ಬೆಂಗಳೂರು:ಸರ್ಕಾರಿ ಕಚೇರಿ ಹಾಗೂ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ಕುಡಿಯುವ ನೀರಿನ ಪ್ಲ್ಯಾಸ್ಟಿಕ್ ಬಾಟಲ್‌ಗಳ ಬಳಕೆ ನಿಷೇಧಿಸಲಾಗಿದೆ.
ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಸರ್ಕಾರ ಪ್ಲ್ಯಾಸ್ಟಿಕ್ ವಸ್ತುಗಳ ಅತಿಯಾದ ಬಳಿಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳನ್ನು ತಡೆಯುವ ದೃಷ್ಟಿಯಿಂದ ನಿರ್ಧಾರ ಕೈಗೊಳ್ಳಲಾಗಿದೆ.

ಅನುದಾನಿತ ಸಂಸ್ಥೆಗಳಿಗೂ ಅನ್ವಯ
ಸಚಿವಾಲಯ ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿ, ಸರ್ಕಾರಿ ಸೌಮ್ಯದ ಮಂಡಳಿ-ನಿಗಮ, ವಿಶ್ವವಿದ್ಯಾಲಯಗಳು, ಅನುದಾನಿತ ಸಂಸ್ಥೆಗಳು ಏರ್ಪಡಿಸುವ ಸಭೆ, ಸಮಾರಂಭಗಳಲ್ಲಿ ಒಂದು ಬಾರಿ ಬಳಕೆಯ ಕುಡಿಯುವ ನೀರಿನ ಪ್ಲ್ಯಾಸ್ಟಿಕ್ ಬಾಟಲಿಗಳನ್ನು ನಿಷೇಧಿಸಲಾಗಿದೆ.
ಇಂತಹ ಸಭೆ, ಸಮಾರಂಭಗಳಲ್ಲಿ ಕುಡಿಯುವ ನೀರನ್ನು ಸಂದರ್ಭಾನುಸಾರ ಶುಚಿತ್ವವಾಗಿ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತರ ಪ್ಲ್ಯಾಸ್ಟಿಕ್ ಅಲ್ಲದ, ಲೋಟಗಳಲ್ಲಿ ಸರಬರಾಜು ಮಾಡಬೇಕು.
ಈ ಹಿಂದೆ ಸರ್ಕಾರಿ ಆದೇಶ ಹೊರಡಿಸಿದ್ದರೂ ಅದನ್ನು ಸಂಬಂಧಿಪಟ್ಟವರು ಪಾಲನೆ ಮಾಡುತ್ತಿಲ್ಲ, ಇನ್ನು ಮುಂದೆ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಹಾಗೂ ಪ್ಲ್ಯಾಸ್ಟಿಕ್ ಬಳಕೆ ಬದಲಿಗೆ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ವಸ್ತುಗಳನ್ನು ಬಳಕೆ ಮಾಡುವಂತೆ ಸೂಚನೆ ನೀಡಲಾಗಿದೆ.