ಬೆಂಗಳೂರು:ಮಂಡ್ಯ ಲೋಕಸಭಾ ಕ್ಷೇತ್ರದ ವಿವಿಧ ಹೆದ್ದಾರಿಗಳ ಅಭಿವೃದ್ಧಿ ಹಾಗೂ ಮಂಡ್ಯ ನಗರದ ವರ್ತುಲ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಇಂದು ಸಮಾಲೋಚನೆ ನಡೆಸಿದರು.
ಕೋಲಾರ ಲೋಕಸಭಾ ಕ್ಷೇತ್ರವೂ ಸೇರಿ ಕರ್ನಾಟಕದ ಹಲವು ಹೆದ್ದಾರಿ ಯೋಜನೆಗಳ ಮಂಜೂರಾತಿ ಹಾಗೂ ಚಾಲ್ತಿಯಲ್ಲಿರುವ ಯೋಜನೆಗಳ ವೇಗ ಹೆಚ್ಚಿಸುವಂತೆ ಗಡ್ಕರಿ ಗಮನಕ್ಕೆ ತರಲಾಯಿತು.
ಸಕಾರಾತ್ಮಕ ಸ್ಪಂದನೆ
ಮನವಿಗೆ ಸಚಿವ ಗಡ್ಕರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಆದಷ್ಟು ಶೀಘ್ರ ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಭೇಟಿ ವೇಳೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಕೋಲಾರ ಸಂಸದ ಮಲ್ಲೇಶ್ ಬಾಬು ಉಪಸ್ಥಿತರಿದ್ದರು.