Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಅಂಕಣ

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ

by admin May 19, 2025
written by admin May 19, 2025 0 comments 4 minutes read
0FacebookTwitterPinterestEmail
303

ಅಳೆದು-ಸುರಿದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪಟ್ಟಾಭಿಷೇಕ ಯಾತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ತೋರಿಸಿದ್ದಾರಂತೆ.

ಹಾಗೆಂಬ ವರ್ತಮಾನ ಪಕ್ಷದ ಹೆಡ್ಡಾಫೀಸಿನಿಂದ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಪಾಳಯದಲ್ಲಿ ಸಂಚಲನ ಶುರುವಾಗಿದೆ, ಅಂದ ಹಾಗೆ, ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕುಮಾರಸ್ವಾಮಿ ದಿಲ್ಲಿಗೆ ಹೋದ ನಂತರ ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ನಿಖಿಲ್ ಕುಮಾರಸ್ವಾಮಿಯವರಿಗೆ ನೀಡಬೇಕು ಎಂಬ ಲೆಕ್ಕಾಚಾರ ಪದ್ಮನಾಭ ನಗರದ ಗೌಡರ ನಿವಾಸದಲ್ಲಿ ಶುರುವಾಗಿತ್ತು, ಇದಕ್ಕೆ ಪೂರಕವಾಗಿ ಕುಮಾರಸ್ವಾಮಿ ಅಗ್ರೆಸಿವ್ ಆಗಿ ಸಿದ್ದು ಸರ್ಕಾರದ ವಿರುದ್ಧ ದಾಳಿ ಪ್ರಾರಂಭಿಸಿದ್ದರು, ಈ ದಾಳಿ ರಾಜ್ಯದ ಗಮನ ಸೆಳೆಯುವ ಕಾಲಕ್ಕೆ ಸರಿಯಾಗಿ ನಿಖಿಲ್ ಪಟ್ಟಾಭಿಷೇಕ ಕಾರ್ಯ ಮುಗಿದರೆ, ಈ ಜಾಗದಲ್ಲಿ ಅವರು ಸೆಟ್ಲಾಗುವುದು ಸುಲಭ ಎಂಬುದು ಈ ದಾಳಿಯ ಹಿಂದಿನ ಲೆಕ್ಕಾಚಾರವಾಗಿತ್ತು.

ಆದರೆ, ಕುಮಾರಸ್ವಾಮಿಯವರು ಒಂದು ಕಡೆಯಿಂದ ದಾಳಿ ಪ್ರಾರಂಭಿಸುತ್ತಿದ್ದಂತೆಯೇ ಇತ್ತ ಸಿಎಂ ಸಿದ್ದು ಮತ್ತು ಡಿಸಿಎಂ ಡಿಕೆಶಿ ತಿರುಗಿ ಬಿದ್ದು ಜೆಡಿಎಸ್ ಪಾಳೆಯವನ್ನೇ ಛಿದ್ರ ಮಾಡಲು ಹೊರಟರು.

ಪರಿಣಾಮ, ಇನ್ನೇನು ಜೆಡಿಎಸ್‌ನ ಹನ್ನೆರಡೋ, ಹದಿಮೂರು ಶಾಸಕರು ಪಕ್ಷ ತೊರೆದು ಅಸೆಂಬ್ಲಿಯಲ್ಲಿ ಪ್ರತ್ಯೇಕವಾಗಿ ಕೂರಲು ಸಜ್ಜಾಗುತ್ತಿದ್ದಾರೆ ಎಂಬ ವರ್ತಮಾನ ಹರಡಿಕೊಂಡಿತು.

ಇದಕ್ಕೆ ಸರಿಯಾಗಿ ನಿಖಿಲ್ ಪಟ್ಟಾಭಿಷೇಕದ ವಿಷಯದಲ್ಲಿ ಪಕ್ಷದ ಹಿರಿಯ ಶಾಸಕರಿಗೆ ಅಸಮಾಧಾನ ಶುರುವಾಗಿದೆ, ನಾವು ಕುಮಾರಣ್ಣನ ಹಿಂದೆ ನಿಲ್ಲುವುದು ಬೇರೆ, ನಿಖಿಲ್ ಕುಮಾರಸ್ವಾಮಿಯವರ ಹಿಂದೆ ನಿಲ್ಲುವುದು ಹೇಗೆ ಅಂತ ಅವರು ಕಿರಿಕಿರಿ ಮಾಡಿಕೊಂಡಿದ್ದಾರೆ ಎಂಬಂತಹ ಮಾತುಗಳು ಹರಿದಾಡತೊಡಗಿವೆ.

ಯಾವಾಗ ಇಂತಹ ಕಲಸು ಮೇಲೋಗರ ಶುರುವಾಯಿತೋ, ಇದಾದ ನಂತರ ದೊಡ್ಡಗೌಡರು ಕುಮಾರಸ್ವಾಮಿಯವರಿಗೆ ಸಿಗ್ನಲ್ಲು ಕೊಟ್ಟು, ರಾಜ್ಯ ರಾಜಕಾರಣದ ಬಗ್ಗೆ ತಲೆ ಕೆಡಿಸಿಕೊಳ್ಳುವುದನ್ನು ಬಿಟ್ಟು ದಿಲ್ಲಿಯಲ್ಲಿ ಸೆಟ್ಲಾಗುವುದು ಒಳ್ಳೆಯದು, ಯಾಕೆಂದರೆ ಪ್ರಧಾನಿ ನರೇಂದ್ರಮೋದಿಯವರು ನಂಬಿಕೆ ಇಟ್ಟು ಕೇಂದ್ರ ಸಂಪುಟದಲ್ಲಿ ದೊಡ್ಡ ಖಾತೆ ಕೊಟ್ಟಿದ್ದಾರೆ, ಆ ಕಡೆ ಗಮನಕೊಟ್ಟು ಕೆಲಸ ಮಾಡಿದರೆ ಒಳ್ಳೆಯದು ಎಂದಿದ್ದಾರೆ.

ಹೀಗೆ ದೊಡ್ಡಗೌಡರು ಸಿಗ್ನಲ್ಲು ಕೊಟ್ಟ ನಂತರ ಏಕಕಾಲಕ್ಕೆ ಕುಮಾರಣ್ಣ ಕರ್ನಾಟಕದ ಮೇಲೆ ಗಮನ ಕಡಿಮೆ ಮಾಡಿದ್ದಾರೆ, ಅದೇ ಕಾಲಕ್ಕೆ ನಿಖಿಲ್ ಪಟ್ಟಾಭಿಷೇಕ ಕಾರ್ಯವೂ ಮುಂದಕ್ಕೆ ಹೋಗಿದೆ.

ಆದರೆ, ಇದಾಗಿ ಆರೆಂಟು ತಿಂಗಳು ಕಳೆದ ಮೇಲೆ ಚಿತ್ರ ಬದಲಾಗಿದೆ, ಒಂದು ಕಡೆಯಿಂದ ದೊಡ್ಡಗೌಡರು ಮತ್ತು ಕುಮಾರಸ್ವಾಮಿಯವರಿಗೆ ನಿಖಿಲ್ ಪಟ್ಟಾಭಿಷೇಕದ ಮುಹೂರ್ತ ಹತ್ತಿರವಾಗಿದೆ ಅನ್ನಿಸುತ್ತಿದ್ದರೆ, ಮತ್ತೊಂದೆಡೆಯಿಂದ ಜೆಡಿಎಸ್‌ನ ಬಹುತೇಕ ಶಾಸಕರಿಗೆ, ಪಕ್ಷ ಕಟ್ಟುತ್ತಿರುವವರೇ ದೊಡ್ಡಗೌಡರು ಮತ್ತು ಕುಮಾರಸ್ವಾಮಿ, ಅದಕ್ಕೆ ಅಗತ್ಯವಾದ ಬಂಡವಾಳ ಹಾಕುವವರೂ ಅವರೇ, ಹೀಗಾಗಿ ನಿಖಿಲ್ ಕುಮಾರಸ್ವಾಮಿ ಪಕ್ಷಾಧ್ಯಕ್ಷರಾಗಿ ಬಂದು ಕೂತರೆ ತಪ್ಪೇನು ಅನ್ನಿಸತೊಡಗಿದೆ.

ಇದೇ ರೀತಿ ಪಕ್ಷ ತೊರೆದು ಕೈ ಪಾಳೆಯ ಸೇರುವ ಲೆಕ್ಕಾಚಾರದಲ್ಲಿದ್ದ ಹಲವರಿಗೆ ಇದ್ದಕ್ಕಿದ್ದಂತೆ ಜ್ಞಾನೋದಯವಾಗಿದೆ, ಕಾರಣ, ಇವತ್ತು ಕಾಂಗ್ರೆಸ್ಸಿನಲ್ಲಿ ದಿನ ಕಳೆದಂತೆ ಸಿದ್ದರಾಮಯ್ಯ ಬಲಿಷ್ಟರಾಗುತ್ತಿರುವಾಗ ತಾವು ಕಾಂಗ್ರೆಸ್ಸಿಗೆ ಹೋದರೂ ಶಕ್ತಿ ಹೆಚ್ಚಾಗುವುದಿಲ್ಲ, ಹಾಗೆಯೇ ತಾವು ಪಕ್ಷ ತೊರೆದರೂ ಜೆಡಿಎಸ್ ಕಾರ್ಯಕರ್ತರ ಪಡೆ ತಪ್ಪಿಯೂ ತಮ್ಮ ಹಿಂದೆ ಬರುವುದಿಲ್ಲ, ಹೀಗಾಗಿ ಜೆಡಿಎಸ್ ತೊರೆಯುವುದು ಎಂದರೆ ರಾಜಕೀಯ ಭವಿಷ್ಯಕ್ಕೆ ಫಾಲಿಡಾಲ್ ಕೊಡುವುದೆಂದೇ ಅರ್ಥ ಎಂಬ ಲೆಕ್ಕಾಚಾರ.

ಅರ್ಥಾತ್, ಈಗ ಸನ್ನಿವೇಶ ಕೂಡಿ-ಕಳೆದು ನಿಖಿಲ್ ಕುಮಾರಸ್ವಾಮಿ ಅವರ ಪಟ್ಟಾಭಿಷೇಕಕ್ಕೆ ಪ್ರಶಸ್ತವಾಗತೊಡಗಿದೆ.

ಹಾಗಂತ ಏಕಾಏಕಿ ತಲೆಯ ಮೇಲೆ ಕಿರೀಟ ಇಟ್ಟರೆ ನಿಖಿಲ್ ಕುಮಾರಸ್ವಾಮಿ ಅವರಿಗೂ ಅದರ ಭಾರ ಹೊರುವುದು ಕಷ್ಟ ಆಗಬಾರದಲ್ಲ, ಹಾಗಂತಲೇ ದೊಡ್ಡಗೌಡರು ಪಟ್ಟಾಭಿಷೇಕಕ್ಕೂ ಮುನ್ನ ಇಡೀ ರಾಜ್ಯದುದ್ದ ಪ್ರವಾಸ ಮಾಡುವಂತೆ ಮೊಮ್ಮಗನಿಗೆ ಸೂಚಿಸಿದ್ದಾರೆ.

ಜೆಡಿಎಸ್ ಪಾಳಯದ ಪ್ರಕಾರ, ಜೂನ್ ತಿಂಗಳಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸ ಆರಂಭವಾಗಲಿದೆ.
ಕುತೂಹಲದ ಸಂಗತಿ ಎಂದರೆ ನಿಖಿಲ್ ಅವರನ್ನು ಹೊತ್ತೊಯ್ಯುವ ರಥ ಮೊದಲು ಎಲ್ಲಿಂದ ಹೊರಡಬೇಕು, ರಾಜ್ಯದ ಯಾವ್ಯಾವ ಭಾಗಗಳಲ್ಲಿ ಸಂಚರಿಸಬೇಕು ಅನ್ನುವುದರ ನೀಲ ನಕ್ಷೆ ದೊಡ್ಡಗೌಡರ ಕಣ್ಣಳತೆಯಲ್ಲೇ ಸಿದ್ಧವಾಗುತ್ತಿದೆ.

ಅಗರ್ವಾಲ್ ಅವರಿಗೇಕೆ ಕೋಪ

ಈ ಮಧ್ಯೆ ರಾಜ್ಯ ಬಿಜೆಪಿಯ ಉಸ್ತುವಾರಿ ರಾಧಾಮೋಹನದಾಸ್ ಅಗರ್ವಾಲ್ ಅವರಿಗೆ ಮಿತಿ ಮೀರಿದ ಕೋಪ ಬಂದಿದೆ.

ಕಾರಣ, ಭಾರತ-ಪಾಕಿಸ್ತಾನದ ನಡುವಣ ಮಿನಿ ವಾರ್ ನಂತರ ಸಿದ್ದರಾಮಯ್ಯ ಬ್ರಿಗೇಡ್‌ನ ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಮತ್ತಿತರರು ಕೇಂದ್ರ ಸರ್ಕಾರದ ವಿರುದ್ಧ ಮುಗಿ ಬಿದ್ದಿದ್ದಾರೆ.

ಇಡೀ ಎಪಿಸೋಡಿನಲ್ಲಿ ಕೇಂದ್ರ ಸರ್ಕಾರ ಹೇಗೆ ವಿಫಲವಾಗಿದೆ, ನಾಲ್ಕು ದಿನ ಯುದ್ಧ ನಡೆಸಿದ ನರೇಂದ್ರ ಮೋದಿ ಅವರಿಗಿಂತ, ಪಾಕಿಸ್ತಾನವನ್ನು ಹೋಳು ಮಾಡಿ ತೊಂಭತ್ಮೂರು ಸಾವಿರ ಸೈನಿಕರನ್ನು ಸೆರೆ ಹಿಡಿಯುವಂತೆ ಮಾಡಿದ ಇಂದಿರಾಗಾಂಧಿ ಎಷ್ಟು ಗ್ರೇಟು ಎಂಬಲ್ಲಿಯ ತನಕ ಅವರು ಬಾರಿಸುತ್ತಿದ್ದರೆ ರಾಜ್ಯ ಬಿಜೆಪಿ ತಕ್ಕ ಉತ್ತರ ನೀಡುತ್ತಿಲ್ಲ ಎಂಬುದು ರಾಧಾಮೋಹನದಾಸ್ ಅಗರ್ವಾಲ್ ಅವರ ಸಿಟ್ಟು.

ಬಿಜೆಪಿ ಮೂಲಗಳ ಪ್ರಕಾರ, ಅಗರ್ವಾಲ್ ಅವರ ಆಕ್ರೋಶಕ್ಕೆ ಅಮಿತ್ ಷಾ ತೆಗೆದುಕೊಂಡ ಕ್ಲಾಸು ಕಾರಣ, ಅಲ್ರೀ ನಿಮ್ಮ ಉಸ್ತುವಾರಿಯಲ್ಲಿರುವ ಕರ್ನಾಟಕದ ಬಿಜೆಪಿ ಘಟಕ ಯಾಕೆ ನಿರುತ್ಸಾಹದಿಂದಿದೆ, ಅಲ್ಲಿರುವ ನಮ್ಮ ಸೋಷಿಯಲ್ ಮೀಡಿಯಾ ಘಟಕ ಎಲ್ಲಿ ನಾಪತ್ತೆಯಾಗಿದೆ, ಈ ಬಗ್ಗೆ ಅಲ್ಲಿಂದಲೇ ನನಗೆ ದೂರುಗಳು ಬರುತ್ತಿವೆ, ಹೀಗಾಗಿ ಅಲ್ಲಿಗೆ ಹೋಗಿ ಸರಿ ಮಾಡಿ ಬನ್ನಿ ಅಂತ ಅಮಿತ್ ಷಾ ಅವರು ಅಗರ್ವಾಲ್ ಅವರಿಗೆ ಕ್ಲಾಸು ತೆಗೆದುಕೊಂಡಿದ್ದಾರೆ.

ಹೀಗೆ ಅವರು ಕ್ಲಾಸು ತೆಗೆದುಕೊಂಡ ನಂತರ ತಿರಂಗಾ ಯಾತ್ರೆಗೆ ಅಂತ ಕರ್ನಾಟಕಕ್ಕೆ ಬಂದಿದ್ದ ಅಗರ್ವಾಲ್ ಗುರ್ರ್ ಅಂದಿದ್ದಾರೆ.

’ನೋಡ್ರೀ, ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪಾಕಿಸ್ತಾನ ಆಡಿದ ಆಟ ಎಷ್ಟು, ಭಯೋತ್ಪಾದಕರನ್ನು ಬಳಸಿ ಜನರನ್ನು ಕೊಲ್ಲಿಸಿದ ಘಟನೆಗಳೆಷ್ಟು, ಆ ಬಗ್ಗೆ ಮಾತನಾಡ್ರೀ ಎಂದು ಗುಡುಗಿದ್ದಾರೆ.

ಅಷ್ಟೇ ಅಲ್ಲ, 1971ರಲ್ಲಿ ಪಾಕಿಸ್ತಾನದ ವಿರುದ್ಧ ಯುದ್ಧ ನಡೆಸಿದ ಇಂದಿರಾಗಾಂಧಿ ಗ್ರೇಟು ಅಂತ ಕಾಂಗ್ರೆಸ್‌ನವರು ಕೊಚ್ಚಿಕೊಳ್ಳುತ್ತಾರಲ್ಲ, ಹಾಗಿದ್ದರೆ ಸೆರೆ ಹಿಡಿದ ತೊಂಭತ್ಮೂರು ಸಾವಿರ ಸೈನಿಕರನ್ನೇಕೆ ಬಿಡುಗಡೆ ಮಾಡಿದರು, ಯುದ್ಧ ನಡೆಸಿ ಗೆದ್ದರು ಅಂದ ಮೇಲೆ ಪಾಕ್ ಆಕ್ರಮಿತ ಕಾಶ್ಮೀರವನ್ನೇಕೆ ವಶಪಡಿಸಿಕೊಳ್ಳಲಿಲ್ಲ ಎಂಬುದನ್ನೂ ಕೇಳಿ ಎಂದು ತಾಕೀತು ಮಾಡಿದ್ದಾರೆ.

ಯಾವಾಗ ರಾಧಾಮೋಹನದಾಸ್ ಅಗರ್ವಾಲ್ ಅವರು ಈ ರೀತಿ ತಾರಾಮಾರಾ ಬಡಿದು ಹೋದರೋ, ಇದಾದ ನಂತರ ರಾಜ್ಯ ಬಿಜೆಪಿಯ ನಾಯಕರು ಭಾರೀ ಏರ್‌ಸ್ಟ್ರೈಕಿಗೆ ಸಜ್ಜಾಗಿದ್ದಾರೆ.

ಅಷ್ಟೇ ಅಲ್ಲ, ಕಳೆದ ಶುಕ್ರವಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಅವರು ಯುದ್ಧದ ಬಗ್ಗೆ ಎಕ್ಸ್‌ಪರ್ಟ್ ಒಪೀನಿಯನ್ ಕೊಟ್ಟಿದ್ದೇ ತಡ, ರಮ್ಮಂತ ಏರ್‌ಸ್ಟ್ರೈಕು ಮಾಡಿ ತಮ್ಮ ಬತ್ತಳಿಕೆಯಲ್ಲಿದ್ದ ಬ್ರಹ್ಮೋಸ್ ಕ್ಷಿಪಣಿಗಳನ್ನು ಅವರ ಮೇಲೆ ಉದುರಿಸಿ ಸಮಾಧಾನ ಪಟ್ಟುಕೊಂಡಿದ್ದಾರೆ.

ಕುಮಾರಣ್ಣನಿಗೆ ರೆಡ್ಡಿಗಾರು ಟಾನಿಕ್

ಈ ಮಧ್ಯೆ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಖುಷಿಯಾಗಿದ್ದಾರೆ, ಅವರ ಖುಷಿಗೆ ಕರ್ನಾಟಕದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕಾರಣ.

ಯಾಕೆಂದರೆ, ಹೆಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗಿ ಹತ್ತತ್ತಿರ ಒಂದು ವರ್ಷ ಕಳೆಯುತ್ತಾ ಬಂದರೂ ಸಿಎಂ ಸಿದ್ದರಾಮಯ್ಯ ಸಂಪುಟದ ಪ್ರಮುಖ ಸಚಿವರ್ಯಾರೂ ಅವರ ಬಳಿ ಸುಳಿದಿರಲಿಲ್ಲ.

ವೈಯಕ್ತಿಕ ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ತಮ್ಮ ನಡುವೆ ಸಂಘರ್ಷ ನಡೆಯುತ್ತಿರುವುದೇನೋ ಸರಿ, ಆದರೆ ರಾಜಕೀಯವನ್ನು ರಾಜಕೀಯ ಎಂದು ನೋಡಿ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಚಿವರು ತಮ್ಮ ಬಳಿ ಪ್ರಪೋಸಲ್ಲು ತರಬಹುದಿತ್ತು ಎಂಬುದು ಕುಮಾರಸ್ವಾಮಿ ಯೋಚನೆ.

ಅಂದ ಹಾಗೆ ತೆಲಂಗಾಣದ ಮುಖ್ಯಮಂತ್ರಿ ರೇವಂತರೆಡ್ಡಿ, ಅಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರೆಲ್ಲ ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಪ್ರಪೋಸಲ್ಲುಗಳನ್ನು ಕೊಟ್ಟಿರುವುದಷ್ಟೇ ಅಲ್ಲ, ಪಾಸಿಟಿವ್ ರಿಸಲ್ಟನ್ನೂ ಪಡೆದುಕೊಂಡಿದ್ದಾರೆ.

ಈ ಪೈಕಿ ರೇವಂತ ರೆಡ್ಡಿ ಅವರು ತಮ್ಮ ರಾಜ್ಯದ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸಲು ಪ್ರಪೋಸಲ್ಲು ಕೊಟ್ಟರೆ, ನಾಯ್ಡುಗಾರು ತಮ್ಮ ರಾಜ್ಯದ ಕೈಗಾರಿಕೆಗಳಿಂದ ಹಿಡಿದು ಹಲವು ವಿಷಯಗಳ ಬಗ್ಗೆ ಕುಮಾರಸ್ವಾಮಿ ಅವರಿಗೆ ಪ್ರಪೋಸಲ್ಲುಗಳನ್ನು ಕೊಟ್ಟಿದ್ದಾರೆ.

ಹೀಗಾಗಿ ಕರ್ನಾಟಕ ಸರ್ಕಾರ ಕೂಡಾ ತಮ್ಮಿಂದ ಕೆಲಸ ಮಾಡಿಸಿಕೊಳ್ಳಲಿ ಎಂಬುದು ಕುಮಾರಸ್ವಾಮಿ ಇಚ್ಚೆ.

ಆದರೆ, ಈ ವಿಷಯದಲ್ಲಿ ಕುಮಾರಸ್ವಾಮಿ ಬರೀ ಎದುರು ನೋಡಿದ್ದೇ ಬಂತು, ಇದ್ದುದರಲ್ಲಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಎರಡು ಬಾರಿ ಕುಮಾರಣ್ಣ ಅವರನ್ನು ಭೇಟಿ ಮಾಡಿ ಕೇಂದ್ರದ ಮುಂದಿರುವ ನಮ್ಮ ಪೆಂಡಿಂಗ್ ಪ್ರಪೋಸಲ್ಲುಗಳ ಕಡೆ ನೋಡಿ, ಕರ್ನಾಟಕದಲ್ಲಿ ನಡೆಯುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬನ್ನಿ ಅಂತ ಆಹ್ವಾನಿಸಿದರೇ ಹೊರತು, ಯಾರೊಬ್ಬರೂ ಕಾಂಕ್ರಿಟ್ ಆಗಿ ಪ್ರಪೋಸಲ್ಲು ಕೊಟ್ಟಿಲ್ಲ ಎಂಬುದು ಕುಮಾರಣ್ಣನ ನೋವು.

ಇಂತಹ ಟೈಮಿನಲ್ಲೇ ಕುಮಾರಸ್ವಾಮಿ ಅವರನ್ನು ದಿಲ್ಲಿಯ ಉದ್ಯೋಗ ಭವನದಲ್ಲಿ ಭೇಟಿ ಮಾಡಿದ ರಾಮಲಿಂಗಾರೆಡ್ಡಿ ಒಂದು ಪ್ರಪೋಸಲ್ಲು ಕೊಟ್ಟಿದ್ದಾರೆ.

ದೇಶದ ವಿವಿಧ ರಾಜ್ಯಗಳಿಗೆ ಕೇಂದ್ರ ಸರ್ಕಾರ ಕೊಡಲುದ್ದೇಶಿಸಿರುವ 14,500 ಎಲೆಕ್ಟ್ರಿಕಲ್ ಬಸ್ಸುಗಳ ಪೈಕಿ ಕರ್ನಾಟಕಕ್ಕೆ ಸಿಂಹಪಾಲು ಸಿಗಬೇಕು ಎಂಬುದು ಅವರ ಪ್ರಪೋಸಲ್ಲು.

ಹೀಗೆ ಪ್ರಪೋಸಲ್ಲು ಕೊಡುವಾಗ ಮೂರು ಬೇಡಿಕೆಗಳನ್ನು ಮಂಡಿಸಿರುವ ರಾಮಲಿಂಗಾರೆಡ್ಡಿ, ಇವನ್ನು ಈಡೇರಿಸಿದರೆ ಎಲೆಕ್ಟ್ರಿಕ್ ಬಸ್ಸುಗಳನ್ನು ನಿರ್ವಹಿಸುವುದು ಸುಲಭ ಎಂದಿದ್ದಾರೆ.

ಹೀಗೆ ಅವರು ತಮ್ಮನ್ನು ಭೇಟಿಯಾಗಿ ಪ್ರಪೋಸಲ್ಲು ಕೊಟ್ಟ ಬೆಳವಣಿಗೆಯಿಂದ ಕುಮಾರಸ್ವಾಮಿ ಎಷ್ಟು ಖುಷಿಯಾಗಿದ್ದಾರೆಂದರೆ, ಅದನ್ನು ಇಲಾಖೆಯ ಮಟ್ಟದಲ್ಲಿ ಮೂವ್ ಮಾಡಿರುವುದಷ್ಟೇ ಅಲ್ಲದೆ, ಮೇಲಿಂದ ಮೇಲೆ ಅದರ ಬಗ್ಗೆ ವಿಚಾರಿಸುತ್ತಿದ್ದಾರಂತೆ.

ಅಷ್ಟೇ ಅಲ್ಲ, ರಾಜಕೀಯಕ್ಕೂ ಅಭಿವೃದ್ಧಿಗೂ ಸಂಬಂಧ ಜೋಡಿಸದೆ ಇರುವುದನ್ನು ರೆಡ್ಡಿಗಾರು ಅವರನ್ನು ನೋಡಿ ಕಲಿಯಬೇಕು ಕಣ್ರೀ ಎನ್ನುತ್ತಿದ್ದಾರಂತೆ.

ಆರ್.ಟಿ.ವಿಠ್ಠಲಮೂರ್ತಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
h d devegowdah d kumara swamyjdsnikhil kumara swamystate president
0 FacebookTwitterPinterestEmail
admin

previous post
93ನೇ ವರ್ಷಕ್ಕೆ ಕಾಲಿಟ್ಟಿ ದೇವೇಗೌಡರು, ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ
next post
ಮುಖ್ಯಮಂತ್ರಿ ಗಾದಿಗೆ ಶಿವಕುಮಾರ್ ತಂತ್ರಗಾರಿಕೆ ಆರಂಭ

You may also like

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಅರಸು, ಕೃಷ್ಣ, ಯಡಿಯೂರಪ್ಪ ಅವರಿಗೆ ನಸೀಬು ಇತ್ತು

September 15, 2025

ಇತಿಹಾಸದ ಪುಟಗಳಲ್ಲಿ ರಾಚಯ್ಯ ನೆಲೆಸಿದ ಕತೆ

September 13, 2025

ವಿಜಯೇಂದ್ರ – ನಿಖಿಲ್ ಈಗ ಜೋಡೆತ್ತುಗಳು

September 8, 2025

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

August 25, 2025

ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

June 4, 2025

ಇತಿಹಾಸ ಮರೆಯದ ಕೌತುಕದ ಕ್ಷಣಗಳು..

April 21, 2025

ಕೇಂದ್ರ ಮಂತ್ರಿ ಕುಮಾರಣ್ಣನ ಲೇಟೆಸ್ಟು ಸಂಕಟ

February 17, 2025

ಅಮಿತ್ ಷಾ ಆಟ ಬಲ್ಲವರಾರು?

February 3, 2025

ಬಿಜೆಪಿ ಭಿನ್ನರಿಗೆ ಚುನಾವಣೆಯ ಕನಸು?

January 27, 2025

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ