Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಡಿ.ಕೆ. ಶಿವಕುಮಾರ್ ಸ್ವಪ್ರತಿಷ್ಠೆಗೆ 11 ಜೀವಗಳು ಬಲಿ

by admin June 5, 2025
written by admin June 5, 2025 0 comments 1 minutes read
0FacebookTwitterPinterestEmail
147

ಬೆಂಗಳೂರು:ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬಳಿ ರಾಯಲ್ ಚಾಲೆಂಜರ‍್ಸ್ ಬೆಂಗಳೂರು (ಆರ್‌ಸಿಬಿ) ವಿಜಯೋತ್ಸವ ಸಂದರ್ಭದಲ್ಲಿ ನೂಕುನುಗ್ಗಲಿನ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇರ ಹೊಣೆ ಎಂದಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಅವರನ್ನು ತಕ್ಷಣವೇ ಮಂತ್ರಿಮಂಡಲದಿಂದ ಕಿತ್ತೊಗೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ತಡರಾತ್ರಿ ದೆಹಲಿಯ ತಮ್ಮ ಸರ್ಕಾರಿ ನಿವಾಸದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಎಲ್ಲಾ ದುರಂತಗಳಿಗೆ ಶಿವಕುಮಾರ್ ನೇರ ಹೊಣೆ ಎಂದಿದ್ದಾರೆ.

ಕರ್ನಾಟಕದಲ್ಲಿ ಮೂರ್ಖರ ಆಡಳಿತ

ಕರ್ನಾಟಕದಲ್ಲಿ ಉದ್ಧಟತನದ ಮೂರ್ಖರ ಆಡಳಿತ ನಡೆಯುತ್ತಿದೆ ಎಂದು ಕಿಡಿಕಾರಿದ ಕುಮಾರಸ್ವಾಮಿ, ಇಂತಹ ಅನಾಹುತವನ್ನು ಸಹಿಸಲು ಸಾಧ್ಯವಿಲ್ಲ, ಮುಖ್ಯಮಂತ್ರಿ ಅವರಿಗೆ ನಿಜವಾಗಿ ಧೈರ್ಯ, ತಾಕತ್ತು ಮತ್ತು ನಾಯಕತ್ವ ಇದ್ದರೆ, ಕೂಡಲೇ ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಮಾಡಬೇಕು.

ಆರ್‌ಸಿಬಿಯ ಐಪಿಎಲ್-2025ರ ಜಯವನ್ನು ತಮ್ಮ ಸಾಧನೆ ಎಂಬುದಾಗಿ ಬಿಂಬಿಸಿಕೊಳ್ಳಲು ನಡೆಸಿದ ಯತ್ನದ ದುಷ್ಫಲ ಇದಾಗಿದೆ.

ಕ್ರೀಡಾಂಗಣದ ಬಳಿ ನಾಲ್ಕು ಹೆಣಗಳು ಬಿದ್ದಾಗಲೂ ವಿಧಾನಸೌಧದ ಮೆಟ್ಟಿಲ ಮೇಲೆ ವಿಜಯೋತ್ಸವ ಆಚರಿಸಿದ ಮೂರ್ಖ ಸರ್ಕಾರ.

ಸಾವಿನಲ್ಲೂ ವಿಜಯೋತ್ಸವ

ಹೊರಗಡೆ ಕ್ರೀಡಾಭಿಮಾನಿಗಳ ಹೆಣಗಳು ಬಿದ್ದು ಜನ ನೋವಿನಿಂದ ಚೀರುತ್ತಿದ್ದರೆ, ಶಿವಕುಮಾರ್, ಕ್ರೀಡಾಂಗಣದ ಒಳಗೆ ಟ್ರೋಫಿ ಎತ್ತಿಕೊಂಡು ಅದಕ್ಕೆ ಮುತ್ತಿಟ್ಟು ವಿಜಯೋತ್ಸವ ಆಚರಿಸುತ್ತಿದ್ದರು.

ಆ ವೇಳೆಗೆ 11 ಮಂದಿ ಸಾವಿಗೀಡಾಗಿ 40ಕ್ಕೂ ಹೆಚ್ಚು ಗಾಯಾಳುಗಳು ಸಾವಿನೊಂದಿಗೆ ಹೋರಾಟ ನಡೆಸುತ್ತಿದ್ದಾಗಲೂ, ಈ ವ್ಯಕ್ತಿ ತಾನೇ ಆಟವಾಡಿ ಟ್ರೋಫಿ ಗೆದ್ದಂತೆ ವಿಜೃಂಭಿಸುತ್ತಿದ್ದರು.

ಶ್ರಮಪಟ್ಟು ಆಟವಾಡಿ ಟ್ರೋಫಿ ಗೆದ್ದ ಕ್ರೀಡಾಪಟುಗಳಿಗೇ ಪ್ರಶಸ್ತಿ ಎತ್ತಿಹಿಡಿಯಲು ಸಾಧ್ಯವಾಗಿರಲಿಲ್ಲ.

ಕನಕಪುರ ಬೆಂಬಲಿಗರ ಪಡೆ

ಕನಕಪುರದ ತನ್ನ ಬೆಂಬಲಿಗರ ಪಡೆಯೊಂದಿಗೆ ವಿಮಾನ ನಿಲ್ದಾಣಕ್ಕೆ ತೆರಳಿ ಆಟಗಾರರನ್ನು ಸ್ವಾಗತಿಸಿದ ಪರಿ ಏನು, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿ ಅವರ ಕೈಗೆ ಕನ್ನಡದ ಬಾವುಟ ನೀಡಿ ವಿಜೃಂಭಿಸಿದ್ದೇನು.

ಆ ನಂತರ ಬೆಂಗಾವಲು ಪಡೆಯೊಂದಿಗೆ ಅವರನ್ನು ಕರೆತಂದಿದ್ದು, ಯಾವುದಾದರೂ ಒಂದು ಕಡೆ ವಿಜಯೋತ್ಸವ ಆಚರಣೆ ನಿಗದಿ ಪಡಿಸಿದ್ದರೆ, ಇಂತಹ ದುರಂತ ಸಂಭವಿಸುತ್ತಿರಲಿಲ್ಲ.

ಸ್ವಪ್ರತಿಷ್ಠೆಗಾಗಿ ಶಿವಕುಮಾರ್ 11 ಕ್ರೀಡಾಭಿಮಾನಿಗಳ ಜೀವ ಬಲಿ ಪಡೆದರು, ಯಾವುದೇ ಮುಂಜಾಗ್ರತಾ ಕ್ರಮಗಳಿಲ್ಲದೆ ಕಾರ್ಯಕ್ರಮ ಆಯೋಜಿಸಿದ ದುಷ್ಪರಿಣಾಮ ಇದು.

ನೆಪ ಮಾತ್ರಕ್ಕೆ ಗೃಹ ಸಚಿವ

ನೆಪ ಮಾತ್ರಕ್ಕೆ ಡಾ.ಜಿ.ಪರಮೇಶ್ವರ್ ಗೃಹ ಸಚಿವರಾಗಿದ್ದಾರೆ, ಮುಖ್ಯಮಂತ್ರಿ, ಕೂಳಿತುಕೋ ಎಂದರೆ ಕೂರುತ್ತಾರೆ, ನಿಲ್ಲು ಎಂದರೆ ನಿಲ್ಲುತ್ತಾರೆ ಎಂದು ಮೂದಲಿಸಿದರು.

ವರನಟ ಡಾ.ರಾಜ್‌ಕುಮಾರ್ ನಿಧನರಾದಾಗ ಕಾಂಗ್ರೆಸ್ ಗೂಂಡಾಗಳು ಅಂದಿನ ನನ್ನ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಗಲಭೆ ನಡೆಸಿದ್ದರು, ಅನಿವಾರ್ಯವಾಗಿ ಗೋಲಿಬಾರ್ ಮಾಡಬೇಕಾಯಿತು.

ನನ್ನ 2ನೇ ಬಾರಿ ಮುಖ್ಯಮಂತ್ರಿ ಅವಧಿಯಲ್ಲಿ ನಟ ಅಂಬರೀಶ್ ನಿಧನರಾದಾಗ ಲಕ್ಷಾಂತರ ಅಭಿಮಾನಿಗಳು ಸೇರಿದ್ದರು, ಆದರೆ, ಎಲ್ಲೂ ಗಲಭೆ ಆಗಲಿಲ್ಲ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
central minister h d kumara swamydcm d k shivakumaripl-2025royal challengers bengaluruvictory parade
0 FacebookTwitterPinterestEmail
admin

previous post
ಆರ್‌ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಭವ್ಯ ಸ್ವಾಗತ
next post
ಸಿದ್ದರಾಮಯ್ಯ, ಶಿವಕುಮಾರ್ ಕಾಂಗ್ರೆಸ್‌ಗೆ ಕಪ್ಪು ಚುಕ್ಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ