Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಹೆಚ್.ಡಿ.ದೇವೇಗೌಡರ ಮನವಿ

by KM Shivaraju February 13, 2025
written by KM Shivaraju February 13, 2025 0 comments 2 minutes read
0FacebookTwitterPinterestEmail
250

ನಗರಗಳಿಗೆ ಹೆಚ್ಚುತ್ತಿರುವ ವಲಸೆ ಬಗ್ಗೆ ಕಳವಳ

ನವದೆಹಲಿ: ಅನಾರೋಗ್ಯದ ನಡುವೆಯೂ ರಾಜ್ಯಸಭೆಯಲ್ಲಿ ಗುರುವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಇಡೀ ರಾಷ್ಟ್ರದ ಎಲ್ಲಾ ವರ್ಗಗಳ ಜನರಿಗೆ ಶಕ್ತಿ ತುಂಬುವ ಆಯವ್ಯಯ ಮಂಡಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಆ ಸಂದರ್ಭದಲ್ಲಿ ಸದನದಲ್ಲಿಯೇ ಹಾಜರಿದ್ದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಎಲ್ಲರಿಗೂ ಅನುಕೂಲ ಆಗುವಂತಹ, ದೇಶದ ಅಭಿವೃದ್ಧಿಗೆ ದೂರದೃಷ್ಟಿಯ ಕೊಡುಗೆ ನೀಡುವಂತಹ ಬಜೆಟ್ ಮಂಡಿಸಿದ್ದೀರಿ ಎಂದರು.

ಜನರ ಹಿತಾಸಕ್ತಿಯನ್ನು ಕಾಪಾಡಲು ವಿತ್ತ ಸಚಿವರು ತಮ್ಮ ಕೈಲಾದ ಎಲ್ಲವನ್ನೂ ಮಾಡಿದ್ದಾರೆ. ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಅವರು ಹೇಳಿದರು.

ನಗರಗಳಿಗೆ ವಲಸೆ ಬಗ್ಗೆ ಕಳವಳ

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಭಾಗದಿಂದ ಯುವಜನರು ನಗರಗಳಿಗೆ ವಲಸೆ ಬರುವ ಪ್ರಮಾಣ ಹೆಚ್ಚುತ್ತಲೇ ಇದೆ ಎಂದು ದೇವೇಗೌಡರು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರಿನ ಜನಸಂಖ್ಯೆ ಈಗ 1.4 ಕೋಟಿಗೆ ಮುಟ್ಟಿದೆ. ಎಲ್ಲಾ ಯುವಕರು ತಮ್ಮ ವಿದ್ಯಾಭ್ಯಾಸ ಮುಗಿದ ತಕ್ಷಣ ಹಳ್ಳಿಗಳನ್ನು ತೊರೆದು ನಗರಗಳಿಗೆ ಬಂದು ಸೇರುತ್ತಿದ್ದಾರೆ. ಇದು ಜೀವನೋಪಾಯದ ಸಮತೋಲನವನ್ನು ತಪ್ಪಿಸುತ್ತಿದೆ. ಯುವಕರಿಗೆ ತಮ್ಮ ಪ್ರದೇಶಗಳಿಗಳಲ್ಲಿಯೇ ಹೆಚ್ಚೆಚ್ಚು ಉದ್ಯೋಗವಕಾಶ ಕಲ್ಪಿಸುವ ಅಗತ್ಯವಿದೆ ಎಂದು ಅವರು ಸಲಹೆ ನೀಡಿದರು.

ಸಮತೋಲಿತ ಜೀವನೋಪಾಯ ಸೃಷ್ಟಿ ಮಾಡುವ ನಿಟ್ಟಿನಲ್ಲಿ ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ಯಮಗಳನ್ನು (MSME) ಬೆಂಬಲಿಸಲು ಹೆಚ್ಚು ಸೂಕ್ತವಾದ ಉಪಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವನ್ನು ಮಾಜಿ ಪ್ರಧಾನಿಗಳು ಒತ್ತಿ ಹೇಳಿದರು.

“ಹಣಕಾಸು ಬೆಂಬಲ ಪಡೆಯುವಲ್ಲಿ ಅತಿಸಣ್ಣ, ಸಣ್ಣ ಕೈಗಾರಿಕೆಗಳು ಮಧ್ಯಮ ಗಾತ್ರದ ಕೈಗಾರಿಕೆಗಳೊಂದಿಗೆ ಸ್ಪರ್ಧಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಈ ಉದ್ದೇಶಕ್ಕಾಗಿ ಪ್ರತ್ಯೇಕ ನೀತಿ, ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯ ತುಂಬಾ ಇದೆ ಎಂದು ಅವರು ತಿಳಿಸಿದರು.

ಅತಿ ಸಣ್ಣ, ಸಣ್ಣ ಕೈಗಾರಿಕೆಗಳಿಗೆ ಸಾಲದ ಅನುಮೋದನೆ ನೀಡುವಾಗ ಸಿಬಿಲ್ (CIBIL) ಸ್ಕೋರ್‌ ಮಾನದಂಡವನ್ನು ಪರಿಗಣಿಸಬಾರದು. ಬಡ್ಡಿದರಗಳನ್ನು ಇಳಿಸಬೇಕು ಮತ್ತು ಆರಂಭಿಕ ಸಾಲ ಮರುಪಾವತಿಗಾಗಿ ಸ್ವತ್ತುಗಳ ಮರುಸ್ವಾಧೀನ ದಂಡ ಪ್ರಯೋಗವನ್ನು ಕೈಬಿಡಬೇಕು ಎಂದು ದೇವೇಗೌಡರು ಸರ್ಕಾರವನ್ನು ಒತ್ತಾಯಿಸಿದರು.

ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಿ

ಕೃಷಿ ಉತ್ಪನ್ನಗಳಿಗೆ ನಾವು ಹೆಚ್ಚು ಬೆಂಬಲ ನೀಡುವುದನ್ನು ನಾವು ಮುಂದುವರಿಸಬೇಕು. ಬಿಹಾರದಲ್ಲಿ ಮಖಾನಾ ಮಂಡಳಿ ರಚನೆ ಮಾಡಿರುವುದನ್ನು ನಾನು ಸ್ವಾಗತ ಮಾಡುತ್ತೇನೆ ಎಂದ ದೇವೇಗೌಡರು, ಅದೇ ರೀತಿ ಹಲಸಿನ ಹಣ್ಣು, ನೇರಳೆ, ಹುಣಸೆಹಣ್ಣು ಮಂಡಳಿ ರಚಿಸಬೇಕು ಎಂದು ಒತ್ತಾಯ ಮಾಡಿದರು.

ಅತಿ ಕಡಿಮೆ ಬಂಡವಾಳದಿಂದ ಮಖಾನಾ ಬೆಳೆಯಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚು ಅನುಕೂಲ ಆಗುತ್ತಿದೆ. ಮಂಡಳಿ ರಚನೆಯಿಂದ ಮತ್ತಷ್ಟು ಅನುಕೂಲ ಆಗುತ್ತದೆ. ಹೀಗಿದ್ದ ಮೇಲೆ ಕನಿಷ್ಠ ಬಂಡವಾಳದಿಂದ ನೈಸರ್ಗಿಕವಾಗಿ ಬೆಳೆಯಲಾಗುವ ಹಲಸಿನ ಹಣ್ಣು, ನೇರಳೆ ಹಾಗೂ ಹುಣಸೆಹಣ್ಣು ಮಂಡಳಿಯನ್ನು ರಚಿಸಬಾರದೇಕೆ ಎಂದು ಅವರು ಸಲಹೆ ನೀಡಿದರು.

ಬೆಂಗಳೂರು ನೀರಿನ ಸಮಸ್ಯೆ ಪ್ರಸ್ತಾಪಿಸಿದ ದೇವೇಗೌಡರು

ರಾಜ್ಯಸಭೆಯಲ್ಲಿ ಮತ್ತೊಮ್ಮೆ ಬೆಂಗಳೂರಿನ ಕುಡಿಯುವ ನೀರಿನ ಬವಣೆಯ ಬಗ್ಗೆ ಗಮನ ಸೆಳೆದರು ಮಾಜಿ ಪ್ರಧಾನಿಗಳು.

ಬೆಂಗಳೂರಿನಲ್ಲಿ ನೀರಿನ ಟ್ಯಾಂಕರ್‌ಗಳು ಬಡ ನಿವಾಸಿಗಳನ್ನು ಶೋಷಿಸುತ್ತಿವೆ ಎಂಬ ಅಂಶವನ್ನು ಸದನದ ಗಮನಕ್ಕೆ ತಂದ ಅವರು, ಹಣಕಾಸು ಸಚಿವರು ಕುಡಿಯುವ ನೀರಿನ ಯೋಜನೆಗಳಿಗೆ 1,400 ಕೋಟಿ ರೂ. ಮಂಜೂರು ಮಾಡಿದ್ದಾರೆ. ಆದರೆ ದೀರ್ಘಾವಧಿಯ ನೀರಿನ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಗೋದಾವರಿ-ಕಾವೇರಿ ಜೋಡಣೆಗೆ ಆದ್ಯತೆ ನೀಡಬೇಕು ಎಂದು ಅವರು ಒತ್ತಿ ಹೇಳಿದರು.

ನದಿ ಜಲ ಸಂಪನ್ಮೂಲ ಸದ್ವಿನಿಯೋಗಕ್ಕೆ ಎಲ್ಲಾ ಪರಿಣಾಮಕಾರಿ ಕ್ರಮಗಳ ಅಗತ್ಯವಿದೆ. ಅದಕ್ಕೆ ದೀರ್ಘಾವಧಿ ಕಾರ್ಯಕ್ರಮಗಳ ಅನುಷ್ಠಾನ ಅಗತ್ಯವಿದೆ. ಈ ನಿಟ್ಟಿನಲ್ಲಿ ಗೋದಾವರಿ-ಕಾವೇರಿ ನದಿ ಜೋಡಣೆ ಯೋಜನೆಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ತಮ್ಮ ಭಾಷಣದ ಕೊನೆಯಲ್ಲಿ ದೀರ್ಘಾವಧಿಯ ಆರ್ಥಿಕ ಸ್ಥಿರತೆಯತ್ತ ಗಮನ ಹರಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರಲ್ಲದೆ, ನಾವು ಅಲ್ಪಾವಧಿಯ ಜನಪರ ಕ್ರಮಗಳನ್ನು ಮೀರಿ ಮುನ್ನಡೆಯಬೇಕು ಮತ್ತು ಭವಿಷ್ಯದ ಪೀಳಿಗೆಗೆ ಆಸ್ತಿಗಳನ್ನು ನಿರ್ಮಿಸಬೇಕು ಎಂದರು.

ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ, ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬೆಂಬಲ ಹಾಗೂ ಅತ್ಯಂತ ಪ್ರಮುಖವಾದ ನೀರಿನ ಭದ್ರತೆಗೆ ಸರ್ಕಾರದ ಕಡೆಯಿಂದ ತಕ್ಷಣದ ಕ್ರಮಗಳು ಆಗಬೇಕಿದೆ ಎಂದು ಅವರು ಪ್ರತಿಪಾದಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Deve GowdaEconomic BalanceFormer PMGodavari-KaveriLinkageMigration CrisisMP EmphasizesMSME SupportRural ReformsSeparate PoliciesSolvingWater CrisisWater Security
0 FacebookTwitterPinterestEmail
KM Shivaraju

previous post
ಬಲವಂತ ಸಾಲ ವಸೂಲಿ: 10 ವರ್ಷ ಜೈಲು, 5 ಲಕ್ಷ ದಂಡ
next post
ಅನಗತ್ಯ ವಿವಿಗಳ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ