Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಶಿವಕುಮಾರ್ – ಕುಮಾರಸ್ವಾಮಿ ನಡುವೆ ಕದನ ವಿರಾಮ !

by KM Shivaraju May 26, 2025
written by KM Shivaraju May 26, 2025 0 comments 1 minutes read
0FacebookTwitterPinterestEmail
274

ಬೆಂಗಳೂರು:ಕರ್ನಾಟಕದಲ್ಲಿ ಆಡಳಿತ ನಾಯಕತ್ವ ಬದಲಾವಣೆ ವಿಚಾರಕ್ಕೆ ಕಾಂಗ್ರೆಸ್‌ನಲ್ಲಿ ಭುಗಿಲೇಳುವ ಆಂತರಿಕ ಗೊಂದಲವನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡದಿದ್ದರೆ, ಶಿವಕುಮಾರ್ ಬೆಂಬಲಿಗರು ಸಿಡಿದೇಳುವ ಸಾಧ್ಯತೆ ಇದೆ.

ಬಂಡಾಯ ಮಾಹಿತಿ

ಒಂದು ವೇಳೆ ಶಿವಕುಮಾರ್ ಅವರಿಗೆ ಅಧಿಕಾರ ನೀಡಿದರೆ, ಸಿದ್ದರಾಮಯ್ಯ ಬೆಂಬಲಿತ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮುಂದಾಳತ್ವದಲ್ಲಿ ಬಂಡಾಯ ಏಳಬಹುದೆಂಬ ಮಾಹಿತಿ ದೆಹಲಿ ಬಿಜೆಪಿ ಅಂಗಳಕ್ಕೆ ತಲುಪಿದೆ.

ವರ್ಷಾಂತ್ಯದ ವೇಳೆಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ತರ ಬದಲಾವಣೆ ಆಗಲಿದ್ದು, ಕಾಂಗ್ರೆಸ್‌ನ ಆಂತರಿಕ ಜಗಳದ ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಲ್ವರು ನುರಿತ ಕೇಂದ್ರ ಸಚಿವರ ಅನುಭವ ಬಳಕೆಗೆ ಮುಂದಾಗಿದೆ.

ಇಂತಹ ಸನ್ನಿವೇಶದಲ್ಲಿ ರಾಜ್ಯಮಟ್ಟದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಗೊಂದಲ ಉದ್ಭವಿಸದಂತೆ ಕೇಂದ್ರದಲ್ಲಿ ಜೆಡಿಎಸ್ ಪ್ರತಿನಿಧಿಯಾಗಿರುವ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮನವೊಲಿಕೆ ಪ್ರಯತ್ನಗಳೂ ನಡೆದಿವೆ.

ಬಿಜೆಪಿ-ಆರ್‌ಎಸ್‌ಎಸ್ ಸಂದೇಶ

ನೂತನ ಮೈತ್ರಿ ಸರ್ಕಾರ ರಚನೆ ವೇಳೆ ನಡೆಯಬಹುದಾದ ರಾಜಕೀಯ ಕ್ಷಿಪ್ರ ಬೆಳವಣಿಗೆಯಲ್ಲಿ ಕುಮಾರಸ್ವಾಮಿ ತಟಸ್ಥವಾಗಿ ಉಳಿಯುವಂತೆ ಪ್ರಮುಖರೊಬ್ಬರ ಮೂಲಕ ಬಿಜೆಪಿ ಮತ್ತು ಆರ್‌ಎಸ್‌ಎಸ್ ಸಂದೇಶ ರವಾನಿಸಿದೆ.

ಕಳೆದ 10-12 ದಿನಗಳ ಹಿಂದೆ ಕುಮಾರಸ್ವಾಮಿ ಮತ್ತು ಆರ್‌ಎಸ್‌ಎಸ್‌ಗೆ ನಿಕಟವಾಗಿರುವ ಹಿರಿಯರೊಬ್ಬರು ಈ ಸಂಬಂಧ ಚರ್ಚಿಸಿದ್ದಾರೆ.

ಕುಮಾರಸ್ವಾಮಿ ಅವರನ್ನು ತಾವಿರುವ ಸ್ಥಳಕ್ಕೆ ಕರೆಸಿಕೊಂಡ ಹಿರಿಯರು, ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯದೆ ಮುಂದುವರೆದರೆ, ಶಿವಕುಮಾರ್ ಬಂಡೇಳುವ ಸಾಧ್ಯತೆ ಇದೆ.

ರಾಜಕೀಯ ತೀರ್ಮಾನಕ್ಕೆ ಸಿದ್ಧ

ಅವರು ಮುಖ್ಯಮಂತ್ರಿ ಆಗಲೇಬೇಕೆಂದು ಹಠ ತೊಟ್ಟಿದ್ದು, ಯಾವುದೇ ರಾಜಕೀಯ ತೀರ್ಮಾನಕ್ಕೂ ಸಿದ್ಧರಿದ್ದಾರೆ.

ಅಂತಹ ಸನ್ನಿವೇಶದಲ್ಲಿ ಒಂದು ಭಾಗವಾಗಿ ಸರ್ಕಾರದಿಂದ ಹೊರಬಂದರೆ, ಮಹಾರಾಷ್ಟ್ರ ಮಾದರಿಯಲ್ಲಿ ಆ ಗುಂಪಿನ ಜೊತೆ ಬಿಜೆಪಿ ಕೈಜೋಡಿಸುವ ಸಾಧ್ಯತೆ ತಳ್ಳಿಹಾಕುವಂತಿಲ್ಲ.

ಮೈತ್ರಿ ಸರ್ಕಾರ ರಚನೆಯಾದರೆ ಶಿವಕುಮಾರ್ ನಾಯಕತ್ವಕ್ಕೆ ರಾಜಕೀಯ ವಿರೋಧ ಮಾಡುವುದು ಬೇಡ.

ಮಧ್ಯಪ್ರವೇಶ ಬೇಡ

ಮುಂಬರುವ 2028ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆವರೆಗೂ ಕೇಂದ್ರದಲ್ಲಿ ಸಚಿವರಾಗಿದ್ದುಕೊಂಡು ಕಾರ್ಯನಿರ್ವಹಿಸಿ, ರಾಜ್ಯ ರಾಜಕಾರಣದಲ್ಲಿ ಮಧ್ಯಪ್ರವೇಶ ಬೇಡ ಎಂದಿದ್ದಾರೆ.

2028ರಲ್ಲಿ ನಿಮಗೆ ಒಳ್ಳೆಯ ದಿನಗಳು ಬರುವ ಸಾಧ್ಯತೆ ಇದ್ದು, ರಾಜ್ಯದಲ್ಲಿನ ಜನವಿರೋಧಿ ಸರ್ಕಾರ ತೆಗೆಯುವಲ್ಲಿ ತಾಳ್ಮೆ ಕಳೆದುಕೊಳ್ಳದೆ ಸಹಕರಿಸಿ ಎಂಬ ಸಂದೇಶವನ್ನು ಆರ್‌ಎಸ್‌ಎಸ್ ರವಾನಿಸಿದೆ.

ಹಿರಿಯರ ಮಾತು ಆಲಿಸಿದ ಕುಮಾರಸ್ವಾಮಿ, ಬಿಜೆಪಿ, ಆರ್‌ಎಸ್‌ಎಸ್ ಸಲಹೆ ಗೌರವಿಸುತ್ತೇನೆ, ನೀವು ಹೇಳಿದಂತೆ ನಡೆದುಕೊಳ್ಳುವೆ, ಆದರೆ, ಶಿವಕುಮಾರ್ ವಿಚಾರದಲ್ಲಿ ವೈಯಕ್ತಿಕ ರಾಜಕಾರಣ ಮುಂದುವರೆಯುತ್ತದೆ, ಮೈತ್ರಿ ಸರ್ಕಾರಕ್ಕೆ ನನ್ನಿಂದ ತೊಂದರೆ ಉಂಟಾಗದು ಎಂಬ ಮಾತು ನೀಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjpcentral minister h d kumara swamycongresdcm d k shivakumarjdstruce
0 FacebookTwitterPinterestEmail
KM Shivaraju

previous post
ಕೋವಿಡ್ ಎದುರಿಸಲು ಜಿಲ್ಲಾಸ್ಪತ್ರೆಗಳ ಸರ್ವ ಸನ್ನದ್ಧಕ್ಕೆ ಸೂಚನೆ
next post
ಕೊರೊನಾ ಹೆಚ್ಚಳ: ಮಾಸ್ಕ್ ಕಡ್ಡಾಯ ಇಲ್ಲ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ