Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜ್ಯರಾಷ್ಟ್ರ

ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ

by admin June 4, 2025
written by admin June 4, 2025 0 comments 1 minutes read
0FacebookTwitterPinterestEmail
149

ಬೆಂಗಳೂರು:ಐಪಿಎಲ್ 2025ನೇ ಸಾಲಿನ ಟ್ರೋಫಿ ಗೆದ್ದ ರಾಯಲ್ ಚಾಲೆಂಜರ‍್ಸ್ ಬೆಂಗಳೂರು (ಆರ್‌ಸಿಬಿ) ತಂಡದ ಭದ್ರತೆ ದೃಷ್ಟಿಯಿಂದ ಈ ಮೊದಲು ನಿಗದಿಯಾಗಿದ್ದ ರೋಡ್ ಶೋ ಅನ್ನು ಸರ್ಕಾರ ಕಡೆ ಗಳಿಗೆಯಲ್ಲಿ ರದ್ದುಪಡಿಸಿತು.

ಕೇಂದ್ರ ಹಾಗೂ ರಾಜ್ಯದ ಗುಪ್ತಚರ ವಿಭಾಗಗಳ ಸಲಹೆ ಮೇರೆಗೆ ಗೃಹ ಇಲಾಖೆ ರೋಡ್ ಶೋ ರದ್ದುಪಡಿಸುವ ನಿರ್ಧಾರ ಕೈಗೊಂಡಿತು.

ವಿಶೇಷ ವೇದಿಕೆ

ಗುಜರಾತ್‌ನ ಅಹಮದಾಬಾದ್‌ನಿಂದ ವಿಜೇತ ತಂಡ ವಿಶೇಷ ವಿಮಾನದಲ್ಲಿ ನಗರಕ್ಕೆ ಆಗಮಿಸಿ, ನೇರವಾಗಿ, ರಾಜ್ಯದ ಜನತೆ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏರ್ಪಡಿಸಿದ್ದ ಔತಣಕೂಟದಲ್ಲಿ ಭಾಗಿಯಾದ ನಂತರ ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಿರ್ಮಿಸಿದ್ದ ವಿಶೇಷ ವೇದಿಕೆಗೆ ಆಗಮಿಸಿದರು.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಟ್ರೋಫಿ ವಿಜೇತ ತಂಡಕ್ಕೆ ಸನ್ಮಾನ ನಂತರ ಅವರನ್ನು ತೆರೆದ ವಾಹನದಲ್ಲಿ ಶಕ್ತಿಸೌಧದಿಂದ ಕೆಎಸ್‌ಸಿಎ ಕ್ರೀಡಾಂಗಣಕ್ಕೆ ಭವ್ಯ ಮೆರವಣಿಗೆಯಲ್ಲಿ ಕರೆದೊಯ್ಯಲು ಸರ್ಕಾರ ತೀರ್ಮಾನಿಸಿತ್ತು.

ಆರ್‌ಸಿಬಿ ತಂಡದ ರೋಡ್ ಶೋ ಹಾಗೂ ನಂತರ ಕ್ರೀಡಾಂಗಣದಲ್ಲಿ ಸನ್ಮಾನ ಕಾರ್ಯಕ್ರಮದ ಸುದ್ದಿ ಹರಿದಾಡುತ್ತಿದ್ದಂತೆ ಅಭಿಮಾನಿಗಳು ರಾಜ್ಯದ ವಿವಿಧ ಮೂಲೆಗಳಿಂದ ಅಲ್ಲದೆ, ನೆರೆ ರಾಜ್ಯಗಳಿಂದಲೂ ಹರ್ಷೋದ್ಗಾರಗಳೊಂದಿಗೆ ರಾಜಧಾನಿಗೆ ಆಗಮಿಸಿದರು.

ಗುಪ್ತಚರ ಮಾಹಿತಿ

ಅಭಿಮಾನಿಗಳ ಸಂಭ್ರಮಾಚರಣೆ ವೇಳೆ ಕಿಡಿಗೇಡಿಗಳಿಂದ ಎದುರಾಗಬಹುದಾದ ತೊಂದರೆ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡುತ್ತಿದ್ದಂತೆ ರೋಡ್ ಶೋ ರದ್ದುಪಡಿಸಿದ್ದಲ್ಲದೆ, ತಂಡದ ಆಟಗಾರರಿಗೆ ಬಿಗಿಭದ್ರತೆ ಒದಗಿಸಲಾಯಿತು.

ಆಟಗಾರರು ಉಳಿದುಕೊಂಡಿದ್ದ ರೇಸ್‌ಕೋರ್ಸ್ ರಸ್ತೆಯ ಪಂಚತಾರಾ ಹೋಟೆಲ್‌ಗೂ ಬಿಗಿ ಭದ್ರತಾ ಕೋಟೆ ರಚಿಸಲಾಗಿತ್ತು.

ಸರ್ಕಾರದ ಸನ್ಮಾನದ ನಂತರ ಆಟಗಾರರ ತಂಡ ವಿಶೇಷ ಬಸ್‌ನಲ್ಲಿ ನೇರವಾಗಿ ಕೆಎಸ್‌ಸಿಎ ಕ್ರೀಡಾಂಗಣಕ್ಕೆ ತೆರಳಿ ಅಭಿಮಾನಿಗಳ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿತು.

ಕನ್ನಡ ಬಾವುಟ

ಇದಕ್ಕೂ ಮುನ್ನ ವಿಮಾನ ನಿದ್ದಾಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆರ್‌ಸಿಬಿ ತಂಡದ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಅವರಿಗೆ ಕನ್ನಡದ ಬಾವುಟ ನೀಡಿ ಸ್ವಾಗತಿಸಿದರು.

ಬಿಗಿ ಭದ್ರತೆಯಲ್ಲಿ ಎರಡು ವಿಶೇಷ ಬಸ್‌ಗಳಲ್ಲಿ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ತಾಜ್ ವೆಸ್ಟ್‌ಎಂಡ್ ಹೋಟೆಲ್ ಹಾಗೂ ಅಲ್ಲಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಸಿದ್ಧಪಡಿಸಿದ್ದ ವೇದಿಕೆಗೆ ಬರುವವರೆಗೂ ರಸ್ತೆಯ ಇಕ್ಕೆಲಗಳಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳ ಸಾಗರ ವಿಜೇತ ತಂಡವನ್ನು ಭವ್ಯವಾಗಿ ಸ್ವಾಗತಿಸಿತು, ರಸ್ತೆಯುದ್ದಕ್ಕೂ ’ಜೈ ಆರ್‌ಸಿಬಿ’ ಎಂಬ ಉದ್ಘೋಷ ಮುಗಿಲುಮುಟ್ಟಿತ್ತು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
karnataka govt. welcomed the teamown ipl-2025 trophyrayal challengers bengaluru
0 FacebookTwitterPinterestEmail
admin

previous post
ಕೋರ್ ಕಮಿಟಿ: ವಿಜಯೇಂದ್ರ – ಅಶೋಕ್ ಜಟಾಪಟಿ
next post
ಡಿ.ಕೆ. ಶಿವಕುಮಾರ್ ಸ್ವಪ್ರತಿಷ್ಠೆಗೆ 11 ಜೀವಗಳು ಬಲಿ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ