Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

ಬಸವೇಶ್ವರರ ತತ್ವ ಜನಮಾನಸಕ್ಕೆ ತಲುಪಿಸಲು ಬದ್ಧ

by admin February 24, 2025
written by admin February 24, 2025 0 comments 2 minutes read
0FacebookTwitterPinterestEmail
145

ಬೆಂಗಳೂರು:ಸಾಮಾಜಿಕ ಕ್ರಾಂತಿಕಾರಿ ಬಸವೇಶ್ವರರ ತತ್ವ, ವಚನ ಸಂಸ್ಕೃತಿ, ಶರಣರ ಹೋರಾಟ ಕುರಿತು ಜನಮಾನಸಕ್ಕೆ ತಲುಪಿಸುವ ಸಂಬಂಧ ಸ್ವಾಮೀಜಿಗಳ ಬೇಡಿಕೆಗಳಲ್ಲಿ ಸಾಧ್ಯವಿರುವ ಯೋಜನೆಗಳನ್ನು ಹಂತ ಹಂತವಾಗಿ ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಭರವಸೆ ನೀಡಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿ ಬೇಡಿಕೆಗಳ ಮನವಿಪತ್ರ ಸಲ್ಲಿಸಿದ ಲಿಂಗಾಯತ ಸಮುದಾಯದ ಸ್ವಾಮೀಜಿಗಳು, ಸಚಿವರು, ಶಾಸಕರು ಹಾಗೂ ಸಮಾಜದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂಬುದಾಗಿ ಘೋಷಿಸಿದ್ದು ಕಾಂಗ್ರೆಸ್ ಸರ್ಕಾರ ಎಂದು ಪ್ರತಿಪಾದಿಸಿದರು.

ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಬಸವ ಜಯಂತಿಯಂದೇ ಪ್ರಮಾಣವಚನ ಸ್ವೀಕರಿಸಿದ್ದು, ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಕಾಂಗ್ರೆಸ್ ಸರ್ಕಾರ.

ಜಾತ್ಯತೀತ ಸಮಾಜ ನಿರ್ಮಾಣ

ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪೂರಕ, ಜಾತಿವಾದಿ ಪಟ್ಟಭದ್ರರಿಗೆ ಬಸವಣ್ಣನವರ ವಿಚಾರಗಳು ಹಿಡಿಸಲ್ಲ, ಪಟ್ಟಭದ್ರರು ಬಹಿರಂಗವಾಗಿ ಬಸವಣ್ಣನ ವಿರೋಧಿಸಲು ಸಾಧ್ಯವಿಲ್ಲ, ಅದಕ್ಕೇ ಆಂತರಿಕವಾಗಿ ವಿರೋಧಿಸುತ್ತಿದ್ದಾರೆ.

ಜಾತಿ ವ್ಯವಸ್ಥೆ ಬಹಳ ಗಟ್ಟಿಯಾಗಿ ಬೇರೂರಿದೆ, ಇದಕ್ಕೆ ಪಟ್ಟಭದ್ರರು ನೀರು ಗೊಬ್ಬರ ಹಾಕುತ್ತಿದ್ದಾರೆ, ಜಾತ್ಯತೀತ, ಸಮಸಮಾಜ ನಿರ್ಮಾಣ ಮಾಡಲು ಬಸವಣ್ಣನವರ ಹೋರಾಟ ಪೂರಕ.

ನಮ್ಮ ಜಾತಿ ವ್ಯವಸ್ಥೆಗೆ ಚಲನೆ ಇಲ್ಲ, ಜಾತಿ ಜಡತ್ವ, ಆರ್ಥಿಕ ಜಡತ್ವ ಇರುವ ಸಮಾಜದಲ್ಲಿ ಚಲನೆ ಸಾಧ್ಯವಿಲ್ಲ.

ಸಂವಿಧಾನದಲ್ಲಿ ಅಡಕ

ಬಸವಣ್ಣನವರ ವಿಚಾರಗಳೇ ಡಾ.ಅಂಬೇಡ್ಕರ್ ವಿಚಾರಗಳಾಗಿದ್ದು ಇವೆಲ್ಲವೂ ಸಂವಿಧಾನದಲ್ಲಿ ಅಡಕವಾಗಿವೆ.

ಗೊರುಚ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿದ್ದು ನಾವು, ಅನುಭವ ಮಂಟಪ ಮೊದಲ ಪ್ರಜಾಪ್ರಭುತ್ವದ ವೇದಿಕೆ, ಯಾರ ಒತ್ತಾಯವೂ ಇಲ್ಲದ ವೇಳೆಯಲ್ಲೇ ನಮ್ಮ ಸರ್ಕಾರ ಅನುಭವ ಮಂಟಪ ಪುನರುಜ್ಜೀವನಕ್ಕೆ ಮುಂದಾಗಿತ್ತು ಎಂದರು.

ಇದಕ್ಕೂ ಮುನ್ನ ಬಾಲ್ಕಿ ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಮಾತನಾಡಿ, ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವ ಗುರು ಬಸವೇಶ್ವರರ ವಿಚಾರಧಾರೆಯನ್ನು ಪರಿಣಾಮಕಾರಿಯಾಗಿ ಜನ ಮಾನಸಕ್ಕೆ ತಲುಪಿಸುವಲ್ಲಿ ಮುಂಬರುವ ಬಜೆಟ್‌ನಲ್ಲಿ 100 ಕೋಟಿ ರೂ. ನೀಡಬೇಕಲ್ಲದೆ, ಮುಂದಿನ ನಾಲ್ಕು ವರ್ಷಗಳಲ್ಲೂ ಬಜೆಟ್‌ನಲ್ಲಿ ತಲಾ 100 ಕೋಟಿ ರೂ.ನಂತೆ ಒಟ್ಟು 500 ಕೋಟಿ ರೂ. ಅನುದಾನ ನೀಡಬೇಕು ಎಂದು ಒತ್ತಾಯಿಸಿದರು.

ಬರಿದಾದ ಖಜಾನೆ ತುಂಬಲು ಸಿದ್ದರಾಮಯ್ಯ ಯತ್ನ
ಬಸವಣ್ಣನವರ ಪರಿಚಯ

ಯುವ ಪೀಳಿಗೆಗೆ ಬಸವಣ್ಣನವರನ್ನು ಪರಿಚಯಿಸುವಲ್ಲಿ ಸರ್ಕಾರ ಕೆಲವು ಮಹತ್ವದ ಕ್ರಮ ಕೈಗೊಳ್ಳಬೇಕೆಂಬುದಾಗಿ ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದ 13ನೇ ಅಖಿಲ ಭಾರತ ಶರಣ ಸಾಹಿತ್ಯ ಸಮ್ಮೇಳನದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಬಸವಣ್ಣನ ಬೃಹತ್ ಪ್ರತಿಮೆ ಪ್ರತಿಷ್ಠಾಪಿಸಬೇಕು, ಬೆಂಗಳೂರಿನಲ್ಲಿ 25 ಎಕರೆ ಪ್ರದೇಶದಲ್ಲಿ ಅಕ್ಷರಧಾಮ ಮಾದರಿ ಬೃಹತ್ ’ಶರಣ ದರ್ಶನ’ ಕೇಂದ್ರ ಸ್ಥಾಪಿಸಿ, ಅದರಲ್ಲಿ ಉದ್ಯಾನ, ಗ್ರಂಥಾಲಯ, ಅತಿಥಿಕೇಂದ್ರ, ದಾಸೋಹ ಭವನ, ಸಭಾಂಗಣ ನಿರ್ಮಿಸಿ ಪ್ರವಾಸಿ ತಾಣವನ್ನಾಗಿಸಬೇಕು.

ಎಲ್ಲ ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರ ಸ್ಮಾರಕಗಳ ರಕ್ಷಣೆಗೆ ’ಪ್ರತ್ಯೇಕ ಶರಣ ಸ್ಮಾರಕ ರಕ್ಷಣೆ ಪ್ರಾಧಿಕಾರ’ ರಚಿಸಬೇಕು.

ಅನುಭವ ಮಂಟಪ ಸದ್ಬಳಕೆ

ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಅನುಭವ ಮಂಟಪ ಸದ್ಬಳಕೆಗೆ ಅಲ್ಲಿಯೇ ’ವಚನ ವಿಶ್ವವಿದ್ಯಾಲಯ’ ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು.

ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ’ಬಸವ ಭವನ’ ನಿರ್ಮಿಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಿರಂತರ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕು.

ವಚನ ಸಾಹಿತ್ಯ ಸಂಗ್ರಹ, ಪ್ರಕಟಣೆ, ಮರು ಪ್ರಕಟಣೆ, ಹಸ್ತಪ್ರತಿಗಳ ದಾಖಲೀಕರಣ, ಶರಣ ಕ್ಷೇತ್ರಗಳ ಅಧ್ಯಯನ ಮತ್ತು ದಾಖಲೀಕರಣ, ವಿಚಾರಸಂಕಿರಣ, ಸಮ್ಮೇಳನಗಳು, ವಚನಾಧಾರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ಇತ್ಯಾದಿ ಚಟುವಟಿಕೆ ನಡೆಸಲು ಶರಣ ಸಾಹಿತ್ಯ ಮತ್ತು ಸಂಸ್ಕೃತಿ ಪ್ರಸಾರಕ್ಕಾಗಿಯೇ ಇರುವ ಸಂಸ್ಥೆಗಳಿಗೆ ಅನುದಾನ ಒದಗಿಸಬೇಕು ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahMinister M B Patilsarana samskrutiswamiji meet cm in bengaluru
0 FacebookTwitterPinterestEmail
admin

previous post
ಬೇಸಿಗೆಯಲ್ಲಿ ವಿದ್ಯುತ್ ಲೋಡ್‌ ಶೆಡ್ಡಿಂಗ್ ಅನಿವಾರ್ಯ
next post
ಬರಿದಾದ ಖಜಾನೆ ತುಂಬಲು ಅಕ್ರಮ-ಸಕ್ರಮ !

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ