Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯರಾಷ್ಟ್ರ

ಏಕಗವಾಕ್ಷಿ ಪೋರ್ಟಲ್ ಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

by KM Shivaraju February 11, 2025
written by KM Shivaraju February 11, 2025 0 comments 1 minutes read
0FacebookTwitterPinterestEmail
204

ಬೆರಳತುದಿಯಲ್ಲಿ 30 ಇಲಾಖೆಗಳ 150 ಸೇವೆ ಲಭ್ಯ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಯೋಜನೆಗಳಿಗೆ ತ್ವರಿತಗತಿಯಲ್ಲಿ ಅನುಮೋದನೆ ನೀಡಬಲ್ಲ ಮತ್ತು ಉದ್ಯಮಗಳಿಗೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಇಲಾಖೆಗಳ 150 ಸೇವೆಗಳನ್ನು ಒಂದೇ ವೇದಿಕೆಯಲ್ಲಿ ಒದಗಿಸುವಂತಹ ಉದ್ಯಮಸ್ನೇಹಿ ಪರಿಷ್ಕೃತ ಏಕಗವಾಕ್ಷಿ ಪೋರ್ಟಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾಗತಿಕ ಹೂಡಿಕೆದಾರರ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಲೋಕಾರ್ಪಣೆ ಮಾಡಿದರು.

ಮೈಕ್ರೋಸಾಫ್ಟ್ ಕಂಪನಿಯ ನೆರವಿನೊಂದಿಗೆ ಅತ್ಯಾಧುನಿಕ ತಂತ್ರಜ್ಞಾನದ ಬಲದಿಂದ ರೂಪಿಸಿರುವ ಈ ವ್ಯವಸ್ಥೆಯು ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಅನುಮೋದನೆ, ನವೀಕರಣ, ತಿದ್ದುಪಡಿ, ಕುಂದುಕೊರತೆಗಳಿಗೆ ಪರಿಹಾರಗಳನ್ನು ಸರಳಗೊಳಿಸಲಿದ್ದು, ಕ್ಷಿಪ್ರಗತಿಯಲ್ಲಿ ಹೂಡಿಕೆ ನನಸಾಗುವಂತೆ ಮಾಡಲಿದೆ. ಜತೆಗೆ ಹೂಡಿಕೆದಾರರಿಗೆ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಿಗಬೇಕಾದ ಸೇವೆಗಳನ್ನು ಕೂಡ ಇದರ ಮೂಲಕ, ಅಧಿಕಾರಿಶಾಹಿಯ ಅಡೆತಡೆಯಿಲ್ಲದೆ ಪಡೆದುಕೊಳ್ಳಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಇದುವರೆಗೂ ಕೈಗಾರಿಕಾ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳು ಬೇರೆಬೇರೆ ಇಲಾಖೆಗಳಲ್ಲಿ ಚದುರಿ ಹೋಗಿದ್ದವು. ಇದರಿಂದ ಎಲ್ಲವೂ ಮಂದಗತಿಗೆ ಸಿಲುಕಿ ಸ್ತಬ್ಧವಾಗುತ್ತಿದ್ದವು. ಈಗ ರಾಜ್ಯ ಸರ್ಕಾರದ 30 ಇಲಾಖೆಗಳ ಎಲ್ಲ ಸೇವೆಗಳನ್ನೂ ಒಂದೆಡೆ ತರಲಾಗಿದೆ. ಕೃತಕ ಬುದ್ಧಿಮತ್ತೆಯನ್ನು ಆಧರಿಸಿ ವಿನ್ಯಾಸಗೊಳಿಸಿರುವ ಚಾಟ್-ಬಾಟ್ ಸೌಲಭ್ಯದಲ್ಲಿ ಉದ್ಯಮಿಗಳು ತಮಗೆ ಬೇಕಾದ ಸೇವೆ/ಮಾಹಿತಿಗಳನ್ನು ತಮ್ಮ ಇಷ್ಟದ ಭಾಷೆಯಲ್ಲಿ ಬೆರಳತುದಿಯಲ್ಲೇ ಪಡೆದುಕೊಳ್ಳಬಹುದು. ಈ ಸೇವೆಗಳು ಮೊಬೈಲಿನಲ್ಲಿ ಕೂಡ ಸಿಗಲಿವೆ ಎಂದು ವಿವರಿಸಿದ್ದಾರೆ.

ಪ್ರಮಾಣಪತ್ರ ಆಧರಿತ ಅನುಮೋದನೆ

ಈ ಏಕಗವಾಕ್ಷಿ ವ್ಯವಸ್ಥೆಯಡಿ `ಕರ್ನಾಟಕ ಉದ್ಯೋಗ ಮಿತ್ರ’ದ ಮೂಲಕ ಹೂಡಿಕೆದಾರರಿಗೆ ಪ್ರಮಾಣಪತ್ರ ಆಧರಿತ ಅನುಮೋದನೆ (ಎಬಿಸಿ) ನೀಡಲಾಗುವುದು. ಹೀಗಾಗಿ ಉದ್ಯಮಿಗಳು ಅನುಮೋದನೆಗಳಿಗೆ ಕಾಯದೆ, ತಕ್ಷಣವೇ ಕಟ್ಟಡ ಕಾಮಗಾರಿ ಮತ್ತು ಇತರೆ ಸಿದ್ಧತೆ ಆರಂಭಿಸಬಹುದು. ಈ ವ್ಯವಸ್ಥೆಯನ್ನು ರಾಷ್ಟ್ರ ಮಟ್ಟದ ಏಕಗವಾಕ್ಷಿ ವ್ಯವಸ್ಥೆಯೊಂದಿಗೆ ಬೆಸೆಯಲಾಗಿದೆ. ಈ ಪೋರ್ಟಲ್ಲಿನಲ್ಲಿ ಕೈಗಾರಿಕೆಗೆ ಬೇಕಾದ ಭೂಮಿಯ ಹುಡುಕಾಟ, ಮಂಜೂರಾತಿ, ಕಟ್ಟಡ ನಕಾಶೆಗೆ ಅನುಮೋದನೆ ಮುಂತಾದ ಕೆಐಎಡಿಬಿ ಸೇವೆಗಳೂ ಸಿಗಲಿವೆ ಎಂದು ಅವರು ನುಡಿದಿದ್ದಾರೆ.

ಹೊಸ ವ್ಯವಸ್ಥೆಯಲ್ಲಿ ಜಿಐಎಸ್ ಆಧರಿತ ಕೈಗಾರಿಕಾ ಮಾಹಿತಿಯನ್ನೂ ಒದಗಿಸಲಾಗುವುದು. ಹೀಗಾಗಿ ಕೈಗಾರಿಕೆಗೆ ತಮ್ಮ ಸ್ವಂತ ಅಥವಾ ಕಂದಾಯ ಭೂಮಿಯನ್ನು ಉಪಯೋಗಿಸಿಕೊಳ್ಳುವವರಿಗೆ ಅನುಕೂಲವಾಗಲಿದೆ. ನಿರಾಕ್ಷೇಪಣಾ ಪತ್ರ ಇತ್ಯಾದಿಗಳಿಗೆ ವಿಝರ್ಡ್ ತಂತ್ರಜ್ಞಾನವನ್ನುಳ್ಳ ಸಾಧನ ಇದರಲ್ಲಿದೆ. ಹಾಗೆಯೇ, ಉದ್ಯಮಿಗಳು ತಮಗೆ ಸಿಗಲಿರುವ ಪ್ರೋತ್ಸಾಹನಾ ಭತ್ಯೆ, ರಿಯಾಯಿತಿ ಮತ್ತು ವಿನಾಯಿತಿಗಳನ್ನು `ವಿಝರ್ಡ್ ಮತ್ತು ಕ್ಯಾಲ್ಕ್ಯುಲೇಟರ್’ ಮೂಲಕ ತಿಳಿದುಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ

ಹೂಡಿಕೆಯ ವಿಚಾರದಲ್ಲಿ ನೆರೆಹೊರೆ ರಾಜ್ಯಗಳಿಂದ ತೀವ್ರ ಸ್ಪರ್ಧೆ ಇದೆ. ಹೀಗಾಗಿ ಕೈಗಾರಿಕಾ ಯೋಜನೆಗಳ ವಿಚಾರದಲ್ಲಿ ಉಳಿದ ಪ್ರಕ್ರಿಯೆಗಳು ಸುಲಭವೂ ತ್ವರಿತವೂ ಆಗಿರಲೇಬೇಕು. ಇಲ್ಲದಿದ್ದರೆ, ಅವಕಾಶಗಳು ಬೇರೆಯವರ ಪಾಲಾಗುತ್ತವೆ. ಏಕಗವಾಕ್ಷಿ ವ್ಯವಸ್ಥೆ ತರುತ್ತೇವೆಂದು ಮಾತು ಕೊಟ್ಟಿದ್ದೆವು. ಅದು ಈಗ ಈಡೇರಿದೆ. ಇದು ಸುಲಲಿತ ವಾಣಿಜ್ಯ ಸಂಸ್ಕೃತಿಯಲ್ಲಿ ದಾಪುಗಾಲು ಎಂ. ಬಿ.ಪಾಟೀಲ ಅವರು ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
150 business services30 state departmentsChief MinisterGIMInvest Karnataka 25InvestorsKarnataka’sLaunchesRevampedSiddaramaiahSingle Window System
0 FacebookTwitterPinterestEmail
KM Shivaraju

previous post
ಮೈಸೂರು ಗಲಭೆ: ತಪ್ಪಿತಸ್ಥರ ವಿರುದ್ಧ ಕ್ರಮ
next post
ನೂತನ ಕೈಗಾರಿಕಾ ನೀತಿ ಬಿಡುಗಡೆ ಮಾಡಿದ ಡಿಸಿಎಂ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ