Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜ್ಯರಾಷ್ಟ್ರ

ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ

by KM Shivaraju February 20, 2025
written by KM Shivaraju February 20, 2025 0 comments 2 minutes read
0FacebookTwitterPinterestEmail
230

ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಸೂಚನೆ

ಬೆಂಗಳೂರು : ಪ್ರಸ್ತುತ ವರ್ಷ ಫೆಬ್ರವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕವಾಗಿದ್ದರೆ, ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ.
ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಪಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಪ್ರಸ್ತುತ 2025 ನೇ ಸಾಲಿನ ಹಿಂಗಾರು -ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಚರ್ಚಿಸಲಾಯಿತು.

ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, “ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದೆ. ಏಪ್ರಿಲ್, ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗಲಿದೆ. ಫೆಬ್ರವರಿ,ಮಾರ್ಚ್ ತಿಂಗಳ ಕೊನೆಯ ವಾರದಲ್ಲೂ ಹೆಚ್ಚು ಮಳೆ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ಪ್ರಸ್ತುತ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗಲಿದೆ” ಎಂದು ಮಾಹಿತಿ ನೀಡಿದರು.

ಪ್ರಸ್ತುತ ವರ್ಷ ಫೆಬ್ರವರಿಯಲ್ಲೇ ಬಿಸಿಲಿನ ತಾಪ ಹೆಚ್ಚಾಗಿದೆ. ಈ ಪ್ರಮಾಣ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖವಾಗುವ ಸಾಧ್ಯತೆ ಇದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ವೇಳೆ ರಾಜ್ಯಾದ್ಯಂತ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕಾ ಕ್ರಮಗಳನ್ನು ವಹಿಸುವಂತೆ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

ಜಲಾಶಯಗಳಲ್ಲಿನ ನೀರಿನ ಮಟ್ಟ

ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಸಂಗ್ರಹಣೆ ಕುರಿತು ಉಪ ಸಮಿತಿಯಲ್ಲಿ ಕೂಲಂಕುಶವಾಗಿ ಪರಿಶೀಲಿಸಲಾಯಿತು. ರಾಜ್ಯದಲ್ಲಿನ ಪ್ರಮುಖ 14 ಜಲಾಶಯಗಳಲ್ಲಿ ಪ್ರಸ್ತುತ ಒಟ್ಟು 535.21 ಟಿ.ಎಂ.ಸಿ. ಅಡಿ ನೀರಿನ ಸಂಗ್ರಹಣೆಯಿದ್ದು, ಸರಾಸರಿ ನೀರಿನ ಸಂಗ್ರಹಣೆಯ ಶೇ.60 ರಷ್ಟು ಇದೆ. ಕಳೆದ ವರ್ಷ ಇದೇ ಸಮಯದಲ್ಲಿ 332.52 ಟಿ.ಎಂ.ಸಿ. ನೀರಿನ ಸಂಗ್ರಹಣೆ ಇತ್ತು ಎಂಬ ವಿಷಯವನ್ನು ಉಪಸಮಿತಿಯಲ್ಲಿ ಚರ್ಚಿಸಲಾಯಿತು.

ಕೆಲವೊಂದು ಜಲಾಶಯಗಳಲ್ಲಿ ನೀರಿನ ಮಟ್ಟ ತೃಪ್ತಿಕರವಾಗಿ ಇಲ್ಲದೆ ಇರುವ ಬಗ್ಗೆ ಅತಂಕ ವ್ಯಕ್ತಪಡಿಸಿದ ಸಚಿವರು, ಜಲಾನಯನ ಪ್ರದೇಶಗಳಲ್ಲಿನ ಬೆಳಗಳಿಗೆ ಅವಶ್ಯವಿರುವ ನೀರಿನ ಪ್ರಮಾಣ ಇತ್ಯಾದಿ ವಿಷಯಗಳನ್ನು ಗಮನದಲ್ಲಿರಿಸಿಕೊಂಡು ಮುಂಬರುವ ದಿನಗಳಲ್ಲಿ ಜಲಾಶಯಗಳ ನೀರಿನ ಮಟ್ಟ ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯುವ ನೀರಿಗೆ ಅವಶ್ಯವಿರುವ ನೀರನ್ನು ಕಾಯ್ದಿರಿಸಿದ ನಂತರವೇ ನೀರಾವರಿಗಾಗಿ ನೀರನ್ನು ಬಿಡುಗಡೆಗೊಳಿಸುವ ಕುರಿತು ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅಗತ್ಯವಿರುವ ಜಿಲ್ಲೆಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು

ಪ್ರಸ್ತುತ ರಾಜ್ಯದ 5 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಚಿತ್ರದುರ್ಗ, ತುಮಕೂರು, ಬೆಂಗಳೂರು ನಗರ ಮತ್ತು ರಾಮನಗರ ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ದೀರ್ಘಕಾಲೀನ ಸಮಸ್ಯೆ ಹಾಗೂ ನೀರಿನ ಗುಣಮಟ್ಟದ ಸಮಸ್ಯೆಯಿಂದಾಗಿ ಬಾಡಿಗೆ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅದೇ ರೀತಿ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ 2 ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳ 5 ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ ಗಳಿಗೆ ಟ್ಯಾಂಕರ್ ಮತ್ತು ಬೋರ್ವೆಲ್ ಗಳ ಮುಖಾಂತರ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿಯನ್ನು ಗುರಿತಿಸಲು ಸಭೆಯಲ್ಲಿ ಸೂಚನೆ ನೀಡಲಾಯಿತು.

ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಸಂಪೂರ್ಣ ಪೂರ್ವ ಸಿದ್ದತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖಾಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚಿಸಿದರು. ಈ ಕುರಿತಂತೆ ಸ್ಪಷ್ಟವಾದ ವರದಿಯನ್ನು ಮುಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಮಂಡಿಸುವಂತೆಯೂ ನಿರ್ದೇಶನ ನೀಡಲಾಯಿತು.

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರುಗಳ ಪಿ.ಡಿ. ಖಾತೆಯಲ್ಲಿ (ವಿಪತ್ತು ನಿಧಿ) ಪ್ರಸ್ತುತ ಒಟ್ಟು 488.30 ಕೋಟಿ ರೂ.ಗಳ ಅನುದಾನ ಲಭ್ಯವಿದ್ದು, ಪರಿಹಾರ ಕ್ರಮಕ್ಕೆ ಯಾವುದೇ ಹಣಕಾಸು ಸಮಸ್ಯೆ ಇಲ್ಲ ಎಂಬ ವಿಷಯವನ್ನು ಸಚಿವ ಕೃಷ್ಣ ಬೈರೇಗೌಡ ಅವರು ಉಪ ಸಮಿತಿಯ ಗಮನ ಸೆಳೆದರು.

ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್‌ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ್‌ ಖರ್ಗೆ ಹಾಗೂ ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ‌ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
above normalApril–MayexpectedFebruarygood rainfallHigher-than-usual heatincreasedKarnataka governmentPossibilitypre-monsoon seasonrainfallrecorded 2.5°Crevenue departmenttemperatures
0 FacebookTwitterPinterestEmail
KM Shivaraju

previous post
ವೇಮಗಲ್ ಬಾಟ್ಲಿಂಗ್ ಘಟಕ: 315 ಕೋಟಿ ರೂ. ಹೂಡಿಕೆ
next post
ಮುಡಾ: ಸಿದ್ದರಾಮಯ್ಯಗೆ ‘ಬಿ’ ರಿಪೋರ್ಟ್ ಕ್ಲೀನ್ ಚಿಟ್

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ