ವರಿಷ್ಠರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಮೂಲಸೌಲಭ್ಯ
ಗೌಪ್ಯ ಸಭೆ ಏನೂ ಇಲ್ಲ

ಸಭೆ ಕುರಿತು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಮ್ಮೊಂದಿಗೆ ಮಾಹಿತಿ ಬಯಸಿದಾಗ, ’ಗೌಪ್ಯ ಸಭೆ ಏನೂ ಇಲ್ಲ, ನಮ್ಮ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆ ಸೇರುತ್ತಿದ್ದೇವೆ, ನೀವೂ ಬನ್ನಿ’ ಎಂದಾಗ, ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ, ದಿನಾಂಕ ತಿಳಿಸಿದ ನಂತರ ಮತ್ತೆ ಸಭೆ ನಿಗದಿ ಪಡಿಸುತ್ತೇವೆ ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ, ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ.

ದೆಹಲಿಯಲ್ಲಿ ಎಐಸಿಸಿ ಕಚೇರಿ ನಿರ್ಮಾಣಕ್ಕೆ ೨೦೦೯ರಲ್ಲಿ ಅಡಿಗಲ್ಲು ಹಾಕಲಾಗಿತ್ತು, ಕಟ್ಟಡ ನಿರ್ಮಾಣ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು, ಈಗ ಉದ್ಘಾಟನೆಗೆ ಸಿದ್ಧವಾಗಿದೆ, ಜನವರಿ ೧೫ರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.

ನಕ್ಸಲರ ಶರಣಾಗತಿ ತಪ್ಪೇನಿದೆ

ನಕ್ಸಲರು ಮುಖ್ಯಮಂತ್ರಿ ಕಚೇರಿಗೆ ಬಂದು ಶರಣಾಗುವುದರಲ್ಲಿ ತಪ್ಪೇನಿದೆ, ಮುಖ್ಯಮಂತ್ರಿ ಮುಂದೆ ಶರಣಾದಾಗ ನಕ್ಸಲ್ ಚಟುವಟಿಕೆಗೆ ಯುವಜನರು ಬರಬಾರದು ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪುತ್ತದೆ.

ನಕ್ಸಲರ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ, ಅದರಲ್ಲಿ ತಪ್ಪೇನಿದೆ, ಬಿಜೆಪಿ ಶಾಸಕ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ, ಎಎನ್‌ಎಫ್ ಕಾರ್ಕಳದಲ್ಲಿ ಇದೆ.

ನಕ್ಸಲರು ಶರಣಾದಾಗ ಅವರ ಬಳಿ ಶಸ್ತ್ರಾಸ್ತ್ರಗಳು ಇರಲಿಲ್ಲ, ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ, ಎಲ್ಲಿ ಎಸೆದು ಬಂದಿದ್ದಾರೆ ಎಂಬ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ, ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ.೯೯ರಷ್ಟು ಕೊನೆಗೊಂಡಿದೆ, ಶರಣಾಗತ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರೂ ಇದ್ದಾರೆ.

ಕರ್ನಾಟಕ ‘ಜೀನ್ಸ್ ಪಾರ್ಕ್’ ಸ್ಥಾಪನೆಗೆ ವಿದೇಶಿ ಹೂಡಿಕೆ
ಬೇರೆ ರಾಜ್ಯಗಳಲ್ಲೂ ಪ್ರಕರಣಗಳು

ಶರಣಾದ ನಕ್ಸಲರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ, ಆ ರಾಜ್ಯ ಸರ್ಕಾರಗಳೂ ತೀರ್ಮಾನ ಕೈಗೊಳ್ಳಬೇಕಿದ್ದು, ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ ಎಂದರು.

ತಿರುಪತಿಯಲ್ಲಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿರುವ ಘಟನೆ ದುರದೃಷ್ಟಕರ, ಈ ರೀತಿ ಆಗಬಾರದಿತ್ತು, ಮೃತರ ಕುಟುಂಬದವರಿಗೆ ಭಗವಂತನು ದುಃಖ ಭರಿಸುವ ಶಕ್ತಿ ಕರುಣಿಸಲಿ, ಘಟನೆಯಲ್ಲಿ ಕರ್ನಾಟಕದವರೂ ಇದ್ದರೆಂಬ ಮಾಹಿತಿ ಇಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres meetingd k shivakumardr.g.parameshwar
0 FacebookTwitterPinterestEmail
admin

previous post
ಸರ್ಕಾರಿ ವೈದ್ಯಕೀಯ ಕಾಲೇಜುಗಳಿಗೆ ಮೂಲಸೌಲಭ್ಯ
next post
ತೊಂದರೆ ಕೊಡುವವರಿಂದ ರಕ್ಷಣೆ ಕೊಡು ದೇವಾ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ