Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಿದ್ದರಾಮಯ್ಯರಿಗೆ ಕ್ಲೀನ್ ಚಿಟ್

by KM Shivaraju January 23, 2025
written by KM Shivaraju January 23, 2025 0 comments 2 minutes read
1FacebookTwitterPinterestEmail
200

ಮುಡಾ 14 ಬಿಡಿ ನಿವೇಶನಗಳ ಹಂಚಿಕೆ ಪ್ರಕರಣ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ಬಿಡಿ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬದ ಪಾತ್ರ ಇಲ್ಲ ಎಂದಿರುವ ಲೋಕಾಯುಕ್ತ, ಮೂಡಾ ಅಧಿಕಾರಿಗಳ ಲೋಪಕ್ಕೆ ಕ್ರಿಮಿನಲ್ ದಾವೆ ಹೂಡಬೇಕೆ, ಬೇಡವೇ ಎಂಬ ಬಗ್ಗೆ ಕಾನೂನು ತಜ್ಞರ ಸಲಹೆ ಕೇಳಿದೆ.

ನ್ಯಾಯಾಲಯದ ಆದೇಶದಂತೆ ಬಿಡಿ ನಿವೇಶನಗಳ ಹಂಚಿಕೆ ಕುರಿತು ತನಿಖೆ ನಡೆಸಿರುವ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್, ತನಿಖೆಯ ಬಹುಭಾಗ ಪೂರ್ಣಗೊಳಿಸಿ ಐಜಿ ಸುಬ್ರಹ್ಮಣ್ಯೇಶ್ವರ್ ರಾವ್ ಅವರಿಗೆ ವರದಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಅವರ ಕುಟುಂಬ ನಿವೇಶನಗಳನ್ನು ಪಡೆದ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಸಂಬಂಧ ರಾಜ್ಯ ಹೈಕೋರ್ಟ್‌ನಲ್ಲಿ ಮುಂದುವರೆದ ವಿಚಾರಣೆ ಜನವರಿ 27 ರಂದು ಬರಲಿದೆ.

ಇಲ್ಲಿಯವರೆಗೆ ಬಿಡಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ನಡೆಸಿರುವ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ಪೀಠ ಆದೇಶ ಮಾಡಿತ್ತು.

ನ್ಯಾಯಾಲಯದ ಆದೇಶದಂತೆ ಮೈಸೂರು ಲೋಕಾಯುಕ್ತ ಎಸ್‌ಪಿ ಅವರು, ಇಲ್ಲಿಯವರೆಗಿನ ತನಿಖಾ ವರದಿಯನ್ನು ಕೇಂದ್ರ ಕಚೇರಿಗೆ ತಲುಪಿಸಿದ್ದಾರೆ.

ಉನ್ನತ ಮೂಲಗಳ ಪ್ರಕಾರ 14 ಬಿಡಿ ನಿವೇಶನಗಳ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಲ್ಲವೇ, ಅವರ ಪತ್ನಿ ಪಾರ್ವತಿ ಅವರಾಗಲೀ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ತನಿಖಾ ವರದಿಯಲ್ಲಿ ಕ್ಲೀನ್ ಚಿಟ್ ನೀಡಿದ್ದಾರಂತೆ.

ನಿವೇಶನಗಳ ಹಂಚಿಕೆಯಲ್ಲಿ ಮುಡಾ ಅಧಿಕಾರಿಗಳು ಪ್ರಾಧಿಕಾರದ ನಿಯಮಾವಳಿಗಳನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಿನಲ್ ದಾವೆ ಹೂಡಬೇಕೆ, ಇಲ್ಲವೇ, ಇಲಾಖಾ ತನಿಖೆ ನಡೆಸಬೇಕೆ ಅಥವಾ ಕಣ್ತಪ್ಪಿನಿಂದ ಇದಾಗಿದೆಯೇ, ನಾವು ಮುಂದೆ ಏನು ಕ್ರಮ ಕೈಗೊಳ್ಳಬೇಕು ಎಂದು ಇಲಾಖೆಯ ಕಾನೂನು ವಿಭಾಗವನ್ನು ತನಿಖಾಧಿಕಾರಿಗಳು ಕೋರಿದ್ದಾರೆ.

ಕಾನೂನು ವಿಭಾಗ ನೀಡುವ ಸಲಹೆ ಆಧರಿಸಿ, ಇಲಾಖಾ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲು ಲೋಕಾಯುಕ್ತ ಪೋಲಿಸರು ತೀರ್ಮಾನಿಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಅವರು ಈ ಹಿಂದೆ ನೀಡಿದ್ದ ಸ್ಟೇಟಸ್ ರಿಪೋರ್ಟ್ ಹಾಗೂ ಈಗ ಸಲ್ಲಿಸಿರುವ ವರದಿಯಲ್ಲೂ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸ್ತಕ್ಷೇಪ ಮಾಡಿರುವುದಕ್ಕೆ ಎಲ್ಲಿಯೂ ದಾಖಲೆಗಳಿಲ್ಲ, ಅವರ ಪಾತ್ರ ಇದೆ ಎಂಬುದು ಎಲ್ಲಿಯೂ ತನಿಖೆಯಿಂದ ಕಂಡುಬಂದಿಲ್ಲ ಎಂದು ಉಲ್ಲೇಖಿಸಿದ್ದಾರೆ.

ನಿವೇಶನ ಹಂಚಿಕೆ ಪ್ರಕರಣವನ್ನು ಮೂರು ಭಾಗಗಳಾಗಿ ವಿಂಗಡಿಸಿ ತನಿಖೆ ನಡೆಸಲಾಗಿದೆ.

ವಿವಾದಿತ ಜಮೀನು ಡಿ-ನೋಟಿಫೈಗೆ ಮೊದಲು ದೇವರಾಜು ತಂದೆಯಿಂದ ದೇವರಾಜು ಸಹೋದರನಿಗೆ ನಂತರ ದೇವರಾಜುಗೆ ಬಂದಿತ್ತು. ಆದರೆ, ಜಮೀನುಗಳನ್ನು ಕುಟುಂಬಸ್ಥರೇ ವರ್ಗಾವಣೆ ಮಾಡಿಕೊಂಡಿದ್ದರು. ಜಮೀನು ಮಾಲೀಕತ್ವ ವರ್ಗಾವಣೆ ಬಗ್ಗೆ ಸರ್ಕಾರಿ ದಾಖಲೆಯಲ್ಲಿ ನಮೂದಿಸದೇ ಇರುವುದು ಅವರ ಕುಟುಂಬಸ್ಥರು ಮಾಡಿದ್ದ ನಿರ್ಲಕ್ಷ್ಯ ಎಂಬ ಮಾಹಿತಿ ನೀಡಿದ್ದಾರೆ.

ದೇವರಾಜು ತನಗೆ ಬಂದ ಕೃಷಿ ಭೂಮಿಯನ್ನು ಮಲ್ಲಿಕಾರ್ಜುನಸ್ವಾಮಿ ಎಂಬುವರಿಗೆ ಮಾರಾಟ ಮಾಡಿದ್ದರು. ಅವರು ಜಮೀನನ್ನು ಭೂಪರಿವರ್ತನೆ ಮಾಡಿಸಿಕೊಂಡಿರುತ್ತಾರೆ.

ಮುಡಾ ಹಾಗೂ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು ಭೂಪರಿವರ್ತನೆ ಬಗ್ಗೆ ಸರಿಯಾದ ಪರಿಶೀಲನೆ ಮಾಡಿಲ್ಲ. ಪರಿಶೀಲನೆ ನಡೆಸದೇ ಭೂಪರಿವರ್ತನೆ ಮಾಡಿದ್ದಾರೆ.

ಭೂಪರಿವರ್ತನೆಯಲ್ಲಿ ಮುಖ್ಯಮಂತ್ರಿ ಕುಟುಂಬ ಹಸ್ತಕ್ಷೇಪವಿಲ್ಲ ಅನ್ನೋದು ಸ್ಪಷ್ಟವಾಗಿದೆ. ಮಲ್ಲಿಕಾರ್ಜುನಸ್ವಾಮಿ ಮಾರಾಟ ಮಾಡಿದ ಮೇಲೆ ಅವರ ಕುಟುಂಬಕ್ಕೆ ಭೂಮಿ ಬಂತು.

ಮೈಸೂರು ನಗರದ ಪ್ರತಿಷ್ಠಿತ ಬಡಾವಣೆಯಲ್ಲಿ 50:50ರ ಅನುಪಾತದಲ್ಲಿ 14 ಬಿಡಿ ನಿವೇಶನಗಳನ್ನು ಮುಖ್ಯಮಂತ್ರಿ ಅವರ ಕುಟುಂಬಕ್ಕೆ ನೀಡಿ ಮುಡಾ ಅಧಿಕಾರಿಗಳು ತಪ್ಪು ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.

ಇಂತಹ ಅಧಿಕಾರಿಗಳ ವಿರುದ್ಧ ಯಾವ ರೀತಿ ಕಾನೂನು ಕ್ರಮ ಜರುಗಿಸಬೇಕೆಂದು ಇಲಾಖಾ ಮೊರೆ ಹೋಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
AllotmentChief Ministercriminal caseLegal expert's adviceLokayuktaMuda caseMuda officialsno roleSiddaramaiahSiddaramaiah family
1 FacebookTwitterPinterestEmail
KM Shivaraju

previous post
ಅಶೋಕ್ ಖೇಣಿ ಮೇಲೆ ಹಲ್ಲೆ ಪ್ರಕರಣ: ರಾಜಿ ಇತ್ಯರ್ಥ
next post
ಪ್ರಜ್ಞಾಪೂರ್ವಕವಾಗಿಯೇ ದಾವೋಸ್‌ಗೆ ಹೋಗುತ್ತಿಲ್ಲ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ