Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಬೇಸಿಗೆಯಲ್ಲಿ ವಿದ್ಯುತ್ ಲೋಡ್‌ ಶೆಡ್ಡಿಂಗ್ ಅನಿವಾರ್ಯ

by KM Shivaraju February 22, 2025
written by KM Shivaraju February 22, 2025 0 comments 2 minutes read
0FacebookTwitterPinterestEmail
193

ಬೆಂಗಳೂರು:ಬೇಸಿಗೆ ದಿನಗಳಲ್ಲಿ ಅಕಾಲಿಕ ಮಳೆ ಬರದಿದ್ದರೆ ರಾಜ್ಯದಲ್ಲಿ ವಿದ್ಯುತ್ ಅಭಾವ ತೀವ್ರಗೊಂಡು ಲೋಡ್‌ಶೆಡ್ಡಿಂಗ್ ಅನಿವಾರ್ಯವಾಗಲಿದೆ.

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೂ, ಕಡು ಬೇಸಿಗೆಯಲ್ಲಿನ ಬೇಡಿಕೆಗೂ ಅಜಗಜಾಂತರ ವ್ಯತ್ಯಾಸವಿರುತ್ತದೆ.

ಇದನ್ನು ಸರಿದೂಗಿಸಲು ಅಧಿಕಾರಿಗಳು ಉತ್ತರ ಪ್ರದೇಶ ಮತ್ತು ಪಂಜಾಬ್ ರಾಜ್ಯಗಳಿಂದ ಸಾಲದ ರೂಪದಲ್ಲಿ ವಿದ್ಯುತ್ ಪಡೆಯಲು ಹಾಗೂ ನಮ್ಮಲ್ಲಿನ ಸ್ಥಗಿತಗೊಂಡಿರುವ ಎಲ್ಲಾ ತೆರನಾದ ವಿದ್ಯುತ್ ಉತ್ಪಾದನಾ ಮೂಲಗಳನ್ನು ಚಾಲನೆಗೊಳಿಸುವಂತೆ ಆದೇಶಿಸಲಾಗಿದೆ.

ಶೇಕಡ 70ರಷ್ಟು ನೀರು ಸಂಗ್ರಹ

ರಾಜ್ಯದ ಜಲಾಶಯಗಳಲ್ಲಿ ಶೇಕಡ 70ರಷ್ಟು ನೀರು ಸಂಗ್ರಹವಿದೆ, ಈ ನೀರನ್ನು ಕೃಷಿಯ ಎರಡನೇ ಬೆಳೆಗೆ ಬಳಕೆ ಮಾಡುವಂತೆ ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ಸರ್ಕಾರ ಆದೇಶ ಮಾಡಿದೆ.

ಈ ಆದೇಶವೇ ವಿದ್ಯುತ್ ಭಾರೀ ಬೇಡಿಕೆಗೆ ಕಾರಣವಾಗಿದೆ, ಉತ್ತರ ಕರ್ನಾಟಕ ಭಾಗದಲ್ಲಿ ಕಬ್ಬು ಕಟಾವು ಪೂರ್ಣಗೊಂಡಿದ್ದು ಹೆಚ್ಚಿನ ಬೇಡಿಕೆ ಇಲ್ಲ, ಹಳೇ ಮೈಸೂರು ಭಾಗದಲ್ಲಿ ಜಲಾಶಯಗಳಿಂದ ನೀರು ಹರಿಸಲಾಗುತ್ತಿದೆ.

ಅದರಲ್ಲೂ ಮಂಡ್ಯ, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ವಿದ್ಯುತ್ ಬಳಕೆ ಆಗುತ್ತಿದೆ.

ಬಾಯಿ ಮುಚ್ಚಿ ಇಲ್ಲವೇ, ಸಚಿವ ಸ್ಥಾನ ತೊರೆಯಿರಿ !
ಶೇಕಡ 30 ಹೆಚ್ಚು ವಿದ್ಯುತ್ ಬೇಡಿಕೆ

ನಿಗದಿತ ಸರಬರಾಜಿಗಿಂತ ಶೇಕಡ 30ರಷ್ಟು ಹೆಚ್ಚು ವಿದ್ಯುತ್ ಬೇಡಿಕೆ ಈ ಪ್ರದೇಶದಲ್ಲಿದೆ, ಇದನ್ನು ನಿಭಾಯಿಸಲು ಬೇಡಿಕೆಗೆ ಅಗತ್ಯವಿರುವಷ್ಟು ಪೂರೈಕೆ ಮಾಡಲು ಸೂಚಿಸಲಾಗಿದೆ.

ಹಿಂದಿನ ಮೂರು ವರ್ಷಗಳಲ್ಲಿ ಬರದಿಂದ ತತ್ತರಿಸಿರುವ ರೈತರಿಗೆ ಈ ಬಾರಿ ನೀರಿರುವುದರಿಂದ ಎರಡನೇ ಬೆಳೆಗೆ ಅಡ್ಡಿ ಮಾಡದೆ ನೀರು ಪೂರೈಸಿ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಲಹೆ ಮಾಡಿದ್ದಾರೆ.

ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯದಲ್ಲಿ ಎಲ್ಲಿಯೂ ವಿದ್ಯುತ್ ತೊಂದರೆ ಆಗದಂತೆ ಸಂಜೆ 6 ಗಂಟೆಯಿಂದ ಮುಂಜಾನೆ 6ರವರೆಗೆ ಸಿಂಗಲ್ ಫೇಸ್ ವಿದ್ಯುತ್ ಪೂರೈಕೆಗೆ ಸೂಚಿಸಲಾಗಿದೆ.

ಕೃಷಿಗೆ ಹಗಲಿನ ವೇಳೆ ವಿದ್ಯುತ್

ಅರಣ್ಯ ಪ್ರದೇಶದ ಗಡಿ ಭಾಗದ ಗ್ರಾಮಗಳಲ್ಲಿ ಕೃಷಿ ಪಂಪ್ ಸೆಟ್‌ಗಳಿಗೆ ಆರರಿಂದ ಏಳು ತಾಸು ವಿದ್ಯುತ್ ಅನ್ನು ಹಗಲಿನ ವೇಳೆ ನೀಡಿ ಎಂದು ಇಲಾಖೆ ಆದೇಶ ಮಾಡಿದೆ.

ರೈತರು ರಾತ್ರಿ ವೇಳೆ ನೀರು ಹರಿಸಲು ಹೋದಾಗ, ಕೆಲವರು ಕಾಡು ಪ್ರಾಣಿಗಳಿಗೆ ಬಲಿಯಾದ ಹಿನ್ನೆಲೆಯಲ್ಲಿ ಸರ್ಕಾರ ಈ ಆದೇಶ ಮಾಡಿದೆ.

ಬೇಸಿಗೆ ಆರಂಭದಲ್ಲೇ 17,000 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆ ಇದೆ, ಆದರೆ, ನಮ್ಮಲ್ಲಿನ ಉತ್ಪಾದನೆ ಮತ್ತು ಹೊರರಾಜ್ಯಗಳಿಂದ ಖರೀದಿ ಮಾಡುತ್ತಿರುವುದು 16,600 ಮೆಗಾ ವ್ಯಾಟ್ ಮಾತ್ರ.

ಬೇಡಿಕೆ 19,500 ಮೆಗಾ ವ್ಯಾಟ್‌ಗೆ

ಮುಂದಿನ ಮೂರು ತಿಂಗಳಲ್ಲಿ ಈ ಬೇಡಿಕೆ 19,000 ದಿಂದ 19,500 ಮೆಗಾ ವ್ಯಾಟ್‌ಗೆ ಮುಟ್ಟಬಹುದೆಂದು ಅಂದಾಜು ಮಾಡಲಾಗಿದೆ.

ಈ ಕಾರಣಕ್ಕಾಗಿಯೇ ದುರಸ್ತಿಗೆ ಒಳಗಾಗಿರುವ ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳಿಗೆ ತಿಂಗಳಾಂತ್ಯದೊಳಗೆ ಚಾಲನೆ ನೀಡುವಂತೆ ಸೂಚಿಸಿದೆ.

ಜೊತೆ ಜೊತೆಯಲ್ಲೇ ತೀವ್ರ ಬೇಡಿಕೆ ಮತ್ತು ಸಂಕಷ್ಟ ಸಂದರ್ಭದಲ್ಲಿ ವಿದ್ಯುತ್ ಉತ್ಪಾದನಾ ಜಲಾಶಯಗಳಿಂದ ಹೆಚ್ಚು ಉತ್ಪಾದನೆ ಮಾಡುವಂತೆಯೂ ಆದೇಶಿಸಿದೆ.

ಕಳೆದ ವರ್ಷ ಉತ್ತಮ ಮಳೆ

ಕಳೆದ ವರ್ಷ ಉತ್ತಮ ಮಳೆಯಾಗಿದ್ದರಿಂದ ವಿದ್ಯುತ್ ಉತ್ಪಾದನಾ ಜಲಾಶಯಗಳಲ್ಲಿ ಶೇಕಡ 70ರಷ್ಟು ನೀರಿನ ಸಂಗ್ರಹವಿದೆ.

ಜಲಾಶಯಗಳಲ್ಲಿ ನೀರಿದ್ದರೂ ಸಂಪೂರ್ಣ ವಿದ್ಯುತ್ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ, ಬರುವ ದಿನಗಳಲ್ಲಿ ಕೊರತೆಯಾಗುವ 3,000 ಮೆಗಾವ್ಯಾಟ್ ಪೈಕಿ ಉತ್ತರ ಪ್ರದೇಶ ಮತ್ತು ಪಂಜಾಬ್‌ನಿಂದ ಸಾಲದ ರೂಪದಲ್ಲಿ ವಿದ್ಯುತ್ ಪಡೆಯಲು ಇಲಾಖೆ ಒಪ್ಪಂದ ಮಾಡಿಕೊಂಡಿದೆ.

ತದನಂತರ ಉಂಟಾಗುವ ಕೊರತೆಯನ್ನು ಖಾಸಗಿ ವಿದ್ಯುತ್ ಸಂಸ್ಥೆಗಳಿಂದ ಖರೀದಿ ಮಾಡಬೇಕಾಗುತ್ತದೆ, ಅದನ್ನು ಸರಿದೂಗಿಸಲು ಇಲಾಖೆಯಲ್ಲಿ ಹಣದ ಕೊರತೆಯಿದೆ.

ಸರ್ಕಾರ ಮಧ್ಯೆ ಪ್ರವೇಶ ಮಾಡಿದ ನಂತರವೂ ಎದುರಾಗುವ ವಿದ್ಯುತ್ ಕೊರತೆ ನಿಭಾಯಿಸಲು, ಕಡಿತ ಮಾಡದೆ ಲೋಡ್‌ಶೆಡ್ಡಿಂಗ್‌ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
70% water storage in damselectricity shortageload shedding
0 FacebookTwitterPinterestEmail
KM Shivaraju

previous post
ಬಾಯಿ ಮುಚ್ಚಿ ಇಲ್ಲವೇ, ಸಚಿವ ಸ್ಥಾನ ತೊರೆಯಿರಿ !
next post
ಬಸವೇಶ್ವರರ ತತ್ವ ಜನಮಾನಸಕ್ಕೆ ತಲುಪಿಸಲು ಬದ್ಧ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ