Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮುಖ್ಯಮಂತ್ರಿ ಗಾದಿಗೆ ಕಾಂಗ್ರೆಸ್ ಮಿಡ್‌ನೈಟ್ ಮೀಟಿಂಗ್!

by admin January 11, 2025
written by admin January 11, 2025 0 comments 2 minutes read
0FacebookTwitterPinterestEmail
297

ಬೆಂಗಳೂರು:ಕಾಂಗ್ರೆಸ್ಸಿಗರ ಮಿಡ್‌ನೈಟ್ ಮೀಟಿಂಗ್ ನಡುವೆ ಕರ್ನಾಟಕ ಬಡವಾಗುತ್ತಿದೆ, ಜನರು ಪರಿತಪಿಸುವಂತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪಕ್ಷದ ಕಾನೂನು ಪ್ರಕೋಷ್ಠದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೊರಗಿನಿಂದ ಬಂದವರು ಎಂಬುದು ಆಡಳಿತ ಪಕ್ಷದಲ್ಲಿನ ಕೆಲವರಿಗೆ ಅನಿಸಿದೆ, ಒಮ್ಮೆ 5 ವರ್ಷ ಮುಖ್ಯಮಂತ್ರಿಯಾಗಿ ಆಡಳಿತ ಮಾಡಿ, ಎರಡನೇ ಬಾರಿಗೆ 2 ವರ್ಷ ಪೂರೈಸಿದ್ದು, ಅಧಿಕಾರ ಬಿಟ್ಟುಕೊಡಬೇಕೆಂಬ ಚರ್ಚೆ ಕಾಂಗ್ರೆಸ್ಸಿನಲ್ಲಿ ಆರಂಭವಾಗಿದೆ ಎಂದರು.

ಅಧಿಕಾರ ಒದ್ದು ಕಿತ್ಕೋಬೇಕು

ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಹಳ ಮುಕ್ತವಾಗಿ ಮಾತನಾಡಿ, 25 ವರ್ಷಗಳ ಹಿಂದೆ ಅಂದಿನ ಮುಖ್ಯಮಂತ್ರಿ ತಮ್ಮನ್ನು ಮಂತ್ರಿಮಂಡಲಕ್ಕೆ ತೆಗೆದುಕೊಂಡಿರಲಿಲ್ಲ, ಆಗ ತಮ್ಮ ಗುರುಗಳು ‘ಅಧಿಕಾರ ಸಿಗಲಿಲ್ಲ ಅಂದ್ರೆ ಅಧಿಕಾರವನ್ನು ಒದ್ದು ಕಿತ್ಕೋಬೇಕು’ ಎಂದಿದ್ದನ್ನು ತಿಳಿಸಿದ್ದರು.

ಅಧಿಕಾರವನ್ನು ಒದ್ದು ಕಿತ್ಕೊಳ್ಳುವಲ್ಲಿ ಯಶಸ್ವಿಯೂ ಆಗಿದ್ದರು, 25 ವರ್ಷಗಳ ನಂತರ ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವರೋ ಇಲ್ಲವೋ ಎಂಬ ಅನುಮಾನ ಅವರನ್ನು ಕಾಡುತ್ತಿದೆ, ಈ ಹಿನ್ನೆಲೆಯಲ್ಲಿಯೇ ಅಧಿಕಾರವನ್ನು ಒದ್ದು ಕಿತ್ತುಕೊಳ್ಳುವ ವಿಷಯ ನೆನಪು ಮಾಡಿಕೊಂಡಿದ್ದಾರೆ.

ಶಿವಕುಮಾರ್ ಹಠವಾದಿ, ಒದ್ದು ಕಿತ್ಕೊಳ್ಳುವ ವಿಷಯದಲ್ಲಿ ನಿಸ್ಸೀಮರು, ಆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ, ಒಂದು ಕಡೆ ಸಿದ್ದರಾಮಯ್ಯ ಅವರಿಗೆ ಅಧಿಕಾರ ಬಿಟ್ಟು ಕೊಡಲು ಮನಸ್ಸು ಬರುತ್ತಿಲ್ಲ, ಸಚಿವರ ನೇತೃತ್ವದಲ್ಲಿ ಶಿವಕುಮಾರ್ ಇಲ್ಲದ ವೇಳೆ ಡಿನ್ನರ್ ಮೀಟಿಂಗ್ ಪ್ರಾರಂಭಿಸಿದ್ದಾರೆ.

ಸದ್ಯದ ರಾಜಕೀಯ ಪರಿಸ್ಥಿತಿ

ಇನ್ನೊಂದೆಡೆ ಶಿವಕುಮಾರ್ ಲೇಟ್‌ನೈಟ್ ಮೀಟಿಂಗ್ ಶುರು ಮಾಡಿದ್ದಾರೆ, ಇದು ರಾಜ್ಯದಲ್ಲಿನ ಸದ್ಯದ ರಾಜಕೀಯ ಪರಿಸ್ಥಿತಿ.

ಆಡಳಿತ ಪಕ್ಷ ಕಾಂಗ್ರೆಸ್‌ನ ಸರಣಿ ಸಭೆಗಳು, ಆಡಳಿತ ಶಾಸಕರ ಡಿನ್ನರ್ ಮೀಟಿಂಗ್, ಮಿಡ್‌ನೈಟ್ ಮೀಟಿಂಗ್‌ಗಳ ವಿಚಾರ ಮಾಧ್ಯಮಗಳಲ್ಲಿ ಬಹಳಷ್ಟು ಚರ್ಚೆಯಾಗುತ್ತಿದೆ.

ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ಹೈಕಮಾಂಡ್ ಮಟ್ಟದಲ್ಲಿ ಅಧಿಕಾರದ ಒಪ್ಪಂದ ಸೂತ್ರ ಏರ್ಪಟ್ಟಿದೆ, ಅಭಿವೃದ್ಧಿ ಬಗ್ಗೆ ಒಪ್ಪಂದವಾಗಿಲ್ಲ, ಆದರೆ, ಅಧಿಕಾರ ಹಂಚಿಕೆ ಕುರಿತು ಒಪ್ಪಂದವಾದಂತಿದೆ ಎಂದು ವ್ಯಂಗ್ಯವಾಡಿದರು.

ಹಿಂದೆ ಟೆಸ್ಟ್ ಮ್ಯಾಚ್ ನೋಡುತ್ತಿದ್ದಿರಿ, ಬಳಿಕ ಏಕದಿನ ಪಂದ್ಯ ಬಂತು, ನಂತರ ಟಿ-20 ಮ್ಯಾಚ್‌ಗಳು ಜನಪ್ರಿಯವಾದವು.

ಮುಖ್ಯಮಂತ್ರಿಯಾಗಲು ನನಗೆ ಶಾಸಕರ ಬೆಂಬಲ ಬೇಡ
ಅಧಿಕಾರ ಹಂಚಿಕೆ ಕಿತ್ತಾಟ

ರಾಜ್ಯದ ಜನ ಆಶೀರ್ವಾದ ಮಾಡಿ, ಸ್ಪಷ್ಟ ಬಹುಮತ ಕೊಟ್ಟರೆ, ಇವರಿಗೆ ಪರಸ್ಪರ ಅಧಿಕಾರ ಹಂಚಿಕೆ ಕಿತ್ತಾಟ ಮುಖ್ಯವಾಗಿದೆಯೇ ಹೊರತು, ರಾಜ್ಯದ ಅಭಿವೃದ್ಧಿ ವಿಚಾರ ಪ್ರಮುಖವಾಗಿಲ್ಲ.

ಆಡಳಿತದ ಬೇಜವಾಬ್ದಾರಿಯಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು, ನವಜಾತ ಶಿಶುಗಳ ಸರಣಿ ಸಾವು ಸಂಭವಿಸುತ್ತಿದೆ, ಭ್ರಷ್ಟಾಚಾರ ಮಿತಿ ಮೀರಿದೆ, ಕಾಂಗ್ರೆಸ್ ಅಧಿಕಾರಕ್ಕೆ ಬಂದು 2 ವರ್ಷ ಕಳೆದರೂ ಯಾವುದೇ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ನೋಡಲು ಸಾಧ್ಯವಾಗದ ಸ್ಥಿತಿ ಇದೆ.

ಚುನಾವಣೆ ಹೊರತುಪಡಿಸಿ ಬೇರೆ ದಿನಗಳಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ರಾಜ್ಯ ಪ್ರವಾಸ ಮಾಡುತ್ತಿಲ್ಲ, ಅವರುಗಳ ಪ್ರವಾಸ ಕೇವಲ ಬೆಂಗಳೂರಿಗೆ ಸೀಮಿತವಾಗಿದೆ.

ಆನೆ ನಡೆದಿದ್ದೇ ದಾರಿ

ರಾಜ್ಯ ಹಾಗೂ ಬೆಂಗಳೂರು ಮಹಾನಗರದಲ್ಲಿ ರಸ್ತೆಗುಂಡಿ ಮುಚ್ಚಿಸುವ ಕೆಲಸವೂ ಆಗುತ್ತಿಲ್ಲ, ಬೆಂಗಳೂರಿನಲ್ಲಿ 50 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತದ ಅಂಡರ್‌ಗ್ರೌಂಡ್ ಟನಲ್ ಮಾಡಲು ಶಿವಕುಮಾರ್ ಹೊರಟಿದ್ದಾರೆ, ಈ ಕುರಿತು ಯಾರ ಜೊತೆಗೂ ಚರ್ಚೆ ಮಾಡಿಲ್ಲ, ಆನೆ ನಡೆದಿದ್ದೇ ದಾರಿ ಎಂಬಂತೆ ಮನ ಬಂದಂತೆ ಸರ್ಕಾರ ನಡೆಸುತ್ತಿದ್ದಾರೆ.

ಕಾಂಗ್ರೆಸ್‌ನವರಿಗೆ ಅಧಿಕಾರ ಮದ, ದರ್ಪ ಹೆಚ್ಚಾಗಿದೆ, ಯಾರೂ ಸರ್ಕಾರವನ್ನು ಟೀಕಿಸಬಾರದೆಂಬ ಧೋರಣೆ ಇವರದು, ವಿರೋಧಪಕ್ಷದವರನ್ನು ಬೆದರಿಸುತ್ತಿದ್ದು, ಇದನ್ನು ಪ್ರಜಾಪ್ರಭುತ್ವ ವ್ಯವಸ್ಥೆ ಎನ್ನಲು ಸಾಧ್ಯವೇ.

ಹಿಂದೂ ವಿರೋಧಿ ನೀತಿ ವಿರುದ್ಧ ಧ್ವನಿ ಎತ್ತಿದ ಕಾರ್ಯಕರ್ತರ ವಿರುದ್ಧ ಮೊಕದ್ದಮೆಗಳನ್ನು ದಾಖಲಿಸುತ್ತಿದ್ದಾರೆ, ಪೊಲೀಸ್ ಕೇಸ್ ಹಾಕಿ, ಬೆದರಿಕೆ ಒಡ್ಡಿ ದಬ್ಬಾಳಿಕೆ ಮಾಡಲಾಗುತ್ತಿದೆ, ಇದೇ ಆಡಳಿತ ಪಕ್ಷದ ಘನಂದಾರಿ ಕೆಲಸ.

ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರ ರಕ್ಷಣೆ ಪಕ್ಷದ ಕಾನೂನು ಪ್ರಕೋಷ್ಠದ ಆದ್ಯ ಕರ್ತವ್ಯವಾಗಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
b y vijayendrabjpcm siddaramaiahcongres mid-night meetingdcm d k shivakumar
0 FacebookTwitterPinterestEmail
admin

previous post
ಮುಖ್ಯಮಂತ್ರಿಯಾಗಲು ನನಗೆ ಶಾಸಕರ ಬೆಂಬಲ ಬೇಡ
next post
ಸಿದ್ದರಾಮಯ್ಯ ಮುಖ್ಯಮಂತ್ರಿ ಗಾದಿ ತೆರವು ಸನ್ನಿಹಿತ !

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ