Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ಬಲವಂತ ಸಾಲ ವಸೂಲಿ: 10 ವರ್ಷ ಜೈಲು, 5 ಲಕ್ಷ ದಂಡ

by admin February 13, 2025
written by admin February 13, 2025 0 comments 2 minutes read
0FacebookTwitterPinterestEmail
191

ಬೆಂಗಳೂರು:ಬಲವಂತವಾಗಿ ಸಾಲದ ಮೇಲಿನ ಬಡ್ಡಿ ವಸೂಲಿ ಮಾಡುವ ವ್ಯಕ್ತಿಗಳಿಗೆ 10 ವರ್ಷ ಕಾರಾಗೃಹ ಸೆರೆವಾಸ ಹಾಗೂ 5 ಲಕ್ಷ ರೂವೆರೆಗೂ ದಂಡ ವಿಧಿಸಲು ಹೊಸ ಕಾನೂನಿನಲ್ಲಿ ಅವಕಾಶ ಮಾಡಿಕೊಡಲಾಗಿದೆ.

ಮೈಕ್ರೊ ಫೈನಾನ್ಸ್ ಸಂಸ್ಥೆಗಳು ಮತ್ತು ಇತರೆ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಲೇವಾದೇವಿಗಾರರು ವಿಧಿಸುವ ಹೆಚ್ಚಿನ ಬಡ್ಡಿ ದರಗಳಿಂದ ಸಾಲ ಪಡೆದವರಿಗೆ ಆಗುವ ಹೊರೆ ಮತ್ತು ಬಲವಂತದ ವಸೂಲಾತಿ ತಪ್ಪಿಸಲು ರಾಜ್ಯಪಾಲರ ಅಂಕಿತದೊಂದಿಗೆ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯಲ್ಲಿ ಈ ಅಂಶಗಳು ಒಳಗೊಂಡಿವೆ.

ಅಪರಾಧಕ್ಕೆ ಜಾಮೀನು ಇಲ್ಲ

ಇಂತಹ ಅಪರಾಧ ಎಸಗುವರಿಗೆ ಜಾಮೀನು ಇರುವುದಿಲ್ಲ, ಯಾವುದೇ ಪೋಲಿಸ್ ಅಧಿಕಾರಿ ಇಂತಹ ಪ್ರಕರಣಗಳನ್ನು ನೋಂದಣಿ ಮಾಡಿಕೊಳ್ಳಲು ನಿರಾಕರಿಸುವಂತಿಲ್ಲ.

ಸಂಕಷ್ಟಕ್ಕೊಳಗಾದ ವ್ಯಕ್ತಿ ನೀಡದಿದ್ದರೆ, ಡಿವೈಎಸ್‌ಪಿ ಹಾಗೂ ಮೇಲಿನ ಅಧಿಕಾರಿಗಳು ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರ ನೀಡಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಮಾತ್ರ ಈ ಆಧ್ಯಾದೇಶ ಅನ್ವಯವಾಗುತ್ತದೆ.

ಪ್ರತಿಷ್ಠೆಗೆ ತಿರುಗಿದ ಬಿಜೆಪಿ ಬಣ ಬಡಿದಾಟ
ನೋಂದಾಯಿತವಲ್ಲದ ಸಂಸ್ಥೆಗಳಿಗೆ ಅನ್ವಯ

ಈ ಸುಗ್ರೀವಾಜ್ಞೆಯಿಂದ ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೊ ಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲ ಪಡೆದವರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪತ್ರಿಕಾ ಹೇಳಿಕೆ ನೀಡಿ, ಸುಗ್ರೀವಾಜ್ಞೆಯಲ್ಲಿರುವ ಪ್ರಮುಖ ಅಂಶಗಳನ್ನು ಜನರಿಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದಾರೆ.

ಕರ್ನಾಟಕ ಕಿರು (ಮೈಕ್ರೊ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಆಧ್ಯಾದೇಶ-2025 ಫೆಬ್ರವರಿ 12 ರಿಂದಲೇ ಜಾರಿಗೆ ಬಂದಿದೆ.

ಕಿರುಕುಳ ತಪ್ಪಿಸಲು ಸಹಾಯಕ

ಇದರಿಂದ ವಿಶೇಷವಾಗಿ ದುರ್ಬಲರು, ಮಹಿಳೆಯರು ಮತ್ತು ರೈತರು, ಮಹಿಳಾ ಸ್ವಸಹಾಯ ಸಂಘಗಳಿಗೆ ಸಾಲ ಮರುಪಾವತಿ ವಿಷಯದಲ್ಲಿ ಕಿರುಕುಳ ತಪ್ಪಿಸಲು ಸಹಾಯಕವಾಗಿರುತ್ತದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾಲ ನೀಡುವ ವೇಳೆ ಯಾವುದೇ ಭದ್ರತೆ ಪಡೆಯುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಗ್ರಾಹಕರಿಗೆ ವಿಧಿಸುವ ಬಡ್ಡಿ ದರದ ಬಗ್ಗೆ ಪಾರದರ್ಶಕವಾಗಿ ಸಾಲಗಾರರಿಗೆ ಲಿಖಿತ ರೂಪದಲ್ಲಿ ತಿಳಿಸುವಂತೆ ಆದೇಶಿಸಲಾಗಿದೆ.

ಹೊಸಕೋಟೆ ವೋಲ್ವೊ ವಿಸ್ತರಣೆಗೆ 1,400 ಕೋಟಿ ರೂ.
40,000 ಕೋಟಿ ರೂ. ಸಾಲ

ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಅಂದಾಜು 60,000 ಕೋಟಿ ರೂ. ಸಾಲವನ್ನು ಸುಮಾರು 1.09 ಕೋಟಿ ಸಾಲಗಾರರು ಪಡೆದಿದ್ದು, ನೋಂದಣಿಯಾಗದ ಸಂಸ್ಥೆಗಳಿಂದ ಸಾಲ ಪಡೆದವರ ಪೂರ್ಣ ವಿವರವಾಗಿ ಇಲ್ಲವಾದರೂ, ಅಂದಾಜು 40,000 ಕೋಟಿ ರೂ.ವರೆಗೆ ಸಾಲ ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಆಯಾ ಜಿಲ್ಲಾಧಿಕಾರಿಗಳಲ್ಲಿ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ, ಸದರಿ ಸಂಸ್ಥೆಗಳು ತಾವು ವಿಧಿಸುವ ಬಡ್ಡಿ ದರ, ಸಾಲಗಾರರ ಮಾಹಿತಿ, ಸುಸ್ಥಿ ಸಾಲಗಳ ವಿವರ ಮುಂತಾದವುಗಳನ್ನು ಜಿಲ್ಲಾಧಿಕಾರಿಗೆ ನೀಡಬೇಕಾಗಿರುತ್ತದೆ.

ಜಿಲ್ಲಾಧಿಕಾರಿಗಳಿಗೆ ತ್ರೈಮಾಸಿಕ ಮತ್ತು ವಾರ್ಷಿಕ ವ್ಯವಹಾರದ ವಿವರಗಳನ್ನು ಈ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಲ್ಲಿಸಬೇಕು, ಮಾಹಿತಿ ಸಲ್ಲಿಸದಿದ್ದಲ್ಲಿ, 6 ತಿಂಗಳ ಕಾರಾಗೃಹ ವಾಸ ಅಥವಾ 10,000 ರೂ.ಗಳವರೆಗೆ ವಿಸ್ತರಿಸಬಹುದಾದ ದಂಡ (ಜುಲ್ಮಾನೆ) ಅಥವಾ ಅವೆರಡರಿಂದಲೂ ದಂಡಿತರಾಗುತ್ತಾರೆ.

ಒಂಬುಡ್ಸ್‌ಮನ್ ನೇಮಕ

ಸಾಲ ವಿವಾದಗಳ ಇತ್ಯರ್ಥ್ಯಕ್ಕೆ ಒಂಬುಡ್ಸ್‌ಮನ್‌ಗಳನ್ನು ಅಧಿಸೂಚನೆ ಮೂಲಕ ಸರ್ಕಾರ ನೇಮಕ ಮಾಡಬಹುದಾಗಿದೆ.

ಈ ಅಪರಾಧಗಳು ಸಂಜ್ಞೇಯ ಹಾಗೂ ಜಾಮೀನುರಹಿತ ಅಪರಾಧ (ಕಾಗ್ನೆಸೆಬಲ್ ಮತ್ತು ನಾನ್‌ಬೇಲೆಬಲ್) ಆಗಿರುತ್ತವೆ, ಯಾವುದೇ ಪೋಲೀಸ್ ಅಧಿಕಾರಿ ಇಂತಹ ಪ್ರಕರಣಗಳ ನೋಂದಣಿಯನ್ನು ನಿರಾಕರಿಸುವಂತಿಲ್ಲ.

ಪೋಲೀಸ್ ಉಪಅಧೀಕ್ಷಕರ ದರ್ಜೆಗೆ ಕಡಿಮೆಯಿಲ್ಲದ ಅಧಿಕಾರಿಯು ಸ್ವಪ್ರೇರಿತ ಪ್ರಕರಣ ದಾಖಲಿಸಬಹುದು.

ಕಾಲಕಾಲಕ್ಕೆ ನಿರ್ದೇಶನ

ಸರ್ಕಾರ ಕಾಲಕಾಲಕ್ಕೆ ಆಧ್ಯಾದೇಶದ ಅನುಷ್ಠಾನಕ್ಕಾಗಿ ನಿರ್ದೇಶನಗಳನ್ನು ನೀಡುವ ಅಧಿಕಾರ ಹೊಂದಿರುತ್ತದೆ.

ಈ ಆಧ್ಯಾದೇಶದಿಂದ ಭಾರತೀಯ ರಿಸರ್ವ್ ಬ್ಯಾಂಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ನೋಂದಾಯಿತವಲ್ಲದ ಮೈಕ್ರೋ ಫೈನಾನ್ಸ್ ಸಂಸ್ಥೆಗಳಲ್ಲಿ ಆರ್ಥಿಕ ಶಿಸ್ತು ಹೆಚ್ಚುತ್ತದೆ ಮತ್ತು ಸಾಲಗಾರರಿಗೆ ಕಿರುಕುಳ, ಬಲವಂತದ ವಸೂಲಿ ಕ್ರಮಗಳಿಂದ ಮುಕ್ತಿ ದೊರೆಯುತ್ತದೆ ಎಂಬುದು ಸರ್ಕಾರದ ವಿಶ್ವಾಸವಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 years jail5 lakhs rs. finecm siddaramaiahmicro finance ordinance
0 FacebookTwitterPinterestEmail
admin

previous post
ಪ್ರತಿಷ್ಠೆಗೆ ತಿರುಗಿದ ಬಿಜೆಪಿ ಬಣ ಬಡಿದಾಟ
next post
ಗೋದಾವರಿ – ಕಾವೇರಿ ನದಿಗಳ ಜೋಡಣೆಗೆ ಹೆಚ್.ಡಿ.ದೇವೇಗೌಡರ ಮನವಿ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ