Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, June 11, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

170 ರೂ. ಬದಲು ಫೆಬ್ರವರಿಯಿಂದಲೇ ಅನ್ನಭಾಗ್ಯ ಅಕ್ಕಿ

by admin February 19, 2025
written by admin February 19, 2025 0 comments 3 minutes read
0FacebookTwitterPinterestEmail
114

ಬೆಂಗಳೂರು:ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣಕ್ಕೆ ಬದಲು ಫೆಬ್ರವರಿ ತಿಂಗಳಿನಿಂದಲೇ ಐದು ಕೆ.ಜಿ. ಅಕ್ಕಿ ವಿತರಿಸಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ಇಂದಿಲ್ಲಿ ಪ್ರಕಟಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ನೀಡುತ್ತಿದ್ದ ಐದು ಕೆ.ಜಿ. ಅಕ್ಕಿ ಜೊತೆಗೆ ಅನ್ನಭಾಗ್ಯ ಯೋಜಯಡಿ ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ ಐದು ಕೆ.ಜಿ. ಅಕ್ಕಿ ನೀಡಲಾಗುವುದು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾಗಿದ್ದ ಅಕ್ಕಿ ಪೂರೈಸದ ಕಾರಣ ಈ ಯೋಜನೆಯಡಿ ಅಕ್ಕಿ ಬದಲು ಪ್ರತಿ ಫಲಾನುಭವಿಗೆ ಮಾಸಿಕ 170 ರೂ.ಗಳನ್ನು ನೀಡಲಾಗುತ್ತಿತ್ತು.

ಜನವರಿವರೆಗೂ ಹಣ

ಕಳೆದ ಜನವರಿವರೆಗೂ ಹಣವನ್ನು ಫಲಾನುಭವಿ ಖಾತೆಗೆ ವರ್ಗಾವಣೆ ಮಾಡಲಾಗುವುದು, ಈ ತಿಂಗಳಿಂದ ನಗದು ಬದಲು ಅಕ್ಕಿ ನೀಡಲು ತೀರ್ಮಾನಿಸಲಾಗಿದೆ.

ಮಾರ್ಚ್ 10ರೊಳಗಾಗಿ ಫಲಾನುಭವಿಗಳಿಗೆ ಎರಡು ತಿಂಗಳ ಅಕ್ಕಿಯೂ ದೊರೆಯಲಿದೆ, ಎಂದಿನಂತೆ ಪಡಿತರ ಅಂಗಡಿಗಳಲ್ಲಿ ಅಕ್ಕಿ ಪಡೆದುಕೊಳ್ಳಬಹುದಾಗಿದೆ.

ಸರ್ಕಾರದ ಈ ನಿರ್ಧಾರದಿಂದ ರಾಜ್ಯ ಬೊಕ್ಕಸಕ್ಕೆ ನೂರಾರು ಕೋಟಿ ರೂ. ಉಳಿತಾಯ ಆಗಲಿದೆ, ಕೇಂದ್ರ ಸರ್ಕಾರ ಪ್ರತಿ ಕೆ.ಜಿ.ಗೆ 22.50 ರೂ.ನಂತೆ ಅಕ್ಕಿ ಕೊಡಲು ಮುಂದೆ ಬಂದಿದೆ.

ಫಲಾನುಭವಿಗಳಿಗೆ ಇದುವರೆಗೆ ಅಕ್ಕಿ ಬದಲು ಪ್ರತಿ ಕೆ.ಜಿ.ಗೆ 34 ರೂ.ನಂತೆ ಮಾಸಿಕ 170 ರೂ. ನೀಡುತ್ತಿದ್ದೆವು.

ಕಡಿಮೆ ದರಕ್ಕೆ ಕೇಂದ್ರದ ಅಕ್ಕಿ

ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್ ಜೋಷಿ, ರಾಜ್ಯಕ್ಕೆ ಅಗತ್ಯವಿರುವ ಅಕ್ಕಿಯನ್ನು ಕಡಿಮೆ ದರಕ್ಕೆ ನೀಡಲು ತೀರ್ಮಾನಿಸಿರುವುದರಿಂದ, ನಮಗೆ ಪ್ರತಿ ಕೆ.ಜಿ.ಗೆ 11.50 ರೂ. ಉಳಿತಾಯವಾಗಲಿದೆ ಎಂದರು.

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದಾಗ ನಮಗೆ ಅಗತ್ಯವಿರುವ ಅಕ್ಕಿಯನ್ನು ನೀಡಲು ಕೇಂದ್ರ ನಿರಾಕರಿಸಿದ್ದರಿಂದ ಪ್ರತಿ ಫಲಾನುಭವಿಗೆ ಮಾಸಿಕ 170 ರೂ.ಗಳನ್ನು ಅವರ ಬ್ಯಾಂಕ್ ಖಾತೆಗೆ ವರ್ಗವಣೆ ಮಾಡುತ್ತಿದ್ದೆವು.

ಕಳೆದ ನವೆಂಬರ್‌ವರೆಗೆ ಹಣ ಸಂದಾಯವಾಗಿದೆ, ಡಿಸೆಂಬರ್ ಮತ್ತು ಜನವರಿ ತಿಂಗಳ ಹಣ ವರ್ಗಾವಣೆಗೆ ಸಿದ್ಧತೆ ನಡೆದಿದೆ.

‘ಆಲ್ ಈಸ್ ವೆಲ್’ ನಾಟಕ ಬಿಡಿ, ಶ್ವೇತಪತ್ರ ಕೊಡಿ
ಒಟ್ಟು 10 ಕೆ.ಜಿ. ಉಚಿತ ಅಕ್ಕಿ

ಇನ್ನು ಮುಂದೆ ಹಣದ ಬದಲು ಪ್ರತಿ ಫಲಾನುಭವಿ ಮಾಸಿಕ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ಪಡೆದುಕೊಳ್ಳಲಿದ್ದು, ಇದರಲ್ಲಿ ಕೇಂದ್ರದ ಐದು ಕೆ.ಜಿ. ಮತ್ತು ರಾಜ್ಯ ಸರ್ಕಾರದ ಐದು ಕೆ.ಜಿ. ಸೇರಿದೆ.

ಕಳೆದ ಅಕ್ಟೋಬರ್‌ನಲ್ಲಿ 1,16,39,179 ಪಡಿತರ ಚೀಟಿಗಳ 4,12,16,838 ಫಲಾನುಭವಿಗಳಿಗೆ 676.79 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ.

ಜುಲೈ 2023ರಿಂದ ಅಕ್ಟೋಬರ್ 2024ರವರೆಗೆ 10,452 ಕೋಟಿ ರೂ. ವರ್ಗಾವಣೆ ಮಾಡಲಾಗಿದ್ದು, ನವೆಂಬರ್, ಡಿಸೆಂಬರ್ ಮತ್ತು ಜನವರಿ ಹಣ ವರ್ಗಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.

ಆಹಾರ ಭದ್ರತಾ ಕಾಯ್ದೆ

ಭಾರತ ಸರ್ಕಾರ 2013ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ನು ಮೊಟ್ಟ ಮೊದಲು ಜಾರಿಗೆ ತಂದ ರಾಜ್ಯ ಕರ್ನಾಟಕವಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಮೊದಲ ಮತ್ತು ಎರಡನೇ ಆಡಳಿತಾವಧಿಯಲ್ಲಿ ಅನ್ನಭಾಗ್ಯ ಯೋಜನೆಗೆ ಪ್ರಾಮುಖ್ಯತೆ ನೀಡುವ ಮೂಲಕ ಕರ್ನಾಟಕವನ್ನು ಹಸಿವುಮುಕ್ತ ರಾಜ್ಯವನ್ನಾಗಿಸಿರುವುದು ಹೆಮ್ಮೆಯ ವಿಷಯ ಎಂದರು.

ರಾಗಿ, ಜೋಳ, ಭತ್ತ ಖರೀದಿ

ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ, ಜೋಳ ಮತ್ತು ಭತ್ತ ಖರೀದಿಗೆ 366 ಕೇಂದ್ರ ತೆರೆಯಲಾಗಿದೆ, ಕಳೆದ ಡಿಸೆಂಬರ್ 1 ರಿಂದಲೇ ನೋಂದಣಿ ಮಾಡಿಕೊಳ್ಳಲು ರೈತರಿಗೆ ಅವಕಾಶ ಕಲ್ಪಿಸಲಾಗಿದ್ದು, ಈ ವರ್ಷದ ಮಾರ್ಚ್ ಅಂತ್ಯದವರೆಗೆ ನೋಂದಣಿ ಪ್ರಕ್ರಿಯೆ ಪ್ರಗತಿಯಲ್ಲಿರುತ್ತದೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಖರೀದಿ ಏಜೆನ್ಸಿಗಳಾಗಿ ಕಾರ್ಯನಿರ್ವಹಿಸುತ್ತಿವೆ.

ಕೇಂದ್ರ ಸರ್ಕಾರ ರಾಗಿಗೆ ಕನಿಷ್ಠ ಬೆಂಬಲ ಬೆಲೆಯನ್ನು 4,290 ರೂ.ಗೆ ನಿಗದಿಪಡಿಸಿದೆ, ಖರೀದಿ ಗುರಿ4.40 ಲಕ್ಷ ಮೆಟ್ರಿಕ್ ಟನ್‌ಗಳಾಗಿದೆ, 3.6 ಲಕ್ಷ ಮೆಟ್ರಿಕ್ ಟನ್ ರಾಗಿ ನೀಡಲು 2,54,528 ರೈತರು ನೋಂದಾಯಿಸಿಕೊಂಡಿದ್ದು, ಪ್ರತಿ 10 ರೈತರಿಂದ ಗರಿಷ್ಠ 20 ಕ್ವಿಂಟಾಲ್ ಖರೀದಿಸಲು ಕ್ರಮ ವಹಿಸಲಾಗಿದೆ.

ಕನಿಷ್ಠ ಬೆಂಬಲ ಬೆಲೆ

ಸಾಮಾನ್ಯ ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ 2,300 ರೂ., “ಎ” ಗ್ರೇಡ್ ಭತ್ತಕ್ಕೆ 2,320 ರೂ. ನಿಗದಿಯಾಗಿದ್ದು, ಖರೀದಿ ಗುರಿ 7.5 ಲಕ್ಷ ಮೆಟ್ರಿಕ್ ಟನ್‌ಗಳಾಗಿದೆ, ಭತ್ತ ನೀಡಲು 3,388 ರೈತರು ನೋಂದಾಯಿಸಿಕೊಂಡಿದ್ದು, ಪ್ರತಿ ರೈತರಿಂದ 50 ಕ್ವಿಂಟಾಲ್ ಖರೀದಿಗೆ ಕ್ರಮ ವಹಿಸಲಾಗಿದೆ.

ಹೈಬ್ರೀಡ್ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ 3,371 ರೂ., ಮಾಲ್ಡಂಡಿ ಜೋಳಕ್ಕೆ 3,421 ರೂ., ಖರೀದಿ ಗುರಿ ಒಂದು ಲಕ್ಷ ಮೆಟ್ರಿಕ್ ಟನ್ ನಿಗದಿಯಾಗಿದ್ದು, 17,527 ರೈತರು ನೋಂದಾಯಿಸಿಕೊಂಡಿದ್ದು, ಪ್ರತಿ ರೈತರಿಂದ 150 ಕ್ವಿಂಟಾಲ್‌ನಂತೆ ಖರೀದಿಸಲಾಗುವುದು.

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಲೋಪ ಕಂಡು ಬಂದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.

ಆಹಾರ ಇಲಾಖೆ ಕಛೇರಿಗಳ ಸಂಕೀರ್ಣ ಆಹಾರಸೌಧವನ್ನು 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ, ಅನರ್ಹ ಪಡಿತರ ಚೀಟಿ ಪತ್ತೆ ಹಚ್ಚಿ ರದ್ದುಗೊಳಿಸಲಾಗುತ್ತಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
anna bhagya rice from februaryfood and civil suppliesminister k h muniyappa
0 FacebookTwitterPinterestEmail
admin

previous post
‘ಆಲ್ ಈಸ್ ವೆಲ್’ ನಾಟಕ ಬಿಡಿ, ಶ್ವೇತಪತ್ರ ಕೊಡಿ
next post
ಜಮೀನು ಸರ್ವೆ ರಾಜಕೀಯ ಸೇಡಿನ ಭಾಗ : ಕುಮಾರಸ್ವಾಮಿ

You may also like

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (486)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,980)
  • ರಾಜ್ಯ (2,294)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026

KMS Special

  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

    June 8, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ