Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ರನ್ಯಾ ಚಿನ್ನ ಕಳ್ಳಸಾಗಣೆ: ಸಚಿವರೊಬ್ಬರಿಗೆ ಸಂಕಷ್ಟ !

by admin March 8, 2025
written by admin March 8, 2025 0 comments 2 minutes read
0FacebookTwitterPinterestEmail
313

ಬೆಂಗಳೂರು:ಚಿತ್ರನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಸಿಬಿಐ ವಹಿಸಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಹಿರಿಯ ಸಚಿವರೊಬ್ಬರ ಕೊರಳಿಗೆ ಉರುಳಾಗುವ ಲಕ್ಷಣಗಳು ಕಂಡುಬರುತ್ತಿವೆ.

ಚಿನ್ನ ಕಳ್ಳಸಾಗಣೆಯಲ್ಲಿ ಪ್ರಭಾವೀ ರಾಜಕಾರಣಿಗಳು, ಅಧಿಕಾರಿಗಳು ಮತ್ತು ಉದ್ದಿಮೆದಾರರು ಶಾಮೀಲಾಗಿದ್ದಾರೆಂದು ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ನೀಡಿದ ಪ್ರಾಥಮಿಕ ವರದಿ ಆಧಾರದ ಮೇಲೆ ದೆಹಲಿ ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ.

ಸ್ಫೋಟಕ ಮಾಹಿತಿ

ರನ್ಯಾ ರಾವ್ ಅವರನ್ನು ಡಿಆರ್‌ಐ ವಿಚಾರಣೆ ನಡೆಸಿದ ಸಂದರ್ಭದಲ್ಲಿ ಆರೋಪಿ ಕೆಲವು ಸ್ಫೋಟಕ ಮಾಹಿತಿ ನೀಡುತ್ತಿದ್ದಂತೆ ಸಂದೇಶ ರವಾನೆ ಮಾಡಿತು.

ಕೇಂದ್ರ ತನಿಖಾ ಸಂಸ್ಥೆಗಳು ತಕ್ಷಣವೇ ಡಿಆರ್‌ಐ ಕಸ್ಟಡಿಯಲ್ಲಿರುವ ರಾವ್ ಅವರನ್ನು ವಿಚಾರಣೆ ಮಾಡಿ ಮಾಹಿತಿ ಪಡೆದ ನಂತರ ಸಿಬಿಐ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿತು.

ಚಿನ್ನ ಕಳ್ಳಸಾಗಣೆ ಪ್ರಕರಣವನ್ನು ಸಿಬಿಐ ವಹಿಸಿಕೊಂಡಿರುವುದರಿಂದ ಕರ್ನಾಟಕ ರಾಜಕೀಯದಲ್ಲೂ ಮುಂದಿನ ದಿನಗಳಲ್ಲಿ ಮಹತ್ತರ ತಿರುವು ಪಡೆದುಕೊಳ್ಳಲಿದೆ ಎನ್ನಲಾಗಿದೆ.

ದೆಹಲಿ ಸಿಬಿಐ ತನಿಖೆ

ಯಾವುದೇ ಪ್ರಕರಣವನ್ನು ಸಿಬಿಐ ತನಿಖೆಗೆ ಮುಕ್ತ ಅವಕಾಶ ನೀಡದಿರುವ ಕರ್ನಾಟಕ ಸರ್ಕಾರದ ನಿರ್ಧಾರದ ಹಿನ್ನೆಲೆಯಲ್ಲಿ ಕಂದಾಯ ಇಲಾಖೆಯ ಗುಪ್ತಚರ ವಿಭಾಗ ನೀಡಿದ ದೂರು ದಾಖಲಿಸಿಕೊಂಡು ದೆಹಲಿ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ.

ಹಣಕಾಸು ವಹಿವಾಟಿಗೆ ಸಂಬಂಧಿಸಿದಂತೆ ಇ.ಡಿ. ಕೂಡಾ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆಯಿಂದ, ಅಗೆದಷ್ಟೂ ದೊಡ್ಡ ದೊಡ್ಡ ಕುಳಗಳು ರನ್ಯಾ ರಾವ್ ಜೊತೆಗೆ ನಂಟು ಹೊಂದಿರುವುದು ಬೆಳಕಿಗೆ ಬರುತ್ತಿದೆ.

ಕರ್ನಾಟಕ ಬಜೆಟ್ ಬೇರೆ ರಾಜ್ಯಗಳಿಗೆ ಮಾದರಿ
ಕಪ್ಪು ಹಣ ಬಿಳಿ

ಕಪ್ಪು ಹಣವನ್ನು ಬಿಳಿಯಾಗಿ ಪರಿವರ್ತಿಸಲು ಚಿನ್ನ ಕಳ್ಳಸಾಗಣೆಗೆ ಬಳಕೆ ಮಾಡಿಕೊಳ್ಳಲಾಗುತ್ತಿತ್ತು ಎಂದು ಡಿಆರ್‌ಐ, ಇ.ಡಿ. ಮತ್ತು ಸಿಬಿಐಗೆ ದೂರು ನೀಡಿತ್ತು.

ರನ್ಯಾ ರಾವ್ ಅವರಿಂದ ಕಳೆದ ನಾಲ್ಕು ದಿನಗಳ ಹಿಂದೆ ಕಂದಾಯ ಗುಪ್ತಚರ ನಿರ್ದೇಶನಾಲಯ ಅನೇಕ ಮಾಹಿತಿಗಳನ್ನು ಕಲೆ ಹಾಕಿ ಅಪಾರ ಪ್ರಮಾಣದ ಚಿನ್ನ ಮತ್ತು ಕೋಟ್ಯಂತರ ರೂ.ಗಳನ್ನು ವಶಕ್ಕೆ ಪಡೆದಿದೆ.

ಆರೋಪಿ ನೀಡಿರುವ ಮಾಹಿತಿ, ಕೇಂದ್ರೀಯ ತನಿಖಾಧಿಕಾರಿಗಳನ್ನೇ ದಿಗ್ಭ್ರಮೆಗೊಳಿಸಿದೆ, ಈ ಜಾಲದ ಹಿಂದೆ ಪ್ರಭಾವೀ ರಾಜಕಾರಣಿಗಳು ಇರುವುದರಿಂದ ಸಿಬಿಐಗೆ ವಹಿಸಿ, ಚಿನ್ನ ಕಳ್ಳಸಾಗಣೆಯ ಮತ್ತಷ್ಟು ಕರ್ಮಕಾಂಡ ಬಯಲಿಗೆಳೆಯಲು ಇಲಾಖೆ ನಿರ್ಧರಿಸಿತು.

ರನ್ಯಾ ಮದುವೆ ಉಸ್ತುವಾರಿ

ನಗರದ ಪಂಚತಾರಾ ಹೋಟೆಲ್ ಒಂದರಲ್ಲಿ ಕಳೆದ ವರ್ಷವಷ್ಟೇ ರನ್ಯಾ ರಾವ್ ಮದುವೆ ನಡೆದಿತ್ತು.

ಮದುವೆ ನಡೆದ ಐದು ಗಂಟೆಗಳವರೆಗೂ ಈ ಪ್ರಭಾವೀ ಸಚಿವರು ಉಪಸ್ಥಿತರಿದ್ದು ಎಲ್ಲ ಉಸ್ತುವಾರಿ ನೋಡಿಕೊಂಡಿದ್ದರು.

ಅಷ್ಟೇ ಅಲ್ಲ, ಆರೋಪಿ ಹೇಳಿದ ಕೆಲಸಗಳನ್ನು ಸರ್ಕಾರದ ಮಟ್ಟದಲ್ಲಿ ಈ ವ್ಯಕ್ತಿ ಮಾಡಿಸಿಕೊಡುತ್ತಿದ್ದರು ಎಂಬುದೂ ಪ್ರಾಥಮಿಕ ತನಿಖೆಯಿಂದ ಬಹಿರಂಗವಾಗಿದೆ.

ವಿದೇಶಗಳಿಗೆ ಪ್ರಯಾಣ

ರನ್ಯಾ ರಾವ್ ನಿರಂತರವಾಗಿ ವಿದೇಶಗಳಿಗೆ ಪ್ರಯಾಣ ಮಾಡುತ್ತಲೇ ಇದ್ದರು, ಇದನ್ನೇ ಆಧಾರವಾಗಿಟ್ಟುಕೊಂಡು ಡಿಆರ್‌ಐ ಅಧಿಕಾರಿಗಳು ತನಿಖೆ ನಡೆಸಿದಾಗ, ಆರೋಪಿಯು ಯೂರೋಪ್, ಅಮೆರಿಕ, ದುಬೈ ಸೇರಿದಂತೆ ಅನೇಕ ರಾಷ್ಟ್ರಗಳಿಗೆ ತೆರಳಿರುವುದು ಬೆಳಕಿಗೆ ಬಂದಿದೆ.

ಅದರಲ್ಲೂ ನಿರಂತರವಾಗಿ ದುಬೈಗೆ ತೆರಳುತ್ತಿದ್ದುದು ಸಂಶಯಕ್ಕೆ ಎಡೆ ಮಾಡಿಕೊಟ್ಟಿತು, ಫೆಬ್ರವರಿ 2ರಿಂದ ಮಾರ್ಚ್ 3ರವರೆಗೆ ರಾವ್ ಐದು ಬಾರಿ ದುಬೈಗೆ ಭೇಟಿ ನೀಡಿದ್ದರು.

ಮಾರ್ಚ್ 3ರಂದು ದುಬೈನಿಂದ ಹಿಂತಿರುಗುತ್ತಿದ್ದಂತೆ ರನ್ಯಾ ರಾವ್ ಅವರನ್ನು ಡಿಆರ್‌ಐ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ ನಂತರ ಆರೋಪಿಯಿಂದ ಕೋಟ್ಯಂತರ ರೂ. ಮೌಲ್ಯದ ಚಿನ್ನ ಮತ್ತು ನಗದನ್ನು ವಶ ಪಡಿಸಿಕೊಂಡರು.

ಪೋಲಿಸ್ ಅಧಿಕಾರಿ ಮಗಳು

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾವುದೇ ತಪಾಸಣೆಗೆ ಒಳಪಡಿಸದೆ, ಹಿರಿಯ ಪೋಲಿಸ್ ಅಧಿಕಾರಿ ಮಗಳೆಂದು ವಿಐಪಿ ಪ್ರವೇಶ ದ್ವಾರದಿಂದ ರನ್ಯಾ ರಾವ್ ಅವರನ್ನು ಸದಾಕಾಲ ಹೊರಗೆ ಕರೆತರುತ್ತಿದ್ದ ಪೋಲಿಸ್‌ನನ್ನು ಸಹಾ ಬಂಧಿಸಲಾಗಿದೆ.

ಆರೋಪಿಯನ್ನು ಕರೆತರಲು ಈತನಿಗೆ ಯಾರು ಸಂದೇಶ ಕೊಡುತ್ತಿದ್ದರು ಎಂಬ ಮಾಹಿತಿಯನ್ನು ತನಿಖಾ ತಂಡದ ಮುಂದೆ ಈತ ಬಿಡಿಸಿಟ್ಟಿದ್ದು, ಆ ಮಾಹಿತಿ ಕೆಲವು ಪ್ರಭಾವಿಗಳಿಗೆ ಮುಳುವಾಗಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cabinet minister on surviellancegold smugglingranya rao
0 FacebookTwitterPinterestEmail
admin

previous post
ಕರ್ನಾಟಕ ಬಜೆಟ್ ಬೇರೆ ರಾಜ್ಯಗಳಿಗೆ ಮಾದರಿ
next post
ನಟಿ ಶಬಾನಾಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ