Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜಕೀಯರಾಜ್ಯರಾಷ್ಟ್ರ

ಮೈಕ್ರೊ ಫೈನಾನ್ಸ್ ಹಾವಳಿ ತಡೆಗೆ ಸುಗ್ರೀವಾಜ್ಞೆ

by admin January 25, 2025
written by admin January 25, 2025 0 comments 2 minutes read
1FacebookTwitterPinterestEmail
194

ಆರ್‌ಬಿಐ ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ

ಬೆಂಗಳೂರು:ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿಯಮ ಗಾಳಿಗೆ ತೂರಿ ಸಾಲಗಾರರಿಂದ ಅಸಲು, ಬಡ್ಡಿ ವಸೂಲು ಮಾಡುವ ಮೈಕ್ರೊ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಹೊಸ ಕಠಿಣ ಕಾನೂನು ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಘೋಷಿಸಿದ್ದಾರೆ.

ಮುಂಬರುವ ಬಜೆಟ್ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡಿಸಿ ಅಂಗೀಕಾರ ಪಡೆದು ಕಾನೂನು ರೂಪಿಸಲಾಗುವುದು, ಅದಕ್ಕೂ ಮುನ್ನವೇ ಸುಗ್ರೀವಾಜ್ಞೆ ಮೂಲಕ ಮೈಕ್ರೊ ಫೈನಾನ್ಸ್ ವಸೂಲಿ ಹಾವಳಿಗೆ ಕಡಿವಾಣ ಹಾಕಲಾಗುವುದು, ಮೈಕ್ರೋ ಫೈನಾನ್ಸ್‌ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ.

ಗೂಂಡಾಗಳ ಬಳಕೆ ಇಲ್ಲ

ಇನ್ನು ಮುಂದೆ ರೌಡಿ, ಗೂಂಡಾಗಳ ಮೂಲಕ ಸಾಲ ವಸೂಲಿ ಮಾಡುವಂತಿಲ್ಲ, ಸಂಜೆ 5ರ ನಂತರ ಸಾಲ ವಸೂಲಿಗೆ ಹೋಗುವಂತಿಲ್ಲ, ವಸೂಲಿ ಮಾಡುವಾಗ ಯಾವುದೇ ರೀತಿಯ ಕಿರುಕುಳ ನೀಡಬಾರದು.

ರಾಜ್ಯಾದ್ಯಂತ ದಾಖಲಾಗಿರುವ ಪ್ರಕರಣಗಳ ಬಗ್ಗೆ ಕೂಡಲೇ ಕ್ರಮ, ಸಂಜೆಯೊಳಗೆ ಆರೋಪಿಗಳನ್ನು ಬಂಧಿಸಬೇಕು, ಸಾಲಗಾರರಿಗೆ ಕಿರುಕುಳ ಕೊಟ್ಟವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸಭೆಯಲ್ಲಿದ್ದ ಹಿರಿಯ ಪೋಲಿಸ್ ಅಧಿಕಾರಿಗಳಿಗೆ ಕಟ್ಟಾದೇಶ ಮಾಡಲಾಗಿದೆ.

ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚಿಸಿದ್ದು, ದೂರು ನೀಡಬಹುದಾಗಿದೆ, ಅಲ್ಲದೆ, ಕಿರುಕುಳ ಪ್ರಕರಣಗಳು ಬೆಳಕಿಗೆ ಬಂದರೆ ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ತಿಳಿಸಲಾಗಿದೆ.

ಕ್ರಿಮಿನಲ್ ಮೊಕದ್ದಮೆ

ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶ ಮಾಡಲಾಗುವುದು ಎಂದರು.

ಈಗಿರುವ ಕಾನೂನು ಇನ್ನಷ್ಟು ಬಲಪಡಿಸಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡುವ ಹಾಗೂ ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು.

ಒಂದು ಕುಟುಂಬಕ್ಕೆ ಎಷ್ಟು ಸಾಲ ನೀಡಬಹುದು ಎಂಬ ಬಗ್ಗೆ ಆರ್‌ಬಿಐ ಮಾರ್ಗಸೂಚಿ ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲಾಗುವುದು, ಅಲ್ಲದೆ, ಇದರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೇಂದ್ರ ಸರ್ಕಾರಕ್ಕೂ ಒತ್ತಾಯ

ಅಕ್ರಮ ಲೇವಾದೇವಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕರಡು ಸಿದ್ಧಪಡಿಸಿದ್ದು, ಈ ಕುರಿತು ಸಮಗ್ರ ಸಮಾಲೋಚನೆ ನಡೆಸಿ, ಸಾಲದ ಸುಳಿಯಲ್ಲಿ ಸಿಲುಕಿದವರ ಹಿತ ಕಾಪಾಡಲು ಹಾಗೂ ಕಿರುಕುಳ ತಪ್ಪಿಸಲು ಸೂಕ್ತ ಕಾನೂನು ರಚಿಸಲು ಕೇಂದ್ರವನ್ನು ಒತ್ತಾಯಿಸಲಾಗುವುದು.

ಸರ್ಕಾರದ ಎಚ್ಚರಿಕೆ ನೀಡಿದ ನಂತರವೂ ಕಂಪನಿಗಳು ಸಾಲ ಪಡೆದವರಿಗೆ ಶೋಷಣೆ ಮಾಡಲು ಮುಂದಾದರೆ ಅಂತಹವರು ಸ್ಥಳೀಯ ಪೋಲಿಸ್ ಠಾಣೆ ಇಲ್ಲವೇ ಜಿಲ್ಲಾಧಿಕಾರಿಗಳಿಗೆ ದೂರು ನೀಡುವಂತೆ ಸಲಹೆ ಮಾಡಿದ್ದಾರೆ.

ಶೋಷಣೆ ನಡೆಸಿದ ಕುರಿತು ಮಾಹಿತಿ ದೊರೆತರೆ ಪೋಲಿಸರೇ ಸ್ವಯಂ ಪ್ರೇರಿತವಾಗಿ ಅಂತಹ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದಾರೆ.

ಬಡ್ಡಿ ವಸೂಲಿಗೆ ಆರ್‌ಬಿಐ ನಿಯಮಾವಳಿ

ಆರ್‌ಬಿಐ ನಿಯಮಾವಳಿಯಂತೆ ಶೇಕಡ 17.07ಕ್ಕಿಂತ ಹೆಚ್ಚು ಬಡ್ಡಿ ವಸೂಲಿ ಮಾಡುವಂತಿಲ್ಲ, ಆದರೆ, ಪ್ರಸ್ತುತ ಶೇ.28ರಿಂದ ಶೇ.29ರಷ್ಟು ವಸೂಲಿ ಮಾಡುತ್ತಿರುವ ಮಾಹಿತಿಗಳಿವೆ.

ಇನ್ನು ಮುಂದೆ ಇಂತಹ ಕೃತ್ಯಗಳನ್ನು ಸಹಿಸುವುದಿಲ್ಲ, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ, ಅನಧಿಕೃತ ವ್ಯವಹಾರ ನಡೆಸುತ್ತಿರುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.

ಕಾನೂನು, ಗೃಹ, ಹಣಕಾಸು, ಕಂದಾಯ ಇಲಾಖೆ ಸೇರಿ ಮಾರ್ಗಸೂಚಿ ರೂಪಿಸಲಾಗುವುದು, ಅಲ್ಲದೆ, ನೆರೆ ರಾಜ್ಯಗಳಲ್ಲಿ ಸಾಲಗಾರರ ಕಿರುಕುಳ ತಪ್ಪಿಸುವ ಕುರಿತು ಇರುವ ಕಾನೂನುಗಳನ್ನು ಪರಿಶೀಲಿಸಿ ಹೊಸ ಕಾನೂನು ಜಾರಿಗೆ ತರಲಾಗುವುದು.

ಮೈಕ್ರೋಫೈನಾನ್ಸ್ ಅಸೋಸಿಯೇಷನ್ ಹಾಗೂ ಆರ್‌ಬಿಐ ಅಧಿಕಾರಿಗಳ ಅಭಿಪ್ರಾಯ ಕೇಳಲಾಗಿದೆ, ಯಾರಿಗೂ ಸಾಲ ಕೊಡಬೇಡಿ ಎಂಬುದಾಗಿ ನಾವು ಹೇಳುವುದಿಲ್ಲ, ಆದರೆ ವಸೂಲಿ ವೇಳೆ ಕಿರುಕುಳ ಕೊಡಲೇಬಾರದು, ಆರ್‌ಬಿಐ ನಿಯಮದಂತೆ ನಡೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahmicro financeofficers meetingordinancerbi guidelines
1 FacebookTwitterPinterestEmail
admin

previous post
ಮೈಕ್ರೊ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಲಗಾಮು
next post
ಬಿಜೆಪಿ ಭಿನ್ನರಿಗೆ ಚುನಾವಣೆಯ ಕನಸು?

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ