Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜಣ್ಣ ಪುತ್ರ ರಾಜೇಂದ್ರ ಕೊಲೆ ಯತ್ನ ದೂರು ದಾಖಲು

by admin March 27, 2025
written by admin March 27, 2025 0 comments 1 minutes read
0FacebookTwitterPinterestEmail
123

ಬೆಂಗಳೂರು:ಹನಿಟ್ರ್ಯಾಪ್ ಪ್ರಕರಣ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆಯುತ್ತಿದ್ದು, ಸಹಕಾರಿ ಸಚಿವ ಕೆ.ಎನ್.ರಾಜಣ್ಣ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ರಾಜೇಂದ್ರ, ತಮ್ಮ ಕೊಲೆ ಯತ್ನವೂ ನಡೆದಿತ್ತು ಎಂದು ದೂರು ದಾಖಲಿಸಿದ್ದಾರೆ.

ಹನಿಟ್ರ್ಯಾಪ್‌ಗೆ ಸಂಬಂಧಿಸಿದಂತೆ ರಾಜಣ್ಣ ನೀಡಿರುವ ದೂರು ಹಾಗೂ ರಾಜೇಂದ್ರ ಮಾಡಿರುವ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿ 14 ದಿನದಲ್ಲಿ ವರದಿ ನೀಡುವಂತೆ ಸಿಐಡಿಗೆ ಪೋಲಿಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಆದೇಶಿಸಿದ್ದಾರೆ.

ಮಾಹಿತಿ ಆಧರಿಸಿ ತನಿಖೆ

ಪೋಲಿಸ್ ಮಹಾನಿರ್ದೇಶಕರ ಆದೇಶದ ಮೇರೆಗೆ ಸಿಐಡಿ, ಬಿಎನ್‌ಎಸ್‌ಎಸ್ ಪ್ರಕಾರ ಎಫ್‌ಐಆರ್ ದಾಖಲಿಸದೆ, ದೂರುದಾರರು ನೀಡಿರುವ ಮಾಹಿತಿ ಆಧರಿಸಿ ತನಿಖೆ ಆರಂಭಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಹನಿಟ್ರ್ಯಾಪ್ ಪ್ರಕರಣ ಹೆಚ್ಚುವರಿ ತನಿಖೆಗೆ ವಹಿಸಲು ಅರ್ಹವೇ ಎಂಬ ಬಗ್ಗೆಯಷ್ಟೇ ಪ್ರಾಥಮಿಕ ತನಿಖೆ ನಡೆದಿದೆ.

ಒಂದು ವೇಳೆ ಪೂರ್ಣ ಪ್ರಮಾಣದ ತನಿಖೆಗೆ ಅರ್ಹತೆ ಹೊಂದಿದೆ ಎಂದಾದರೆ, ಪೋಲಿಸ್ ಮಹಾನಿರ್ದೇಶಕರಿಗೆ ಸಿಐಡಿ ವರದಿ ನೀಡಲಿದೆ.

ವರದಿ ಆಧಾರದಲ್ಲಿ ತನಿಖೆ ತೀರ್ಮಾನ

ಈ ವರದಿ ಆಧಾರದ ಮೇಲೆ ಪೋಲಿಸ್ ಮಹಾನಿರ್ದೇಶಕರು ಯಾವ ತನಿಖೆ ನಡೆಸಬೇಕೆಂಬ ತೀರ್ಮಾನ ಕೈಗೊಳ್ಳಲಿದ್ದಾರೆ.

ರಾಜೇಂದ್ರ ನೀಡಿರುವ ಕೊಲೆ ಯತ್ನದ ಆರೋಪ ಮತ್ತು ಹನಿಟ್ರ್ಯಾಪ್‌ಗೂ ಸಂಬಂಧವಿದೆಯೇ ಎಂಬ ಕುರಿತು ಸಿಐಡಿ ಇದೇ ವೇಳೆ ತನಿಖೆ ನಡೆಸಿದೆ.

ಸಚಿವರ ಪುತ್ರ ರಾಜೇಂದ್ರ ಪೋಲಿಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ತಮ್ಮ ಮೇಲೆ ಕೊಲೆ ಯತ್ನ ನಡೆದಿರುವ ಮಾಹಿತಿಯನ್ನು ನೀಡಿದ್ದಾರೆ.

ತುಮಕೂರು ಎಸ್‌ಪಿಗೆ ದೂರು

ರಾಜೇಂದ್ರ ಅವರ ದೂರನ್ನು ಆಲಿಸಿದ ಪೋಲಿಸ್ ಮಹಾನಿರ್ದೇಶಕರು, ತುಮಕೂರು ಪೋಲಿಸ್ ವರಿಷ್ಠಾಧಿಕಾರಿಗೆ ದೂರು ನೀಡುವಂತೆ ಸಲಹೆ ಮಾಡುವ ಜೊತೆಗೆ ಹನಿಟ್ರ್ಯಾಪ್ ಮತ್ತು ಕೊಲೆ ಯತ್ನ ಘಟನೆಗಳಿಗೆ ಸಂಬಂಧವಿದೆಯೇ ಎಂಬ ಬಗ್ಗೆ ಸಿಐಡಿ ತನಿಖೆಗೂ ಆದೇಶಿಸಿದರು.

ಡಿಜಿಪಿ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಾಜೇಂದ್ರ, ನನ್ನ ಮೇಲೆ ಹನಿಟ್ರ್ಯಾಪ್ ಆಗಿಲ್ಲ, ಕಳೆದ ನವೆಂಬರ್ 16ರಂದು ಮಗಳ ಹುಟ್ಟುಹಬ್ಬಕ್ಕೆ ಶಾಮಿಯಾನ ಹಾಕಲು ಬಂದವರು, ನನ್ನ ಮೇಲೆ ಹಲ್ಲೆ ಅಥವಾ ಕೊಲೆ ಮಾಡಬೇಕು ಎಂಬ ಉದ್ದೇಶದಿಂದ ಬಂದಿದ್ದರು, ಆದರೆ, ಅವರ ಪ್ರಯತ್ನ ಸಫಲವಾಗಲಿಲ್ಲ.

ಜನವರಿ ತಿಂಗಳಲ್ಲಿ ನನ್ನ ಕೊಲೆ ಸಂಚು ನಡೆದಿರುವ ಮಾಹಿತಿಯನ್ನು ಅನಾಮಿಕ ವ್ಯಕ್ತಿಯೊಬ್ಬ ದೂರವಾಣಿ ಮೂಲಕ ಮಾಹಿತಿ ನೀಡಿದ.

ಕೊಲೆ ಸಂಚು ಮಾಹಿತಿ

ನಿಮ್ಮ ಮಗಳ ಹುಟ್ಟುಹಬ್ಬದ ದಿನ ನಿಮ್ಮನ್ನು ಕೊಲೆ ಮಾಡಬೇಕೆಂಬ ಯೋಜನೆ ರೂಪಿಸಲಾಗಿದೆ, ಕೊಲೆಗಾರನಿಗೆ ಐದು ಲಕ್ಷ ರೂಪಾಯಿ ಸಂದಾಯವಾಗಿದೆ ಎಂಬ ಮಾಹಿತಿ ನೀಡಿದ, ಜೊತೆಗೆ ಕೆಲವರ ಹೆಸರನ್ನೂ ತಿಳಿಸಿದ.

ಆ ಆಡಿಯೊವನ್ನು ಡಿಜಿಗೆ ಕೊಟ್ಟೆ, ಅವರು ಎಸ್‌ಪಿ ಅವರಿಗೆ ಕೊಡಿ ಎಂದು ಹೇಳಿದ್ದಾರೆ, ನಾಳೆ ತುಮಕೂರು ಎಸ್‌ಪಿ ಅವರನ್ನು ಭೇಟಿ ಮಾಡಿ ದೂರು ಕೊಡುತ್ತೇನೆ.

ನನ್ನ ಫೋನ್‌ಗೆ ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ, ಹತ್ಯೆ ಯತ್ನದ ದೂರು ನೀಡಿದ್ದೇನೆ, ನನ್ನ ಕೊಲೆಗೆ ಸೋಮ, ಭರತ್ ಎಂಬುವವರು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಬಂದಿದೆ.

ಗಂಭೀರ ವಿಷಯವಾಗಿದೆ

ಜನವರಿಯಲ್ಲಿ ನನಗೆ ಮಾಹಿತಿ ಬಂದಾಗ ಅದು ತಮಾಷೆ ಎಂದುಕೊಂಡಿದ್ದೆ, ಆದರೆ, ಅದು ಈಗ ಗಂಭೀರವಾಗಿದೆ.

ನನ್ನ ಮನೆಯಲ್ಲಿ ಸಿಸಿಟಿವಿ ಇದೆ, ಅದನ್ನು ತನಿಖಾಧಿಕಾರಿಗಳು ಪರಿಶೀಲಿಸಬೇಕು, ಇಬ್ಬರು ಬಂದಿದ್ದರು ಎಂಬುದು ಆಡಿಯೊದಲ್ಲಿದೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
complaimt to policeminister k n rajannason rajendra
0 FacebookTwitterPinterestEmail
admin

previous post
ಕುಮಾರಸ್ವಾಮಿ-ಸತೀಶ್ ಜಾರಕಿಹೊಳಿ ರಣತಂತ್ರ !
next post
ಈಸ್ಟ್ ಇಂಡಿಯಾ ಕಾಂಗ್ರೆಸ್ ಕಪಿಮುಷ್ಠಿಯಲ್ಲಿ ಕರ್ನಾಟಕ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ