Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಉದ್ಯೋಗರಾಜ್ಯರಾಷ್ಟ್ರ

10.27 ಲಕ್ಷ ಕೋಟಿ ರೂ. ಹೂಡಿಕೆ; 6 ಲಕ್ಷ ಉದ್ಯೋಗ ಖಾತ್ರಿ

by KM Shivaraju February 14, 2025
written by KM Shivaraju February 14, 2025 0 comments 2 minutes read
0FacebookTwitterPinterestEmail
145

ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ ಶೇ. 75ರಷ್ಟು, ಬಂಡವಾಳ ಹೂಡಿಕೆ

ಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮತ್ತು 6 ಲಕ್ಷ ಉದ್ಯೋಗ ಸೃಷ್ಟಿ ಖಾತ್ರಿಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ. ಬಿ.ಪಾಟೀಲ ಶುಕ್ರವಾರ ಹೇಳಿದ್ದಾರೆ.

ಸಮಾವೇಶಕ್ಕೆ ತೆರೆ ಬಿದ್ದ ಬಳಿಕ ಅವರು ಅರಮನೆ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವಲಯವಾರು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದರು. ಜತೆಯಲ್ಲಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಉಪಸ್ಥಿತರಿದ್ದರು.

ಹೂಡಿಕೆದಾರರ ಸಮಾವೇಶದ ಸಾಧನೆಗಳ ಬಗ್ಗೆ ಮಾತನಾಡಿದ ಸಚಿವರು, `ಇನ್ನೂ ಕೆಲವು ಪ್ರತಿಷ್ಠಿತ ಕಂಪನಿಗಳು ಭಾರೀ ಹೂಡಿಕೆಗೆ ಆಸಕ್ತಿ ತೋರಿದ್ದು, ಒಡಂಬಡಿಕೆ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇವು ಆಖೈರಾದರೆ ಸಮಾವೇಶದ ಮೂಲಕ ಬರಲಿರುವ ಬಂಡವಾಳದ ಮೊತ್ತ ಇನ್ನೂ ಗಮನಾರ್ಹವಾಗಿ ಏರಲಿದೆ. ಈಗ ಖಾತ್ರಿಯಾಗಿರುವ ಹೂಡಿಕೆಯಲ್ಲಿ ಶೇಕಡ 75ರಷ್ಟು ಬೆಂಗಳೂರಿನ ಆಚೆ ಇರುವ ಪ್ರದೇಶಗಳಿಗೆ ಹೋಗಲಿದ್ದು, ಶೇಕಡ 45ರಷ್ಟು ಬಂಡವಾಳವು ಉತ್ತರ ಕರ್ನಾಟಕದ ಪ್ರದೇಶಗಳಿಗೆ ಹರಿಯಲಿದೆ’ ಎಂದರು.

ಸೃಷ್ಟಿಯಾಗಲಿರುವ 6 ಲಕ್ಷ ಉದ್ಯೋಗಗಳು ತಯಾರಿಕೆ ಮತ್ತು ಇಂಧನ ಉತ್ಪಾದನೆ ಕ್ಷೇತ್ರಕ್ಕೆ ಸೇರಿವೆ. ಹೂಡಿಕೆಗಳಲ್ಲಿ ಜಿಂದಾಲ್ ಸಮೂಹವು ಇಂಧನ, ಸಿಮೆಂಟ್, ಉಕ್ಕು ಮತ್ತು ಪೂರಕ ಉದ್ಯಮಗಳಲ್ಲಿ 1.2 ಲಕ್ಷ ಕೋಟಿ ರೂ. ಹೂಡುತ್ತಿದೆ. ಬಲ್ದೋಟಾ ಸಮೂಹವು ಕೊಪ್ಪಳದಲ್ಲಿ 54 ಸಾವಿರ ಕೋಟಿ ರೂ. ಹೂಡಿಕೆಯೊಂದಿಗೆ ಕೊಪ್ಪಳದಲ್ಲಿ ಉಕ್ಕು ತಯಾರಿಕಾ ಘಟಕವನ್ನು ಸ್ಥಾಪಿಸುತ್ತಿದೆ. ಲ್ಯಾಮ್ ರೀಸರ್ಚ್ ಕಂಪನಿಯು ತಯಾರಿಕೆ ಮತ್ತು ಸಂಶೋಧನೆಗೆ 10 ಸಾವಿರ ಕೋಟಿ ರೂ.ಗಳಷ್ಟು ಬೃಹತ್ ಬಂಡವಾಳ ತೊಡಗಿಸುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಿಕ್ಕಂತೆ, ಸ್ನೀಡರ್ ಎಲೆಕ್ಟ್ರಿಕ್ ಸಂಸ್ಥೆಯು ವಿದ್ಯುತ್ ಸಾಧನಗಳ ತಯಾರಿಕೆ ಮತ್ತು ಸಂಶೋಧನೆಗೆ 2,247 ಕೋಟಿ ರೂ, ವೋಲ್ವೊ ಕಂಪನಿಯು ವಿದ್ಯುಚ್ಚಾಲಿತ ಬಸ್/ಟ್ರಕ್ ತಯಾರಿಕೆಗೆ 1,400 ಕೋಟಿ ರೂ, ಹೋಂಡಾ ಕಂಪನಿಯು ಇ.ವಿ. ವಾಹನಗಳ ತಯಾರಿಕೆಗೆ 600 ಕೋಟಿ ರೂ. ಮತ್ತು ಸ್ಯಾಫ್ರಾನ್ ಕಂಪನಿಯು ಏವಿಯಾನಿಕ್ಸ್ ಉತ್ಪಾದನೆಗೆ 225 ಕೋಟಿ ರೂ. ಹೂಡುತ್ತಿವೆ. 2025-30ರವರೆಗಿನ ನೂತನ ಕೈಗಾರಿಕಾ ನೀತಿಯಡಿ ಒಟ್ಟಾರೆಯಾಗಿ 20 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಇಟ್ಟುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಹೊಸ ನೀತಿಯಡಿಯಲ್ಲಿ ತುಮಕೂರು ಮತ್ತು ವಿಜಯಪುರದಲ್ಲಿ ಕೈಗಾರಿಕಾ ಪಾರ್ಕ್, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ ಪಾರ್ಕ್, ಉಳಿದ ಭಾಗಗಳಲ್ಲಿ ಡೀಪ್-ಟೆಕ್ ಪಾರ್ಕ್ ಮತ್ತು ಸ್ವಿಫ್ಟ್ ಸಿಟಿ ಮುಂತಾದವು ಅಸ್ತಿತ್ವಕ್ಕೆ ಬರಲಿವೆ. ಡೀಪ್ ಟೆಕ್ ಮತ್ತು ಸ್ವಿಫ್ಟ್ ಸಿಟಿ ಯೋಜನೆಗಳು ತಲಾ 1 ಲಕ್ಷ ಕೋಟಿ ರೂ. ಹೂಡಿಕೆ ಸೆಳೆಯುವ ಮತ್ತು ತಲಾ 1 ಲಕ್ಷ ಉದ್ಯೋಗ ಸೃಷ್ಟಿಸುವಂತಹ ಧಾರಣಾಶಕ್ತಿ ಹೊಂದಿವೆ. ಕ್ವಿನ್ ಸಿಟಿ ಅಭಿವೃದ್ಧಿಗೆ ಸಂಬಂಧಿಸಿದಂತೆ 10 ವಿ.ವಿ.ಗಳೊಂದಿಗೆ ಒಡಂಬಡಿಕೆಗೆ ಅಂಕಿತ ಹಾಕಲಾಗಿದೆ ಎಂದು ಪಾಟೀಲ ನುಡಿದರು.

ಕ್ವಿನ್ ಸಿಟಿ: 10 ಒಪ್ಪಂದಕ್ಕೆ ಸಹಿ

ಮಹತ್ವಾಕಾಂಕ್ಷೆಯ ಕ್ವಿನ್ ಸಿಟಿ ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಒಟ್ಟು 10 ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದರಲ್ಲಿ ಅಮೆರಿಕಾದ ನ್ಯೂಯಾರ್ಕ್ ನ ಸೇಂಟ್ ಜಾನ್ಸ್ ಯೂನಿವರ್ಸಿಟಿ ಹಾಗೂ ಯೂನಿವರ್ಸಿಟಿ ಆಫ್ ಲಿವರ್ ಪೂಲ್ ಜತೆಗೂ ಒಪ್ಪಂದಕ್ಕೆ ಸಹಿ ಮಾಡಲಾಗಿದೆ ಎಂದು ಅವರು ವಿವರಿಸಿದರು.

ಯಜಿಲ್ಲೆಗೆ 42 ಸಾವಿರ ಕೋಟಿ

ವಿಜಯಪುರ ಜಿಲ್ಲೆಯಲ್ಲಿ 42 ಸಾವಿರ ಕೋಟಿ ಹೂಡಿಕೆಗೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿದೆ. ಇನ್ನೂ ಕೆಲವು ಒಪ್ಪಂದ ಆಗುವುದರಲ್ಲಿ ಇದ್ದು, ಉತ್ತರ ಕರ್ನಾಟಕಕ್ಕೆ ಒಳ್ಳೆಯ ಅವಕಾಶಗಳು ಮುಂದಿನ ದಿನಗಳಲ್ಲಿ ಸಿಗಲಿವೆ ಎಂದು ಸಚಿವರು ಹೇಳಿದರು.

ಬಿಯಾಂಡ್ ಬೆಂಗಳೂರು ಉಪಕ್ರಮಕ್ಕೆ ಉತ್ತೇಜನ: ಶಿವಕುಮಾರ್

ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದ್ದು, 1.10 ಲಕ್ಷ ನೋಂದಾಯಿತ ವಾಹನಗಳಿದ್ದು, ಇದು ನಗರದ ಜನಜೀವನದ ಮೇಲೆ ವಿಪರೀತ ಒತ್ತಡ ಸೃಷ್ಟಿಸಿದೆ. ಆದ್ದರಿಂದ ಕೈಗಾರಿಕೆಗಳು ಬೆಂಗಳೂರಿನಿಂದ ಹೊರಗಿರುವ ಪ್ರದೇಶಗಳಿಗೆ ಹೋಗುವುದನ್ನು ಉತ್ತೇಜಿಸಲಾಗುತ್ತಿದೆ. ಇದಕ್ಕಾಗಿ ವಿಶೇಷ ಪ್ರೋತ್ಸಾಹವನ್ನೇ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೂ ಹೊಸ ನೀತಿ ತರಲಾಗಿದೆ. ವಿಶೇಷವಾಗಿ ರಾಜ್ಯದ 300 ಕಿ.ಮೀ. ಉದ್ದದ ಕರಾವಳಿ ತೀರದಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಗಮನ ಹರಿಸಲಿದ್ದೇವೆ. ಜತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ನೆರವಿಗೆ ಪೋರ್ಟಲ್ ಆರಂಭಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ರಾಜ್ಯದಲ್ಲಿ ಭೂಮಿಯ ಬೆಲೆ ಜಾಸ್ತಿ ಇದೆ. ಹೀಗಾಗಿ ಉದ್ಯಮಿಗಳಿಗೆ ನೆರವು ನೀಡುವ ಬೇರೆ ಬೇರೆ ಕ್ರಮಗಳತ್ತ ಚಿಂತಿಸಲಾಗುತ್ತಿದೆ. ನಾವು ಹೂಡಿಕೆಯಲ್ಲಿ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುತ್ತಿದ್ದೇವೆಯೇ ವಿನಾ ನೆರೆಹೊರೆಯ ರಾಜ್ಯಗಳ ಜತೆಯಲ್ಲ. ಭೂಮಿಯ ಬೆಲೆ ಹೆಚ್ಚಾಗಲು ಇದೂ ಒಂದು ಕಾರಣವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
6 Lakh JobsannouncedGIMGlobal Investors MeetInvest Karnataka 25karnatakaLarge and Medium Industriesm b patilministerRs 10.27 Lakh Crore Investment
0 FacebookTwitterPinterestEmail
KM Shivaraju

previous post
ಕರ್ನಾಟಕ ನಂಬಿದವರು ಬರಿಗೈಯಲ್ಲಿ ಹೋಗುವುದಿಲ್ಲ
next post
ಶಿವಕುಮಾರ್ ಮುಖ್ಯಮಂತ್ರಿಯಾದರೆ ಪಕ್ಷ ಬಿಡುತ್ತೇವೆ !

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ