Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜಕೀಯರಾಜ್ಯರಾಷ್ಟ್ರ

ವೇಮಗಲ್ ಬಾಟ್ಲಿಂಗ್ ಘಟಕ: 315 ಕೋಟಿ ರೂ. ಹೂಡಿಕೆ

by admin February 20, 2025
written by admin February 20, 2025 0 comments 2 minutes read
0FacebookTwitterPinterestEmail
188

ವೇಮಗಲ್(ಕೋಲಾರ ಜಿಲ್ಲೆ):ಇನ್ವೆಸ್ಟ್ ಕರ್ನಾಟಕ ಯೋಜನೆಯಡಿ ಜರ್ಮನಿಯ ಕ್ರೋನ್ಸ್ ಕಂಪನಿ ಕೋಲಾರ ಜಿಲ್ಲೆ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಿರುವ 315 ಕೋಟಿ ರೂ. ಹೂಡಿಕೆಯ ಬಾಟ್ಲಿಂಗ್ ಯಂತ್ರಗಳ ಉತ್ಪಾದನಾ ಘಟಕ ನಿರ್ಮಾಣಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಇಂದು ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಘಟಕ ಸ್ಥಾಪನೆಯಿಂದ 550 ಮಂದಿಗೆ ಉದ್ಯೋಗ ದೊರೆಯಲಿದ್ದು, ಸ್ಥಳೀಯರನ್ನು ಆದ್ಯತೆ ಮೇಲೆ ಪರಿಗಣಿಸಲಾಗುವುದು ಎಂದರು.

ಕೈಗಾರಿಕಾ ಅಗತ್ಯಗಳಿಗೆ ಬೇಕಾಗುವ ಬಾಟ್ಲಿಂಗ್ ಮತ್ತು ಶುದ್ಧೀಕರಣ ಸಾಧನಗಳ ತಯಾರಿಕೆಗೆ ದೇಶದಲ್ಲಿ ಅಪಾರ ಬೇಡಿಕೆ ಇರುವುದನ್ನು ಮನಗಂಡ ಕ್ರೋನ್ಸ್ ಕಂಪನಿ, ರಾಜ್ಯದಲ್ಲಿ ಸ್ಥಾವರ ಸ್ಥಾಪನೆಗೆ ಮುಂದಾಗಿದೆ.

ಸ್ಥಳೀಯರಿಗೆ ಉದ್ಯೋಗ

ಬಂಡವಾಳ ಹೂಡಿಕೆ ಜೊತೆಗೆ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಯೂ ಆಗಲಿದೆ, ವೇಮಗಲ್ ಕೈಗಾರಿಕಾ ಪ್ರದೇಶ ಬೆಂಗಳೂರಿಗೆ ಹತ್ತಿರದಲ್ಲಿ ಇರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದರು.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ 10.27 ಲಕ್ಷ ಕೋಟಿ ರೂ. ಹೂಡಿಕೆ ಒಡಂಬಡಿಕೆಗಳ ಭಾಗವಾಗಿ ವೇಮಗಲ್‌ನಲ್ಲಿ 315 ಕೋಟಿ ರೂ. ಹೂಡಿಕೆ ಸಾಕಾರಗೊಳ್ಳುತ್ತಿದೆ.

ಕಳೆದ ಡಿಸೆಂಬರ್‌ನಲ್ಲಿ ಸಚಿವರ ನಿಯೋಗ ಜರ್ಮನಿ ರೋಡ್ ಷೋನಲ್ಲಿ ಪಾಲ್ಗೊಂಡು ನ್ಯೂಟ್ರಾಬ್ಲಿಂಗ್‌ನಲ್ಲಿನ ಕ್ರೋನ್ಸ್ ಕಂಪನಿ ಪ್ರಧಾನಕಚೇರಿಗೆ ಭೇಟಿ ನೀಡಿ ಪರಿಶೀಲಿಸಲಾಗಿತ್ತು.

ಗುತ್ತಿಗೆದಾರರ 64,000 ಕೋಟಿ ರೂ. ಬಿಲ್ ಬಾಕಿ
ಬೆಂಬಲಕ್ಕೆ ಸರ್ಕಾರ ಬದ್ಧ

ಪ್ರಿಸಿಷನ್ ಎಂಜಿನಿಯರಿಂಗ್ ಮತ್ತು ನಾವೀನ್ಯತೆಗಳಿಗೆ ಹೆಸರು ಮಾಡಿರುವ ಕಂಪನಿ ಭಾರತದಲ್ಲಿ ನೂತನ ಉತ್ಪಾದನಾ ಸ್ಥಾವರ ಆರಂಭಿಸುತ್ತಿರುವುದು ಸ್ವಾಗತಾರ್ಹ, ಜರ್ಮನಿಯಲ್ಲಿ ಏನಿದೆಯೋ ಅವೆಲ್ಲವೂ ನಮ್ಮಲ್ಲೂ ಬರಬೇಕು, ಇದಕ್ಕಾಗಿ ಎಲ್ಲ ಬೆಂಬಲ ಕೊಡಲು ಸರ್ಕಾರ ಬದ್ಧವಾಗಿದೆ.

ಕಂಪನಿ ಹಂತ ಹಂತವಾಗಿ 315 ಕೋಟಿ ರೂ. ಹೂಡಿಕೆ ಮಾಡಲಿದ್ದು, ನಿಮಿಷಕ್ಕೆ ನೂರಾರು ಬಾಟಲಿ ಉತ್ಪಾದಿಸುವ ಯಂತ್ರಗಳನ್ನು ಘಟಕದಲ್ಲಿ ಉತ್ಪಾದಿಸಲಾಗುತ್ತದೆ.

ಸ್ಥಳೀಯರಿಗೆ ಹಾಗೂ ಸ್ಥಾವರಕ್ಕಾಗಿ ಭೂಮಿ ಕಳೆದುಕೊಂಡ ರೈತರ ಮಕ್ಕಳಿಗೆ ಉದ್ಯೋಗ ನೀಡುವಲ್ಲಿ ಕ್ರೋನ್ಸ್ ಕಂಪನಿ ಆದ್ಯತೆ ಕೊಡಬೇಕು ಎಂದು ಮನವಿ ಮಾಡಿದರು.

ಅಧಿಕಾರಿಗಳಿಗೆ ಸಚಿವರ ಸೂಚನೆ

ವೇಮಗಲ್ ಕೈಗಾರಿಕಾ ಪ್ರದೇಶಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು, ಉತ್ಪಾದನಾ ವಲಯದಲ್ಲಿ ಕರ್ನಾಟಕದ ಅಭಿವೃದ್ಧಿ ಕುರಿತು ಸದ್ಯದಲ್ಲೇ ಪರಿಣಿತರ ಜೊತೆ ಚರ್ಚಿಲಾಗುವುದು, ಸಿಎಸ್‌ಆರ್ ಹಣವನ್ನೂ ಸ್ಥಳೀಯರ ಅಭಿವೃದ್ಧಿಗೆ ಬಳಸುವಂತೆ ಕಂಪೆನಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ನೂತನ ಕೈಗಾರಿಕಾ ನೀತಿ ಜಾರಿಗೆ ತರಲಾಗಿದೆ, ಉದ್ದಿಮೆಗಳಿಗೆ ಬಂಡವಾಳದ ಮೇಲೆ ಸಹಾಯಧನ ಅಥವಾ ಉತ್ಪಾದನೆಗೆ ತಕ್ಕ ಪ್ರೋತ್ಸಾಹ ಭತ್ಯೆ, ಇವೆರಡರಲ್ಲಿ ಒಂದನ್ನು ಆಯ್ಕೆ ಮಾಡಿಕೊಳ್ಳುವ ಮುಕ್ತ ಅವಕಾಶ ಕೊಡಲಾಗಿದೆ.

ತ್ವರಿತಗತಿಯಲ್ಲಿ ಅಗತ್ಯ ಅನುಮೋದನೆ ನೀಡಲು ಪರಿಷ್ಕೃತ ಏಕಗವಾಕ್ಷಿ ವ್ಯವಸ್ಥೆಯನ್ನೂ ತರಲಾಗಿದೆ, ಕ್ರೋನ್ಸ್ ಕಂಪನಿ ಮುಂಬರುವ ದಿನಗಳಲ್ಲಿ ಅಪಾರ ಹೂಡಿಕೆ ಮಾಡುವ ನಿರೀಕ್ಷೆ ಇದೆ.

ಭಾರತದಲ್ಲಿ 23 ವರ್ಷಗಳ ನೆಲೆ

ಕ್ರೋನ್ಸ್ ಕಂಪನಿ ಆಹಾರ ಮತ್ತು ಪಾನೀಯ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ಭಾರತದಲ್ಲಿ ನೆಲೆ ಹೊಂದಿದೆ, ಕಂಪನಿಯ ಡಿಜಿಟಲ್ ವಿಭಾಗದ ಕೇಂದ್ರ ಕಚೇರಿ ಬೆಂಗಳೂರಿನಲ್ಲೇ ಇದೆ, ಕಂಪನಿಯ ಸಾಫ್ಟ್ವೇರ್ ಅಭಿವೃದ್ಧಿ, ಐಟಿ ಭದ್ರತೆ ಮತ್ತು ಡಿಜಿಟಲ್ ಪರಿಹಾರಗಳಿಗೆ ಬಲ ತುಂಬಿದೆ.

ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬರಲಿರುವ ಉತ್ಪಾದನಾ ಘಟಕ ಭಾರತದಲ್ಲಿ ಕಂಪನಿಯ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸಿ, ರಾಜ್ಯದ ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bottling machine unitMinister M B Patilvemagal-kolara district
0 FacebookTwitterPinterestEmail
admin

previous post
ಗುತ್ತಿಗೆದಾರರ 64,000 ಕೋಟಿ ರೂ. ಬಿಲ್ ಬಾಕಿ
next post
ಫೆಬ್ರವರಿಯಲ್ಲಿ ವಾಡಿಕೆಗಿಂತ ಹೆಚ್ಚು ಬಿಸಿಲು, ಪೂರ್ವ ಮುಂಗಾರಿನಲ್ಲಿ ಅಧಿಕ ಮಳೆ ಸಾಧ್ಯತೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ