Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ

by KM Shivaraju May 18, 2025
written by KM Shivaraju May 18, 2025 0 comments 2 minutes read
0FacebookTwitterPinterestEmail
253

ಜೆ.ಪಿ. ಭವನದಲ್ಲಿ ಕಾರ್ಯಕರ್ತರ ಜತೆ ಕೇಕ್ ಕತ್ತರಿಸಿ ಸಂಭ್ರಮ

ಬೆಂಗಳೂರು: ಜೆಡಿಎಸ್ ವರಿಷ್ಠ ನಾಯಕರು, ರಾಷ್ಟ್ರದ ಮಾಜಿ ಪ್ರಧಾನಮಂತ್ರಿಗಳು ಆಗಿರುವ ಹೆಚ್.ಡಿ.ದೇವೇಗೌಡರು ಭಾನುವಾರ 93ನೇ ವಸಂತಕ್ಕೆ ಪದಾರ್ಪಣೆ ಮಾಡಿದ್ದು, ತನ್ನಿಮಿತ್ತ ಅವರು ತಿರುಪತಿ ತಿರುಮಲ ಕ್ಷೇತ್ರಕ್ಕೆ ಭೇಟಿ ನೀಡಿ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಬೆಳಗ್ಗೆಯೇ ತಿರುಮಲ ಕ್ಷೇತ್ರವನ್ನು ತಲುಪಿದ ಅವರನ್ನು ಟಿಟಿಡಿ ಅಧಿಕಾರಿಗಳು ಬರಮಾಡಿಕೊಂಡರು. ನಂತರ ಅವರು ವೆಂಕಟೇಶ್ವರ ಸ್ವಾಮಿ ದರ್ಶನ ಮಾಡಿ ಗೌಡರು ಪೂಜೆ ಸಲ್ಲಿಸಿದರು.

ಬಳಿಕ ತಿರುಪತಿಯಿಂದ ಬೆಂಗಳೂರಿಗೆ ವಾಪಸ್ಸಾದ ಮಾಜಿ ಪ್ರಧಾನಿಗಳು, ಜೆಡಿಎಸ್‌ ಮುಖಂಡರು ಮತ್ತು ಕಾರ್ಯರ್ತರು ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ತಮ್ಮ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಅವರು ಬೃಹತ್‌ ಕೇಕ್‌ ಕತ್ತರಿಸಿ ಸಂಭ್ರಮಿಸಿದರು.

ಗಣ್ಯರಿಂದ ಶುಭಾಶಯದ ಸುರಿಮಳೆ

ಮಾಜಿ ಪ್ರಧಾನಿ ದೇವೇಗೌಡರಿಗೆ ರಾಷ್ಟ್ರ ಮತ್ತು ರಾಜ್ಯಮಟ್ಟದ ಗಣ್ಯಾತಿಗಣ್ಯ ನಾಯಕರು ಜನ್ಮದಿನ ಶುಭಾಶಯ ಕೋರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ‌ ಅಮಿತ್‌ ಶಾ, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಸೇರಿದಂತೆ ಅನೇಕ ಗಣ್ಯರು ಶುಭ ಕೋರಿದ್ದಾರೆ.

“ನಮ್ಮ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯಗಳು. ಅವರು ತಮ್ಮ ಮುತ್ಸದ್ದಿತನ ಮತ್ತು ಸಾರ್ವಜನಿಕ ಸೇವೆಯಿಂದಾಗಿ ವ್ಯಾಪಕವಾಗಿ ಗೌರವಿಸಲ್ಪಡುತ್ತಾರೆ. ಹಲವಾರು ವಿಷಯಗಳ ಕುರಿತು ಅವರ ಜ್ಞಾನ ಮತ್ತು ಒಳನೋಟಗಳು ಹೆಚ್ಚಿನ ಶಕ್ತಿಯ ಮೂಲವಾಗಿವೆ. ದೇವರು ಅವರಿಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಕರುಣಿಸಲಿ” ಎಂದು ಪ್ರಧಾನಿ ಮೋದಿ ಅವರು ಹಾರೈಸಿದ್ದಾರೆ.

ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್, ಲೋಕಸಭೆ ಸ್ಪೀಕರ್ ಓಂ ಬಿರ್ಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಅದೇ ರಾಜ್ಯದ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ಕೇಂದ್ರ ಸಚಿವ ರಾಜನಾಥ್ ಸಿಂಗ್, ಶಿವರಾಜ್ ಸಿಂಗ್ ಚೌಹಾಣ್, ಪ್ರಹ್ಲಾದ್ ಜೋಷಿ, ಅರ್ಜುನ್ ಮುಂಡಾ, ರಾಮಮೋಹನ್ ನಾಯ್ಡು, ಜತಿನ್ ರಾಮ್ ಮಾಂಜಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಅನೇಕ ಗಣ್ಯರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿದ್ದಾರೆ.

ತಂದೆಗೆ ಶುಭ ಕೋರಿದ ಹೆಚ್ಡಿಕೆ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿಗಳಿಗೆ ಶುಭ ಕೋರಿ ತಮ್ಮ ಎಕ್ಸ್ ಖಾತೆಯಲ್ಲಿ ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ. ನನ್ನ ಪೂಜ್ಯ ತಂದೆಯವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಮಂತ್ರಿಗಳೂ ಆಗಿರುವ ಮಣ್ಣಿನಮಗ ದೇವೇಗೌಡರಿಗೆ ಜನ್ಮದಿನದ ಭಕ್ತಿಪೂರ್ವಕ ಶುಭಾಶಯಗಳು.

ನನ್ನ ಶಕ್ತಿ, ನನ್ನ ಧೈರ್ಯ, ನನ್ನ ಸ್ಫೂರ್ತಿ ನನ್ನ ತಂದೆಯವರೇ ಆಗಿದ್ದಾರೆ. ಅವರ ಸಂಘರ್ಷದ ಹಾದಿ, ಸಾಧನೆ, ಸೇವಾ ತತ್ಪರತೆ ನನ್ನ ಮೇಲೆ ಅಗಾಧ ಪ್ರಭಾವ ಬೀರಿದೆ. ಇಡೀ ಬದುಕನ್ನು ರಾಷ್ಟ್ರ ಸೇವೆಗೆ ಸಮರ್ಪಿಸಿರುವ ಈ ಮಹಾನ್ ನಾಯಕನ ಕುಡಿಯಾಗಿ ಹುಟ್ಟಿರುವುದು ನನ್ನ ಜನ್ಮಜನ್ಮದ ಸುಕೃತ.

ಆ ಭಗವಂತ ನನ್ನ ತಂದೆಯವರಿಗೆ ಇನ್ನೂ ಹೆಚ್ಚಿನ ಆಯುರಾಗ್ಯ ಕರುಣಿಸಲಿ. ಸುದೀರ್ಘ ಕಾಲ ನಮಗೆಲ್ಲಾ ಮಾರ್ಗದರ್ಶನ ಮಾಡಿ, ಜನಸೇವೆ ಮಾಡುವ ಚೈತನ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಜೆಡಿಎಸ್ ಕಚೇರಿಯಲ್ಲಿ ಸಂಭ್ರಮ

ಮಾಜಿ ಪ್ರಧಾನಿಗಳ ಜನ್ಮದಿನವನ್ನು ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮುಖಂಡರು, ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು. ಕಾರ್ಯಕರ್ತರ ಜತೆ ಕೇಕ್ ಕತ್ತರಿಸಿ ದೇವೇಗೌಡರು ಎಲ್ಲಾರಿಗೂ ಸಿಹಿ ತಿನ್ನಿಸಿ ಸಂಭ್ರಮಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಪ್ರಧಾನಿಗಳು, 986ರಿಂದ ಮೇ 18 ನೆಯ ತಾರೀಖು ಪ್ರತೀ ವರ್ಷ ತಿರುಪತಿಗೆ ಹೋಗುತ್ತಲೇ ಇದ್ದೇನೆ. ಮಂಡಿ ನೋವು ಬಂದ ಮೇಲೆ ಹೋಗಲು ಆಗಿರಲಿಲ್ಲ. ಕುಪೇಂದ್ರ ರೆಡ್ಡಿಯವರು ಅಲ್ಲಿ ಹನ್ನೆರಡು ಕೊಠಡಿಗಳ ಗೆಸ್ಟ್ ಹೌಸ್ ಕಟ್ಟಿಸಿದ್ದಾರೆ. ಅದರ ಉದ್ಘಾಟನೆಗೆ ಕರೆದಿದ್ದರು. ಹಾಗೇ ದೇವರ ದರ್ಶನ ಮುಗಿಸಿ ಬಂದೆ ಎಂದರು.

ಈ ರಾಷ್ಟ್ರದ ರಾಷ್ಟ್ರಪತಿ, ಪ್ರಧಾನಮಂತ್ರಿ, ಗೃಹ ಸಚಿವರು ಸೇರಿದಂತೆ ಅನೇಕರು ಗಣ್ಯರು ನನಗೆ ಜನ್ಮದಿನದ ಶುಭ ಕೋರಿದ್ದಾರೆ. ಅಮಿತ್ ಶಾ ಅವರು ದೂರವಾಣಿ ಕರೆ ಮಾಡಿ ಮಾತನಾಡಿದರು. ಎಲ್ಲರಿಗೂ ಧನ್ಯವಾದ ಹೇಳಿದ್ದೇನೆ. ಎಲ್ಲರಿಗೂ ನಾನು ತುಂಬಾ ಆಭಾರಿಯಾಗಿದ್ದೇನೆ. ಪ್ರಧಾನಮಂತ್ರಿ, ಗೃಹ ಮಂತ್ರಿಗಳು ಬಿಡುವಿಲ್ಲದ ಕಾರ್ಯಕ್ರಮಗಳ ನಡುವೆಯೂ ನನ್ನ ನೆನಪು ಮಾಡಿಕೊಂಡು ಶುಭಾಶಯಗಳನ್ನು ಹೇಳಿದ್ದಾರೆ ಎಂದು ಮಾಜಿ ಪ್ರಧಾನಿಗಳು ಹೇಳಿದರು.

ಇವತ್ತು ನಾನು ಯಾವುದೇ ರಾಜಕೀಯ ಮಾತಾಡಲ್ಲ. ಮನೆ ಹತ್ತಿರ ಕೂಡಾ ಕಾರ್ಯಕರ್ತರು, ಅಭಿಮಾನಿಗಳು ಬರುತ್ತಿದ್ದಾರೆ. ಹೀಗಾಗಿ ನಿಮ್ಮೆಲ್ಲರ ಅನುಮತಿ ಪಡೆದು ತೆರಳುತ್ತಿದ್ದೇನೆ ಎಂದರು ಅವರು.

ಪಕ್ಷದ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಜವರಾಯ ಗೌಡರು, ಮಾಜಿ ಎಂ ಎಲ್ ಸಿ ಕೆ.ಎ. ತಿಪ್ಪೇಸ್ವಾಮಿ, ಹಿರಿಯ ಮುಖಂಡರು, ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
Amit Shahcelebrationcutting cakeDeve GowdaJP BhavanPM Moditurns 93wishworkers
0 FacebookTwitterPinterestEmail
KM Shivaraju

previous post
ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ
next post
ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ