Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಫೈನಲ್‌ಗೂ ಮುನ್ನ ಆರ್‌ಸಿಬಿಗೆ ಗೆಲ್ಲುವ ಕನಸು ಬಿದ್ದಿತ್ತಾ

by admin June 7, 2025
written by admin June 7, 2025 0 comments 2 minutes read
0FacebookTwitterPinterestEmail
220

ಬೆಂಗಳೂರು:ಐಪಿಎಲ್ ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್‌ಸಿಬಿ ಆಡಳಿತ ಮಂಡಳಿ ವಿಜಯೋತ್ಸವ ಆಚರಣೆಗೆ ನಗರ ಪೋಲಿಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಆರ್‌ಸಿಬಿ ತಂಡಕ್ಕೆ ಗೆಲ್ಲುತ್ತೇವೆ ಎಂಬ ಕನಸು ಬಿದ್ದಿತ್ತಾ ಎಂದು ಇಂದಿಲ್ಲಿ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಸಂಜೆ 7-30ಕ್ಕೆ, ಆದರೆ, ಅಂದು ಸಂಜೆ 6 ಗಂಟೆಗೇ ವಿಜಯೋತ್ಸವ ಆಚರಣೆಗೆ ಅನುಮತಿ ಕೊಡಿ ಎಂಬುದಾಗಿ ನಗರ ಪೊಲೀಸರಿಗೆ ಆರ್‌ಸಿಬಿ ಅರ್ಜಿ ಕೊಟ್ಟಿದೆ ಎಂದು ಹೇಳಿದರು.

ತಂಡದ ಗೆಲುವು ಹೇಗೆ ಗೊತ್ತಿತ್ತು

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುವುದಾಗಿ ಅರ್ಜಿ ಹಾಕಿದ್ದಾರೆ, ಇದು ಹೇಗೆ ಸಾಧ್ಯ, ಪಂದ್ಯ ಆರಂಭಕ್ಕೆ ಮೊದಲೇ ಆರ್‌ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲ್ಲುತ್ತದೆ ಎಂದು ಹೇಗೆ ಗೊತ್ತಿತ್ತು.

ಪಂದ್ಯಕ್ಕೆ ಮೊದಲೇ ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ, ಇದು ಹೇಗೆ ಸಾಧ್ಯ ಎಂದರು.

ಈ ಎಲ್ಲಾ ಪತ್ರಗಳನ್ನು ಯಾರು ಬರೆದಿದ್ದರು, ಪಂದ್ಯ ಮುಗಿದ ಮರುದಿನ ಬೆಳಗ್ಗೆ 7-30ಕ್ಕೆ ಪೊಲೀಸ್ ಕಮೀಷನರ್ ಮೇಲೆ ಒತ್ತಡ ಹಾಕಿದ್ದು ಯಾರು ಎನ್ನುವುದೂ ಗೊತ್ತಿದೆ, ಅದನ್ನೇ ಹೇಳಿದ್ದೇನೆ, ನಾನು ವಾಸ್ತವಾಂಶ ತಿಳಿದು ಮಾತಾಡಿದ್ದೇನೆ, ಅಸೂಯೆಯಿಂದ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಮಾತನಾಡಿಲ್ಲ.

ಸರ್ಕಾರಕ್ಕೆ ಜ್ಞಾನೋದಯ

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಿಧಾನ ಪರಿಷತ್ ಸದಸ್ಯ ಕೆ.ಗೋವಿಂದ ರಾಜು ಅವರನ್ನು ಕಿತ್ತು ಹಾಕಿರುವುದು ಒಳ್ಳೆಯ ಕ್ರಮ, ಸರ್ಕಾರಕ್ಕೆ ಜ್ಞಾನೋದಯ ಆಗಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ.

ಘಟನೆ ಸಂಬಂಧ ಐವರು ಪೊಲೀಸ್ ಅಧಿಕಾರಿಗಳ ಅಮಾನತು ಸರಿಯಲ್ಲ, ಇದರ ಅವಶ್ಯಕತೆ ಇರಲಿಲ್ಲ, ಸರ್ಕಾರ ಹೀಗೆ ನಡೆದುಕೊಂಡರೆ ಅಧಿಕಾರಿಗಳು ಕೆಲಸ ಮಾಡುವುದಕ್ಕೆ ಸಾಧ್ಯವಿಲ್ಲ, ಸರ್ಕಾರದ ತಪ್ಪು ಮುಚ್ಚಿಕೊಳ್ಳಲು ಅಧಿಕಾರಿಗಳ ತಲೆದಂಡ ಸರಿಯಲ್ಲ.

ಸರ್ಕಾರ ಸೂಕ್ಷ್ಮವಾಗಿ ಯೋಚನೆ ಮಾಡಬೇಕಿತ್ತು, ಘಟನೆ ಮೂಲ ಕಾರಣಗಳೇ ಬೇರೆ, ಅದನ್ನು ಸರ್ಕಾರ ಮರೆ ಮಾಚುತ್ತಿದೆ ಎಂದರು.

ಹೆಣದ ಮೇಲೆ ರಾಜಕೀಯ

ಹೆಣದ ಮೇಲೆ ಬಿಜೆಪಿ-ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದು, ನಮಗೆ ಹೆಣದ ಮೇಲೆ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ, ಇದ್ದ ವಿಷಯವನ್ನೇ ಹೇಳಿದ್ದೇನೆ, ನನ್ನ ಮಿತ್ರ ಪಕ್ಷವೂ ಅದನ್ನೇ ಹೇಳಿದೆ, ನಡೆದಿರುವುದನ್ನು ಹೇಳಿದ್ದೇವೆ, ಇದರಲ್ಲಿ ರಾಜಕೀಯ ಏನಿದೆ.

ಕ್ರೀಡಾಂಗಣದ ಮುಂದೆ ಮೃತದೇಹಗಳು ಬಿದ್ದ ಮೇಲೆಯೂ ಕ್ರೀಡಾಂಗಣಕ್ಕೆ ಹೋಗಿ ಕಪ್‌ಗೆ ಮುತ್ತಿಕ್ಕಿ ಶೋ ಮಾಡಿದ್ದು ಯಾರು, ಜನರೇ ಎಲ್ಲವನ್ನೂ ನೋಡಿದ್ದಾರೆ, ಮಾಧ್ಯಮಗಳು ಎಲ್ಲವನ್ನೂ ಪ್ರಸಾರ ಮಾಡಿವೆ ಎಂದರು.

ಕಾಲ್ತುಳಿತ ಪ್ರಕರಣದ ಸಂಪೂರ್ಣ ಹೊಣೆಯನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಗೃಹ ಸಚಿವರೇ ಹೊರಬೇಕು, ಮೂವರದೂ ತಪ್ಪಿದೆ.

ಕಾಟಾಚಾರಕ್ಕೆ ಸನ್ಮಾನ

ಪಂದ್ಯ ಗೆದ್ದ 24 ಗಂಟೆ ಒಳಗೆ ಆತುರಾತುರವಾಗಿ ಸನ್ಮಾನ ಮಾಡೋದು ಏನಿತ್ತು, ಸನ್ಮಾನವನ್ನಾದರೂ ಸರಿಯಾಗಿ ಮಾಡಿದ್ದಾರಾ, ಕಾಟಾಚಾರಕ್ಕೆ ಮಾಡಿದರು, ಆಟಗಾರರನ್ನೂ ಸರಿಯಾಗಿ ನಡೆಸಿಕೊಳ್ಳಲಿಲ್ಲ, ಇವರು ಕೊಟ್ಟ ಶಾಲು, ಪೇಟ ತೆಗೆದುಕೊಂಡು ಹೋದರೋ ಬಿಸಾಕಿ ಹೋದರೋ ಗೊತ್ತಿಲ್ಲ, ಈ ಪುರುಷಾರ್ಥಕ್ಕೆ ತರಾತುರಿಯಲ್ಲಿ ಕಾರ್ಯಕ್ರಮ ಬೇಕಿತ್ತಾ ಎಂದರು.

ನೈತಿಕತೆ ಇದ್ದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್ ರಾಜೀನಾಮೆ ಕೊಡಬೇಕು.

ನಾವು ರಾಜಕಾರಣಿಗಳು ಭಂಡರು ಎಂಬುದಾಗಿ ತೋರಿಸಿಕೊಂಡಿದ್ದೇವೆ, ಇಂತಹವರಿಂದ ರಾಜೀನಾಮೆ ನಿರೀಕ್ಷೆ ಮಾಡೋಕೆ ಆಗುವುದಿಲ್ಲ, ವಿರೋಧ ಪಕ್ಷವಾಗಿ ನಾವು ಒತ್ತಾಯ ಮಾಡಿದ್ದೇವೆ.

ಹೆಚ್ಚಿನ ಪರಿಹಾರ ನೀಡಬೇಕು

ದುರಂತದಲ್ಲಿ ಜೀವ ಕಳೆದುಕೊಂಡವರು ವಾಪಸ್ ಬರುವುದಿಲ್ಲ, ಜೀವಕ್ಕೆ ದುಡ್ಡಿನ ಬೆಲೆ ಕಟ್ಟಲು ಆಗದು, ಇದು ಸರ್ಕಾರವೇ ಎಸಗಿದ ತಪ್ಪು, ಕುಟುಂಬಗಳಿಗೆ ಆಗಿರುವ ದುಃಖವನ್ನು ನೀಗಿಸಲು ಸಾಧ್ಯವಿಲ್ಲ, ಇದನ್ನು ವಿಶೇಷ ಪ್ರಕರಣ ಎಂಬುದಾಗಿ ಪರಿಗಣಿಸಿ ಹೆಚ್ಚಿನ ಪರಿಹಾರ ನೀಡಬೇಕು.

ವರನಟ ಡಾ.ರಾಜ್‌ಕುಮಾರ್ ನಿಧನ ಸಂದರ್ಭದಲ್ಲಿ ಏನೇನು ನಡೆಯಿತು ಎಂಬುದನ್ನು ಈಗಾಗಲೇ ಹೇಳಿದ್ದೇನೆ, ಸರ್ಕಾರ ಅಣ್ಣಾವ್ರ ವಿಷಯ ಇಟ್ಟುಕೊಂಡು ಕಾಲ್ತುಳಿತ ಪ್ರಕರಣದಲ್ಲಿ ರಕ್ಷಣೆ ಪಡೆಯೋದು ಬೇಡ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cm siddaramaiahdcm d k shivakumardr.g.parameshwarh d kumara swamyipl winrcbstampede
0 FacebookTwitterPinterestEmail
admin

previous post
ಸಿದ್ದರಾಮಯ್ಯ, ಶಿವಕುಮಾರ್ ಕಾಂಗ್ರೆಸ್‌ಗೆ ಕಪ್ಪು ಚುಕ್ಕೆ
next post
ಕಾಲ್ತುಳಿತ : ಡಾ.ಪರಮೇಶ್ವರ್ ರಾಜೀನಾಮೆ ಇಂಗಿತ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ