ಬೆಂಗಳೂರು:ಅಮೆರಿಕದಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ ನಟ ಶಿವರಾಜ್ ಕುಮಾರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ನಟ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಹಿಂತಿರುಗಿದ್ದು, ಅವರ ಆರೋಗ್ಯ ವಿಚಾರಿಸಲು ನಿವಾಸಕ್ಕೆ ಭೇಟಿ ನೀಡಿದ್ದೇನೆ, ಶಸ್ತ್ರಚಿಕಿತ್ಸೆಗೆ ಒಳಗಾದ ಮರುದಿನವೇ ದೂರವಾಣಿ ಕರೆ ಮಾಡಿದ್ದೆ ಎಂದರು.
ಶಿವರಾಜ್ ಕುಮಾರ್ ಚೇತರಿಸಿಕೊಂಡಿದ್ದು, ಮುಂದಿನ ತಿಂಗಳಿನಿಂದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ ಎಂದರು.