ಬೆಂಗಳೂರು:ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಗಾಯಗೊಂಡಿರುವ ಕರ್ನಾಟಕದವರನ್ನು ಕ್ಷೇಮವಾಗಿ ರಾಜ್ಯಕ್ಕೆ ಕರೆತರಲು ಅಧಿಕಾರಿಗಳನ್ನು ನಿಯೋಜಿಸಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮಹಾಕುಂಭದಲ್ಲಿ ಪಾಲ್ಗೊಂಡಿರುವ ಕನ್ನಡಿಗರು ಸ್ವಲ್ಪ ಜಾಗರೂಕತೆಯಿಂದಿರಿ ಎಂಬ ಕಿವಿಮಾತು ಹೇಳಿದ್ದಾರೆ.
ಪ್ರಯಾಗ್‌ರಾಜ್‌ನ ಮಹಾಕುಂಭಮೇಳದಲ್ಲಿ ಇಂದು ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾದ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಗಳಿಗೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.
ನಮ್ಮವರ ರಕ್ಷಣೆಗೆ ಸರ್ಕಾರ ಎಲ್ಲ ರೀತಿಯ ಪ್ರಯತ್ನ ನಡೆಸುತ್ತಿದೆ, ಅಧಿಕಾರಿಗಳು ಅಲ್ಲಿನ ಆಡಳಿತದೊಂದಿಗೆ ಸಂಪರ್ಕ ಸಾಧಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ.
ಮೇಳದಲ್ಲಿ ಮುಂಜಾನೆ ಸಂಭವಿಸಿದ ಕಾಲ್ತುಳಿತದಲ್ಲಿ ಹಲವರು ಸಾವಿಗೀಡಾಗಿರುವ ಸುದ್ದಿ ತಿಳಿದು ದುಃಖವಾಗಿದೆ, ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ, ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಹಾರೈಸುವುದಾಗಿ ಹೇಳಿದ್ದಾರೆ.