Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಾಲ ಪಡೆದವರು ಆತ್ಮಹತ್ಯೆ ನಿರ್ಧಾರ ಕೈಗೊಳ್ಳಬಾರದು

by admin January 31, 2025
written by admin January 31, 2025 0 comments 2 minutes read
0FacebookTwitterPinterestEmail
285

ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲೇ ಸುಗ್ರೀವಾಜ್ಞೆ ತರಲಿದೆ

ಮೈಸೂರು: ಆರ್‌ಬಿಐ ನಿಯಮಾವಳಿ ಉಲ್ಲಂಘಿಸುವ, ಹೆಚ್ಚಿನ ಬಡ್ಡಿದರ ವಸೂಲು ಮಾಡುವ ಹಾಗೂ ಕಾನೂನು ಬಾಹಿರವಾಗಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಮೇಲೆ ಸರ್ಕಾರ ಕಾನೂನು ಕ್ರಮ ಕೈಗೊಳ್ಳಲಿದೆ, ಸಾಲ ಪಡೆದವರು ಆತಂಕಕ್ಕೊಳಗಾಗಿ ಆತ್ಮಹತ್ಯೆಯಂತಹ ತಪ್ಪು ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಅಭಯ ನೀಡಿದ್ದಾರೆ.

ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆ ಹೊರಡಿಸಲಿದ್ದು, ಕಿರುಕುಳ ನೀಡುತ್ತಿರುವ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಅಮಾನವೀಯ ರೀತಿ ವಸೂಲಾತಿ

ಲಭ್ಯವಾಗುವ ಕಡೆ ಜನರು ಸಾಲ ಪಡೆಯುತ್ತಾರೆ, ಖಾಸಗಿ ಹಣಕಾಸು ಸಂಸ್ಥೆ, ಲೇವಾದೇವಿಗಾರರು ಸಾಲದ ಮೇಲೆ ಹೆಚ್ಚಿನ ಬಡ್ಡಿ ದರ ವಿಧಿಸುವುದಲ್ಲದೇ, ಗೂಂಡಾಗಳ ಮೂಲಕ ಸಾಲ ಪಡೆದವರನ್ನು ಹೆದರಿಸಿ, ಅಮಾನವೀಯ ರೀತಿಯಲ್ಲಿ ವಸೂಲಾತಿಯಲ್ಲಿ ತೊಡಗಿದ್ದಾರೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ವಾರ್ಷಿಕ ಶೇ.28 ರಿಂದ 30 ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ, ಸಾಲ ಪಡೆದ ಜನರು ಬೇಸತ್ತು, ಆತ್ಮಹತ್ಯೆಗೆ ಶರಣಾಗುತ್ತಿರುವುದು ಗಮನಿಸಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕೇಂದ್ರ ಸರ್ಕಾರದ ಅಧೀನದಲ್ಲಿನ ರಿಸರ್ವ್ ಬ್ಯಾಂಕ್ ಮಾರ್ಗಸೂಚಿಯಂತೆ ಕಾರ್ಯನಿರ್ವಹಿಸುತ್ತದ್ದು, ಇವುಗಳ ನಿಯಂತ್ರಣಕ್ಕೆ ಸರ್ಕಾರ ಸದ್ಯದಲ್ಲಿಯೇ ಸುಗ್ರೀವಾಜ್ಞೆ ತರಲಿದೆ.

ಮೈಕ್ರೊ ಫೈನಾನ್ಸ್ ನಿಯಂತ್ರಣಕ್ಕೆ ಶೀಘ್ರ ಕಾನೂನು
ಕೇಂದ್ರ ಬಜೆಟ್‌ನಿಂದ ನಿರೀಕ್ಷೆ ಇಲ್ಲ

ಕೇಂದ್ರ ಸರ್ಕಾರದ ಬಜೆಟ್‌ನಿಂದ ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ, ಕಳೆದ ಬಜೆಟ್‌ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ ಮಾಡಿದ್ದರು, ಆದರೆ, ಇದುವರೆಗೂ ಒಂದು ರೂಪಾಯಿ ಬಿಡುಗಡೆಯಾಗಿಲ್ಲ.

ನಬಾರ್ಡ್ ಅನುದಾನದಲ್ಲಿ ಶೇ.58 ರಷ್ಟು ಕಡಿತ ಮಾಡಿ, ಈ ಹಿಂದೆ ನೀಡಲಾಗಿದ್ದ 5,800 ಕೋಟಿ ರೂ. ಮೊತ್ತವನ್ನು, 2,345 ಕೋಟಿ ರೂ.ಗೆ ಇಳಿಸಲಾಯಿತು, ಕರ್ನಾಟಕ ವಾರ್ಷಿಕ 4 ಲಕ್ಷ ಕೋಟಿ ರೂ.ನಷ್ಟು ತೆರಿಗೆಯನ್ನು ಕೇಂದ್ರಕ್ಕೆ ನೀಡಿದರೆ, ರಾಜ್ಯಕ್ಕೆ ಮರಳಿ ಬರುತ್ತಿರುವುದು ಕೇವಲ 60 ಸಾವಿರ ಕೋಟಿ ರೂ. ಮಾತ್ರ, ತೆರಿಗೆ ಹಂಚಿಕೆಯಲ್ಲಿಯೂ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದರು.

ಕುಂಭಮೇಳದ ಬಗ್ಗೆ ಟೀಕೆ ಮಾಡುವವರು ಅಯೋಗ್ಯರು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ಬಾಲಿಶವಾಗಿದೆ, ತಪ್ಪು ನಡೆದಾಗ ಟೀಕೆ ಮಾಡುವ ಸ್ವಾತಂತ್ರ್ಯ ಪ್ರತಿಯೊಬ್ಬರಿಗೂ ಇರುತ್ತದೆ.

ಇ.ಡಿ. ವರದಿ ರಾಜಕೀಯ ಪ್ರೇರಿತ

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.) ವರದಿ ರಾಜಕೀಯ ಪ್ರೇರಿತ, ಮನಿಲ್ಯಾಂಡ್ರಿಂಗ್ ಆಗಿರುವ ಬಗ್ಗೆ ಯಾವುದೇ ಸಾಕ್ಷಿಯಿಲ್ಲ.

ಮುಡಾ ಮಾಜಿ ಆಯುಕ್ತ ನಟೇಶ್ ಮೇಲೆ ಇ.ಡಿ. ಕ್ರಮ ಕಾನೂನುಬಾಹಿರ ಮತ್ತು ಮನಿಲ್ಯಾಂಡ್ರಿಂಗ್ ಆಗಿಲ್ಲ ಎಂಬುದಾಗಿ ಹೈಕೋರ್ಟ್ ಹೇಳಿದೆ.

ಸಂಪೂರ್ಣ ವರದಿಯನ್ನು ಮಾಧ್ಯಮಕ್ಕೆ ಬಿಡುಗಡೆ ಮಾಡುವ ಮೂಲಕ ಇ.ಡಿ., ಮುಡಾ ಪ್ರಕರಣವನ್ನು ಉದ್ದೇಶಪೂರ್ವಕವಾಗಿ ರಾಜಕೀಯ ಪ್ರೇರಿತಗೊಳಿಸಿದೆ, ಸರ್ಕಾರ ಹಾಗೂ ಮುಖ್ಯಮಂತ್ರಿ ವರ್ಚಸ್ಸಿಗೆ ಕುಂದು ತರುವ ಪ್ರಯತ್ನ ನಡೆಯುತ್ತಿದೆ ಎಂದರು.

ನನ್ನ ತೇಜೋವಧೆ ಮಾಡಲಾಗುತ್ತಿದೆ

ಕರ್ನಾಟಕ ಮುಖ್ಯಮಂತ್ರಿಯಾಗಿರುವ ಕಾರಣ ನನ್ನ ತೇಜೋವಧೆ ಮಾಡಲಾಗುತ್ತಿದೆ, ನನ್ನ ಪತ್ನಿಗೆ ಇ.ಡಿ. ನೀಡಿದ ನೋಟೀಸ್‌ಗೆ ನ್ಯಾಯಾಲಯದಿಂದ ತಡೆಯಾಜ್ಞೆ ತರಲಾಗಿದೆ, ನನ್ನ ವರ್ಚಸ್ಸಿಗೆ ಭಂಗ ತರಬೇಕೇಂಬ ದುರುದ್ದೇಶದಿಂದ, ಇಂತಹ ಕುಕೃತ್ಯಗಳನ್ನು ಮಾಡಲಾಗುತ್ತಿದೆ, ಆದರೆ, ಅವರ ಪ್ರಯತ್ನಗಳು ಸಫಲವಾಗುವುದಿಲ್ಲ.

ಮುಖ್ಯಮಂತ್ರಿಯಾಗಿ ಐದು ವರ್ಷ ಪೂರ್ಣಗೊಳಿಸುವ ಸಂಬಂಧ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ, ರಾಜ್ಯದ ನಾಯಕರು ಸಭೆ ಮಾಡುವುದರಲ್ಲಿ ಯಾವುದೇ ರಾಜಕೀಯವಿಲ್ಲ, ಸತ್ಯಕ್ಕೆ ವಿರುದ್ಧವಾದ ಊಹೆಗಳು ತಪ್ಪು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdo not be panicgovt. will bring law to safeguard peoplemicro finance
0 FacebookTwitterPinterestEmail
admin

previous post
ಮೈಕ್ರೊ ಫೈನಾನ್ಸ್ ನಿಯಂತ್ರಣಕ್ಕೆ ಶೀಘ್ರ ಕಾನೂನು
next post
ಹೈಕೋರ್ಟ್ ಸೂಚನೆ ಮೇರೆಗೆ ಹೆಚ್‌ಡಿಕೆ ವಿರುದ್ಧ ತನಿಖೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ