ಬೆಂಗಳೂರು:ನಗರದಲ್ಲಿ ಮುಕ್ತಾಯಗೊಂಡ 16ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ವೇಳೆ ಜೀವಮಾನ ಸಾಧನೆ ಪ್ರಶಸ್ತಿ ಪಡೆದ ನಟಿ ಶಬಾನಾ ಅಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಪ್ರಶಸ್ತಿ ಮತ್ತು 10 ಲಕ್ಷ ರೂ. ಚೆಕ್ ನೀಡಿ ಗೌರವಿಸಿದರು.
ಗೃಹ ನಿವಾಸ ಕಾವೇರಿಯಲ್ಲಿ ಪ್ರಶಸ್ತಿ ನೀಡಿ ಗೌರವಿಸಿ ಮಾತನಾಡಿದ ಮುಖ್ಯಮಂತ್ರಿ, ಕಾಪಿರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲವಾಗಿರುವ ರೀತಿಯಲ್ಲಿ ಜಿಎಸ್‌ಟಿ ಕೌನ್ಸಿಲ್‌ನಲ್ಲೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಶಬಾನಾ ಅಜ್ಮಿ ಪತಿ, ಗೀತೆ ರಚನೆಕಾರ ಜಾವೇದ್ ಅಖ್ತರ್ ಉಪಸ್ಥಿತರಿದ್ದರು.
ಕರ್ನಾಟಕದ ಬಗ್ಗೆ ಮೆಚ್ಚುಗೆ
ಕರ್ನಾಟಕ ಸಾಂಸ್ಕೃತಿಕವಾಗಿ ಮತ್ತು ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಪಡೆದಿದೆ ಎಂದು ಶಬಾನಾ ಅಜ್ಮಿ ಮತ್ತು ಜಾವೇದ್ ಅಖ್ತರ್ ಮೆಚ್ಚುಗೆ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಹಿಂದೂಸ್ತಾನಿ ಸಂಗೀತದ ದಿಗ್ಗಜರಾಗಿದ್ದ ಭೀಮ್‌ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಕರ್ನಾಟಕದ ಹೆಮ್ಮೆ ಎಂದು ಸ್ಮರಿಸಿದರು.