Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರಶಿಕ್ಷಣ

10 ಲಕ್ಷ ಕೋಟಿ ರೂ.ಗೂ ಹೆಚ್ಚು ಬಂಡವಾಳ ಹೂಡಿಕೆ

by admin February 8, 2025
written by admin February 8, 2025 0 comments 3 minutes read
0FacebookTwitterPinterestEmail
190

ಬೆಂಗಳೂರು:ರಾಜ್ಯದಲ್ಲಿ ಸಮಗ್ರ ಕೈಗಾರಿಕಾ ಬೆಳವಣಿಗೆ ಸಾಧಿಸಲು ವಲಯವಾರು ಕೈಗಾರಿಕಾ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದಿಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 11ರಿಂದ 14 ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಸಮಾವೇಶ ಮೂಲಕ 10 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆ ಬರುವುದು ಖಾತ್ರಿ ಎಂದರು.

ಹೊಸ ಕೈಗಾರಿಕಾ ನೀತಿ

ಉದ್ಘಾಟನೆ ದಿನದಂದು ಹೊಸ ಕೈಗಾರಿಕಾ ನೀತಿ ಹಾಗೂ ಏಕಗವಾಕ್ಷಿ ಪೋರ್ಟೆಲ್ ಅನಾವರಣ ಮಾಡುವ ಮೂಲಕ ಕೈಗಾರಿಕೋದ್ಯಮಿಗಳಿಗೆ ಇರುವ ತೊಡಕುಗಳನ್ನು ನಿವಾರಿಸುವುದಾಗಿ ತಿಳಿಸಿದರು.

ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ಆಧುನಿಕ ಫಾರ್ಮಾ ಪಾರ್ಕ್, ವಿಜಯಪುರದಲ್ಲಿ ಸೋಲಾರ್ ಸೆಲ್ ಪಾರ್ಕ್ ಮತ್ತು ಕೃಷಿ ಉತ್ಪನ್ನ ಆಧರಿತ ಆಗ್ರೋ ಪಾರ್ಕ್, ಚಿತ್ರದುರ್ಗದಲ್ಲಿ ಡ್ರೋನ್ ಪಾರ್ಕ್, ಜಂಗಮನಕೋಟೆಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಹೆಸರಿನಲ್ಲಿ ಡೀಪ್-ಟೆಕ್ ಪಾರ್ಕ್, ಡಾಬಸ್‌ಪೇಟೆ ಸಮೀಪ ಹನುಮಂತಪುರದಲ್ಲಿ ಮೆಗಾ ಲಾಜಿಸ್ಟಿಕ್ಸ್ ಪಾರ್ಕ್, ಚಿಕ್ಕಬಳ್ಳಾಪುರ ಜಿಲ್ಲೆ ಮತ್ತು ಧಾರವಾಡದಲ್ಲಿ ಇ.ವಿ. ಕ್ಲಸ್ಟರ್ಸ್ ಸ್ಥಾಪಿಸಲಾಗುವುದು.

ಹುಬ್ಬಳ್ಳಿ ವಿಮಾನ ನಿಲ್ದಾಣ ಬಳಿ 200 ಎಕರೆ ವಿಸ್ತಾರದಲ್ಲಿ 400ಕ್ಕೂ ಹೆಚ್ಚು ನವೋದ್ಯಮಗಳಿಗೆ ಸೌಲಭ್ಯ ಕಲ್ಪಿಸುವ ಸ್ಟಾರ್ಟಪ್ ಪಾರ್ಕ್, ವಿಜಯಪುರದ ತಿಡಗುಂದಿಯಲ್ಲಿ 1,200 ಎಕರೆ ವಿಸ್ತೀರ್ಣದಲ್ಲಿ ಸೋಲಾರ್ ಸೆಲ್ ಮತ್ತು ಆಗ್ರೊ ಟೆಕ್ ಪಾರ್ಕ್ ಅಭಿವೃದ್ಧಿಪಡಿಸಲಾಗುವುದು ಎಂದರು.

60 ಕ್ಕೂ ಹೆಚ್ಚು ಸ್ಟಾರ್ಟಪ್

ಭವಿಷ್ಯದ ತಯಾರಿಕಾ ವಲಯ, ಸಾರಿಗೆ ಮತ್ತು ಪರಿಸರಸ್ನೇಹಿ ಇಂಧನ ಉತ್ಪಾದನೆ ವಲಯಗಳಿಗೆ ವಿಶೇಷ ಗಮನ ಕೊಡಲಾಗುತ್ತಿದೆ, ಇದರ ಅಂಗವಾಗಿ 60ಕ್ಕೂ ಹೆಚ್ಚು ಸ್ಟಾರ್ಟಪ್ ಕಂಪನಿಗಳು ಅತ್ಯಾಧುನಿಕ ತಂತ್ರಜ್ಞಾನ ಮತ್ತು ಅವುಗಳನ್ನು ಆಧರಿಸಿ ರೂಪಿಸಿರುವ ಪರಿಹಾರೋಪಾಯ ಪ್ರದರ್ಶಿಸಲಿವೆ.

ಇವುಗಳಲ್ಲಿ ಕಾರ್ಬನ್ ನ್ಯಾನೋಟ್ಯೂಬ್, ಅಟಾನಮಸ್ ಸಿಸ್ಟಮ್ಸ್, ಮಾನವರಹಿತ ಏರಿಯಲ್ ವೆಹಿಕಲ್ಸ್ ಮತ್ತು ಸುಧಾರಿತ ರೋಬೋಟಿಕ್ಸ್ ಮುಂತಾದವು ಸೇರಿವೆ.

ಸಮಾವೇಶದಲ್ಲಿ 19 ರಾಷ್ಟ್ರಗಳು ಪಾಲ್ಗೊಳ್ಳುತ್ತಿದ್ದು, 10 ರಾಷ್ಟ್ರಗಳೊಂದಿಗೆ ಸುಸ್ಥಿರ ಆರ್ಥಿಕ ಬೆಳವಣಿಗೆ, ಹೂಡಿಕೆಗೆ ಇರುವ ಅವಕಾಶಗಳು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಕರ್ನಾಟಕದ ಸ್ಥಾನಮಾನ, ರಾಜ್ಯದಲ್ಲಿ ಮರುಬಳಕೆ ಇಂಧನ ಕ್ಷೇತ್ರದ ಭವಿಷ್ಯ, ಆರೋಗ್ಯ ಸೇವೆ ಮುಂತಾದ ನಿರ್ಣಾಯಕ ಕ್ಷೇತ್ರಗಳ ಕುರಿತು ಚರ್ಚಿಸಲಾಗುವುದು ಎಂದರು.

ಉದ್ಯಮಗಳಿಗೆ ಪುರಸ್ಕಾರ

ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಗೆ ನಿರ್ಣಾಯಕ ಕೊಡುಗೆ ನೀಡುತ್ತಿರುವ ರಾಜ್ಯದ 14 ಉದ್ಯಮಗಳನ್ನು ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪುರಸ್ಕರಿಸಲಾಗುತ್ತಿದೆ, ಇವುಗಳಲ್ಲಿ ವೈಮಾಂತರಿಕ್ಷ ಮತ್ತು ರಕ್ಷಣೆ, ಆಟೋ/ಇ.ವಿ., ಜೈವಿಕ ತಂತ್ರಜ್ಞಾನ ಮತ್ತು ಜೀವವಿಜ್ಞಾನ ವಲಯಗಳ ಸಾಧಕ ಉದ್ಯಮಗಳಿದ್ದು, ಈ ಕಾರ್ಯಕ್ರಮ ಫೆಬ್ರವರಿ 12ರ ಸಂಜೆ ನಡೆಯಲಿದೆ.

ಉದ್ಯಮಗಳಿಗೆ ಒಂದು ಬಾರಿಯ ಗರಿಷ್ಠ ಬಂಡವಾಳ ಹೂಡಿಕೆ ಮಾಡಿರುವ ಕಂಪನಿಗಳು ಮತ್ತು ಜಾಗತಿಕ ಮಟ್ಟದ ಸಂಶೋಧನೆ ಹಾಗೂ ಅಭಿವೃದ್ಧಿಗೆ ಆದ್ಯತೆ ನೀಡಿರುವ ಉದ್ದಿಮೆಗಳನ್ನೂ ವಿಶೇಷವಾಗಿ ಪರಿಗಣಿಸಿ, ಪುರಸ್ಕರಿಸಲಾಗುವುದು.

ಕೈಗಾರಿಕಾ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತಿರುವ 35ಕ್ಕೂ ಹೆಚ್ಚು ಸಣ್ಣ ಮತ್ತು ಮಧ್ಯಮ ಸ್ತರದ ಕೈಗಾರಿಕೆಗಳು, ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡುತ್ತಿರುವ ಮಹಿಳಾ ಉದ್ಯಮಿಗಳು, ವಲಯವಾರು ಕೈಗಾರಿಕಾ ಉತ್ಕೃಷ್ಟತೆ ಸಾಧಿಸಿರುವ ಉದ್ಯಮಗಳಿಗೆ ಫೆಬ್ರವರಿ 13ರ ಸಂಜೆ ಪ್ರಶಸ್ತಿ ಪುರಸ್ಕಾರ ಕೊಡಲಾಗುವುದು.

ದೆಹಲಿ ಚುನಾವಣೆ ಗೆಲುವು: ರಾಜ್ಯ ಬಿಜೆಪಿ ವಿಜಯೋತ್ಸವ
3 ಲಕ್ಷ ಡಾಲರ್ ಬಹುಮಾನ

‘ವೆಂಚುರೈಸ್’ ಉಪಕ್ರಮದಡಿ ಒಟ್ಟು 3 ಲಕ್ಷ ಡಾಲರ್ ಮೌಲ್ಯದ 9 ಬಹುಮಾನ ಪ್ರದಾನ ಮಾಡಲಾಗುವುದು, ಇದರಲ್ಲಿ ಮೊದಲ ಮೂರು ಸ್ಥಾನಗಳಿಗೆ ಕ್ರಮವಾಗಿ 50 ಸಾವಿರ ಡಾಲರ್, 30 ಸಾವಿರ ಡಾಲರ್ ಮತ್ತು 20 ಸಾವಿರ ಡಾಲರ್ ನಗದು ಪುರಸ್ಕಾರವಿದೆ ಎಂದರು.

ಸಮಾವೇಶವನ್ನು ಫೆಬ್ರವರಿ 11ರ ಸಂಜೆ ೪ಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ ಎಂದರು.

ಫೆಬ್ರವರಿ 11 ರಿಂದ 14ರ ನಡುವೆ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಅಶ್ವಿನಿ ವೈಷ್ಣವ್, ಪ್ರಹ್ಲಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಪಿಯೂಷ್ ಗೋಯಲ್ ಪಾಲ್ಗೊಳ್ಳಲಿದ್ದು, ಸಮಾರೋಪಕ್ಕೆ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದರು.

ಮುಡಾ ತೀರ್ಪು: ನಿರಾಳತೆ ಭಾವದಲ್ಲಿ ಸಿದ್ದರಾಮಯ್ಯ
ಅನೇಕ ಚರ್ಚಾ ಗೋಷ್ಠಿಗಳು

ಸಮಾವೇಶದಲ್ಲಿ ಮಹತ್ವಾಕಾಂಕ್ಷಿ ಕ್ವಿನ್ ಸಿಟಿ ಯೋಜನೆ ಸಂಬಂಧ ದೇಶ-ವಿದೇಶದ ಕೆಲವು ವಿಶ್ವವಿದ್ಯಾಲಯಗಳ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು, ಆರ್ಥಿಕ ಬೆಳವಣಿಗೆ ಕುರಿತು ಮಾಂಟೆಕ್ ಸಿಂಗ್ ಅಹ್ಲುವಾಲಿಯಾ, ಲಾಜಿಸ್ಟಿಕ್ಸ್ ವಲಯದಲ್ಲಿ ನಡೆಯುತ್ತಿರುವ ಆವಿಷ್ಕಾರಗಳನ್ನು ಕುರಿತು ವೋಲ್ವೊ ಸಮೂಹದ ಮುಖ್ಯಸ್ಥ ಮಾರ್ಟಿನ್ ಲುಂಡ್ ಸ್ಟೆಡ್, ಸಂದೀಪ್ ದೇಶಮುಖ್ ಮತ್ತು ಚಾಣಕ್ಯ ಹೃದಯ, ಯುವ ಸಂಶೋಧಕರ ಕುರಿತು ಝೆರೋದಾ ಸಂಸ್ಥಾಪಕ ನಿಖಿಲ್ ಕಾಮತ್, ಉದ್ಯಮಿಗಳಾದ ಪಾರ್ಥ ಜಿಂದಾಲ್ ಹಾಗೂ ಸುಝಾನಾ ಮುತ್ತೂಟ್ ಮಾತುಕತೆ ನಡೆಸಲಿದ್ದಾರೆ.

ಈ ಬಾರಿಯ ಸಮಾವೇಶದಲ್ಲಿ ಹೆಚ್ಚು ಗೋಷ್ಠಿಗಳನ್ನು ಏರ್ಪಡಿಸಲಾಗಿದೆ, ಇವುಗಳಲ್ಲಿ ಗೂಗಲ್ ಎಕ್ಸ್ ಸಂಸ್ಥಾಪಕ ಸೆಬಾಸ್ಟಿಯನ್ ತ್ರನ್, ಲ್ಯಾಮ್ ರೀಸರ್ಚ್ ಮುಖ್ಯಸ್ಥ ಪ್ಯಾಟ್ರಿಕ್ ಲಾರ್ಡ್, ಜನರಲ್ ಅಟಾಮಿಕ್ಸ್ ಗ್ಲೋಬಲ್ ಕಾರ್ಪೊರೇಷನ್ ಸಿಇಒ ವಿವೇಕ್ ಲಾಲ್, ಟಿವಿಎಸ್ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಸುದರ್ಶನ್ ವೇಣು, ಬೋಯಿಂಗ್ ಕಂಪನಿಯ ಉನ್ನತಾಧಿಕಾರಿ ರಾಬ್ ಬಾಯ್ಡ್, ನಥಿಂಗ್ ಕಂಪಬಿಯ ಸಹ ಸಂಸ್ಥಾಪಕ ಅಕಿಸ್ ಇವ್ಯಾಂಜಿಲೈಡಿಸ್, ಗ್ರೀಸ್ ದೇಶದ ಮಾಜಿ ಪ್ರಧಾನಿ ಜಾರ್ಜ್ ಪೆಪೆಂಡ್ರಿಯೊ ಮುಂತಾದವರು ಮಾತನಾಡಲಿದ್ದಾರೆ ಎಂದು ಪಾಟೀಲ್ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 lakh crore rs. investmentkarnataka summit 2025Minister M B Patil
0 FacebookTwitterPinterestEmail
admin

previous post
ದೆಹಲಿ ಚುನಾವಣೆ ಗೆಲುವು: ರಾಜ್ಯ ಬಿಜೆಪಿ ವಿಜಯೋತ್ಸವ
next post
ಮುಡಾ ತೀರ್ಪು: ನಿರಾಳತೆ ಭಾವದಲ್ಲಿ ಸಿದ್ದರಾಮಯ್ಯ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ