Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕುಮಾರಸ್ವಾಮಿ-ಸತೀಶ್ ಜಾರಕಿಹೊಳಿ ರಣತಂತ್ರ !

by admin March 26, 2025
written by admin March 26, 2025 0 comments 1 minutes read
1FacebookTwitterPinterestEmail
238

ಬೆಂಗಳೂರು:ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ನಾಯಕತ್ವ ನೀಡಿದರೆ, ನಮ್ಮ ಒಂದು ಗುಂಪು ಸರ್ಕಾರದಿಂದ ಹೊರಬಂದು ಎನ್‌ಡಿಎ ಜೊತೆ ಕೈಜೋಡಿಸುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಳಿ ಹೇಳಿಕೊಂಡಿದ್ದಾರೆ.

ಸಂಸತ್ ಭವನದಲ್ಲಿನ ಜಿ-12 ಕೊಠಡಿಯಲ್ಲಿ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಜಾರಕಿಹೊಳಿ ಮುಖಾಮುಖಿ ಚರ್ಚೆ ಮಾಡಿದ್ದಾರೆ.

ಹನಿಟ್ರ್ಯಾಪ್ ಬೆಳವಣಿಗೆ

ಈ ವೇಳೆ ಶಿವಕುಮಾರ್ ವಿರುದ್ಧವೇ ಹರಿಹಾಯ್ದಿರುವ ಜಾರಕಿಹೊಳಿ, ಹನಿಟ್ರ್ಯಾಪ್ ಪ್ರಕರಣದ ಇತ್ತೀಚಿನ ಬೆಳವಣಿಗೆಗಳನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ.

ಶಿವಕುಮಾರ್ ವಾಲ್ಮೀಕಿ ಸಮುದಾಯ ಮತ್ತು ಅದರ ಮುಖಂಡರನ್ನು ದಮನ ಮಾಡಲು ಹೊರಟಿದ್ದಾರೆ.

ಯಡಿಯೂರಪ್ಪ ಸಂಪುಟದಲ್ಲಿ ಬೃಹತ್ ನೀರಾವರಿ ಸಚಿವರಾಗಿದ್ದ ತಮ್ಮ ಸಹೋದರ ರಮೇಶ್ ಜಾರಕಿಹೊಳಿ ವಿರುದ್ಧ ಹನಿಟ್ರ್ಯಾಪ್ ನಡೆಸಿ ಅವರನ್ನು ರಾಜಕೀಯವಾಗಿ ಬಲಿ ತೆಗೆದುಕೊಂಡರು.

ಐದಾರು ಬಾರಿ ಸಂಚು

ಇದೀಗ ನಮ್ಮ ಸಮುದಾಯಕ್ಕೆ ಸೇರಿದ ರಾಜಣ್ಣ ಅವರ ಮೇಲೆ ಐದಾರು ಬಾರಿ ಹನಿಟ್ರ್ಯಾಪ್ ಸಂಚನ್ನು ಕೆಲವರು ರೂಪಿಸಿದ್ದರು.

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ನನ್ನ ಮೇಲೂ ಇಂತಹ ಪ್ರಯತ್ನ ನಡೆದಿತ್ತು ಎಂಬ ಮಾಹಿತಿ ನೀಡಿರುವುದಲ್ಲದೆ, ವಿಧಾನಸಭೆಯಲ್ಲಿ ರಾಜಣ್ಣ ಅವರು, 48 ಮಂದಿ ಹನಿಟ್ರ್ಯಾಪ್‌ಗೆ ಒಳಗಾಗಿದ್ದಾರೆ ಎಂಬ ಹೇಳಿಕೆ ಸತ್ಯ.

ಅದರ ಪೂರ್ಣ ಮಾಹಿತಿ ರಾಜಣ್ಣ ಅವರ ಬಳಿ ಇದೆ, ಅವರಿಗೆ ಈ ದಾಖಲೆ ಮತ್ತು ಸಿ.ಡಿ. ಮತ್ತು ಪೆನ್‌ಡ್ರೈವ್‌ಗಳು ಯಾವ ರೀತಿ ದೊರೆತಿವೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.

ಮಾಹಿತಿ, ದಾಖಲೆ ಲಭ್ಯ

ಸಿದ್ದರಾಮಯ್ಯ ಸಂಪುಟದ ಮತ್ತೋರ್ವ ಸಚಿವ ಮತ್ತು ರಾಜಣ್ಣ ಅವರ ಮೇಲೆ ಇಂತಹ ಯತ್ನ ನಡೆದಾಗ, ಆ ತಂಡದ ಕೆಲವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಮಾಹಿತಿ ಮತ್ತು ದಾಖಲೆ ಲಭ್ಯವಾಗಿವೆ.

ಇಷ್ಟಾದರೂ ಪಕ್ಷದ ವರಿಷ್ಠರು ಕೆಲವರ ರಕ್ಷಣೆಗೆ ಮುಂದಾಗಿದ್ದಾರೆ, ನಾನು ನಿನ್ನೆ ಪಕ್ಷದ ಕೆಲವು ನಾಯಕರ ಭೇಟಿ ಸಂದರ್ಭದಲ್ಲಿ ಅವರಿಗೆ ಎಲ್ಲವನ್ನೂ ವಿವರಿಸಿದ್ದೇನೆ.

ಇಷ್ಟಾದರೂ ಮುಖ್ಯಮಂತ್ರಿ ಅವರ ಮೇಲೆ ಉನ್ನತ ಮಟ್ಟದ ತನಿಖೆ ನಡೆಸದಂತೆ ದೆಹಲಿ ಮಟ್ಟದ ನಾಯಕರು ಒತ್ತಡ ಹೇರಿದ್ದಾರೆ, ಇದಕ್ಕೆ ನಮ್ಮ ವಿರೋಧವಿದೆ, ಅದಕ್ಕೆ ನಾವು ಅವಕಾಶವನ್ನೂ ನೀಡುವುದಿಲ್ಲ.

ರಾಜಕೀಯ ನಿರ್ಧಾರಕ್ಕೆ ಸಿದ್ಧ

ಹನಿಟ್ರ್ಯಾಪ್ ಬೆದರಿಕೆಗಳಿಗೆ ಇತಿಶ್ರೀ ಹಾಡಲು ನಾನು, ರಾಜಣ್ಣ ಸೇರಿದಂತೆ ಕೆಲವು ಮುಖಂಡರು ರಾಜಕೀಯವಾಗಿ ಎಂತಹ ನಿರ್ಧಾರ ಕೈಗೊಳ್ಳಲೂ ಸಿದ್ಧ ಎಂದಿದ್ದಾರೆ.

ನೀವು ಶಿವಕುಮಾರ್ ವಿರುದ್ಧ ರಾಜಕೀಯವಾಗಿ ನಡೆಸುತ್ತಿರುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಸತೀಶ್ ಜಾರಕಿಹೊಳಿ ಅವರು ಕುಮಾರಸ್ವಾಮಿ ಅವರಿಗೆ ತಿಳಿಸಿದ್ದಾರೆ.

ಭೇಟಿ, ಮಾತುಕತೆ ನಂತರ ಕುಮಾರಸ್ವಾಮಿ ಮತ್ತು ಜಾರಕಿಹೊಳಿ ಸಂಸತ್ ಭವನದ ಆವರಣದಲ್ಲೇ ಬಿಜೆಪಿಯ ಇಬ್ಬರು ಪ್ರಭಾವೀ ಸಚಿವರನ್ನು ಭೇಟಿ ಮಾಡಿದ್ದು, ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamymeeting in delhiminister satish jarakiholi
1 FacebookTwitterPinterestEmail
admin

previous post
ಹನಿಟ್ರ್ಯಾಪ್ ಪ್ರಕರಣ: ಎಸ್‌ಐಟಿ ತನಿಖೆಗೆ ಚಿಂತನೆ
next post
ರಾಜಣ್ಣ ಪುತ್ರ ರಾಜೇಂದ್ರ ಕೊಲೆ ಯತ್ನ ದೂರು ದಾಖಲು

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ