Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

by KM Shivaraju May 16, 2025
written by KM Shivaraju May 16, 2025 0 comments 2 minutes read
0FacebookTwitterPinterestEmail
457

ಅಸ್ತಿತ್ವ ಭಾರತದಲ್ಲಿ; ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ

ನವದೆಹಲಿ: ಆಪರೇಷನ್ ಸಿಂದೂರ್ ಬಗ್ಗೆ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ನೀಡಿರುವ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆಪರೇಷನ್ ಸಿಂದೂರ್ ಕಾರ್ಯಾಚರಣೆ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರು ಕೂಡ ಇದೇ ರೀತಿಯಲ್ಲಿ ಹೇಳಿಕೆ ನೀಡಿದ್ದರು ಎಂದು ಕಿಡಿಕಾರಿದ್ದಾರೆ.

ಪಹಲ್ಗಾಮ್ ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕ ದಾಳಿ ಮತ್ತು ಉಗ್ರರಿಗೆ ಪಾಕಿಸ್ತಾನದ ಚಿತಾವಣಿಯಷ್ಟೇ ಅಲ್ಲದೇ, ತನ್ನ ತನು-ಮನ-ಧನ ಅರ್ಪಣೆ ಮಾಡುತ್ತಿರುವುದನ್ನು ಖಂಡಿಸುವ ಬದಲಿಗೆ ಕಾಂಗ್ರೆಸ್ ಪಕ್ಷವು ಸೇನಾಪಡೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ನಿಂದಿಸುತ್ತಿರುವುದು ನಾಚಿಕೆಗೇಡು ಎಂದು ಕೇಂದ್ರ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಭಾರತದ ರಾಜಕೀಯ ಪಕ್ಷವೋ? ಅಥವಾ ಶತ್ರು ದೇಶದ ವಕ್ತಾರಿಕೆ ಮಾಡುತ್ತಿರುವ ಪಕ್ಷವೋ? ಅದರ ತನ್ನ ಡಿಎನ್ ಎ ಭಾರತದ್ದೋ? ಅಥವಾ ಪಾಕಿಸ್ತಾನದ್ದೋ? ಎಂಬುದನ್ನು ಅದುವೇ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿರುವ ಕುಮಾರಸ್ವಾಮಿ ಅವರು, ಪಾಕಿಸ್ತಾನ ಸೃಷ್ಟಿಯಾಗಿದ್ದು ಹೇಗೆ? ಅದರಲ್ಲಿ ಕಾಂಗ್ರೆಸ್ ಪಾತ್ರವೇನು? ಎಂಬ ಬಗ್ಗೆ ಚರ್ಚಿಸುವ ಅಗತ್ಯವಿಲ್ಲ.

ಆದರೆ, ದೇಶ ವಿಭಜನೆಯಾಗಿ ಏಳೂವರೆ ದಶಕ ಮೀರಿದರೂ ಆ ಪಕ್ಷ ಇನ್ನೂ ಪಾಕಿಸ್ತಾನ್ ಮನಃಸ್ಥಿತಿಯಲ್ಲೇ ಇದೆ! ಅಸ್ತಿತ್ವ ಭಾರತದಲ್ಲಿ, ಅದರ ಹೃದಯ ಮಾತ್ರ ಪಾಕಿಸ್ತಾನದಲ್ಲಿ!! ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ!! ಎಂದು ಕಟುವಾಗಿ ಟೀಕಿಸಿದ್ದಾರೆ.

ಕೊತ್ತೂರು ಮಂಜುನಾಥ್ ಹೇಳಿಕೆ ಕಾಂಗ್ರೆಸ್ ಪಕ್ಷದ ಅಂತರಾತ್ಮದ ದನಿ. ಆಚಾರವಿಲ್ಲದ ನಾಲಿಗೆ.. ಆಪರೇಷನ್ ಸಿಂದೂರ್ ಬೂಟಾಟಿಕೆಯಂತೆ! ಇಡೀ ರಾಷ್ಟ್ರದ ಹೆಮ್ಮೆಯಾಗಿರುವ ಈ ಯಶಸ್ವಿ ಕಾರ್ಯಾಚರಣೆ ವಿರಾಟ್ ಸ್ವರೂಪವನ್ನು ಖುದ್ದು ನೋಡಬೇಕೆ ಮಂಜುನಾಥ್? ಹಾಗಿದ್ದರೆ ಬನ್ನಿ, ನಿಮ್ಮನ್ನು ಪಾಕಿಸ್ತಾನಕ್ಕೆ ಕಳಿಸಿ ಕೊಡುತ್ತೇವೆ. ಭಾರತೀಯ ಸೇನೆಯ ಪರಾಕ್ರಮವನ್ನು ಖುದ್ದು ನೋಡಿಕೊಂಡು ಬರುವಿರಂತೆ. ಹೋಗುವಿರಾ ಪಾಕಿಸ್ತಾನಕ್ಕೆ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.

ಚುನಾವಣೆ ಆಯೋಗಕ್ಕೆ ನಕಲಿ ಜಾತಿ ಪ್ರಮಾಣ ಪತ್ರ ಕೊಟ್ಟು ಜನತೆಗೆ ಟೋಪಿ ಹಾಕಿ ಚುನಾವಣೆ ಗೆದ್ದಿದ್ದ ಈ ಕಿಡಿಗೇಡಿ ಕಾಂಗ್ರೆಸ್ ಶಾಸಕ, ತನ್ನೊಳಗಿದ್ದ ವಿಷವನ್ನೇ ಕಕ್ಕಿಕೊಂಡಿದ್ದಾರೆ. ಅಂಥ ವಿಷಕಾರಿ ಡಿಎನ್ಎ ಉಳ್ಳ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರಪ್ರೇಮವಿರಲು ಸಾಧ್ಯವೇ? ಆಪರೇಷನ್ ಸಿಂದೂರ್ ನಂತರ ಸೀನಿಯರ್ ಖರ್ಗೆ, ಜ್ಯೂನಿಯರ್ ಖರ್ಗೆ, ರಾಹುಲ್ ಗಾಂಧಿ ಸೇರಿ ಕರ್ನಾಟಕದ ಸೋ ಕಾಲ್ಡ್ ಕಾಂಗ್ರೆಸ್ ನಾಯಕರ ಆಣಿಮುತ್ತುಗಳನ್ನು ಗಮನಿಸಿದರೆ ಅವರ ಪ್ರೇಮ ಯಾವ ರಾಷ್ಟ್ರದ ಮೇಲೆ ಎಂದು ತಿಳಿಯುತ್ತದೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸಚಿವರು ತಿರುಗೇಟು ನೀಡಿದ್ದಾರೆ.

ಹಾಗೆಯೇ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಹೇಳಿಕೆಗಳನ್ನೂ ದೇಶ ಗಮನಿಸಿದೆ. ರಾಷ್ಟ್ರದ ಬಗ್ಗೆ ಅವರಿಗಿರುವ ಬದ್ಧತೆ, ಆಚಲತೆಯನ್ನು ನೋಡಿದೆ, ಕೊಂಡಾಡಿದೆ. ರಾಷ್ಟ್ರ ದ್ರೋಹ ಮತ್ತು ರಾಷ್ಟ್ರಪ್ರೇಮಕ್ಕೆ ಇರುವ ವ್ಯತ್ಯಾಸವಿದು ಎಂದು ಅವರು ಕಾಂಗ್ರೆಸ್ ಪಕ್ಷವನ್ನು ಕುಟುಕಿದ್ದಾರೆ.

ರಾಷ್ಟ್ರ ನಿಂದನೆ, ಸೇನೆಯ ನಿಂದನೆ ಕಾಂಗ್ರೆಸ್ ಪಕ್ಷಕ್ಕೆ ಹೊಸದಲ್ಲ. ಅದು ಕಾಂಗ್ರೆಸ್ ಪಕ್ಷಕ್ಕೆ ಜನ್ಮತಃ ಅಂಟಿರುವ ಜಾಡ್ಯ. ಪಾಕಿಸ್ತಾನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿಯಾಗಿ ರೂಪಾಂತರಗೊಂಡಿರುವ ಆ ಪಕ್ಷದ ಅಸಲಿ ಅಜೆಂಡಾ ಏನು? ಹಿಡೆನ್ ಏನೆಲ್ಲಾ ಮಾಡುತ್ತಿದೆ? ಇದು ನನ್ನ ಮೂಲಭೂತ ಪ್ರಶ್ನೆ ಎಂದು ಸಚಿವರು ಹೇಳಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
beatingcongresscriticisesenemy countryExistencehdkheartindiaPakistanwelfare
0 FacebookTwitterPinterestEmail
KM Shivaraju

previous post
ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ
next post
93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ